ಕರ್ನಾಟಕ ವಿಧಾನಸಭೆ ಚುನಾವಣೆ ಪ್ರಚಾರಕ್ಕಿಳಿದ ಮಹಾರಾಷ್ಟ್ರ ಡಿಸಿಎಂ: ಗಡಿ ವಿವಾದದ ಬಗ್ಗೆ ಸಾಫ್ಟ್​​ ಕಾರ್ನರ್

ಗಡಿ ಭಾಗದ ಕನ್ನಡಿಗರಿಗೆ ಆರೋಗ್ಯ ವಿಮಾ ಯೋಜನೆ ಹಿಂದಿನ‌ ಸರ್ಕಾರದ್ದು. ಚುನಾವಣೆ ಸಮಯದಲ್ಲಿ ಗಡಿ ವಿವಾದ ಮಾತು ಬೇಡಾ. ಎಂಇಎಸ್ ನಿಲುವು ನಮ್ಮ ಪಕ್ಷದ ನಿಲುವಲ್ಲಾ. ಮಹಾರಾಷ್ಟ್ರದಲ್ಲಿ ಯಾವುದೇ ಕಾರಣಕ್ಕೂ ಬದಲಾವಣೆ ಇಲ್ಲ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್​ ಹೇಳಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ಪ್ರಚಾರಕ್ಕಿಳಿದ ಮಹಾರಾಷ್ಟ್ರ ಡಿಸಿಎಂ: ಗಡಿ ವಿವಾದದ ಬಗ್ಗೆ ಸಾಫ್ಟ್​​ ಕಾರ್ನರ್
ದೇವೇಂದ್ರ ಫಡ್ನವೀಸ್​
Follow us
ವಿವೇಕ ಬಿರಾದಾರ
|

Updated on:Apr 26, 2023 | 12:34 PM

ವಿಜಯಪುರ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಇನ್ನೂ ಬಗೆಹರಿದಿಲ್ಲ. ಗಡಿ ವಿಚಾರವಾಗಿ ಆಗಾಗ ಮಹಾರಾಷ್ಟ್ರ ತಕರಾರು ತೆಗೆಯುತ್ತಿರುತ್ತದೆ. ಕಳೆದ ವರ್ಷ ಇದು ಮತ್ತೆ ಮುನ್ನಲೆಗೆ ಬಂದಿತ್ತು. ಈ ವೇಳೆ ಮಾಹಾರಾಷ್ಟ್ರ ಸರ್ಕಾರ ಗಡಿ ಭಾಗದ ಕನ್ನಡಿಗರಿಗೆ ತನ್ನ ಸರ್ಕಾರದ ಆರೋಗ್ಯ ವಿಮೆಯನ್ನು ನೀಡಲು ಮುಂದಾಗಿತ್ತು. ಇದಕ್ಕೆ ರಾಜ್ಯದಲ್ಲಿ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಈ ವಿಚಾರವಾಗಿ ಈಗ ಮಹರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ (Devendra Fadnavis)​ ಸಾಪ್ಟ್​​ ಕಾರ್ನ್​​ ತಾಳಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ವಿಜಯಪುರದಲ್ಲಿ ಪ್ರಚಾರಕ್ಕಿಳಿದ ಅವರು, ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಮಾತನಾಡಿ ಗಡಿ ಭಾಗದ ಕನ್ನಡಿಗರಿಗೆ ಆರೋಗ್ಯ ವಿಮಾ ಯೋಜನೆ ಹಿಂದಿನ‌ ಸರ್ಕಾರದ್ದು. ಚುನಾವಣೆ ಸಮಯದಲ್ಲಿ ಗಡಿ ವಿವಾದ ಮಾತು ಬೇಡಾ. ಎಂಇಎಸ್ (MES) ನಿಲುವು ನಮ್ಮ ಪಕ್ಷದ ನಿಲುವಲ್ಲಾ. ಮಹಾರಾಷ್ಟ್ರದಲ್ಲಿ (Maharashtra) ಯಾವುದೇ ಕಾರಣಕ್ಕೂ ಬದಲಾವಣೆ ಇಲ್ಲ ಎಂದು ಹೇಳಿದರು.

ವಿಜಯಪುರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗಳಿಸುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಸಿಎಂ ಬೊಮ್ಮಾಯಿ ನೇತೃತ್ವದ ಸರ್ಕಾರ ಮತ್ತೆ ಅಧಿಕಾರ ಹಿಡಿಯಲಿದೆ. ಬಡವರ ಕಲ್ಯಾಣವನ್ನು ಮೋದಿ ಮಾಡಿದ್ದಾರೆ. ಡಬಲ್ ಎಂಜೀನ್ ಸರ್ಕಾರ ಅಭಿವೃದ್ಧಿ ಮಾಡಿದೆ ಎಂದರು.

ಇದನ್ನೂ ಓದಿ: ವಿಜಯಪುರದಲ್ಲಿ ಯತ್ನಾಳ್ ಪರ ಮಹಾರಾಷ್ಟ್ರ ಡಿಸಿಎಂ ಫಡ್ನವಿಸ್ ಚಾಯ್ ಪೇ ಚರ್ಚಾ

ರಾಜ್ಯ ಬಿಜೆಪಿ ಸರ್ಕಾರ ಎಲ್ಲೆಡೆ ಮೂಲಭೂತ ಸೌಕರ್ಯ ನೀಡಿದೆ. ಕರ್ನಾಟಕ ಸರ್ಕಾರ ವಿದ್ಯಾರ್ಥಿಗಳಿಗಾಗಿ ಸ್ಕಾಲರ್ ಶಿಪ್ ನೀಡಿದೆ. ಬಿಪಿಎಲ್ ಪಡಿತರ ಚೀಟಿ ಹೊಂದಿದ ಮಹಿಳೆಯರಿಗೆ ಎರಡು ಸಾವಿರ ಹಣ ನೀಡಲಾಗಿದೆ. ಕೇಂದ್ರ ಸರ್ಕಾರ ನೀರಾವರಿಗೆ ಹಣ ನೀಡಿದೆ. ಎಸ್ಸಿ, ಎಸ್ಟಿ, ಲಿಂಗಾಯತ ಮತ್ತು ಒಕ್ಕಲಿಗ ಸಮಾಜಕ್ಕೆ ಹಾಗೂ ಇತರ ಸಮಾಜಗಳಿಗೆ ಸಾಮಾಜಿಕ ನ್ಯಾಯ ಕೊಡಲು ಬದ್ಧವಾಗಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್​ನವರು ಮುಸ್ಲೀಂಮರ ಓಲೈಕೆ ಮಾಡುತ್ತಿದ್ದಾರೆ. ವೋಟ್ ಬ್ಯಾಂಕ್ ರಾಜಕಾರಣ ನಾವು ಮಾಡಲ್ಲಾ. ವಿಜಯಪುರ ಕ್ಷೇತ್ರದ ಅಭ್ಯರ್ಥಿ ಮೇಲೆ ಜನರ ಪ್ರೀತಿ ಇದೆ. ಕರ್ನಾಟಕ ಜನ ಬಿಜೆಪಿ ಜೊತೆಗಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

40 ಪರ್ಸೆಂಟ್ ಕಮೀಷನ್ ಭ್ರಷ್ಟಾಚಾರ ಆರೋಪ ವಿಚಾರವಾಗಿ ಮಾತನಾಡಿದ ಅವರು ಈ ಕುರಿತು ಯಾವುದೇ ಸಾಕ್ಷಿ ಕಾಂಗ್ರೆಸ್​ನವರು ನೀಡಿಲ್ಲ. ಕರ್ನಾಟಕ, ಕಾಂಗ್ರೆಸ್ ಪಾಲಿಗೆ ಎಟಿಎಂ ಎಂದು ಸಚಿವ ಅಮೀತ್ ಶಾ ಹೇಳಿದ್ದಾರೆ ಎಂದು ತಿಳಸಿದರು.

ಏನಿದು ಗಡಿ ಭಾಗದ ಕನ್ನಡಿಗರಿಗೆ ಆರೋಗ್ಯ ವಿಮಾ ಯೋಜನೆ

ಮಹಾರಾಷ್ಟ್ರ ಸರ್ಕಾರ 2012ರಲ್ಲಿ ರಾಜೀವ್ ಗಾಂಧಿ ಜೀವನದಾಯಿ ಆರೋಗ್ಯ ಯೋಜನೆ (ಆರ್‌ಜಿಜೆಎವೈ) ಜಾರಿಗೆ ತಂದಿತ್ತು. 2017ರ ಏಪ್ರಿಲ್‌ 1ರಿಂದ ಇದೇ ಯೋಜನೆಯ‌ನ್ನು ‘ಮಹಾತ್ಮಾ ಜ್ಯೋತಿರಾವ್‌ ಫುಲೆ ಜನಾರೋಗ್ಯ ಯೋಜನೆ (ಎಂಜೆಪಿಜೆಎವೈ) ಎಂದು ಮರು ನಾಮಕರಣ ಮಾಡಿತ್ತು. ಯೋಜನೆಯನ್ನು ಇದೇ ಮೊದಲ ಬಾರಿಗೆ ರಾಜ್ಯದ ಹೊರಗೆ ವಿಸ್ತರಿಸಲಾಗಿತ್ತು. ಮಹಾರಾಷ್ಟ್ರದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೆ ಮಾತ್ರ ಈ ಯೋಜನೆ ಅನ್ವಯ ಆಗುತ್ತದೆ.

ಮಾರ್ಚ್‌ 9ರಂದು ಮಹಾರಾಷ್ಟ್ರ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಏಕನಾಥ ಶಿಂಧೆ ಈ ಪ್ರಸ್ತಾವ ಇಟ್ಟಿದ್ದರು. ‘ಕರ್ನಾಟಕದ ಐದು ಜಿಲ್ಲೆಗಳಲ್ಲಿ ಇರುವ 865 ಹಳ್ಳಿಗಳ ಮರಾಠಿಗರು ಹಾಗೂ ಇತರ ಭಾಷಿಕರಿಗೂ ಈ ಯೋಜನೆ ವಿಸ್ತರಿಸಲಾಗುವುದು. ಇದಕ್ಕಾಗಿ ₹ 54 ಕೋಟಿ ಹೆಚ್ಚುವರಿ ಅನುದಾನ ಮೀಸಲಿಡಲಾಗುವುದು’ ಎಂದು ತಿಳಿಸಿದ್ದರು. ಶಿವಸೇನಾ ಮುಖಂಡ ಉದ್ಧವ್‌ ಠಾಕ್ರೆ ಸೇರಿದಂತೆ ಬಹುಪಾಲು ಮುಖಂಡರೂ ಇದಕ್ಕೆ ಬೆಂಬಲ ಸೂಚಿಸಿದ್ದರು.

865 ಹಳ್ಳಿಗಳೇ ಏಕೆ?:

ಬೆಳಗಾವಿ ನಗರವೂ ಸೇರಿದಂತೆ ಕರ್ನಾಟಕದ ಒಳಗಿರುವ 865 ಹಳ್ಳಿಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂದು ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್‌) ಹೋರಾಟ ನಡೆಸಿದೆ. ಈ ವಿವಾದ ಸುಪ್ರೀಂಕೋರ್ಟ್‌ನಲ್ಲಿದೆ. ಸದ್ಯ ಮಹಾರಾಷ್ಟ್ರ ಸರ್ಕಾರವೂ ಇದೇ ಹಳ್ಳಿಗಳನ್ನು ಗುರಿಯಾಗಿಸಿ ಯೋಜನೆ ವಿಸ್ತರಿಸಿದೆ. ಬೆಳಗಾವಿ, ವಿಜಯಪುರ, ಕಲಬುರಗಿ, ಬೀದರ್, ಉತ್ತರಕನ್ನಡ ಜಿಲ್ಲೆಗಳ ಹಳ್ಳಿಗಳ ಜನ ಚಿಕಿತ್ಸೆಗಾಗಿ ಹೆಚ್ಚಾಗಿ ಮಹಾರಾಷ್ಟ್ರದ ಮೀರಜ್, ಪುಣೆ, ಸಾಂಗ್ಲಿ, ಕೊಲ್ಹಾಪುರಗಳಿಗೆ ಹೋಗುವುದು ಸಹಜ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:33 pm, Wed, 26 April 23

ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