ಕೋಲಾರ: ಮಾಲೂರು ಕ್ಷೇತ್ರದ ಮತಗಳ ಮರುಎಣಿಕೆ ಕೋರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ (Manjunath Gowda) ಪರ ವಕೀಲರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. 248 ಮತಗಳ ಅಂತರದಿಂದ ಕಾಂಗ್ರೆಸ್ನ ಕೆ.ವೈ.ನಂಜೇಗೌಡ ಗೆಲುವು ಸಾಧಿಸಿದ ಹಿನ್ನೆಲೆ ಮರುಎಣಿಕೆಗೆ ನಿರ್ದೇಶನ ನೀಡುವಂತೆ ಕೋರಿ ಮಂಜುನಾಥಗೌಡ ಮನವಿ ಮಾಡಿದ್ದಾರೆ. ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಒಂದು ರೀತಿಯಾದರೆ ಮಾಲೂರು ಕ್ಷೇತ್ರದ ಮತಎಣಿಕೆ ಮಾತ್ರ ಇಡೀ ಜಿಲ್ಲೆಯ ಹಾಗೂ ರಾಜ್ಯದ ಜನರಿಗೆ ಕುತೂಹಲಕ್ಕೆ ಕಾರಣವಾಗಿತ್ತು. ಕಾರಣ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಮೂರು ಪಕ್ಷಗಳ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿತ್ತು.
ಆರಂಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ, ನಂತರ ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ ನಂತರ ಪಕ್ಷೇತರ ಅಭ್ಯರ್ಥಿ ಹೂಡಿ ವಿಜಯ್ ಕುಮಾರ್ ಒಬ್ಬರಾದ ಮೇಲೆ ಒಬ್ಬರು ಮುನ್ನಡೆ ಸಾಧಿಸಿಕೊಂಡು ಬಂದಿದ್ದರು. ಆದರೆ, ಒಂದು ಹಂತದಲ್ಲಿ ಪಕ್ಷೇತರ ಅಭ್ಯರ್ಥಿ ಹೂಡಿ ವಿಜಯ್ ಕುಮಾರ್ 1500 ದಿಂದ 2000 ಮತಗಳ ಅಂತರದಲ್ಲಿ ಸುಮಾರು ಏಳೆಂಟು ಸುತ್ತು ಮುನ್ನಡೆ ಸಾಧಿಸಿದ್ದರು.
ಇದನ್ನೂ ಓದಿ: ಮುಖ್ಯಮಂತ್ರಿ ಸ್ಥಾನ; ಪಟ್ಟುಬಿಡದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಬೆಂಬಲಿಗರು ಹೇಳೋದೇನು ನೋಡಿ
ಕೊನೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೇವಲ 248 ಮತಗಳ ಅಂತರದಲ್ಲಿ ಜಯಗಳಿಸುವ ಮೂಲಕ ಕುತೂಹಲಕ್ಕೆ ತೆರೆ ಬಿದ್ದಿತ್ತು. ಆದರೆ ಸ್ಥಳಕ್ಕೆ ಬಂದ ಬಿಜೆಪಿ ಅಭ್ಯರ್ಥಿ ಕೆ.ಎಸ್.ಮಂಜುನಾಥಗೌಡ ಗೆಲುವಿನ ವಿರುದ್ದ ಪ್ರತಿಭಟಿಸಿ ಮರು ಎಣಿಕೆಗೆ ಆಗ್ರಹಿಸಿದ್ದರು. ಈ ವೇಳೆ ಮರುಎಣಿಕೆ ಮಾಡಿದರಾದರೂ ಬಿಜೆಪಿ ಅಭ್ಯರ್ಥಿ ಕೋರ್ಟ್ನ ಮೊರೆ ಹೋಗುವುದಾಗಿ ಹೇಳಿದ್ದರು. ಅದರಂತೆಯೇ ಈಗ ಮಂಜುನಾಥಗೌಡ ಪರ ವಕೀಲರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಇದನ್ನೂ ಓದಿ: ಸಿದ್ದರಾಮಯ್ಯ ಸಿಎಂ ಆಗಿಯೇ ಆಗ್ತಾರೆ, ಒಂದಲ್ಲ ಮೂರು ಟಗರು ಅಡವಿಟ್ಟ ಮೈಸೂರಿನ ಅಭಿಮಾನಿ
ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ ವಿವಿಪ್ಯಾಟ್ಗಳನ್ನು ಅಧಿಕಾರಿಗಳು ಹಾಗೂ ಅಭ್ಯರ್ಥಿಗಳ ಸಮ್ಮುಖದಲ್ಲಿ ಎಣಿಕೆ ಮಾಡಲಾಗಿದೆ. ಅಷ್ಟಾದರೂ ಸಮಾಧಾನಗೊಳ್ಳದ ಮಂಜುನಾಥಗೌಡ ಕೋರ್ಟ್ನ ಮೊರೆ ಹೋಗಿದ್ದಾರೆ.
ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಅಭ್ಯರ್ಥಿ, ಅವರು ಎಲ್ಲಿಗೆ ಬೇಕಾದ್ರು, ಹೋಗಲಿ. ಇದು ಜನರು ಕೊಟ್ಟಿರುವ ತೀರ್ಪು. ಅಲ್ಲದೆ ಈ ಬಾರಿ ಕಾಂಗ್ರೆಸ್ ಸರ್ಕಾರ ಬಂದಿದ್ದು, ನನ್ನ ಕನಸಿನ ಮಾಲೂರು ನಿರ್ಮಾಣ ಮಾಡುವುದಾಗಿ ಹೇಳಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.