ಕ್ಲೈಮ್ಯಾಕ್ಸ್ ಹಂತಕ್ಕೆ ಕರ್ನಾಟಕ ಸಿಎಂ ಕುರ್ಚಿ ಫೈಟ್: ಇಂದೇ ಘೋಷಣೆ, ಎಲ್ಲರ ಚಿತ್ತ ದೆಹಲಿಯತ್ತ

ಕಳೆದ ಮೂರು ದಿನಗಳಿಂದ ಕಾಂಗ್ರೆಸ್​ನಲ್ಲಿ ನಡೆಯುತ್ತಿರುವ ಸಿಎಂ ಕುರ್ಚಿಗೆ ನಡೆಯುತ್ತಿರುವ ಕಿತ್ತಾಟ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದ್ದು, ರಾಹುಲ್ ಗಾಂಧಿ ಅವರು ಇಂದು ಇಬ್ಬರು ನಾಯಕನ್ನು ಕೂಡಿಸಿಕೊಂಡು ಫೈನಲ್​ ಮಾಡಲಿದ್ದಾರೆ. ಹೀಗಾಗಿ ಎಲ್ಲರ ಚಿತ್ತ ಈಗ ದೆಹಲಿಯತ್ತ ನೆಟ್ಟಿದೆ.

ಕ್ಲೈಮ್ಯಾಕ್ಸ್ ಹಂತಕ್ಕೆ ಕರ್ನಾಟಕ ಸಿಎಂ ಕುರ್ಚಿ ಫೈಟ್: ಇಂದೇ ಘೋಷಣೆ, ಎಲ್ಲರ ಚಿತ್ತ ದೆಹಲಿಯತ್ತ
ಕಳೆದ ಕೆಲವು ದಿನಗಳಿಂದ ದೊಡ್ಡ ಕಗ್ಗಂಟಾಗಿದ್ದ ಕರ್ನಾಟಕ ಮುಖ್ಯಮಂತ್ರಿ ಆಯ್ಕೆ ವಿಚಾರ ಕೊನೆಗೂ ಬಗೆಹರಿದಿದೆ.
Follow us
ರಮೇಶ್ ಬಿ. ಜವಳಗೇರಾ
|

Updated on:May 17, 2023 | 7:31 AM

ನವದೆಹಲಿ:  ಕರ್ನಾಟಕ ಈ ಬಾರಿ ಕಾಂಗ್ರೆಸ್ (Congress) ಮ್ಯಾಜಿಕ್‌ ನಂಬರ್‌ ದಾಟಿ ಬಹುಮತ ಪಡೆದಿದೆ. ಆದ್ರೆ, ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​ ಮಧ್ಯೆ ಸಿಎಂ(chief minister) ಕುರ್ಚಿಗಾಗಿ ಫೈಟ್‌ ಮಾಡುತ್ತಿದ್ದಾರೆ. ದೆಹಲಿಯಲ್ಲೇ ಸಿಎಂ ಕುರ್ಚಿ ಕದನ ಜೋರಾಗಿದ್ದು, ನಿನ್ನೆ(ಮೇ 17) ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಭೆ ಮೇಲೆ ಸಭೆ ಮಾಡಿದರೂ ಸಿಎಂ ಆಯ್ಕೆ ಫೈನಲ್‌ ಆಗಿಲ್ಲ. ಯಾರ ಮೇಲೆ ಒಲವು ತೋರಿಸಬೇಕು ಎನ್ನುವುದೇ ಗೊತ್ತಾಗುತ್ತಿಲ್ಲ, ಯಾರನ್ನ ಪಟ್ಟಕ್ಕೇರಿಸಬೇಕು ಎನ್ನುವುದೇ ಬಗೆಹರಿಯುತ್ತಿಲ್ಲ.  ಅಷ್ಟಕ್ಕೂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರನ್ನು ಕರೆಸಿಕೊಂಡು ಒನ್‌ ಟು ಒನ್‌ ಮೀಟಿಂಗ್‌ ಮಾಡಿದ ಖರ್ಗೆ, ಸಿಎಂ ಕುರ್ಚಿ ಕದನವನ್ನ ಇವತ್ತಿಗೆ ಮುಂದೂಡಿದ್ದಾರೆ. ಹೌದು..ನವದೆಹಲಿಯಲ್ಲಿ ಇಂದು(ಮೇ17) ಬೆಳಗ್ಗೆ 11 ಗಂಟೆಗೆ ಫೈನಲ್‌ ಮೀಟಿಂಗ್‌ ನಡೆಯಲಿದ್ದು, ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಫೈನಲ್‌ ಮೀಟಿಂಗ್‌ನಲ್ಲಿ ಭಾಗಿಯಾಗಲಿದ್ದಾರೆ. ಇಂದಿನ ಸಭೆಯಲ್ಲಿ ಸಿಎಂ ಹೆಸರು ಬಹುತೇಕ ಅಂತಿಮವಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧ ಹೊಸ ಅಸ್ತ್ರ ಪ್ರಯೋಗಿಸಿದ ಡಿಕೆ ಶಿವಕುಮಾರ್! ಏನದು?

ನಿನ್ನೆ ಮಲ್ಲಿಕಾರ್ಜುನ ಖರ್ಗೆ ಜೊತೆ ಒಂದು ಗಂಟೆ ಕಾಲ ಚರ್ಚೆ ನಡೆಸಿದ ರಾಹುಲ್ ಗಾಂಧಿ, ವೀಕ್ಷಕರು ಸಲ್ಲಿಸಿರುವ ವರದಿಯ ವಿವರ ಪಡೆದ್ರು.  ಸಿದ್ದರಾಮಯ್ಯ, ಡಿಕೆಶಿ ಮನಸ್ಸಿನಲ್ಲಿ ಏನಿದೆ ಅನ್ನೋದನ್ನು ತಿಳಿಯಿರಿ. ಇಬ್ಬರನ್ನು ಪ್ರತ್ಯೇಕವಾಗಿ ಕರೆದು ಮಾತುಕತೆ ನಡೆಸಿ. ಅವರ ಬೇಡಿಕೆ ಏನು.. ಪರ್ಯಾಯ ಮಾರ್ಗ ಏನು ಎಂಬುದನ್ನು ಚರ್ಚಿಸಿ ಎಂದು ಖರ್ಗೆಗೆ ಸಲಹೆ ನೀಡಿದ್ದರು. ಅದರಂತೆ ಮಲ್ಲಿಕಾರ್ಜುನ ಖರ್ಗೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರನ್ನು ಕರೆದು ಪ್ರತ್ಯೇಕ ಮಾತುಕತೆ ಮಾಡಿದ್ದಾರೆ. ಆದ್ರೆ, ಇಬ್ಬರೊಂದಿಗಿನ ಸಭೆ ಮಾತ್ರ ಫಲ ನೀಡಿಲ್ಲ.

ದೆಹಲಿಯಲ್ಲಿ ಸಿದ್ದರಾಮಯ್ಯ ತಂತ್ರಗಾರಿಕೆ ಮುಂದುವರಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಭೇಟಿ ನಂತರ ಸುರ್ಜೇವಾಲ, ಕೆ.ಸಿ.ವೇಣುಗೋಪಾಲ್‌ರನ್ನು ಭೇಟಿಯಾಗಿ ಚರ್ಚಿಸಿದ್ದಾರೆ. ನನಗೆ 5 ವರ್ಷ ಸಿಎಂ‌ ಸ್ಥಾನ ನೀಡಬೇಕು ಎಂಬ ವಾದವನ್ನು ಮಂಡಿಸಿದ್ದಾರೆ. ಇನ್ನು ಸಿದ್ದರಾಮಯ್ಯಗೆ ಹೆಚ್ಚಿನ ಶಾಸಕರ ಬೆಂಬಲವಿದೆ ಎನ್ನಲಾಗಿತ್ತು. ಆದ್ರೆ ಸಿದ್ದರಾಮಯ್ಯ ಪರ 60 ಶಾಸಕರಷ್ಟೇ ಮತ ಹಾಕಿದ್ದಾರೆ ಎನ್ನಲಾಗಿದೆ. ಡಿಕೆಶಿಗೆ 40 ಶಾಸಕರು ಬೆಂಬಲ ಸೂಚಿಸಿದ್ದಾರೆ ಎನ್ನಲಾಗಿದೆ. ಇನ್ನುಳಿದ ಶಾಸಕರು ಸಿಎಂ ಆಯ್ಕೆ ನಿರ್ಧಾರವನ್ನು ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟಿದ್ದಾರೆ ಎನ್ನಲಾಗಿದೆ.

