AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಮತದಾನ ಮಾಡಿ ಹೊರ ಬರುತ್ತಿದ್ದಂತೆ ಹೃದಯಾಘಾತದಿಂದ ವ್ಯಕ್ತಿ ಸಾವು

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಚಿಕ್ಕೋಲೆ ಗ್ರಾಮದಲ್ಲಿ ಮತದಾನ ಮಾಡಿದ ನಂತರ ಜಯಣ್ಣ(49) ಎಂಬ ವ್ಯಕ್ತಿ ಮತಗಟ್ಟೆ ಆವರಣದಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಹಾಸನ: ಮತದಾನ ಮಾಡಿ ಹೊರ ಬರುತ್ತಿದ್ದಂತೆ ಹೃದಯಾಘಾತದಿಂದ ವ್ಯಕ್ತಿ ಸಾವು
ಜಯಣ್ಣ
ಆಯೇಷಾ ಬಾನು
|

Updated on:May 10, 2023 | 2:06 PM

Share

ಹಾಸನ: ರಾಜ್ಯದೆಲ್ಲೆಡೆ ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ನಡೆಯುತ್ತಿದೆ(Karnataka Assembly Election 2023). ಬೆಳಗ್ಗೆ 7 ಗಂಟೆಯಿಂದಲೇ ಮತದಾರರು ಸರತಿ ಸಾಲಿನಲ್ಲಿ ನಿಂತು ಮತಚಲಾಯಿಸುತ್ತಿದ್ದಾರೆ. ಹಲವು ಕ್ಷೇತ್ರಗಳಲ್ಲಿ ಶತಾಯುಷಿ ವೃದ್ಧ, ವೈದ್ಧೆಯರು ಮತದಾನ ಮಾಡಿ ಮಾದರಿಯಾಗಿದ್ಧಾರೆ. ಆದ್ರೆ ಹಾಸನದಲ್ಲಿ ಅವಘಡವೊಂದು ಸಂಭವಿಸಿದೆ. ಹಾಸನ ಜಿಲ್ಲೆ ಬೇಲೂರು ತಾಲೂಕಿನ ಚಿಕ್ಕೋಲೆ ಗ್ರಾಮದಲ್ಲಿ ಮತದಾನ ಮಾಡಿದ ನಂತರ ಜಯಣ್ಣ(49) ಎಂಬ ವ್ಯಕ್ತಿ ಮತಗಟ್ಟೆ ಆವರಣದಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ(Heart Attack). ಮತದಾನ ಮಾಡಿ ಹೊರಬಂದ ನಂತರ ಜಯಣ್ಣ ಕೊನೆಯುಸಿರೆಳೆದಿದ್ದಾರೆ.

ಮತದಾನ ಮಾಡುವ ಹುಮ್ಮಸ್ಸಿನಲ್ಲಿ ಖುಷಿಯಿಂದಲೇ ಮತಗಟ್ಟೆಗೆ ಬಂದ ಜಯಣ್ಣ ಅವರು ಮತದಾನ ಮಾಡಿ ಹೊರಗೆ ಬರುತ್ತಿದ್ದಂತೆ ಮತಗಟ್ಟೆ ಆವರಣದಲ್ಲೇ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಮತದಾನಕ್ಕೆ ಬಂದಿದ್ದ ವೇಳೆ ವೃದ್ಧೆ ಕುಸಿದುಬಿದ್ದು ಸಾವು

ಇನ್ನು ಮತ್ತೊಂದೆಡೆ ಬೆಳಗಾವಿ ಜಿಲ್ಲೆ ಸವದತ್ತಿ-ಯಲ್ಲಮ್ಮ ಕ್ಷೇತ್ರದ ವ್ಯಾಪ್ತಿಯ ಯರಝರ್ವಿ ಗ್ರಾಮದಲ್ಲಿ ಪಾರವ್ವ ಸಿದ್ನಾಳ(70) ಎಂಬ ವೃದ್ಧೆ ಮತದಾನಕ್ಕೆ ಬಂದಿದ್ದ ವೇಳೆ ಕುಸಿದುಬಿದ್ದು ಕೊನೆಯುಸಿರೆಳೆದಿದ್ದಾರೆ. ಮತಗಟ್ಟೆ ಆವರಣದಲ್ಲಿ ಸಾಲಿನಲ್ಲಿ ನಿಂತಿದ್ದ ವೇಳೆ ಲೋ ಬಿಪಿಯಿಂದ ಕುಸಿದುಬಿದ್ದು ಮೃತಪಟ್ಟಿದ್ದಾರೆ. ಪಾರವ್ವ ಮೃತದೇಹವನ್ನು ಸಂಬಂಧಿಕರು ಮನೆಗೆ ಕೊಂಡೊಯ್ದಿದ್ದಾರೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಖೇಣಿ ಸಹೋದರ ಸಂಜಯ್ ಖೇಣಿ ಕಾರು ಅಪಘಾತ

