Mahalakshmi Layout Election Results: ಮಹಾಲಕ್ಷ್ಮೀ ಲೇಔಟ್‌ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಶಾಂತಲಾ ದಾಮ್ಲೆಗೆ ಒಲಿಯುತ್ತಾಳಾ ಮಹಾಲಕ್ಷ್ಮೀ?

Mahalakshmi Layout Assembly Election Result 2023 Live Counting Updates: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ಮೇ 10 ರಂದು ನಡೆದ ಚುನಾವಣೆಯಲ್ಲಿ ಮಹಾಲಕ್ಷ್ಮೀ ಲೇ ಔಟ್‌ ಕ್ಷೇತ್ರದಲ್ಲಿ ಶೇ. 53.48 ರಷ್ಟು ಮತದಾನವಾಗಿತ್ತು.

Mahalakshmi Layout Election Results: ಮಹಾಲಕ್ಷ್ಮೀ ಲೇಔಟ್‌ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಶಾಂತಲಾ ದಾಮ್ಲೆಗೆ ಒಲಿಯುತ್ತಾಳಾ ಮಹಾಲಕ್ಷ್ಮೀ?
ಮಹಾಲಕ್ಷ್ಮೀ ಲೇ ಔಟ್‌ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್
Follow us
ಸಾಧು ಶ್ರೀನಾಥ್​
| Updated By: ಗಂಗಾಧರ​ ಬ. ಸಾಬೋಜಿ

Updated on: May 13, 2023 | 4:28 AM

Mahalakshmi Layout Assembly Election Result 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ  (Karnataka Assembly Elections 2023) ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ಮೇ 10 ರಂದು ನಡೆದ ಚುನಾವಣೆಯಲ್ಲಿ ಮಹಾಲಕ್ಷ್ಮೀ ಲೇ ಔಟ್‌ ಕ್ಷೇತ್ರದಲ್ಲಿ (Mahalakshmi Layout Assembly Elections 2023) ಶೇ. 53.48ರಷ್ಟು ಮತದಾನವಾಗಿತ್ತು. ಮಹಾಲಕ್ಷ್ಮಿ ಲೇಔಟ್ – ಇದು ಶ್ರಮಿಕ ಹಾಗೂ ಮಧ್ಯಮ ವರ್ಗದವರೇ ಹೆಚ್ಚಿರುವ ವಿಧಾನಸಭಾ ಕ್ಷೇತ್ರ. ಮಾಗಡಿ, ತುಮಕೂರು, ಕುಣಿಗಲ್‌, ನೆಲಮಂಗಲ ಹಾಗೂ ಉತ್ತರ ಕರ್ನಾಟಕ ಭಾಗದಿಂದ ಜೀವನೋಪಾಯಕ್ಕೆ ವಲಸೆ ಬಂದ ಮತದಾರರು ಈ ಕ್ಷೇತ್ರದಲ್ಲಿ ಹೆಚ್ಚಿದ್ದಾರೆ. 2008ರ ಕ್ಷೇತ್ರ ಪುನರ್ ವಿಂಗಡಣೆಯ ವೇಳೆ ರಾಜಾಜಿನಗರ, ಯಲಹಂಕ, ಉತ್ತರಹಳ್ಳಿ ಕ್ಷೇತ್ರಗಳ ಕೆಲವು ಪ್ರದೇಶಗಳನ್ನು ಸೇರಿಸಿ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರ ರಚಿಸಲಾಯಿತು. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಮಹಾಲಕ್ಷ್ಮಿ ಬಡಾವಣೆಯಲ್ಲಿ ನಂದಿನಿ ಲೇಔಟ್, ಮಾರಪ್ಪನಪಾಳ್ಯ, ನಾಗಪುರ, ಮಹಾಲಕ್ಷ್ಮೀಪುರಂ, ಶಕ್ತಿ ಗಣಪತಿ ನಗರ, ಶಂಕರಮಠ, ವೃಷಭಾವತಿ ನಗರ ವಾರ್ಡ್‌ಗಳು ಸೇರುತ್ತವೆ. ಮಹಾಲಕ್ಷ್ಮಿ ಕ್ಷೇತ್ರದಲ್ಲಿ 2,87,300 ಮತದಾರರಿದ್ದಾರೆ. ಈ ಪೈಕಿ ಒಕ್ಕಲಿಗ 74,000, ಎಸ್‌ಸಿ- ಎಸ್‌ಟಿ – 51,000, ಬ್ರಾಹ್ಮಣ – 34,000, ಲಿಂಗಾಯತ – 29,000, ದೇವಾಂಗ – 21,000, ಮುಸ್ಲಿಂ – 18,000, ತಮಿಳು – 17,000, ತಿಗಳ – 8,200, ಕುರುಬ – 8,000, ಹಾಗೂ ಇತರೇ ಸಮುದಾಯದ ಮತ 11,000 ಇದೆ.

