ಕಾಂಗ್ರೆಸ್​ನಲ್ಲಿ ಸಿಎಂ ಸ್ಥಾನಕ್ಕೆ ಫೈಟ್​: ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡುವಂತೆ ಕುರುಬ ಸಮುದಾಯ ಆಗ್ರಹ

ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಅಭ್ಯರ್ಥಿ ಯಾರು ಎಂಬುದು ಕುರಿತಂತೆ ಚರ್ಚೆ ನಡೆಯುತ್ತಿರುವಾಗಲೇ ಮುಖ್ಯಮಂತ್ರಿಯನ್ನಾಗಿ ಸಿದ್ದರಾಮಯ್ಯ ಅವರನ್ನು ನೇಮಕ ಮಾಡಬೇಕೆಂದು ಬೆಂಗಳೂರಿನ ಕುರುಬರ ಸಂಘ ಒತ್ತಾಯಿಸಿದೆ.

ಕಾಂಗ್ರೆಸ್​ನಲ್ಲಿ ಸಿಎಂ ಸ್ಥಾನಕ್ಕೆ ಫೈಟ್​: ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡುವಂತೆ ಕುರುಬ ಸಮುದಾಯ ಆಗ್ರಹ
ಕುರುಬ ಜನಾಂಗದ ಮುಖಂಡರ ಸಭೆ
Follow us
|

Updated on: May 14, 2023 | 6:52 PM

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ನಿನ್ನೆ ಹೊರಬಿದ್ದಿದ್ದೆ. ಕಾಂಗ್ರೆಸ್ ಭಜರ್ರಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ. ಆದರೆ ಈಗ ಸಿಎಂ ಯಾರಾಗುತ್ತಾರೆ ಎಂಬ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ. ಮಾಜಿ ಸಿಎಂ ಸಿದ್ಧರಾಮಯ್ಯ (Siddaramaiah) ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ನಡುವೆ ಸಿಎಂ ಸ್ಥಾನ ತೀವ್ರ ಪೈಪೋಟಿ ಇದೆ. ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬುದು ಕುರಿತಂತೆ ಚರ್ಚೆ ನಡೆಯುತ್ತಿರುವಾಗಲೇ ಮುಖ್ಯಮಂತ್ರಿಯನ್ನಾಗಿ ಸಿದ್ದರಾಮಯ್ಯ ಅವರನ್ನು ನೇಮಕ ಮಾಡಬೇಕೆಂದು ಕಾಂಗ್ರೆಸ್​ ಹೈಕಮಾಂಡ್ ಮತ್ತು ವರಿಷ್ಠರಲ್ಲಿ ಬೆಂಗಳೂರಿನ ಕುರುಬರ ಸಂಘ ಒತ್ತಾಯಿಸಿದೆ.

ಈ ಕುರಿತಾಗಿ ಭಾನುವಾರ ಕುರುಬ ಜನಾಂಗದ ಮುಖಂಡರ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ರಾಮಚಂದ್ರಪ್ಪ, ಕುರುಬ ಸಮಾಜದ ಪ್ರಭಾರಿ ಅಧ್ಯಕ್ಷ ಸುಬ್ರಹ್ಮಣ್ಯ, ಬಿಬಿಎಂಪಿ ಮಾಜಿ ವಿಪಕ್ಷ ನಾಯಕ ಎಂ.ಶಿವರಾಜು, ಮಾಜಿ ಮೇಯರ್ ವೆಂಕಟೇಶ್ ಮೂರ್ತಿ, ನಾಗರಾಜ್ ಸೇರಿದಂತೆ ವಿವಿಧ ಮುಖಂಡರು ಭಾಗವಹಿಸಿದ್ದರು.

ಸಿದ್ಧರಾಮಯ್ಯರನ್ನು ಸಿಎಂ ಮಾಡುವಂತೆ ಕುರುಬ ಸಮಾಜ ಒತ್ತಾಯ

ಕುರುಬ ಸಮಾಜದಿಂದ ಕಾಂಗ್ರೆಸ್ ಪಕ್ಷದಿಂದ ಹದಿನಾಲ್ಕು ಜನರು ಆಯ್ಕೆಯಾಗಿದ್ದಾರೆ. ರಾಜ್ಯದಲ್ಲಿ ಸುಮಾರು ನೂರು ಮಂದಿ ಶಾಸಕರು ಸಿದ್ದರಾಮಯ್ಯ ಅವರ ವರ್ಚಸು, ಬೆಂಬಲದಿಂದ ಗೆಲುವು ಸಾಧಿಸಿದ್ದಾರೆ. ಕಳೆದ ಐದು ವರ್ಷಗಳ ಅವಧಿಯಲ್ಲಿ ಸಿದ್ದರಾಮಯ್ಯ ಅವರು ಅನ್ನಭಾಗ್ಯ, ಇಂದಿರಾ ಕ್ಯಾಂಟಿನ್ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಜನಮನ ಗೆದ್ದಿದ್ದರು. ಈ ಹಿನ್ನಲೆಯಲ್ಲಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡಬೇಕು ಎಂದು ಸಭೆಯಲ್ಲಿ ಒತ್ತಾಯಿಸಲಾಗಿದೆ.

