Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Election: ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಗಳ ಅಪರಾಧಗಳದ್ದೇ ಸದ್ದು; ಒಬ್ಬರ ಮೇಲೊಬ್ಬರು ಆರೋಪಗಳ ಸುರಿಮಳೆ

ರಾಜ್ಯ ವಿಧಾನಸಭಾ ಚುನಾವಣೆಯ ಹೈವೋಲ್ಟೇಜ್​ ಕ್ಷೇತ್ರಗಳ ಪೈಕಿ ಮಾಲೂರು ವಿಧಾನಸಭಾ ಕ್ಷೇತ್ರವೂ ಒಂದು, ಇಲ್ಲಿ ನಾಲ್ಕು ಘಟಾನುಘಟಿ ಅಭ್ಯರ್ಥಿಗಳ ನಡುವೆ ಪೈಪೋಟಿ ಏರ್ಪಟ್ಟಿದ್ದು. ಒಬ್ಬೊಬ್ಬ ಅಭ್ಯರ್ಥಿಯದ್ದು ಒಂದೊಂದು ಇತಿಹಾಸ, ಒಬ್ಬರ ಮೇಲೊಬ್ಬರು ಅಪರಾಧ ಪ್ರಕರಣಗಳನ್ನೇ ಮುಂದಿಟ್ಟುಕೊಂಡು ಆರೋಪಗಳ ಸುರಿಮಳೆ ಗಯ್ಯುತ್ತಿದ್ದಾರೆ.

Karnataka Assembly Election: ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಗಳ ಅಪರಾಧಗಳದ್ದೇ ಸದ್ದು; ಒಬ್ಬರ ಮೇಲೊಬ್ಬರು ಆರೋಪಗಳ ಸುರಿಮಳೆ
ಜಿ.ಇ.ರಾಮೇಗೌಡ , ಮಂಜುನಾಥಗೌಡ, ಕೆ.ವೈ.ನಂಜೇಗೌಡ (ಎಡದಿಂದ)
Follow us
ಕಿರಣ್ ಹನುಮಂತ್​ ಮಾದಾರ್
|

Updated on: May 07, 2023 | 7:07 AM

ಕೋಲಾರ: ರಾಜ್ಯ ವಿಧಾನಸಭಾ ಚುನಾವಣೆ(Karnataka Assembly Election)ಗೆ ಇನ್ನೇನು ದಿನಗಣನೇ ಆರಂಭವಾಗಿದ್ದು, ಪ್ರಮುಖ ಮೂರು ಪಕ್ಷಗಳ ಅಭ್ಯರ್ಥಿಗಳು ತಮ್ಮದೇ ಆದ ಅಜೆಂಡಾ ಹಾಗೂ ಆಶ್ವಾಸನೆಗಳ ಮೂಲಕ ಮತಯಾಚನೆ ಮಾಡುತ್ತಿದ್ದಾರೆ. ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರ(Malur Assembly constituency)ದಲ್ಲಿ ಮಾತ್ರ ಬೇರೆಯದ್ದೇ ಅಜೆಂಡಾ ಇದೆ. ಅದರಲ್ಲೂ ಅಭ್ಯರ್ಥಿಗಳು ಒಬ್ಬರ ಮೇಲೊಬ್ಬರು, ಅಕ್ರಮ ಗಣಿಗಾರಿಕೆ, ಸರ್ಕಾರಿ ಭೂಮಿ ನುಂಗಿದ ಕ್ರಿಮಿನಲ್​ ಕೇಸ್​, ರೌಡಿ​ ಶೀಟ್​, ಗಡಿಪಾರಾಗಿರುವ ಗೂಂಡಾ ಹೀಗೆ ಹಲವು ಆರೋಪಗಳನ್ನು ಒಬ್ಬರ ಮೇಲೊಬ್ಬರು ಮಾಡುತ್ತಿದ್ದಾರೆ. ಅದರಲ್ಲೂ ಹಾಲಿ ಶಾಸಕ ಕಾಂಗ್ರೆಸ್ ಅಭ್ಯರ್ಥಿ ಕೆ.ವೈ.ನಂಜೇಗೌಡ(K Y Nanjegowda) ಅವರ ಮೇಲೆ ಹಲವು ಅರೋಪಗಳು ಕೇಳಿಬಂದಿವೆ. ಅಕ್ರಮ ಗಣಿಗಾರಿಕೆ, ಜೊತೆಗೆ ಸರ್ಕಾರಿ ಭೂಮಿಯನ್ನ ಅಕ್ರಮವಾಗಿ ಮಂಜೂರು ಮಾಡಿದ ಆರೋಪದಲ್ಲಿ ಪ್ರಕರಣ ದಾಖಲಾಗಿದ್ದವು. ಜೊತೆಗೆ ಕಲ್ಲುಗಣಿಗಾರಿಕೆ ಬ್ಲಾಸ್ಟಿಂಗ್ ವೇಳೆ ಕಾರ್ಮಿಕನೊಬ್ಬ ಮೃತಪಟ್ಟಿದ್ದು ಅದರಲ್ಲೂ ಇವರ ಸಂಬಂಧಿಕರ ಹೆಸರು ಕೇಳಿ ಬಂದಿತ್ತು. ಈ ಎಲ್ಲಾ ಆರೋಪಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ ಹಾಗೂ ಜೆಡಿಎಸ್​ ಅಭ್ಯರ್ಥಿ ಜಿ.ಇ.ರಾಮೇಗೌಡ (GE Ramegowda) ಕಾಂಗ್ರೆಸ್ ಅಭ್ಯರ್ಥಿ ಹಾಲಿ ಶಾಸಕ ನಂಜೇಗೌಡ ಮೇಲೆ ಆರೋಪಗಳ ಸುರಿಮಳೆ ಸುರಿಸುತ್ತಿದ್ದಾರೆ.

