AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

3ನೇ ಪಟ್ಟಿಯಲ್ಲಿ ಅಥಣಿ ಟಿಕೆಟ್​ ಘೋಷಣೆಯಾಗುತ್ತಿದ್ದಂತೆಯೇ ಅಖಾಡಕ್ಕಿಳಿದ ಲಕ್ಷ್ಮಣ ಸವದಿ

ಅಥಣಿ ತಾಲೂಕಿನ ಜನತೆಗೆ ಮತ್ತು ನನಗೆ ಬಿಜೆಪಿ ಅವಮಾನ ಮಾಡಿದೆ. ಹಾಗಾಗಿ ಹಿತೈಷಿಗಳು, ಕ್ಷೇತ್ರದ ಜನರ ಸೂಚನೆಯಂತೆ ಕಾಂಗ್ರೆಸ್ ಸೇರಿದ್ದೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ ಸವದಿ ಹೇಳಿದರು.

3ನೇ ಪಟ್ಟಿಯಲ್ಲಿ ಅಥಣಿ ಟಿಕೆಟ್​ ಘೋಷಣೆಯಾಗುತ್ತಿದ್ದಂತೆಯೇ ಅಖಾಡಕ್ಕಿಳಿದ ಲಕ್ಷ್ಮಣ ಸವದಿ
ಲಕ್ಷ್ಮಣ ಸವದಿ
ಗಂಗಾಧರ​ ಬ. ಸಾಬೋಜಿ
|

Updated on:Apr 15, 2023 | 6:28 PM

Share

ಬೆಳಗಾವಿ: ಬಿಜೆಪಿ ತೊರೆದು ಬೆಂಗಳೂರಿನಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ (Laxman Savadi) ಇಂದು(ಏಪ್ರಿಲ್ 15) ತವರು ಕ್ಷೇತ್ರವಾದ ಅಥಣಿಗೆ ಆಗಮಿಸಿದರು. ಇದರ ಬೆನ್ನಲ್ಲೇ ಕಾಂಗ್ರೆಸ್ ಅಭರ್ಥಿಗಳ ಮೂರನೇ ಪಟ್ಟಿ ಬಿಡುಗಡೆಯಗಿದ್ದು, ಅಥಣಿ ಕ್ಷೇತ್ರದ ಟಿಕೆಟ್​ ನಿರೀಕ್ಷೆಯಂತೆ ಸವದಿ ಅವರಿಗೆ ಸಿಕ್ಕಿದೆ. ಇದರಿಂದ ಈ ಮೊದಲು ಕಾಂಗ್ರೆಸ್​ ಟಿಕೆಟ್ ಆಕಾಂಕ್ಷಿಯಾಗಿದ್ದ​ ಗಜಾನನ ಮಂಗಸೂಳಿ ನಿವಾಸಕ್ಕೆ ದಿಢೀರ್ ಭೇಟಿ ನೀಡಿ ಸಮಾಧಾನಪಡಿಸಲು ಮುಂದಾಗಿದ್ದಾರೆ. 2019ರಲ್ಲಿ ಉಪಚುನಾವಣೆಯಲ್ಲಿ ಮಹೇಶ್ ಕುಮಟಳ್ಳಿ ವಿರುದ್ದ ಸ್ಪರ್ಧಿಸಿದ್ದ ಗಜಾನನ ಈ ಬಾರಿ ಸಹ ಕಾಂಗ್ರೆಸ್​ ಟಿಕೆಟ್​ಗೆ ಅರ್ಜಿ ಹಾಕಿದ್ದರು. ಆದ್ರೆ, ಬಿಜೆಪಿ ಟಿಕೆಟ್​ ಕೈತಪ್ಪದ್ದರಿಂದ ಲಕ್ಷ್ಮಣ ಸವದಿ ಕಾಂಗ್ರೆಸ್​ ಸೇರಿದ್ದು,ಅವರಿಗೆ ಕಾಂಗ್ರೆಸ್​ ಟಿಕೆಟ್​ ನೀಡಿದೆ. ಇದರಿಂದ ಗಜಾನನ ಮಂಗಸೂಳಿ ಮನೆ ತೆರಳಿ ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.