ಮಹಾಲಕ್ಷ್ಮಿ ಲೇಔಟ್ ರಚನೆಯಾದ ನಂತರ ನಡೆದ ಮೊದಲ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸಿನಿಮಾ ರಂಗದಲ್ಲಿ ಗುರುತಿಸಿಕೊಂಡಿದ್ದ ನೆ ಲ ನರೇಂದ್ರ ಬಾಬು ಸ್ಪರ್ಧಿಸಿ ಬಿಜೆಪಿಯ ಆರ್ ವಿ ಹರೀಶ್ ಅವರನ್ನು 3225 ಮತಗಳ ಅಂತರದಿಂದ ಸೋಲಿಸಿದ್ದರು. ಆಗ ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಕೆ ಗೋಪಾಲಯ್ಯ ಮೂರನೇ ಸ್ಥಾನ ಗಳಿಸಿದ್ದರು. 80ರ ದಶಕದಲ್ಲಿ ಜನತಾ ಪರಿವಾರದ ನಾಯಕರೊಂದಿಗೆ ಹೆಚ್ಚು ಆಪ್ತವಾಗಿದ್ದ ಗೋಪಾಲಯ್ಯ, ನಂತರದ ದಿನಗಳಲ್ಲಿ ನಗರಸಭಾ ಸದಸ್ಯರಾಗಿ ಹಂತಹಂತವಾಗಿ ಮೇಲೆ ಬಂದು ಸಾರ್ವಜನಿಕರೊಂದಿಗೆ ಹತ್ತಿರವಾಗುತ್ತಾ ಬಂದರು. 2013ರಲ್ಲಿ ಮೊದಲ ಬಾರಿಗೆ ಶಾಸಕರಾದರು. ಜನಪ್ರತಿನಿಧಿಯಾದ ನಂತರ ಕ್ಷೇತ್ರದಲ್ಲಿ ಮತ್ತಷ್ಟು ಪ್ರಭಾವಿಯಾದರು. ಈ ಕಾರಣಕ್ಕಾಗಿಯೇ 2018ರ ಚುನಾವಣೆಯಲ್ಲಿಯೂ ಮತ್ತೆ ತೆನೆ ಪಕ್ಷದಿಂದ ಪುನರಾಯ್ಕೆಯಾದರು.

2019ರಲ್ಲಿ ಆಪರೇಷನ್‌ ಕಮಲದ ಪ್ರಯುಕ್ತ ಬಿಜೆಪಿಗೆ ಜಿಗಿದು 50 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿ ಮೂರನೇ ಬಾರಿ ಆಯ್ಕೆಯಾದರು. ಆಗ ಗೋಪಾಲಯ್ಯ ವಿರುದ್ಧ ಸ್ಪರ್ಧಿಸಲು ಕಾಂಗ್ರೆಸ್ ಹಾಗೂ ಜೆಡಿಎಸ್‌ನಲ್ಲಿ ಅಂತಹ ಪ್ರಬಲ ಅಭ್ಯರ್ಥಿಗಳೇ ಇರಲಿಲ್ಲ. ಕಮಲ ಸರ್ಕಾರ ರಚನೆಗೆ ಕಾರಣರಾಗಿದ್ದಕ್ಕಾಗಿ ಸಚಿವ ಭಾಗ್ಯವು ದೊರೆಯಿತು.

2023ರ ಚುನಾವಣೆಯಲ್ಲಿ ಬಿಜೆಪಿ ಗೋಪಾಲಯ್ಯನವರಿಗೆ ಮತ್ತೆ ಟಿಕೆಟ್ ನೀಡಿದೆ. ಕ್ಷೇತ್ರದ ಜನರ ಸಮಸ್ಯೆಗಳಿಗೆ ಅಂತಹ ದೊಡ್ಡ ಮಟ್ಟದಲ್ಲಿ ಮೂಲಸೌಲಭ್ಯಗಳ ಪರಿಹಾರ ದೊರಕಿಸದಿದ್ದರೂ ತುರ್ತಾಗಿ ಸಣ್ಣಪುಟ್ಟ ಅನುಕೂಲವಾಗುವುದರಿಂದ ತಮ್ಮ ನಾಯಕ ಯಾವ ಪಕ್ಷದಲ್ಲಿದ್ದರೂ ಕೆಲಸ ಮಾಡುತ್ತಾರೆ ಎಂಬ ಭಾವನೆ ಮತದಾರರಲ್ಲಿದೆ. ಅಲ್ಲದೆ ಮೂರು ಚುನಾವಣೆಗಳಲ್ಲೂ ಪಕ್ಷದ ಬಲಕ್ಕಿಂತ ವೈಯಕ್ತಿಕ ವರ್ಚಸ್ಸೇ ಹೆಚ್ಚು ಕೆಲಸ ಮಾಡುತ್ತಿದೆ.

ಇದನ್ನೂ ಓದಿ: PM Modi Roadshow: ಬಿಜೆಪಿಯನ್ನು ಬೆಂಗಳೂರು ಬಯಸುತ್ತಿದೆ, ಸಾಕ್ಷಿ ಇಲ್ಲಿದೆ ನೋಡಿ; ಪ್ರಧಾನಿ ಮೋದಿ

ಮಹಾಲಕ್ಷ್ಮಿಪುರ ವಾರ್ಡ್‌ನ ಪಾಲಿಕೆ ಸದಸ್ಯರಾಗಿದ್ದ ಕೇಶವಮೂರ್ತಿ ಅವರಿಗೆ ಈ ಬಾರಿ ಕಾಂಗ್ರೆಸ್ ಟಿಕೆಟ್ ನೀಡಿದೆ. ಆಡಳಿತ ವಿರೋಧಿ ಅಲೆ ಗೋಪಾಲಯ್ಯ ವಿರುದ್ಧದ ತಮಗೆ ಮತ ದೊರಕಬಹುದೆಂಬ ಭಾವನೆ ಅವರಲ್ಲಿದೆ. ತಾವು ಕೂಡ ಗೆಲುವಿನ ಆಕಾಂಕ್ಷಿ ಎನ್ನುತ್ತಾರೆ ಕೇಶವಮೂರ್ತಿ. ಜೆಡಿಎಸ್‌ನಿಂದ ಸ್ಥಳೀಯ ನಾಯಕ ಕೆ ಸಿ ರಾಜಣ್ಣ ಸ್ಪರ್ಧಿಸಿದ್ದಾರೆ. ಎಎಪಿ ರಾಜ್ಯ ನಾಯಕಿ ಶಾಂತಲಾ ದಾಮ್ಲೆ ಇದೇ ಕ್ಷೇತ್ರದಿಂದ ಸ್ಪರ್ಧಿಸಿರುವುದು ಚುನಾವಣೆಯಲ್ಲಿ ಒಂದಿಷ್ಟು ಸ್ಪರ್ಧೆ ಕಾಣಬಹುದು. ಅಲ್ಲದೆ ಎರಡೂ ಬಾರಿ ಇವರ ವಿರುದ್ಧ ಸೋತಿದ್ದ ನೆ ಲ ನರೇಂದ್ರಬಾಬು, ಗೋಪಾಲಯ್ಯನ ಪರವೇ ಪ್ರಚಾರ ಮಾಡುತ್ತಿದ್ದಾರೆ!

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