ಲಕ್ಷ್ಮಣ ಸವದಿ ಕಾಂಗ್ರೆಸ್​​​ಗೆ ಸೇರಿದ್ದು ದುಡುಕಿನ ನಿರ್ಧಾರ: ಬಸನಗೌಡ ಪಾಟೀಲ್ ಯತ್ನಾಳ್​

ಲಕ್ಷ್ಮಣ ಸವದಿ ಕಾಂಗ್ರೆಸ್​​​ಗೆ ಸೇರಿದ್ದು ದುಡುಕಿನ ನಿರ್ಧಾರ. ಪಕ್ಷದಲ್ಲಿದ್ದರೆ ಅವರಿಗೆ ಉತ್ತಮ ಭವಿಷ್ಯ ಇರುತ್ತಿತ್ತು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಹೇಳಿದರು.

ಲಕ್ಷ್ಮಣ ಸವದಿ ಕಾಂಗ್ರೆಸ್​​​ಗೆ ಸೇರಿದ್ದು ದುಡುಕಿನ ನಿರ್ಧಾರ: ಬಸನಗೌಡ ಪಾಟೀಲ್ ಯತ್ನಾಳ್​
ಬಸನಗೌಡ ಪಾಟೀಲ್ ಯತ್ನಾಳ್​
Follow us
ಗಂಗಾಧರ​ ಬ. ಸಾಬೋಜಿ
|

Updated on:Apr 15, 2023 | 5:10 PM

ವಿಜಯಪುರ: ಲಕ್ಷ್ಮಣ ಸವದಿ (Laxman Savadi) ಕಾಂಗ್ರೆಸ್​​​ಗೆ ಸೇರಿದ್ದು ದುಡುಕಿನ ನಿರ್ಧಾರ. ಪಕ್ಷದಲ್ಲಿದ್ದರೆ ಅವರಿಗೆ ಉತ್ತಮ ಭವಿಷ್ಯ ಇರುತ್ತಿತ್ತು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಹೇಳಿದರು. ಸಾಂಕೇತಿಕವಾಗಿ ನಾಮಪತ್ರ ಸಲ್ಲಿಕೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ಸವದಿ ಬಗ್ಗೆ ಬಹಳ ಗೌರವವಿತ್ತು. ರಾಜಕಾರಣದಲ್ಲಿ ನನಗೂ ಸಾಕಷ್ಟು ಅಪಮಾನವಾಗಿದೆ. ತಾಳ್ಮೆಯಿಂದ ತೀರ್ಮಾನ ತೆಗೆದುಕೊಳ್ಳಬೇಕು. ನಾನು ಮಂತ್ರಿ, ಡಿಸಿಎಂ ಆಗಲು ಅರ್ಹನಾಗಿದ್ದೆ ಆದರೆ ಪದವಿ ನೀಡಲಿಲ್ಲ. ಪಕ್ಷಕ್ಕೆ ಅಗತ್ಯ ಬಿದ್ದಾಗ ಉನ್ನತ ಸ್ಥಾನಮಾನ ನೀಡುತ್ತಾರೆ. ಕೋಪ ಮಾಡಿಕೊಂಡು ಪಕ್ಷ ಬಿಡಬಾರದು. ಲಕ್ಷ್ಮಣ ಸವದಿ ಬಗ್ಗೆ ಎಲ್ಲಿಯೂ ನಾನು ಟೀಕೆ ಮಾಡಿಲ್ಲ, ಅವರು ನನಗೆ ಟೀಕೆ ಮಾಡಿಲ್ಲ ಎಂದು ಹೇಳಿದರು.

ಸವದಿಯವರನ್ನು ಬಿಜೆಪಿಯಲ್ಲಿ ಉಳಿಸಿಕೊಳ್ಳಲು ಪ್ರಯತ್ನ ಮಾಡಲಿಲ್ಲ ಎನ್ನುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಪಕ್ಷ ಸವದಿಯವರನ್ನ ಉಳಿಸಿಕೊಳ್ಳಲು ಸಾಕಷ್ಟು ಪ್ರಯತ್ನ ಮಾಡಿದೆ. ಪಕ್ಷದಿಂದ ಅಮೀತ್ ಶಾ, ಬಿ ಎಲ್​ ಸಂತೋಷ ಎಲ್ಲರೂ ಪ್ರಯತ್ನ ಮಾಡಿದ್ದಾರೆ. ಆದರೆ ಇಂತ ವಿಚಾರದಲ್ಲಿ ದುಡುಕುವದಕ್ಕಿಂತ ತಾಳ್ಮೆ ಬೇಕು. ಲಕ್ಷ್ಮಣ ಸವದಿ ದುಡುಕಿನೊಂದಿಗೆ ಉದ್ವೇಗಕ್ಕೆ ಒಳಗಾಗಿದ್ದಾರೆ ಎಂದರು.

