Maddur Election Results: ಮದ್ದೂರು ವಿಧಾನಸಭಾ ಕ್ಷೇತ್ರ ಎಲೆಕ್ಷನ್ 2023 ರಿಸಲ್ಟ್: ಉದಯ್ ಹಾಗೂ ತಮ್ಮಣ್ಣ ನಡುವೆ ತೀವ್ರ ಹಣಾಹಣಿ
Maddur Assembly Election Results 2023 Live Counting Updates: ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಕೆ.ಎಸ್. ಉದಯ್ ಅವರು ಸ್ಪರ್ಧಿಸಿದ್ದರೇ, ಜೆಡಿಎಸ್‌ನಿಂದ ಡಿ.ಸಿ. ತಮ್ಮಣ್ಣ ಕಣದಲ್ಲಿದ್ದಾರೆ. ಹಾಗೆಯೇ ಇಲ್ಲಿ ಬಿಜೆಪಿಯಿಂದ ಎಸ್.ಪಿ. ಸ್ವಾಮಿ ಅವರು ಸ್ಪರ್ಧಿಸಿದ್ದು ಮತ ಎಣಿಕೆಯ ವಿವರ ಇಲ್ಲಿದೆ.

Maddur Assembly Election Results 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ (Maddur Assembly constituency) ಕಾಂಗ್ರೆಸ್‌ನಿಂದ ಕೆ.ಎಸ್. ಉದಯ್, ಬಿಜೆಪಿಯಿಂದ ಮನ್‌ಮುಲ್ ನಿರ್ದೇಶಕ ಎಸ್.ಪಿ. ಸ್ವಾಮಿ, ಜೆಡಿಎಸ್‌ನಿಂದ ಹಾಲಿ ಶಾಸಕ ಡಿ.ಸಿ. ತಮ್ಮಣ್ಣ ಅಖಾಡದಲ್ಲಿದ್ದಾರೆ. ಆಮ್ ಆದ್ಮಿ ಪಾರ್ಟಿಯಿಂದ ಆನಂದ ಕಣಕ್ಕೆ ಇಳಿದಿದ್ದಾರೆ. 2018, ಕಳೆದ ಚುನಾವಣೆಯಲ್ಲಿ ಇಲ್ಲಿ ಜನತಾ ದಳ (ಜಾತ್ಯತೀತ) ಪಕ್ಷದ ಅಭ್ಯರ್ಥಿ ಜಯ ಗಳಿಸಿದ್ದರು.
ಸ್ವಾತಂತ್ರ್ಯ ಹೋರಾಟದ ಕಿಚ್ಚು ಹಚ್ಚಿಸಿದ ಮದ್ದೂರು ವಿಧಾನಸಭಾ ಕ್ಷೇತ್ರ ರಾಜ್ಯಕ್ಕೆ ಮುಖ್ಯಮಂತ್ರಿ ನೀಡಿದ ಕ್ಷೇತ್ರವಾಗಿದೆ. ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಸತತ ಎರಡು ಬಾರಿ ಗೆಲುವು ಸಾಧಿಸಿ ಮೂರನೇ ಬಾರಿಗೆ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿರುವ ಹಾಲಿ ಶಾಸಕ ಡಿ.ಸಿ.ತಮ್ಮಣ್ಣಗೆ ಕಾಂಗ್ರೆಸ್‌ನಿಂದ ಪ್ರಬಲ ಪ್ರತಿಸ್ಪರ್ಧಿಯಾಗಿದ್ದಾರೆ.
ಮದ್ದೂರು ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಜಗಜ್ಜಾಹೀರಾಗಿರುವ ಸಂಗತಿ. ಈ ಕ್ಷೇತ್ರದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾಗಿರುವ ಕಾಂಗ್ರೆಸ್-ಜೆಡಿಎಸ್‌ನದ್ದೇ ಆರ್ಭಟ. ಆದರೆ ಕಳೆದ ಎರಡು ಚುನಾವಣೆಗಳಲ್ಲಿಯೂ ಕಾಂಗ್ರೆಸ್ ಪ್ರದರ್ಶನ ಅಷ್ಟಕ್ಕಷ್ಟೇ. ಅಭ್ಯರ್ಥಿ ಹಾಗೂ ಮುಖಂಡರ ನಡುವಿನ ಒಳಜಗಳ, ಹೊಂದಾಣಿಕೆ ರಾಜಕಾರಣ ಹಾಗೂ ಭಿನ್ನಾಭಿಪ್ರಾಯಗಳೇ ಹೆಚ್ಚು. ಇದರಿಂದ ಕಾಂಗ್ರೆಸ್ ಕಳೆದ 15 ವರ್ಷಗಳಿಂದ ಇಲ್ಲಿ ಗೆಲ್ಲಲು ಸಾಧ್ಯವಾಗಿಲ್ಲ.
ಈ ಬಾರಿ ಎಸ್.ಪಿ.ಸ್ವಾಮಿ ಅವರು ಸೇರ್ಪಡೆಯಿಂದ ಒಂದಿಷ್ಟು ಬಲ ಬಂದಂತಾಗಿದೆ. ಈಗಾಗಲೇ ಪಕ್ಷ ಸಂಘಟನೆ ಮಾಡುತ್ತಿರುವ ಸ್ವಾಮಿ ಸ್ಪರ್ಧೆಗೆ ಸಿದ್ಧತೆ ಆರಂಭಿಸಿದ್ದಾರೆ. ಜೆಡಿಎಸ್ ಪಕ್ಷದ ಮತಗಳ ಮೇಲೆ ಸೆಳೆಯುವ ಮೂಲಕ ತಮ್ಮಣ್ಣಗೆ ಟಕ್ಕರ್ ಕೊಡಲು ಮುಂದಾಗಿದ್ದಾರೆ. ಬಿಜೆಪಿ ಇದುವರೆಗೂ ಒಂದು ಬಾರಿಯೂ ಗೆದ್ದಿಲ್ಲ.



