ಉಡುಪಿ: ಕರೆಂಟ್ ಬಿಲ್ ಕೊಡಬೇಡಿ, ನಾವು ಕಟ್ಟಲ್ಲ; ಮನೆ ಮುಂದೆ ಬೋರ್ಡ್ ಅಳವಡಿಕೆ

ರಾಜ್ಯದಲ್ಲಿ ಸಿಎಂ ಯಾರಾಗ್ತಾರೆ ಎಂಬ ಬಗ್ಗೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಜಟಾಪಟಿ ನಡೆಯುತ್ತಿದ್ದು ಮತ್ತೊಂದೆಡೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ನಾವು ಕರೆಂಟ್ ಬಿಲ್ ಕಟ್ಟಲ್ಲ ಎಂಬ ಕೂಗು ಹೆಚ್ಚಾಗಿದೆ. ಚಿತ್ರದುರ್ಗ, ಚಾಮರಾಜನಗರ ಬಳಿಕ ಇದೀಗ ಉಡುಪಿಯಲ್ಲೂ ಕರೆಂಟ್ ಬಿಲ್ ಕಟ್ಟಲ್ಲ ಎಂಬ ಕೂಗು ಹೇಳಿ ಬಂದಿದೆ.

ಉಡುಪಿ: ಕರೆಂಟ್ ಬಿಲ್ ಕೊಡಬೇಡಿ, ನಾವು ಕಟ್ಟಲ್ಲ;  ಮನೆ ಮುಂದೆ ಬೋರ್ಡ್ ಅಳವಡಿಕೆ
ಕರೆಂಟ್ ಬಿಲ್ ಕಟ್ಟಲು ನಿರಾಕರಣೆ
Follow us
|

Updated on: May 17, 2023 | 12:40 PM

ಉಡುಪಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುತ್ತದೆ ಎಂದು ಚುನಾವಣೆ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಘೋಷಣೆ ಮಾಡಿತ್ತು(Karnataka Assembly Elections 2023 Result). ಸದ್ಯ ಕಾಂಗ್ರೆಸ್ ಪಕ್ಷ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದು, ನಾವು ಕರೆಂಟ್ ಬಿಲ್ ಕಟ್ಟಲ್ಲವೆಂದು ಜನ ಪಟ್ಟು ಹಿಡಿದಿದ್ದಾರೆ. ಕೆಲ ದಿನಗಳ ಹಿಂದೆ ಚಿತ್ರದುರ್ಗ ತಾಲೂಕಿನ ಜಾಲಿಕಟ್ಟೆ ಗ್ರಾಮಸ್ಥರು, ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಜಮಾಪುರ ಗ್ರಾಮಸ್ಥರು ಹಾಗೂ ಚಾಮರಾಜನಗರ ಜನರು ಕರೆಂಟ್ ಬಿಲ್ ಕಟ್ಟಲು ನಿರಾಕರಿಸಿದ್ದರು. ಇಂದು ಉಡುಪಿಯ ಪೆರಂಪಳ್ಳಿ ನಿವಾಸಿ ವಾಸುದೇವ ಭಟ್ ಎಂಬುವವರು ಕರೆಂಟ್ ಬಿಲ್(Electricity Bills) ಕಟ್ಟುವುದಿಲ್ಲ ಎಂದು ಮನೆಯಲ್ಲಿ ಬೋರ್ಡ್ ಅಳವಡಿಸಿದ್ದಾರೆ.

