Kunigal Election Results: ಕುಣಿಗಲ್ ವಿಧಾನಸಭಾ ಕ್ಷೇತ್ರ ಚನಾವಣೆ 2023 ಫಲಿತಾಂಶ; ಲಿಂಗಾಯತ, ಕುರುಬ ಸಮುದಾಯದ ಮತಗಳು ನಿರ್ಣಾಯಕ

Kunigal Assembly Election Result 2023 Live Counting Updates: ಕುಣಿಗಲ್ ಕ್ಷೇತ್ರದಲ್ಲಿ ಲಿಂಗಾಯತ ಮತ್ತು ಕುರುಬ ಸಮುದಾಯದ ಮತಗಳು ನಿರ್ಣಾಯಕವಾಗಿದ್ದು, ಪ್ರಸಕ್ತ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಜಿದ್ದಾಜಿದ್ದಿ ಇದೆ.

Kunigal Election Results: ಕುಣಿಗಲ್ ವಿಧಾನಸಭಾ ಕ್ಷೇತ್ರ ಚನಾವಣೆ 2023 ಫಲಿತಾಂಶ; ಲಿಂಗಾಯತ, ಕುರುಬ ಸಮುದಾಯದ ಮತಗಳು ನಿರ್ಣಾಯಕ
ಕುಣಿಗಲ್ ವಿಧಾನಸಭೆ ಚುನಾವಣೆ ಫಲಿತಾಂಶ
Rakesh Nayak Manchi

Updated on: May 13, 2023 | 2:26 AM

Kunigal Assembly Election Results 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ಲಿಂಗಾಯತ ಮತ್ತು ಕುರುಬ ಸಮುದಾಯದ ಮತಗಳೇ ನಿರ್ಣಾಯಕವಾಗಿರುವ ಕುಣಿಗಲ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಡಿ ಕೃಷ್ಣಕುಮಾರ್ ಅವರು ಕಣದಲ್ಲಿದ್ದರೆ, ಕಾಂಗ್ರೆಸ್​ನಿಂದ ಡಾ.ಹೆಚ್.​ಡಿ. ರಂಗನಾಥ್, ಜೆಡಿಎಸ್​ನಿಂದ ರವಿ ಬಿ ಅವರು ಕಣದಲ್ಲಿದ್ದಾರೆ. ಈ ಕ್ಷೇತ್ರದಿಂದ ಆಮ್ ಆದ್ಮಿ ಪಕ್ಷ ಅದೃಷ್ಟ ಪರೀಕ್ಷೆಗೆ ಇಳಿದಿದ್ದು, ಜಯರಾಮ್ ಕಣದಲ್ಲಿದ್ದಾರೆ.

ಅಪ್ಪ-ಮಗ, ತಜ್ಞ ವೈದ್ಯರು, ಬ್ಯಾಂಕ್ ರಾಜ್ಯಾಧ್ಯಕ್ಷರು ಕುಣಿಗಲ್ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಕುಣಿಗಲ್‌ ವಿಧಾನಸಭೆ ಹಾಲಿ ಶಾಸಕ ಡಾ. ರಂಗನಾಥ್ ಅವರು ಕಾಂಗ್ರೆಸ್​ನಿಂದ ಮತ್ತೊಮ್ಮೆ ಕಣಕ್ಕಿಳಿದಿದ್ದು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಸಂಬಂಧಿಯೂ ಆಗಿದ್ದಾರೆ. ಜೆಡಿಎಸ್​ನಿಂದ ಡಾ.ಬಿ.ಎನ್.ರವಿ ಅವರು ಸ್ಪರ್ಧಿಸಿದ್ದು, ಬಿಜೆಪಿಯಿಂದ ರಾಜ್ಯ ಪ್ರಾಥಮಿಕ ಭೂ ಅಭಿವೃದ್ದಿ ಬ್ಯಾಂಕ್‌ನ ರಾಜ್ಯಾಧ್ಯಕ್ಷ ಡಿ.ಕೃಷ್ಣಕುಮಾರ್ ಕಣದಲ್ಲಿದ್ದಾರೆ.

ಪಕ್ಷೇತರವಾಗಿ 2008ರಲ್ಲಿ ಕಾಂಗ್ರೆಸ್​ನಿಂದ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದ ಬಿಬಿ ರಾಮಸ್ವಾಮಿಗೌಡ ಮತ್ತು ನಿವೃತ್ತ ಹೆಡ್​ ಕಾನ್​ಸ್ಟೇಬಲ್ ತಿರುಮಲೇಗೌಡ ಅವರು ಕಣದಲ್ಲಿದ್ದಾರೆ. ಆಮ್ ಆದ್ಮಿ ಪಕ್ಷ ಮೊದಲ ಚುನಾವಣೆ ಎದುರಿಸುತ್ತಿದೆ.

ಲಿಂಗಾಯತ ಮತ್ತು ಒಕ್ಕಲಿಗ ಮತಗಳೇ ನಿರ್ಣಾಯಕವಾಗಿರುವ ಈ ಕ್ಷೇತ್ರದಿಂದ 2023 ರ ಚುನಾವಣೆಯಲ್ಲಿ ಪ್ರಮುಖ ಮೂರು ಪಕ್ಷಗಳ ಅಭ್ಯರ್ಥಿಗಳು ಒಕ್ಕಲಿಗ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಪಕ್ಷೇತರ ಅಭ್ಯರ್ಥಿ ರಾಮಸ್ವಾಮಿ ಕೂಡ ಒಕ್ಕಲಿಗ ಸಮುದಾಯದವರಾಗಿದ್ದಾರೆ. ಒಟ್ಟಾರೆಯಾಗಿ ಈ ಬಾರಿ ಒಕ್ಕಲಿಗ ಅಭ್ಯರ್ಥಿಗಳ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದ್ದು, ಮತದಾರರು ಯಾರ ಕೈ ಹಿಡಿಯುತ್ತಾರೆ ಎಂಬುದು ಕೆಲವೇ ಕ್ಷಣಗಳಲ್ಲಿ ತಿಳಿದುಬರಲಿದೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Loading...
Unable to load recommendations.
Follow Us