ಇಂದು(ಮೇ.10) ಬೆಳಗಿನ ಜಾವ ಬೀದರ್ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಅಶೋಕ್ ಖೇಣಿ (Ashok Kheny) ಅವರ ಸಹೋದರ ಸಂಜಯ್ ಖೇಣಿ (Sanjay Kheny) ಕಾರ್ ಅಪಘಾತಕ್ಕೊಳಗಾಗಿದೆ. ಜಿಲ್ಲೆಯ ಹಳ್ಳಿಖೇಡ್ ಬಳಿ ಕಾರ್ ಪಲ್ಟಿಯಾಗಿದ್ದು, ಕೂಡಲೇ ಗಾಯಾಳು ಸಂಜಯ್ ಖೇಣಿ ಅವರನ್ನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅದೃಷ್ಟವಶಾತ್​ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಅಶೋಕ್ ಮಹಾರುದ್ರಪ್ಪ ಖೇಣಿ ಕರ್ನಾಟಕದ ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾಗಿದ್ದು, ನಂದಿ ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್ಪ್ರೈಸಸ್ (Nandi Infrastructure Corridor Enterprise Ltd) ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ. ಜೊತೆಗೆ ಸೆಲೆಬ್ರಿಟಿ ಕ್ರಿಕೆಟ್ ಲೀಗ್​ನಲ್ಲಿ ಖೇಣಿ ಅವರು ಕ್ರಿಕೆಟ್ ತಂಡ ಕರ್ನಾಟಕ ಬುಲ್ಡೋಜರ್ಸ್​ನ್ನು ಮುನ್ನಡೆಸಿದ್ದಾರೆ.

ಕರ್ನಾಟಕ ಚುನಾವಣೆ 2023 ಲೈವ್​ ಅಪ್ಡೇಟ್ಸ್​ಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕ ಚುನಾವಣೆ ತಾಜಾ & ವಿಶೇಷ ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ

Published On - 12:56 pm, Wed, 10 May 23

ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಒಂದು ಆಧಾರ್ ಕಾರ್ಡ್​ಗೆ 2 ಚೀಲ ಯೂರಿಯಾ
ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಒಂದು ಆಧಾರ್ ಕಾರ್ಡ್​ಗೆ 2 ಚೀಲ ಯೂರಿಯಾ
ಪೂಜೆ ಮಾಡಿದರೆ ಇಷ್ಟಾರ್ಥಗಳು ನೆರವೇರುತ್ತವೆ ಎನ್ನುವ ಗೃಹಿಣಿಯರು
ಪೂಜೆ ಮಾಡಿದರೆ ಇಷ್ಟಾರ್ಥಗಳು ನೆರವೇರುತ್ತವೆ ಎನ್ನುವ ಗೃಹಿಣಿಯರು
‘ನಮ್ಮ ಮನೆ ಹತ್ತಿರವೇ ಅಟ್ಯಾಕ್ ಆಗಿದೆ’: ಪೊಲೀಸ್ ಎದುರು ಪ್ರಥಮ್ ಅಳಲು
‘ನಮ್ಮ ಮನೆ ಹತ್ತಿರವೇ ಅಟ್ಯಾಕ್ ಆಗಿದೆ’: ಪೊಲೀಸ್ ಎದುರು ಪ್ರಥಮ್ ಅಳಲು
ಹುಲಿರಾಯನ ಫೋಸ್​ ಕಂಡು ಹೌದು ಹುಲಿಯಾ ಎಂದ ಪ್ರವಾಸಿಗರು
ಹುಲಿರಾಯನ ಫೋಸ್​ ಕಂಡು ಹೌದು ಹುಲಿಯಾ ಎಂದ ಪ್ರವಾಸಿಗರು
PM Modi Speech Live: ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಭಾಷಣದ ನೇರಪ್ರಸಾರ
PM Modi Speech Live: ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಭಾಷಣದ ನೇರಪ್ರಸಾರ
ದರ್ಶನ್ ವಿಗ್ ಧರಿಸುತ್ತಾರೆ, ಅದನ್ನು ಹೇಗೆ ಕಿತ್ತುಕೊಳ್ಳಲಾದೀತು? ಪ್ರಥಮ್
ದರ್ಶನ್ ವಿಗ್ ಧರಿಸುತ್ತಾರೆ, ಅದನ್ನು ಹೇಗೆ ಕಿತ್ತುಕೊಳ್ಳಲಾದೀತು? ಪ್ರಥಮ್
ಹಿಮಾಚಲ ಪ್ರದೇಶದ ಮಂಡಿಯಲ್ಲಿ ಮೇಘಸ್ಫೋಟ; ದಿಢೀರ್ ಪ್ರವಾಹದಿಂದ ಮೂವರು ಸಾವು
ಹಿಮಾಚಲ ಪ್ರದೇಶದ ಮಂಡಿಯಲ್ಲಿ ಮೇಘಸ್ಫೋಟ; ದಿಢೀರ್ ಪ್ರವಾಹದಿಂದ ಮೂವರು ಸಾವು
ಪಹಲ್ಗಾಮ್ ದಾಳಿಗೆ ಭದ್ರತಾ ಲೋಪವೇ ಕಾರಣ: ಖರ್ಗೆ
ಪಹಲ್ಗಾಮ್ ದಾಳಿಗೆ ಭದ್ರತಾ ಲೋಪವೇ ಕಾರಣ: ಖರ್ಗೆ
ಕಾಂಗ್ರೆಸ್​ನ ದಲಿತ ವಿರೋಧಿ ನೀತಿಯಿಂದ ಖರ್ಗೆ ಸಿಎಂ ಆಗಲಿಲ್ಲ: ಜ್ಞಾನೇಂದ್ರ
ಕಾಂಗ್ರೆಸ್​ನ ದಲಿತ ವಿರೋಧಿ ನೀತಿಯಿಂದ ಖರ್ಗೆ ಸಿಎಂ ಆಗಲಿಲ್ಲ: ಜ್ಞಾನೇಂದ್ರ
ಅವಮಾನಗಳ ಹೊರತಾಗಿಯೂ ಸಿಎಂ ವಿರುದ್ಧ ಮಾತಾಡದ ಶಿವಕುಮಾರ್
ಅವಮಾನಗಳ ಹೊರತಾಗಿಯೂ ಸಿಎಂ ವಿರುದ್ಧ ಮಾತಾಡದ ಶಿವಕುಮಾರ್