ನಾನು ಫಲಾನುಭವಿ ವಿದ್ಯುತ್ ಬಿಲ್ ಕಟ್ಟುವುದಿಲ್ಲ

ಕಾಂಗ್ರೆಸ್ ಸರಕಾರ ಬಂದರೆ ಹಲವಾರು ಉಚಿತ ಯೋಜನೆಗಳನ್ನು ನೀಡುವುದಾಗಿ ಕಾಂಗ್ರೆಸ್ ಘೋಷಣೆ ಮಾಡಿದೆ. ಜೂನ್ ತಿಂಗಳಿಂದಲೇ ಉಚಿತ ವಿದ್ಯುತ್ ಕೊಡುವ ಯೋಜನೆ ಘೋಷಣೆಯಾಗಿದೆ. ತಾನು ಸೇರಿದಂತೆ ಯಾರೂ ವಿದ್ಯುತ್ ಬಿಲ್ ಪಾವತಿ ಮಾಡಬೇಕಾಗಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಶೇಕಡಾ 95 ಜನತೆ ಇದರ ಲಾಭ ಪಡೆಯಬಹುದು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಡಿಕೆಶಿ ಹೇಳಿರುವ ಶೇಕಡಾ 95ರ ಒಳಗೆ ನಾನು ಕೂಡ ಬರುತ್ತೇನೆ. ನಾನು ಕೂಡ ಒಬ್ಬ ಫಲಾನುಭವಿ ಎಂಬುದು ದೃಢ ಆಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಿದೆ ನಾನು ವಿದ್ಯುತ್ ಬಿಲ್ ಕಟ್ಟೋದಿಲ್ಲಾ. ನಾನು ತಿಂಗಳಿಗೆ 200 ಯೂನಿಟ್ ಖರ್ಚು ಮಾಡುತ್ತಿಲ್ಲ. ನಾನು ಫಲಾನುಭವಿ ಆಗಿರುವುದರಿಂದ ಮೀಟರ್ ಬೋರ್ಡಿನಲ್ಲಿ ಫಲಕ ಹಾಕಿದ್ದೇನೆ. ನಾನು ಇಲ್ಲದಿರುವಾಗ ಮೆಸ್ಕಾಂನವರು ಬಂದರೆ ಅವರಿಗೆ ಗೊತ್ತಾಗಲಿ ಎಂದು ಬೋರ್ಡ್ ಅಳವಡಿಸಿದ್ದೇನೆ. ನನಗೆ ಮೆಸ್ಕಾಂನವರು ಕರೆಂಟ್ ಬಿಲ್ ಕೊಡಬೇಕಾಗಿಲ್ಲ. ನಾನು ಸರಕಾರಕ್ಕೆ ತೆರಿಗೆ ಕಟ್ಟುತ್ತಿರುವುದರಿಂದ ಈ ಯೋಜನೆಗೆ ಅರ್ಹ ಫಲಾನುಭವಿ ಆಗಿದ್ದೇನೆ ಎಂದು ಉಡುಪಿಯ ವಾಸುದೇವ ಭಟ್ ಪೆರಂಪಳ್ಳಿ ತಿಳಿಸಿದ್ದಾರೆ.

ಇದನ್ನೂ ಓದಿ: ವಿದ್ಯುತ್ ಬಿಲ್ ಪಾವತಿಗೆ ಗ್ರಾಮಸ್ಥರ ನಿರಾಕರಣೆ: ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆಯಲ್ಲ ಎಂದ ಜನ, ವಿಡಿಯೋ ವೈರಲ್

ಉಡುಪಿಯ ಪೆರಂಪಳ್ಳಿ ನಿವಾಸಿ ವಾಸುದೇವ ಭಟ್ ಅವರು ತಮ್ಮ ಮನೆಯ ಮೀಟರ್ ಬೋರ್ಡ್​ಗೆ ಚೀಟಿ ಅಂಟಿಸಿದ್ದಾರೆ. ಅದರಲ್ಲಿ ಮೆಸ್ಕಾಂನವರೆ ಕ್ಷಮಿಸಿ, ಜೂನ್ ತಿಂಗಳಿಂದ ನಮಗೆ ಕರೆಂಟ್ ಬಿಲ್ ಕೊಡಬೇಡಿ. ನಾವು ಬಿಲ್ ಕಟ್ಟಲ್ಲ ಎಂದು ಬರೆದು ಅಂಟಿಸಿದ್ದಾರೆ.

