ಜೆಡಿಎಸ್ ಭದ್ರಕೋಟೆ ಹಾಸನದಲ್ಲಿ ಮಲ್ಲಿಕಾರ್ಜುನ ಖರ್ಗೆ, ಡಿಕೆ ಶಿವಕುಮಾರ್ ಪ್ರಚಾರ; ಮಂಡ್ಯದಲ್ಲೂ ಮತಬೇಟೆ

ಜೆಡಿಎಸ್ ಭದ್ರಕೋಟೆ ಹಾಸನ, ಮಂಡ್ಯದಲ್ಲಿ ತಮ್ಮ ಪಕ್ಷವನ್ನು ಗೆಲ್ಲಿಸುವ ಉದ್ದೇಶದಿಂದ ಕಾಂಗ್ರೆಸ್​ನ ನಾಯಕರು ಪ್ರಚಾರಕ್ಕೆ ಮುಂದಾಗಿದ್ದಾರೆ. ಇಂದು ಕಾಂಗ್ರೆಸ್ ಶಕ್ತಿಪ್ರದರ್ಶನ ತೋರಿಸಲಿದೆ.

ಜೆಡಿಎಸ್ ಭದ್ರಕೋಟೆ ಹಾಸನದಲ್ಲಿ ಮಲ್ಲಿಕಾರ್ಜುನ ಖರ್ಗೆ, ಡಿಕೆ ಶಿವಕುಮಾರ್ ಪ್ರಚಾರ; ಮಂಡ್ಯದಲ್ಲೂ ಮತಬೇಟೆ
ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
Follow us
|

Updated on:Apr 29, 2023 | 9:41 AM

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳು ಪ್ರಚಾರ ಜೋರು ಮಾಡಿವೆ. ರಾಜ್ಯದಲ್ಲಿ ತಮ್ಮ ಪಕ್ಷವನ್ನು ಗೆಲ್ಲಿಸಬೇಕೆಂದು ಮೂಲೆ ಮೂಲೆಗಳಲ್ಲಿ ಮತಬೇಟೆಗಿಳಿದಿವೆ. ಇದರ ನಡುವೆ ಜೆಡಿಎಸ್ ಭದ್ರಕೋಟೆ ಹಾಸನ, ಮಂಡ್ಯದಲ್ಲಿ ತಮ್ಮ ಪಕ್ಷವನ್ನು ಗೆಲ್ಲಿಸುವ ಉದ್ದೇಶದಿಂದ ಕಾಂಗ್ರೆಸ್​ನ ನಾಯಕರು ಪ್ರಚಾರಕ್ಕೆ ಮುಂದಾಗಿದ್ದಾರೆ. ಇಂದು ಕಾಂಗ್ರೆಸ್ ಶಕ್ತಿಪ್ರದರ್ಶನ ತೋರಿಸಲಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್ ಸೇರಿದಂತೆ ಹಲವು ನಾಯಕರು ಹಾಸನದಲ್ಲಿಂದ ಭರ್ಜರಿ ಕ್ಯಾಂಪೇನ್ ಮಾಡಲಿದ್ದಾರೆ.

ಸಕ್ಕರೆ ನಾಡಲ್ಲಿ ಕೈ ಪ್ರಚಾರ

ದಲಿತ ಮತಗಳನ್ನ ಕಬ್ಜ ಮಾಡಲು ಮಂಡ್ಯ ಜಿಲ್ಲೆಯ ಮಳವಳ್ಳಿ, ಕೆ.ಆರ್​.ಪೇಟೆ ಕ್ಷೇತ್ರದಲ್ಲಿ ಮಲ್ಲಿಕಾರ್ಜುನ ಖರ್ಗೆ, ಡಿಕೆ ಶಿವಕುಮಾರ್ ಪ್ರಚಾರ ನಡೆಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಮಳವಳ್ಳಿಗೆ ಮಲ್ಲಿಕಾರ್ಜುನ ಖರ್ಗೆ, ಡಿಕೆಶಿ ಭೇಟಿ ನೀಡಲಿದ್ದು ಮಳವಳ್ಳಿ ಕಾಂಗ್ರೆಸ್ ಅಭ್ಯರ್ಥಿ ನರೇಂದ್ರಸ್ವಾಮಿ ಪರ ಮತಯಾಚನೆ ಮಾಡಲಿದ್ದಾರೆ. ಬಳಿಕ ಕೆ.ಆರ್​.ಪೇಟೆ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ. ಕೈ ಪಾಳಯದಿಂದ ದಲಿತ ಟ್ರಂಪ್ ಕಾರ್ಡ್ ಬಳಕೆಗೆ ಮಾಸ್ಟರ್ ಪ್ಲಾನ್ ಮಾಡಲಾಗಿದೆ. ಮಲ್ಲಿಕಾರ್ಜುನ ಖರ್ಗೆಯನ್ನ ಮುಂದಿಟ್ಟು ಕೊಂಡು ದಲಿತ ಮತಗಳಿಗೆ ಗಾಳ ಹಾಕಲಾಗುತ್ತಿದೆ.

ಇನ್ನು ಸಕಲೇಶಪುರ ಹಾಗೂ ಅರಕಲಗೂಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶ ಹಮ್ಮಿಕೊಂಡಿದೆ. ಹೆಲಿಕಾಪ್ಟರ್ ಮೂಲಕ ಸಕಲೇಶಪುರದ ಬಾಳ್ಳುಪೇಟೆಗೆ ಕಾಂಗ್ರೆಸ್ ನಾಯಕರು ಆಗಮಿಸಲಿದ್ದು ಇಂದು ಸಂಜೆ 4 ಗಂಟೆಗೆ ಬಾಳ್ಳುಪೇಟೆಯಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಮುರುಳಿ ಮೋಹನ್ ಪರವಾಗಿ ಕ್ಯಾಂಪೇನ್ ನಡೆಯಲಿದೆ. ಹಾಗೂ ಅರಕಲಗೂಡು ಕ್ಷೇತ್ರದ ಅಭ್ಯರ್ಥಿ ಶ್ರೀಧರ್ ಗೌಡ ಪರ ಮತಯಾಚನೆ ಮಾಡಲಿದ್ದಾರೆ.

ಹರಪನಹಳ್ಳಿ ‌ಕ್ಷೇತ್ರದಲ್ಲಿ ಸಿದ್ದರಾಮಯ್ಯ ಪ್ರಚಾರ

ಹರಪನಹಳ್ಳಿ ಕ್ಷೇತ್ರದಲ್ಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು‌ ಪ್ರಚಾರ ನಡೆಸಲಿದ್ದು ಮಧ್ಯಾಹ್ನ 1.15ಕ್ಕೆ ಹರಪನಹಳ್ಳಿಗೆ ಆಗಮಿಸಲಿದ್ದಾರೆ. ಹರಪನಹಳ್ಳಿ ಪಟ್ಟಣದಲ್ಲಿ ನಡೆಯುವ ಪ್ರಚಾರ ಸಭೆಯಲ್ಲಿ ಭಾಗಿಯಾಗಿ ಹರಪನಹಳ್ಳಿ ಕಾಂಗ್ರೆಸ್ ಅಭ್ಯರ್ಥಿ ಎನ್ ಕೊಟ್ರೇಶ್ ಪರ ಮತಯಾಚನೆ ಮಾಡಲಿದ್ದಾರೆ. ಹಾಘೂ ಮಾಯಕೊಂಡ ಕ್ಷೇತ್ರದಲ್ಲಿ ಜೆಪಿ ನಡ್ಡಾ ಪ್ರಚಾರ ನಡೆಸಲಿದ್ದಾರೆ. ದಾವಣಗೆರೆ ಜಿಲ್ಲೆಯ ಮಾಯಕೊಂಡ ವಿಧಾನ ಸಭಾ ಕ್ಷೇತ್ರದ ಬಸವಾ ಪಟ್ಟಣ ಗ್ರಾಮದಲ್ಲಿ ನಡ್ಡಾ ರೋಡ್ ಶೋ ಹಾಗೂ ಬಹಿರಂಗ ಸಭೆ ನಡೆಸಲಿದ್ದಾರೆ. ನಾಲ್ಕು ಗಂಟೆಗೆ ಬಸವಾ ಪಟ್ಟಣಕ್ಕೆ ಆಗಮಿಸಿ ಬಸವಾಪಟ್ಟಣದ ಪ್ರಮುಖ ಬೀದಿಯಲ್ಲಿ ರೋಡ್ ಶೋ ನಡೆಸಿ ನಂತರ ಬಸವಾಪಟ್ಟಣದ ಸರ್ಕಲ್ ನಲ್ಲಿ ಬಹಿರಂಗ ಸಮಾವೇಶ ನಡೆಸಲಿದ್ದಾರೆ. ಬಹಿರಂಗ ಸಮಾವೇಶ ಮುಗಿಸಿ ದಾವಣಗೆರೆ ‌ನಗರದ ಹೊರವಲಯದ ಜಿಎಂಐಟಿ ಅತಿಥಿ ಗೃಹಕ್ಕೆ ಆಗಮಿಸಿ‌ ಪ್ರಮುಖ ನಾಯಕರ ಜೊತೆ ಸಭೆ ಮಾಡಿ ಜಿಎಂಐಟಿ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ನೆಲಮಂಗಲದಲ್ಲಿಂದು ಹೆಚ್​ಡಿಡಿ ಪ್ರಚಾರ

ನಿನ್ನೆ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಅಭ್ಯರ್ಥಿ ಜವರಾಯಿಗೌಡ ಪರ ಬಿರುಸಿನ ಪ್ರಚಾರ ಮಾಡಿದ್ದ ಹೆಚ್​ಡಿ ಕುಮಾರಸ್ವಾಮಿಯವರು ಅಗರ, ಕಗ್ಗಲಿಪುರ, ತರಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮದಲ್ಲಿ ರೋಡ್ ಶೋ ಮ‌ೂಲಕ ಮತ ಶಿಕಾರಿ ಮಾಡಿದ್ದರು. ಇಂದು ಬೆಂಗಳೂರು ಗ್ರಾ. ಜಿಲ್ಲೆ ನೆಲಮಂಗಲದಲ್ಲಿ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಪ್ರಚಾರ ನಡೆಸಲಿದ್ದಾರೆ. ಜೆಡಿಎಸ್ ಅಭ್ಯರ್ಥಿ ಶಾಸಕ ಶ್ರೀನಿವಾಸಮೂರ್ತಿ ಪರ ಮತಯಾಚನೆ ಮಾಡಲಿದ್ದಾರೆ. ಹಾಗೂ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬಸವಣ್ಣದೇವರ ಮಠದ ಆವರಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಎಂ‌ಎಲ್‌ಸಿ ಶವರಣ, ಮಾಜಿ ಎಂ‌ಎಲ್‌ಸಿ ಕೃಷ್ಣಪ್ಪ ಭಾಗಿಯಾಗಲಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:41 am, Sat, 29 April 23

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