ಹೌದು ಕಳೆದ ಐದು ವರ್ಷಗಳಲ್ಲಿ ಕ್ಷೇತ್ರದ ಅಭಿವೃದ್ದಿಗಿಂತ ಅವರ ಕುಟುಂಬದ ಅಭಿವೃದ್ದಿಯೇ ಹೆಚ್ಚಾಗಿದೆ. ಅಲ್ಲದೆ ಅಕ್ರಮ ಗಣಿಕಾರಿಕೆ ಸೇರಿದಂತೆ ಸರ್ಕಾರಿ ಭೂಮಿ ಅಕ್ರಮವಾಗಿ ಮಂಜೂರು ಮಾಡಿದ ಆರೋಪದಲ್ಲಿ ಪ್ರಕರಣಗಳು ದಾಖಲಾಗಿವೆ. ಯಾವುದೇ ಕಾರಣಕ್ಕೂ ಅಂಥಹವರಿಗೆ ಈ ಬಾರಿ ಜನ ಬೆಂಬಲ ನೀಡೋದಿಲ್ಲ ಎನ್ನುವುದು ಬಿಜೆಪಿ ಹಾಗೂ ಜೆಡಿಎಸ್ ಅಭ್ಯರ್ಥಿಗಳ ಆರೋಪ.

ಇದನ್ನೂ ಓದಿ:ಕೋಲಾರದಲ್ಲಿ ಮುಳಬಾಗಿಲು ದೋಸೆ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ

ಮೂರು ಪಕ್ಷಗಳ ಅಭ್ಯರ್ಥಿಗಳ ನಿದ್ದೆಗೆಡಿಸಿರುವ ಪಕ್ಷೇತರ ಅಭ್ಯರ್ಥಿ

ಇನ್ನು ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಪ್ರಮುಖ ಮೂರು ಪಕ್ಷಗಳ ಅಭ್ಯರ್ಥಿಗಳ ನಿದ್ದೆಗೆಡಿಸಿರುವ ಪಕ್ಷೇತರ ಅಭ್ಯರ್ಥಿ ಹೂಡಿ ವಿಜಯ್​ ಕುಮಾರ್​ ಯಾರ ಮೇಲೆ ಯಾವುದೇ ಆರೋಪ ಮಾಡದೆ, ಸದ್ಯ ಕಣದಲ್ಲಿರುವ ಮೂರು ಜನ ಅಭ್ಯರ್ಥಿಗಳ ಬಗ್ಗೆ ಜನರಿಗೆ ಗೊತ್ತಿದೆ. ಮೂವರ ಪೈಕಿ ಯಾರೂ ಕೂಡ ಕ್ಷೇತ್ರದ ಜನರ ಕಷ್ಟಸುಖಗಳಿಗೆ ಸ್ಪಂದಿಸಿಲ್ಲ. ತಾನು ಕೋವಿಡ್​ ಸಂದರ್ಭದಲ್ಲಿ ಪ್ರಾಣದ ಹಂಗನ್ನು ತೊರೆದು ಜನರ ಸೇವೆ ಮಾಡಿದ್ದೇನೆ. ಕಳೆದ ನಾಲ್ಕು ವರ್ಷಗಳಿಂದ ಜನರ ಸೇವೆ ಮಾಡಿದ್ದೇನೆ. ಹಾಗಾಗಿ ಜನರು ನನ್ನ ಸೇವೆಗೆ ಮೆಚ್ಚಿ ಈ ಬಾರಿ ನಮಗೆ ಅವಕಾಶ ನೀಡುತ್ತಾರೆ ಎನ್ನುತ್ತಿದ್ದಾರೆ.

