ಮಾಡಾಳು ವಿರೂಪಾಕ್ಷಪ್ಪ ಪುತ್ರ ಮಲ್ಲಿಕಾರ್ಜುನ ಚನ್ನಗಿರಿ ಕಣಕ್ಕೆ: ಬೆಂಬಲಿಗರ ಸಭೆಯಲ್ಲಿ ತೀರ್ಮಾನ

|

Updated on: Apr 16, 2023 | 3:53 PM

ಪಕ್ಷೇತರ ಅಭ್ಯರ್ಥಿ ಆಗಿ ಸ್ಪರ್ಧಿಸಲು ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹಿರಿಯ ಪುತ್ರ ಮಾಡಾಳ್ ಮಲ್ಲಿಕಾರ್ಜುನ ಕಣಕ್ಕಿಳಿಯಲಿದ್ದಾರೆ.

ಮಾಡಾಳು ವಿರೂಪಾಕ್ಷಪ್ಪ ಪುತ್ರ ಮಲ್ಲಿಕಾರ್ಜುನ ಚನ್ನಗಿರಿ ಕಣಕ್ಕೆ: ಬೆಂಬಲಿಗರ ಸಭೆಯಲ್ಲಿ ತೀರ್ಮಾನ
ಮಾಡಾಳು ವಿರೂಪಾಕ್ಷಪ್ಪ ಪುತ್ರ ಮಲ್ಲಿಕಾರ್ಜುನ
Follow us on

ದಾವಣಗೆರೆ: ಪಕ್ಷೇತರ ಅಭ್ಯರ್ಥಿ ಆಗಿ ಸ್ಪರ್ಧಿಸಲು ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ (Madal Virupakshapp) ಹಿರಿಯ ಪುತ್ರ ಮಾಡಾಳ್ ಮಲ್ಲಿಕಾರ್ಜುನ ಕಣಕ್ಕಿಳಿಯಲಿದ್ದಾರೆ. ಜಿಲ್ಲೆಯ ಚನ್ನಗಿರಿ ತಾಲೂಕಿನ ಚನ್ನೇಶಪುರದಲ್ಲಿ ನಡೆದ ಅಭಿಮಾನಿಗಳ ಸ್ವಾಭಿಮಾನದ ಸಂಕಲ್ಪ ಸಭೆಯಲ್ಲಿ ನಿರ್ಧಾರ ಮಾಡಿದ್ದಾರೆ. ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಇಷ್ಟರಲ್ಲಿಯೇ ನಾಮಪತ್ರ ಸಲ್ಲಿಸುವೆ. ನಮ್ಮ ಕೆಲ ಬೆಂಬಲಿಗರು ಆತ್ಮಹತ್ಯೆಗೆ ಯತ್ನಿಸಿದ್ದರು. ಅಭಿಮಾನಿಗಳ ಒತ್ತಡ ಹೆಚ್ಚಾಗಿದೆ‌. ಕೆಲವರು ವಿಷ ಕುಡಿಯಲು ಹೋಗಿದ್ದರು. ಇದೇ ಕಾರಣಕ್ಕೆ ನಾನು ಸ್ಪರ್ಧೆಗೆ ಮುಂದಾಗಿದ್ದಾನೆ. ಹಾಗಾಗಿ ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವೆ. ನೀವು ನಿರ್ಧಾರ ಬದಲಿಸಿದರೆ ನಾವು ವಿಷ ಕುಡಿಯಬೇಕಾಗುತ್ತದೆ ಎಂದು ಕಾರ್ಯಕರ್ತರಿಗೆ ಹೇಳಿದರು. ನಿನ್ನೆಯಷ್ಟೇ ಜಾಮೀನನ ಮೇಲೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಿಡುಗಡೆಯಾದ ಹಿನ್ನೆಯಲ್ಲಿ ಮಲ್ಲಿಕಾರ್ಜುನ ಅವರು ಬೆಂಗಲಿಗರ ಸಭೆ ಕರೆದಿದ್ದರು.