ಇದಕ್ಕೂ ಮುನ್ನ ಜಿಲ್ಲೆಯ ಅಥಣಿ ನಿವಾಸದಲ್ಲಿ ಸುದ್ದಿಗೋಷ್ಠಿ‌ಯಲ್ಲಿ ಮಾತನಾಡಿ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ ಸವದಿ, ಅಥಣಿ ತಾಲೂಕಿನ ಜನತೆಗೆ ಮತ್ತು ನನಗೆ ಬಿಜೆಪಿ ಅವಮಾನ ಮಾಡಿದೆ. ಹಾಗಾಗಿ ಹಿತೈಷಿಗಳು, ಕ್ಷೇತ್ರದ ಜನರ ಸೂಚನೆಯಂತೆ ಕಾಂಗ್ರೆಸ್ ಸೇರಿದ್ದೇನೆ ಎಂದರು. ಕ್ಷೇತ್ರದ ಜನರ ಸೂಚನೆಯಂತೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದೆ. ರಾಜ್ಯದಲ್ಲಿ ಕಾಂಗ್ರೆಸ್​ ಪಕ್ಷ ಅಧಿಕಾರಕ್ಕೆ ತರಲು ಕೈಜೋಡಿಸಿದ್ದೇನೆ. 20 ವರ್ಷಗಳ ಕಾಲ ಬಿಜೆಪಿಯಲ್ಲಿ ನಿಷ್ಠೆಯಿಂದ ಕೆಲಸ ಮಾಡಿದ್ದೇನೆ. MLC ಅಧಿಕಾರವಧಿ 5 ವರ್ಷ ಇದ್ದರೂ ಬಿಟ್ಟು ಜನಸೇವೆಗೆ ಬಂದಿದ್ದೇನೆ.

ಅಥಣಿ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಜತೆ ಚರ್ಚೆ ಮಾಡುತ್ತೇನೆ. ಏ.17 ಅಥವಾ 18ರಂದು ಅಥಣಿ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ. ಟಿಕೆಟ್ ಆಕಾಂಕ್ಷಿಗಳನ್ನು ಸಂಪರ್ಕಿಸಿದ್ದೇನೆ, ಎಲ್ಲರೂ ಸಹಕರಿಸುತ್ತಾರೆ ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರ ರಚನೆ ಆದ ಮೇಲೆ ಅಥಣಿ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡುವಂತೆ ಕೋರಿದ್ದೇನೆ. ನಾನು ತೆಗೆದುಕೊಂಡ ತೀರ್ಮಾನ ಸಾಮೂಹಿಕವಾಗಿ ಎಲ್ಲರಿಗೂ ಒಪ್ಪಿಗೆ ಆಗಿದೆ. ಈ ಚುನಾವಣೆಯಲ್ಲಿ ಬಹಳ ದೊಡ್ಡ ಅಂತರದಲ್ಲಿ ನನ್ನನ್ನು ಗೆಲ್ಲಿಸುತ್ತಾರೆ. ಮೂಲ ಕಾರ್ಯಕರ್ತರನ್ನ ಗಣನೆಗೆ ತೆಗೆದುಕೊಂಡು ಹೋಗುತ್ತೇವೆ ಎಂದರು.

ಇದನ್ನೂ ಓದಿ: ಕೋಲಾರ ಟಿಕೆಟ್​ ಸಿದ್ದರಾಮಯ್ಯ ಬಿಟ್ಟು ಬೇರೆಯವರ ಪಾಲಾಗುತ್ತಿದ್ದಂತೆಯೇ ಭುಗಿಲೆದ್ದ ಆಕ್ರೋಶ

ರಮೇಶ್​ಗೆ ಟಾಂಗ್​ ನೀಡಿದ ಸವದಿ  

ಅಥಣಿಯಲ್ಲೇ ಇದ್ದುಕೊಂಡು ಪ್ರಚಾರ ಮಾಡಿ ಕುಮಟಳ್ಳಿ ಗೆಲಸುತ್ತೇನೆ ಎಂಬ ರಮೇಶ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ನಮ್ಮ ಮನೆಯಲ್ಲಿ ಅರ್ಧ ಭಾಗ ಖಾಲಿ ಮಾಡಿ‌ ಕೊಡುತ್ತೇನೆ, ಇಲ್ಲೇ ಉಳಿಯಲಿ ಎಂದು ರಮೇಶ್‌ಗೆ ಸವದಿ ಟಾಂಗ್ ನೀಡಿದರು. ಪೀಡೆ ತೊಲಗಿತು ಅನ್ನೋದನ್ನ ಹೇಳಿದ್ದಾರೆ. 21ವರ್ಷ ಬಿಜೆಪಿ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತನಾಗಿ ದುಡಿದಿದ್ದೇನೆ. ಇಂತಹ ಮಹಾನುಭಾವನಿಂದ ನಾನು ಪಾರ್ಟಿ ಬಿಡುವಂತಾಯಿತು.

