Mandya: ಬಜರಂಗದಳ ನಿಷೇಧ ವಿಚಾರ: ಕಾಂಗ್ರೆಸ್ ಪ್ರಣಾಳಿಕೆ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ ಬಜರಂಗದಳ ಕಾರ್ಯಕರ್ತರು

|

Updated on: May 04, 2023 | 3:48 PM

ಕಾಂಗ್ರೆಸ್​ ಪಕ್ಷ ಅಧಿಕಾರಕ್ಕೆ ಬಂದರೆ ಬಜರಂಗದಳವನ್ನು ನಿಷೇಧಿಸುವ ನಿರ್ಧಾರವನ್ನು ವಿರೋಧಿಸಿ ಬಜರಂಗದಳ ಕಾರ್ಯಕರ್ತರು ಗುರುವಾರ ಮಂಡ್ಯದಲ್ಲಿ ಕಾಂಗ್ರೆಸ್ ಪ್ರಣಾಳಿಕೆಯನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಡ್ಯ: ಕಾಂಗ್ರೆಸ್​ ಪಕ್ಷ ಅಧಿಕಾರಕ್ಕೆ ಬಂದರೆ ಬಜರಂಗದಳವನ್ನು ನಿಷೇಧಿಸುವ ನಿರ್ಧಾರವನ್ನು ವಿರೋಧಿಸಿ ಬಜರಂಗದಳ (Bajrang Dal) ಕಾರ್ಯಕರ್ತರು ಗುರುವಾರ ಮಂಡ್ಯದಲ್ಲಿ ಕಾಂಗ್ರೆಸ್ ಪ್ರಣಾಳಿಕೆಯನ್ನು (Congress Manifesto) ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಪ್ರತಿಭಟನೆ ಮಾಡಿದ್ದು, ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ವಿಚಾರ ಖಂಡನೆ. ಹಿಂದೂ ವಿರೋದಿ ಕಾಂಗ್ರೆಸ್​ಗೆ ಮತ ನೀಡ ಬೇಡಿ ಎಂದು ಆಕ್ರೋಶ ಹೊರಹಾಕಿದ್ದಾರೆ. ಮುಂಬರುವ ದಿನಗಳಲ್ಲಿ ಉಗ್ರ ಹೋರಾಟದ ಎಚ್ಚರಿಕೆಯನ್ನು ಸಹ ಕಾರ್ಯಕರ್ತರು ನೀಡಿದ್ದಾರೆ. ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಕಾರ್ಯಕರ್ತರು ವಿಜಯನಗರ ಜಿಲ್ಲೆಯಲ್ಲಿ ಹನುಮಾನ್ ಚಾಲೀಸಾ ಪಠಿಸುವ ಮೂಲಕ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ಕೂಡ ಮಾಡಿದ್ದಾರೆ.

ಕಾಂಗ್ರೆಸ್​ನ ಪ್ರಣಾಳಿಕೆಗೆ ಬೆಂಕಿ ಹಚ್ಚಿದ ಈಶ್ವರಪ್ಪ  

ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ನಿಷೇಧಿಸುವ ಭರವಸೆಯನ್ನು ನೀಡಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳ ವಿರುದ್ಧ ಕ್ರಮದ ಕುರಿತು ಪ್ರಸ್ತಾವ ಮಾಡಿರುವ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಕೆಎಸ್ ಈಶ್ವರಪ್ಪ ಒಂದು ಹೆಜ್ಜೆ ಮುಂದೆ ಹೋಗಿ ಕಾಂಗ್ರೆಸ್​ನ ಪ್ರಣಾಳಿಕೆಯ ಪ್ರತಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: Bajrang Dal Row: ಸುದ್ದಿಗೋಷ್ಠಿಯಲ್ಲೇ ಕಾಂಗ್ರೆಸ್​ ಪ್ರಣಾಳಿಕೆ ಪ್ರತಿಯನ್ನು ಸುಟ್ಟುಹಾಕಿದ ಈಶ್ವರಪ್ಪ