ಇದನ್ನೂ ಓದಿ: ಬಿಜೆಪಿ ಸೇರಿಸಿದ್ದಕ್ಕೆ ಧನ್ಯವಾದ! ಕಾಂಗ್ರೆಸ್ ಸೇರ್ಪಡೆ ವೇಳೆ ಸವದಿ ಯಡವಟ್ಟು; ನಂತರ ಕೊಟ್ಟ ಸಮಜಾಯಿಷಿ ಇಲ್ಲಿದೆ

ರಾಹುಲ್ ಗಾಂಧಿಯನ್ನ ಅರೆಹುಚ್ಚ ಎಂದು ಕರೆದ ಯತ್ನಾಳ

ಸವದಿ ಕಾಂಗ್ರೆಸ್ ಸೇರ್ಪಡೆಯಿಂದ ಚುನಾವಣೆಯಲ್ಲಿ ಯಾವುದೆ ಹಿನ್ನಡೆ ಆಗಲ್ಲ. ದೇಶಕ್ಕೆ ಮೋದಿಯಂತ ನಾಯಕ ಬೇಕಿದೆ. ಜನರು ರಾಹುಲ್ ಗಾಂಧಿಯಂತ ಅರೆ ಹುಚ್ಚನನ್ನ ಪ್ರಧಾನಿ ಮಾಡುತ್ತಾರೆ. ಮೋದಿ ದೇಶದ ಹಿತದೃಷ್ಟಿಯಿಂದ ನಿರ್ಧಾರಗಳನ್ನ ತೆಗೆದುಕೊಂಡಿದ್ದಾರೆ. ಇದನ್ನ ನಾನು ಸ್ವಾಗತಿಸ್ತೇನೆ ಎಂದು ಹೇಳಿದರು.

ಪಕ್ಷಕ್ಕೆ ದ್ರೋಹ ಮಾಡಲ್ಲ ಅನ್ನುವ ಸಂದೇಶವನ್ನ ಈಶ್ವರಪ್ಪ ನೀಡಿದ್ದಾರೆ

ಅವಮಾನ ಯಡಿಯೂರಪ್ಪರಿಗೆ, ಜಗದೀಶ ಶೆಟ್ಟರ್‌ಗೆ ಆಗಿಲ್ವಾ ಎಂದು ಪ್ರಶ್ನೆ ಮಾಡಿದರು. ರಾಜ್ಯದ ಹಿತದೃಷ್ಟಿಯಿಂದ ಪಕ್ಷದ ಹಿರಿಯರು ತೀರ್ಮಾನ ತೆಗೆದುಕೊಂಡಿರುತ್ತಾರೆ. ಈಶ್ವರಪ್ಪ ರಾಜಕೀಯ ನಿವೃತ್ತಿ ವಿಚಾರವಾಗಿ ಮಾತನಾಡಿದ ಅವರು, ಈಶ್ವರಪ್ಪ ಗೌರವಯುತವಾಗಿ ನಡೆದುಕೊಂಡರು. ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಪಕ್ಷಕ್ಕೆ ದ್ರೋಹ ಮಾಡಲ್ಲ ಅನ್ನುವ ಸಂದೇಶವನ್ನ ಈಶ್ವರಪ್ಪ ನೀಡಿದ್ದಾರೆ. ಎಲ್ಲ ಕಾರ್ಯಕರ್ತರಲ್ಲಿ ಈ ಭಾವನೆ ಬರಬೇಕು ಎಂದು ತಿಳಿಸಿದರು.

ಇದನ್ನೂ ಓದಿ: ಕೋಲಾರ ಟಿಕೆಟ್​ ಸಿದ್ದರಾಮಯ್ಯ ಬಿಟ್ಟು ಬೇರೆಯವರ ಪಾಲಾಗುತ್ತಿದ್ದಂತೆಯೇ ಭುಗಿಲೆದ್ದ ಆಕ್ರೋಶ

ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆ 

ಬಿಜೆಪಿ ಹಿರಿಯ ನಾಯಕರಾಗಿದ್ದ ಲಕ್ಷ್ಮಣ ಸವದಿ ವಿಧಾನಸಭೆ ಚುನಾವಣೆಗೆ ಟಿಕೆಟ್ ದೊರೆಯದ ಕಾರಣ ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಕಾಂಗ್ರೆಸ್​ನ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ ಹಾಗೂ ಇತರೆ ನಾಯಕರ ಸಮ್ಮುಖದಲ್ಲಿ ಶುಕ್ರವಾರ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:10 pm, Sat, 15 April 23

ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