Mandya Election Results: ಮಂಡ್ಯ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಸಕ್ಕರೆ ನಾಡಿನಲ್ಲಿ ಜೆಡಿಎಸ್​​-ಕಾಂಗ್ರೆಸ್​​ ಸಮಬಲದ ಹೋರಾಟ

Mandya Assembly Election Results 2023 Live Counting Updates: ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಪಿ ರವಿಕುಮಾರ್ ಅವರು ಸ್ಪರ್ಧಿಸಿದ್ದರೇ, ಜೆಡಿಎಸ್‌ನಿಂದ ಬಿ ಆರ್​ ರಾಮಚಂದ್ರ ಕಣದಲ್ಲಿದ್ದಾರೆ. ಹಾಗೆಯೇ ಇಲ್ಲಿ ಬಿಜೆಪಿಯಿಂದ ಅಶೋಕ್​ ಜಯರಾಮ್ ಅವರು ಸ್ಪರ್ಧಿಸಿದ್ದು ಮತ ಎಣಿಕೆಯ ವಿವರ ಇಲ್ಲಿದೆ.

Mandya Election Results: ಮಂಡ್ಯ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಸಕ್ಕರೆ ನಾಡಿನಲ್ಲಿ ಜೆಡಿಎಸ್​​-ಕಾಂಗ್ರೆಸ್​​ ಸಮಬಲದ ಹೋರಾಟ
ಜೆಡಿಎಸ್​​, ಕಾಂಗ್ರೆಸ್​
Follow us
ವಿವೇಕ ಬಿರಾದಾರ
| Updated By: Rakesh Nayak Manchi

Updated on: May 13, 2023 | 3:37 AM

Mandya Assembly Election Results 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ಸಕ್ಕರೆನಾಡು ಮಂಡ್ಯ ಎಂದರೆ ಒಕ್ಕಲಿಗರ ಪ್ರಾಬಲ್ಯವಿರುವ ಜಿಲ್ಲೆಯಾಗಿದೆ. ಇಲ್ಲಿನ ರಾಜಕೀಯ ಚಿತ್ರಣ ಸಂಪೂರ್ಣ ಅವಲಂಬಿತವಾಗಿರುವುದು ಒಕ್ಕಲಿಗ ಸಮುದಾಯದ ಮೇಲೆ. ಒಕ್ಕಲಿಗ ಸಮುದಾಯದವರು ರಾಜ್ಯದಲ್ಲಿ ಸಿಎಂ ಆಗುತ್ತಾರೆ ಎಂದರೇ ಮಂಡ್ಯ ಪ್ರಮುಖ ನಿರ್ಣಾಯಕವಾಗುತ್ತದೆ. ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ (Mandya Assembly constituency) ಕಾಂಗ್ರೆಸ್‌ನಿಂದ ಪಿ ರವಿಕುಮಾರ್​ ಅವರು ಸ್ಪರ್ಧಿಸುತ್ತಿದ್ದರೇ, ಜೆಡಿಎಸ್‌ನಿಂದ ಬಿ ಆರ್​ ರಾಮಚಂದ್ರ ಕಣದಲ್ಲಿದ್ದಾರೆ. ಹಾಗೆಯೇ ಇಲ್ಲಿ ಬಿಜೆಪಿಯಿಂದ ಅಶೋಕ್​ ಜಯರಾಮ್​ ಅವರು ಸ್ಪರ್ಧೆ ಮಾಡಿದ್ದಾರೆ. ಆಮ್​ ಆದ್ಮಿ ಪಾರ್ಟಿಯಿಂದ ಬೊಮ್ಮಯ್ಯ ಕಣಕ್ಕೆ ಇಳಿದಿದ್ದಾರೆ.

ಜಿಲ್ಲೆಯ ಕೇಂದ್ರ ಸ್ಥಾನವಾಗಿರುವ ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಘಟಾನುಘಟಿ ನಾಯಕರು ಗೆಲುವು ಸಾಧಿಸಿದ್ದಾರೆ. ಜೆಡಿಎಸ್​ನ ಎಂ.ಶ್ರೀನಿವಾಸ್‌ ಹಾಲಿ ಶಾಸಕರಾಗಿದ್ದು, ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿದ್ದಾರೆ. ಇನ್ನು ಈ ಕ್ಷೇತ್ರದಿಂದ 2013ರ ಚುನಾವಣೆಯಲ್ಲಿ ಅಂಬರೀಷ್‌ ಗೆಲುವು ಸಾಧಿಸಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ನದ್ದೇ ಪ್ರಾಬಲ್ಯವಾಗಿದೆ. ಇಲ್ಲಿ ಬಿಜೆಪಿ ಒಂದು ಬಾರಿಯೂ ಖಾತೆ ತೆರೆದಿಲ್ಲ. ಆದರೆ ಈ ಬಾರಿ 2023ರ ಚುನಾವಣೆಯಲ್ಲಿ ಮೂರು ಪಕ್ಷಗಳು ಕೇಂದ್ರ ಸ್ಥಾನದ ಮೇಲೆ ಕಣ್ಣಿಟ್ಟಿದ್ದು, ಪ್ರತಿಷ್ಠೆಯಾಗಿದೆ.

ಜೆಡಿಎಸ್‌ನಿಂದ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಸ್ಪರ್ಧಿಸುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದವು. ಇವರ ವಿರುದ್ಧ ಸುಮಲತಾ ಅಂಬರೀಶ್‌ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದರು. ಮೊದಲಿನಿಂದಲೂ ಮಂಡ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಗೊಂದಲ ಮುಂದುವರೆದಿತ್ತು.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