ಮಲ್ಲಿಕಾರ್ಜುನ ಖರ್ಗೆ ಜೊತೆ ಮಾತುಕತೆ ವೇಳೆ ಡಿ.ಕೆ.ಶಿವಕುಮಾರ್, ತಮಗೆ ಮುಖ್ಯಮಂತ್ರಿ ಸ್ಥಾನ ನೀಡಲೇಬೇಕೆಂದು ಬಿಗಿಪಟ್ಟು ಹಾಕಿದ್ದಾರೆ. ಸಿಎಂ ಸ್ಥಾನ ನೀಡಿದರೆ ಕೆಪಿಸಿಸಿ ಅಧ್ಯಕ್ಷನಾಗಿ ಮಾಡಿದ ರೀತಿಯಲ್ಲೇ ಕೆಲಸ ಮಾಡುತ್ತೇನೆ.  ಅದು ನನ್ನ ಕರ್ತವ್ಯ ಎಂಬಂತೆ ಮಾಡುತ್ತೇನೆ. ಇಲ್ಲವಾದರೆ ನಾನು ಕೇವಲ ಶಾಸಕನಾಗಿ ಇರುತ್ತೇನೆ. ಸರ್ಕಾರದ ಭಾಗವಾಗುವುದಿಲ್ಲ ಅಂತೇಳಿದ್ದಾರೆ. ಅಲ್ಲದೇ ಪಕ್ಷ ಸಂಘಟನೆ ಮಾಡಿದ ಬಗ್ಗೆಯೂ ಖರ್ಗೆ ಗಮನಕ್ಕೆ ತಂದಿದ್ದಾರೆ. ಇನ್ನೊಂದೆಜೆ ಮುಂದೆ ಹೋಗಿ ನೀವು ಸಿಎಂ ಆಗಿ. ಇಲ್ಲ ನನನ್ನು ಮಾಡಿ ಎಂದು ಕಡ್ಡಿಮುರಿದಂತೆ ಹೇಳಿದ್ದಾರೆ ಎನ್ನಲಾಗಿದೆ.  ಡಿಕೆ ಶಿವಕುಮಾರ್ ಅವರ ಈ ಮಾತು ಕೇಳಿದ ಖರ್ಗೆ, ನಾನು ಇತರರ ಜೊತೆ ಮಾತನಾಡಿ ಮುಂದಿನ ನಿರ್ಧಾರ ತಿಳಿಸುತ್ತೇನೆ ಎಂದು ಹೇಳಿ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.

ಇನ್ನೊಂದೆಡೆ ಮಲ್ಲಿಕಾರ್ಜುನ ಖರ್ಗೆ ಭೇಟಿ ಬಳಿಕ ಫುಲ್ ಖುಷ್ ಮೂಡ್ ನಲ್ಲಿರುವ ಸಿದ್ದರಾಮಯ್ಯ ಬೆಂಬಲಿಗರು ಇಂದೇ ಮುಖ್ಯಮಂತ್ರಿ ವಿಚಾರ ಘೋಷಣೆ ಆಗಲಿದೆ ಎಂಬ ವಿಶ್ವಾಸದಲ್ಲಿದ್ದಾರೆ. ಮೂರು ಡಿಸಿಎಂ ಸ್ಥಾನದ  ನಿರೀಕ್ಷೆಯಲ್ಲೂ ಸಿದ್ದರಾಮಯ್ಯ ಬೆಂಬಲಿಗರಿದ್ದು, ರಾಹುಲ್ ಗಾಂಧಿ ಅಂತಿಮ ನಿರ್ಧಾರ ಕೈಗೊಳ್ತಾರೆ ಎಂಬ ಅಪೇಕ್ಷೆಯಲ್ಲಿದ್ದಾರೆ.

ಸಿದ್ದರಾಮಯ್ಯ, ಡಿಕೆಶಿ ಜತೆ ಚರ್ಚೆ ವೇಳೆ ರಿಪೋರ್ಟ್​ ಬಗ್ಗೆ ಪ್ರಸ್ತಾಪವಾಗಿದೆ. ಎಐಸಿಸಿ ವೀಕ್ಷಕರು ನೀಡಿರುವ ರಿಪೋರ್ಟ್​ ಬಗ್ಗೆ ಪ್ರಸ್ತಾಪಿಸಿದ ಖರ್ಗೆ, ಎಐಸಿಸಿ ವೀಕ್ಷಕರು ನೀಡಿರುವ ವರದಿ ಬಗ್ಗೆ ಖರ್ಗೆ ಮಾಹಿತಿ ನೀಡಿದ್ದಾರೆ.  ಶಾಸಕರ ಅಭಿಪ್ರಾಯ, ರಾಜಕೀಯ ಲೆಕ್ಕಾಚಾರ, ಸಂಖ್ಯಾಬಲದ ಮಾಹಿತಿಗಳನ್ನೂ ನೀಡಿದ್ದಾರೆ. ಎಐಸಿಸಿ ವೀಕ್ಷಕರು ನೀಡಿರುವ ರಿಪೋರ್ಟ್​ ಜತೆ ನಾಯಕರ ಅಭಿಪ್ರಾಯ ಹಂಚಿಕೊಂಡಿದ್ದು, ಎಲ್ಲಾ ವಿವರವನ್ನು ರಾಹುಲ್​ ಗಾಂಧಿಗೆ ಮಲ್ಲಿಕಾರ್ಜುನ ಖರ್ಗೆ ನೀಡಿದ್ದಾರೆ.

ಒಟ್ಟಿನಲ್ಲಿ ಕಳೆದ ಮೂರು ದಿನಗಳಿಂದ ಸಿಎಂ ಕುರ್ಚಿಗೆ ನಡೆಯುತ್ತಿರುವ ಕಿತ್ತಾಟ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದ್ದು, ರಾಹುಲ್ ಗಾಂಧಿ ಅವರು ಇಂದು ಇಬ್ಬರು ನಾಯಕನ್ನು ಕೂಡಿಸಿಕೊಂಡು ಫೈನಲ್​ ಮಾಡಲಿದ್ದಾರೆ.

Published On - 7:30 am, Wed, 17 May 23

ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