ಉಡುಪಿ ಜಿಲ್ಲೆಯ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

‘ಭೈರತಿ ರಣಗಲ್’ ಸಿನಿಮಾ ಪ್ರೀ-ರಿಲೀಸ್ ಇವೆಂಟ್ ಲೈವ್ ವಿಡಿಯೋ ನೋಡಿ..
‘ಭೈರತಿ ರಣಗಲ್’ ಸಿನಿಮಾ ಪ್ರೀ-ರಿಲೀಸ್ ಇವೆಂಟ್ ಲೈವ್ ವಿಡಿಯೋ ನೋಡಿ..
ಸುದೀಪ್ ಎದುರಲ್ಲೇ ಧರ್ಮ ಕೀರ್ತಿರಾಜ್​ಗೆ ನಾಲಾಯಕ್ ಎಂದ ಬಿಗ್ ಬಾಸ್ ಮಂದಿ
ಸುದೀಪ್ ಎದುರಲ್ಲೇ ಧರ್ಮ ಕೀರ್ತಿರಾಜ್​ಗೆ ನಾಲಾಯಕ್ ಎಂದ ಬಿಗ್ ಬಾಸ್ ಮಂದಿ
ಯಥರ್ವ್ ಯಶ್ ಅದ್ದೂರಿ ಬರ್ತ್​ಡೇ ಪಾರ್ಟಿ; ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ಯಥರ್ವ್ ಯಶ್ ಅದ್ದೂರಿ ಬರ್ತ್​ಡೇ ಪಾರ್ಟಿ; ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ಸೋಲದೇವನಹಳ್ಳಿ, ಗಂಗಮ್ಮನಗುಡಿ ಪೊಲೀಸ್ ಠಾಣೆಗಳಿಗೆ ಇನ್ಸ್‌ಪೆಕ್ಟರ್​ಗಳೇ ಇಲ್ಲ
ಸೋಲದೇವನಹಳ್ಳಿ, ಗಂಗಮ್ಮನಗುಡಿ ಪೊಲೀಸ್ ಠಾಣೆಗಳಿಗೆ ಇನ್ಸ್‌ಪೆಕ್ಟರ್​ಗಳೇ ಇಲ್ಲ
ಪಾಲಿಕೆ ಯಡವಟ್ಟಿಗೆ ಮಕ್ಕಳ ಆಟದ ಮೈದಾನಕ್ಕೆ ಕಂಟಕ
ಪಾಲಿಕೆ ಯಡವಟ್ಟಿಗೆ ಮಕ್ಕಳ ಆಟದ ಮೈದಾನಕ್ಕೆ ಕಂಟಕ
ಸಿದ್ದರಾಮಯ್ಯ ಬಳಿಕ ರಾಜ್ಯದ ಮುಸ್ಲಿಮರಿಗೆ ಚೊಂಬು: ಅನ್ಸಾರಿ
ಸಿದ್ದರಾಮಯ್ಯ ಬಳಿಕ ರಾಜ್ಯದ ಮುಸ್ಲಿಮರಿಗೆ ಚೊಂಬು: ಅನ್ಸಾರಿ
ಸುದೀಪ್ ಎದುರು ‘ಕೆಂಪೇಗೌಡ’ ಡೈಲಾಗ್ ಹೇಳಿದ ಚೈತ್ರಾ ಕುಂದಾಪುರ
ಸುದೀಪ್ ಎದುರು ‘ಕೆಂಪೇಗೌಡ’ ಡೈಲಾಗ್ ಹೇಳಿದ ಚೈತ್ರಾ ಕುಂದಾಪುರ
ನನ್ನ ಮಗನನ್ನು ಜೈಲಿಗೆ ಹಾಕಿ, ಇಲ್ಲ ಸಾಯಿಸಲು ಅನುಮತಿ ನೀಡಿ ಎಂದ ತಾಯಿ
ನನ್ನ ಮಗನನ್ನು ಜೈಲಿಗೆ ಹಾಕಿ, ಇಲ್ಲ ಸಾಯಿಸಲು ಅನುಮತಿ ನೀಡಿ ಎಂದ ತಾಯಿ
ಬಾಗಲಕೋಟ: ಜಾತ್ರೆಗೆ 500 ನೋಟುಗಳ ಅಂಗಿ ತೊಟ್ಟುಕೊಂಡು ಬಂದ ಯುವಕ
ಬಾಗಲಕೋಟ: ಜಾತ್ರೆಗೆ 500 ನೋಟುಗಳ ಅಂಗಿ ತೊಟ್ಟುಕೊಂಡು ಬಂದ ಯುವಕ
ಬಿಗ್​ಬಾಸ್ ಮನೆಯ ಫೇಕ್ ಸ್ಪರ್ಧಿ ಯಾರು? ಊಸರವಳ್ಳಿ ಯಾರು?
ಬಿಗ್​ಬಾಸ್ ಮನೆಯ ಫೇಕ್ ಸ್ಪರ್ಧಿ ಯಾರು? ಊಸರವಳ್ಳಿ ಯಾರು?