ಚನ್ನಗಿರಿ ಕ್ಷೇತ್ರದಿಂದ ಮಾಡಾಳ್​ ಮಲ್ಲಿಕಾರ್ಜನ ಬಿಜೆಪಿ ಟಿಕೆಟ್​ ಕೇಳಿದ್ದರು. ಆದರೆ ಅವರಿಗೆ ಟಿಕೆಟ್​ ಕೈತಪ್ಪಿದ್ದು, ಹೆಚ್​.ಎಸ್​​ ಶಿಮಕುಮಾರ್​ ಅವರಿಗೆ ಬಿಜೆಪಿ ಟಿಕೆಟ್​ ನೀಡಲಾಗಿದೆ. ಈ ಹಿನ್ನೆಲೆ ತಂದೆ, ಮಗ ಮತ್ತು ಬೆಂಗಲಿಗರೊಂದಿಗೆ ಸೇರಿ ಪಕ್ಷೇತರ ಅಭ್ಯರ್ಥಿ ಆಗಿ ಸ್ಪರ್ಧಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಪುತ್ರನ ರಾಜಕೀಯ ಭವಿಷ್ಯದ ಹಿನ್ನೆಲೆ ಮಾಡಾಳ್ ಮತ್ತೆ ರಾಜಕೀಯ ಅಖಾಡಕ್ಕೆ ನುಗ್ಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: Madal Virupakshappa: ಕೊನೆಗೂ ಜೈಲಿನಿಂದ ಹೊರಬಂದ ಮಾಡಾಳ್ ವಿರೂಪಾಕ್ಷಪ್ಪ​​, ಮುಂದಿನ ರಾಜಕೀಯ ನಡೆ ಬಗ್ಗೆ ಹೇಳಿದ್ದಿಷ್ಟು

ಜೈಲಿನಿಂದ ರಿಲೀಸ್ ಆದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಟೆಂಡರ್​ಗಾಗಿ ಲಂಚ ಪಡೆದ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ  ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಶನಿವಾರ ಜಾಮೀನು ಮಂಜೂರು ಮಾಡಿದೆ. ಜಾಮೀನು ಪ್ರಕ್ರಿಯೆ ಮುಗಿಸಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದಿಂದ ಮಾಡಾಳ್​ ಬಿಡುಗಡೆ ಆಗಿದ್ದಾರೆ.

ಇದನ್ನೂ ಓದಿ: Madal Virupakshappa: ಲಂಚ ಪ್ರಕರಣ; ಮಾಡಾಳ್ ವಿರೂಪಾಕ್ಷಪ್ಪಗೆ ಜಾಮೀನು ಮಂಜೂರು

ಬಳಿಕ ಪ್ರತಿಕ್ರಿಯೆ ನೀಡಿದ ಮಾಡಾಳ್ ವಿರೂಪಾಕ್ಷಪ್ಪ, ಭಾರತದ ನ್ಯಾಯಾಂಗದ ಬಗ್ಗೆ ನನಗೆ ವಿಶ್ವಾಸದೆ. ಈ ಆರೋಪದಿಂದ ನಾನು ಮುಕ್ತನಾಗುತ್ತೇನೆ. ನಾಲ್ಕು ಗೋಡೆಗಳ ಮಧ್ಯೆ ನಾನಿದ್ದೆ. ಯಾವುದೇ ಟಿವಿ ಮಾಧ್ಯಮಗಳು ಅಲ್ಲಿಲ್ಲ. ಮನೆಗೆ ಹೋದ ಮೇಲೆ ಮಾಧ್ಯಮಗಳನ್ನ ನೋಡಿದ ಮೇಲೆ ರಾಜಕೀಯ ಬಗ್ಗೆ ಚರ್ಚೆ ಮಾಡುತ್ತೇನೆ. ನಾನು ಏನನ್ನ ಹೇಳುವ ಪರಿಸ್ಥಿತಿಯಲ್ಲಿಲ್ಲ. ಹೊರಗಡೆ ಏನು ನಡೆದಿದೆ ಎಂಬುದರ ಅರಿವಿಲ್ಲ. ಮನೆಗೆ ಹೋಗಿ ಮುಂದಿನ ರಾಜಕೀಯ ನಡೆಯ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇನೆ ಎಂದು ಹೇಳಿದರು.

ಮತ್ತಷ್ಟು ಕರ್ನಾಟಕ ವಿಧಾನಸಭೆ ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:53 pm, Sun, 16 April 23