ಸಿಎಂ ಗಾದಿ ಕಾಂಗ್ರೆಸ್​ ಪಾಳಿಯದಲ್ಲಿ ಫೈಟ್

ಕ್ಷಣಕ್ಷಣಕ್ಕೂ ಸಿಎಂ ಗಾದಿ ಫೈಟ್ ರೋಚಕ ತಿರುವು ಪಡೆಯುತ್ತಿದ್ದು, ಸಿಎಂ ಸ್ಥಾನಕ್ಕೆ ಹೈಕಮಾಂಡ್ ನೇರವಾಗಿ ಘೋಷಿಸಲೆಂದು ಡಿಕೆ ಶಿವಕುಮಾರ್​​ ಪಟ್ಟು ಹಿಡಿದಿದ್ದಾರೆ. ಶಾಸಕರ ಅಭಿಪ್ರಾಯ ನಡೆದರೂ ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಮಾಡಲೆಂದು ಒತ್ತಡ ಹಾಕಲಾಗುತ್ತಿದೆ. ಇಡೀ ಒಕ್ಕಲಿಗ ಸಮುದಾಯ ತನ್ನ ಬೆನ್ನಿಗೆ ನಿಂತಿದೆ. ಅದೇ ಕಾರಣಕ್ಕೆ ಹಳೇ ಮೈಸೂರು ಭಾಗದಲ್ಲಿ ಹೆಚ್ಚಿನ ಸ್ಥಾನಗಳು ಬಂದಿವೆ. ನನದೆ ಸಿಎಂ ಸ್ಥಾನ ಕೊಡಬೇಕೆಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಂದೆ ಡಿಕೆಶಿ ಒತ್ತಾಯಿಸಿದ್ದಾರೆ.

ಆದರೆ, ಇದಕ್ಕೆ ಸಿದ್ದರಾಮಯ್ಯ ಒಪ್ಪಿಲ್ಲ ಎಂದು ಮೂಲಗಳು ಹೇಳಿವೆ. ಮೊದಲು ಶಾಸಕರ ಅಭಿಪ್ರಾಯ ಸಂಗ್ರಹವಾಗಲಿ. ಶಾಸಕರು ಯಾರ ಪರ ನಿಲ್ಲುತ್ತಾರೋ ಅವರಿಗೆ ಸಿಎಂ ಸ್ಥಾನ ನೀಡಲಿ ಎಂದು ಖರ್ಗೆ ಮುಂದೆ ಸಿದ್ದರಾಮಯ್ಯ ಹೇಳಿದ್ದಾರೆ ಎನ್ನಲಾಗುತ್ತಿದೆ. ಹಾಗಾಗಿ ಸಿದ್ಧರಾಮಯ್ಯ ಮತ್ತು ಡಿ.ಕೆ ಶಿವಕುಮಾರ್​ ಇಬ್ಬರ ಅಭಿಪ್ರಾಯವನ್ನು ಹೊತ್ತು ಮಲ್ಲಿಕಾರ್ಜುನ ಖರ್ಗೆ ದೆಹಲಿಗೆ ತೆರಳಿದ್ದಾರೆ.

ಒಕ್ಕಲಿಗ ಸಮುದಾಯದ ಅಸ್ತ್ರ ಪ್ರಯೋಗಿಸಿದ ಡಿಕೆಶಿ

ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಬೇಕು ಅಂದರೆ ತನಗೆ ಸಿಎಂ ಮಾಡಿ, ಇಲ್ಲದಿದ್ದರೆ ಒಕ್ಕಲಿಗ ಸಮುದಾಯ ಕೈ ಬಿಟ್ಟು ಹೋಗುತ್ತದೆ ಎಂದು ಡಿಕೆ ಶಿವಕುಮಾರ್ ಜೊತೆಗೆ ಡಿಕೆ ಸುರೇಶ್ ಕೂಡ ತುಂಬಾ ಒತ್ತಡ ಹಾಕಿದ್ದಾರೆ. ಖರ್ಗೆಯವರ ಎದುರು ದೊಡ್ಡ ಧ್ವನಿಯಲ್ಲಿ ಹೇಳಿರುವ ಡಿಕೆ ಸುರೇಶ್, ಡಿಕೆ ಶಿವಕುಮಾರ್ ಗೆ ಸಿಎಂ ಸ್ಥಾನ ನೀಡದಿದ್ದರೆ ಮುಂದೆ ಲೋಕಸಭೆ, ಬಿಬಿಎಂಪಿ ಚುನಾವಣೆ ಕಷ್ಟವಾಗಬಹುದು ಎಂದಿದ್ದಾರೆ.

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