ಈ ಎಲ್ಲಾ ಆರೋಪಗಳ ಕುರಿತು ಕಾಂಗ್ರೆಸ್​ ಅಭ್ಯರ್ಥಿ ಕೆ.ವೈ.ನಂಜೇಗೌಡ ಹೇಳೋದೆ ಬೇರೆ, ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನ ಮೇಲಿರುವ ಆರೋಪಗಳು ನ್ಯಾಯಾಲಯದಲ್ಲಿ ತನಿಖೆ ಹಂತದಲ್ಲಿವೆ. ಈವರೆಗೂ ಕೂಡ ಯಾವುದೇ ಆರೋಪ ಇನ್ನೂ ಸಾಭೀತಾಗಿಲ್ಲ. ಜೊತೆಗೆ ಈ ಎಲ್ಲ ಪ್ರಕರಣಗಳನ್ನು ರಾಜಕೀಯ ಉದ್ದೇಶದಿಂದ ಪಿತೂರಿ ಮಾಡಿ ನನ್ನ ಮೇಲೆ ಹಾಕಲಾಗಿದೆ. ಇವರ ಆರೋಪಗಳಿಗೆ ನಾನು ಬೆಲೆ ಕೊಡೋದಿಲ್ಲ. ಅದಕ್ಕೆ ತಾಲ್ಲೂಕಿನ ಜನತೆ ಉತ್ತರ ಕೊಡುತ್ತಾರೆ ಎಂದು ಹಾಲಿ ಶಾಸಕ ನಂಜೇಗೌಡ ಅವರು ಹೇಳುತ್ತಿದ್ದಾರೆ. ಅಲ್ಲದೆ ಬಿಜೆಪಿ ಅಭ್ಯರ್ಥಿ ವಿರುದ್ದವೂ ಹಲವು ಪ್ರಕರಣಗಳಿವೆ ಅನ್ನೋ ಅರೋಪಗಳನ್ನು ಮಾಡುತ್ತಿದ್ದಾರೆ.

ಇದನ್ನೂ ಓದಿ:ಕೋಲಾರದಲ್ಲಿ ಇನ್ನೂ ಬಗೆಹರಿದಿಲ್ಲ ಕಾಂಗ್ರೆಸ್​ ಅಭ್ಯರ್ಥಿ ಆಯ್ಕೆ ಗೊಂದಲ, ಇನ್ನೂ ಉಳಿದಿದೆ ಕೊನೆ ಕ್ಷಣದ ಕುತೂಹಲ! ಏನದು ಒಳಸುಳಿ

ಒಟ್ಟಾರೆ ಚುನಾವಣೆ ವೇಳೆಯಲ್ಲಿ ಜನರೆದುರು ಅಭ್ಯರ್ಥಿಗಳು ಕ್ಷೇತ್ರದ ಅಭಿವೃದ್ದಿ ವಿಚಾರವನ್ನು ಮುಂದಿಟ್ಟುಕೊಂಡು ಮತ ಕೇಳಬೇಕು. ಆದರೆ, ಮಾಲೂರಿನಲ್ಲಿ ಮಾತ್ರ ಅಭ್ಯರ್ಥಿಗಳ ಹಿನ್ನೆಲೆ ಹಾಗೂ ಅವರ ಅಪರಾಧ ಪ್ರಕರಣಗಳು ಸಖತ್​ ಸದ್ದು ಮಾಡುತ್ತಿದ್ದು. ಮತದಾರ ನಿಜಕ್ಕೂ ಯಾರ ತಪ್ಪಿಗೆ ಶಿಕ್ಷೆ ಕೊಡ್ತಾರೆ, ಯಾರನ್ನು ತಿರಸ್ಕರಿಸುತ್ತಾನೆ, ಯಾರನ್ನು ಪುರಸ್ಕರಿಸುತ್ತಾರೆ ಅನ್ನೋದನ್ನ ಮಾತ್ರ ಕಾದು ನೋಡಬೇಕಿದೆ.