ಶೆಟ್ಟರ್​ಗೆ ಯಾಕೆ ಟಿಕೆಟ್​ ನೀಡದಿರುವುದ ಆಶ್ಚರ್ಯ ಮೂಡಿಸಿದೆ 

ಬಳು ಹೊಕ್ಕ ಮನೆ ಹಾಳಾಯಿತು ಅಂತಾರೆ ಕಾಂಗ್ರೆಸ್​ನಲ್ಲಿದ್ದಾಗ ಆ ಮನೆ ಹಾಳಾಯ್ತು. ಈಗ ಬಿಜೆಪಿ ಮನೆಗೆ ಬಂದಿದ್ದು ಅಲ್ಲಿಯೂ ಹಾಳು ಮಾಡುತ್ತಾರೆ. ಶೆಟ್ಟರ್ ಅವರ ಮನೆತನ ಬಿಜೆಪಿಗೆ ಮೀಸಲಿಟ್ಟವರು. ಅವರಿಗೆ ಟಿಕೆಟ್ ಯಾಕೆ ಕೊಟ್ಟಿಲ್ಲಾ ಅನ್ನೋದು ಆಶ್ಚರ್ಯ ತಂದಿದೆ. ಬಿಜೆಪಿ ಮನೆ ಬಿಟ್ಟು ಬಂದಿದ್ದೇನೆ ಅದರ ಬಗ್ಗೆ ಯೋಚನೆ ಮಾಡಬೇಕಿ ಎಂದರು.

ಇದನ್ನೂ ಓದಿ: ನಿಷೇಧಿತ ಪಿಎಫ್​ಐ ರಾಜಕೀಯ ಪಕ್ಷ ಎಸ್​ಡಿಪಿಐ ಬೆಂಬಲ ಕೇಳಿದ ಕಾಂಗ್ರೆಸ್: ಪ್ರತಾಪ್ ಸಿಂಹ ವಾಗ್ದಾಳಿ

ಲಕ್ಷ್ಮಣ ಸವದಿ ಕಾಂಗ್ರೆಸ್​​​ಗೆ ಸೇರಿದ್ದು ದುಡುಕಿನ ನಿರ್ಧಾರ: ಯತ್ನಾಳ್

ಲಕ್ಷ್ಮಣ ಸವದಿ ಕಾಂಗ್ರೆಸ್​​​ಗೆ ಸೇರಿದ್ದು ದುಡುಕಿನ ನಿರ್ಧಾರ. ಪಕ್ಷದಲ್ಲಿದ್ದರೆ ಅವರಿಗೆ ಉತ್ತಮ ಭವಿಷ್ಯ ಇರುತ್ತಿತ್ತು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಹೇಳಿದರು. ಸಾಂಕೇತಿಕವಾಗಿ ನಾಮಪತ್ರ ಸಲ್ಲಿಕೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ಸವದಿ ಬಗ್ಗೆ ಬಹಳ ಗೌರವವಿತ್ತು. ರಾಜಕಾರಣದಲ್ಲಿ ನನಗೂ ಸಾಕಷ್ಟು ಅಪಮಾನವಾಗಿದೆ.

ತಾಳ್ಮೆಯಿಂದ ತೀರ್ಮಾನ ತೆಗೆದುಕೊಳ್ಳಬೇಕು. ನಾನು ಮಂತ್ರಿ, ಡಿಸಿಎಂ ಆಗಲು ಅರ್ಹನಾಗಿದ್ದೆ ಆದರೆ ಪದವಿ ನೀಡಲಿಲ್ಲ. ಪಕ್ಷಕ್ಕೆ ಅಗತ್ಯ ಬಿದ್ದಾಗ ಉನ್ನತ ಸ್ಥಾನಮಾನ ನೀಡುತ್ತಾರೆ. ಕೋಪ ಮಾಡಿಕೊಂಡು ಪಕ್ಷ ಬಿಡಬಾರದು. ಲಕ್ಷ್ಮಣ ಸವದಿ ಬಗ್ಗೆ ಎಲ್ಲಿಯೂ ನಾನು ಟೀಕೆ ಮಾಡಿಲ್ಲ, ಅವರು ನನಗೆ ಟೀಕೆ ಮಾಡಿಲ್ಲ ಎಂದು ಹೇಳಿದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:28 pm, Sat, 15 April 23

ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