ಚುನಾವಣಾ ಪ್ರಚಾರದ ನಿಮಿತ್ತ ಕಲಬುರಗಿ ಜಿಲ್ಲಾ ಪ್ರವಾಸದಲ್ಲಿರುವ ಈಶ್ವರಪ್ಪ, ಗುರುವಾರ ನಗರದಲ್ಲಿ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ಈ ವೇಳೆ ಕಾಂಗ್ರೆಸ್​​ ಪ್ರಣಾಳಿಕೆ ಪ್ರತಿಗೆ ಬೆಂಕಿ ಹಚ್ಚಿ ಸುಟ್ಟುಹಾಕಿದರು. ಬಳಿಕ ಮಾತನಾಡಿದ ಈಶ್ವರಪ್ಪ, ಕಾಂಗ್ರೆಸ್​​ನದ್ದು ರಾಷ್ಟ್ರ ದ್ರೋಹಿ ಪ್ರಣಾಳಿಕೆ. ಕಾಂಗ್ರೆಸ್​​ ಕೂಡಲೇ ಈ ಪ್ರಣಾಳಿಕೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್​ ಕೂಡಲೇ ತನ್ನ ಹೇಳಿಕೆ ಹಿಂಪಡೆಯಬೇಕು 

ಬಜರಂಗದಳ ರಾಷ್ಟ್ರಪ್ರೇಮಿ ಸಂಘಟನೆ. ಕಾಂಗ್ರೆಸ್ ಪ್ರಣಾಳಿಕೆ ಮಹಮ್ಮದ್ ಅಲಿ ಜಿನ್ನಾ ಪ್ರಣಾಳಿಕೆಯಾಗಿದೆ. ಈ ಪ್ರಣಾಳಿಕೆಯನ್ನು ಕೂಡಲೇ ಹಿಂಪಡೆಯಬೇಕು. ಕಾಂಗ್ರೆಸ್ ಪ್ರಣಾಳಿಕೆಯನ್ನು ಸುಟ್ಟು ಹಾಕುತ್ತೇನೆ ಎಂದು ಪ್ರಣಾಳಿಕೆ ಪ್ರತಿಯನ್ನು ಸುಟ್ಟುಹಾಕಿದರು.

ಇದನ್ನೂ ಓದಿ: ಕೊನೆ ಕ್ಷಣದಲ್ಲಿ ಬಿಜೆಪಿಯಿಂದ ಮೆಗಾ ಪ್ಲಾನ್: ವಿಜಯೇಂದ್ರಗೆ ಹೆಚ್ಚಿನ ಜವಾಬ್ದಾರಿ, ಓಡಾಟಕ್ಕೆ ವಿಶೇಷ ಹೆಲಿಕಾಪ್ಟರ್

ಬಜರಂಗದಳ ನಿಷೇಧ ಇಲ್ಲ ಎಂದ ವೀರಪ್ಪ ಮೊಯ್ಲಿ  

ಕರ್ನಾಟಕದಲ್ಲಿ ಬಜರಂಗದಳವನ್ನು ನಿಷೇಧಿಸುವ ಯಾವುದೇ ವಿಚಾರ ಇಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ ವೀರಪ್ಪ ಮೊಯ್ಲಿ ಗುರುವಾರ ಹೇಳಿದ್ದಾರೆ. ಕರ್ನಾಟಕದಲ್ಲಿ ಭಜರಂಗದಳವನ್ನು ನಿಷೇಧಿಸಲು ಕಾಂಗ್ರೆಸ್​ ಯೋಜಿಸುತ್ತಿಲ್ಲ. ಯಾವುದೇ ಸಂಘಟನೆಗಳನ್ನು ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಇಲ್ಲ ಎಂದು ತಿಳಿಸಿದ್ದಾರೆ.

ಬಜರಂಗದಳ, ಪಿಎಫ್​ಐ ಸಮಾಜದಲ್ಲಿ ಅಶಾಂತಿ ಸೃಷ್ಟಿಸುತ್ತವೆ. ಪಿಎಫ್ಐ ಈಗಾಗಲೇ ಬಿಜೆಪಿ ಸರ್ಕಾರ ಬ್ಯಾನ್ ಮಾಡಿದೆ. ಅದೇ ರೀತಿ ಬಜರಂಗದಳ ಸಂವಿಧಾನ ವಿರೋಧಿ ಮಾಡಿದರೆ ಕ್ರಮ ಆಗಲಿದೆ. ಚಪ್ಪಾಳೆ ಹೊಡೆಯಲು ಎರಡು ಕೈ ಬೇಕು, ಬರೀ ಪಿಎಫ್​ಐನಿಂದ ಜಗಳ ಆಗುತ್ತಿಲ್ಲ ಎಂದು ವೀರಪ್ಪ ಮೊಯ್ಲಿ ಕಿಡಿಕಾರಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:25 pm, Thu, 4 May 23