ವರದಿ: ರಾಜೇಂದ್ರಸಿಂಹ ಟಿವಿ9 ಕೋಲಾರ

ಇನ್ನಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಾ 22ರಂದು ಶಾಲಾ-ಕಾಲೇಜು​ ರಜೆ ಬಗ್ಗೆ ಸ್ಪಷ್ಟನೆ ಕೊಟ್ಟ ಶಿಕ್ಷಣ ಸಚಿವ
ಮಾ 22ರಂದು ಶಾಲಾ-ಕಾಲೇಜು​ ರಜೆ ಬಗ್ಗೆ ಸ್ಪಷ್ಟನೆ ಕೊಟ್ಟ ಶಿಕ್ಷಣ ಸಚಿವ
ಲಕ್ನೋ ರಸ್ತೆ ಮಧ್ಯೆ ಕುಳಿತು 20 ನಿಮಿಷ ತಲೆ ಅಲ್ಲಾಡಿಸಿದ ಮಹಿಳೆ!
ಲಕ್ನೋ ರಸ್ತೆ ಮಧ್ಯೆ ಕುಳಿತು 20 ನಿಮಿಷ ತಲೆ ಅಲ್ಲಾಡಿಸಿದ ಮಹಿಳೆ!
ಪತಿಯೊಂದಿಗೆ ಜಗಳವಾಡಿ ಬೆಂಕಿ ಹಚ್ಚಿಕೊಂಡು ಹೆಂಡತಿ ಆತ್ಮಹತ್ಯೆ
ಪತಿಯೊಂದಿಗೆ ಜಗಳವಾಡಿ ಬೆಂಕಿ ಹಚ್ಚಿಕೊಂಡು ಹೆಂಡತಿ ಆತ್ಮಹತ್ಯೆ
ಕರ್ನಾಟಕ ಬಂದ್​: ಫಿಲಂ ಚೇಂಬರ್ ತೆಗೆದುಕೊಂಡ ನಿರ್ಣಯಗಳು ಹೀಗಿವೆ
ಕರ್ನಾಟಕ ಬಂದ್​: ಫಿಲಂ ಚೇಂಬರ್ ತೆಗೆದುಕೊಂಡ ನಿರ್ಣಯಗಳು ಹೀಗಿವೆ
ವಿಧಾನಸಭೆಯಲ್ಲಿ ಮೊಬೈಲ್ ಬಳಸಿದ್ದಕ್ಕೆ ಕೋಪಗೊಂಡ ಬಿಹಾರ ಸಿಎಂ ನಿತೀಶ್ ಕುಮಾರ್
ವಿಧಾನಸಭೆಯಲ್ಲಿ ಮೊಬೈಲ್ ಬಳಸಿದ್ದಕ್ಕೆ ಕೋಪಗೊಂಡ ಬಿಹಾರ ಸಿಎಂ ನಿತೀಶ್ ಕುಮಾರ್
ಗೊತ್ತಿರದ ವಿಷಯದ ಬಗ್ಗೆ ಮಾತಾಡುವ ಜಾಯಮಾನ ನನ್ನದಲ್ಲ: ಪಾಟೀಲ್
ಗೊತ್ತಿರದ ವಿಷಯದ ಬಗ್ಗೆ ಮಾತಾಡುವ ಜಾಯಮಾನ ನನ್ನದಲ್ಲ: ಪಾಟೀಲ್
ಹರಪನಹಳ್ಳಿಯಲ್ಲಿ ಆಲಿಕಲ್ಲು ಸಹಿತ ಮಳೆ: ವರ್ಷದ ಮೊದಲ ಮಳೆಗೆ ಜನರು ಖುಷ್
ಹರಪನಹಳ್ಳಿಯಲ್ಲಿ ಆಲಿಕಲ್ಲು ಸಹಿತ ಮಳೆ: ವರ್ಷದ ಮೊದಲ ಮಳೆಗೆ ಜನರು ಖುಷ್
ಯತ್ನಾಳ್​ರನ್ನು ದೇಶದ್ರೋಹಿ ಎಂದು ಜರಿದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್
ಯತ್ನಾಳ್​ರನ್ನು ದೇಶದ್ರೋಹಿ ಎಂದು ಜರಿದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್
ಹನಿಟ್ರ್ಯಾಪ್​ ಕೇಸ್: ಡಿಕೆಶಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ
ಹನಿಟ್ರ್ಯಾಪ್​ ಕೇಸ್: ಡಿಕೆಶಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ
ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು
ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು