Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Election:ದೇಶಪ್ರೇಮ ಪಾರ್ಟಿ ಅಭ್ಯರ್ಥಿಯಾಗಿ ಕಂಪ್ಲಿ ವಿಧಾನಸಭಾ ಚುನಾಚವಣೆ ಅಖಾಡಕ್ಕಿಳಿದ ಮಂಗಳಮುಖಿ

ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಗುರುವಾರದಂದು ಬಳ್ಳಾರಿ ಜಿಲ್ಲೆಯ ಕಂಪ್ಲಿ ಕ್ಷೇತ್ರದಿಂದ ಮಂಗಳಮುಖಿಯೊಬ್ಬರು ದೇಶಪ್ರೇಮ ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದಾರೆ.

Karnataka Assembly Election:ದೇಶಪ್ರೇಮ ಪಾರ್ಟಿ ಅಭ್ಯರ್ಥಿಯಾಗಿ ಕಂಪ್ಲಿ ವಿಧಾನಸಭಾ ಚುನಾಚವಣೆ ಅಖಾಡಕ್ಕಿಳಿದ ಮಂಗಳಮುಖಿ
ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಮಂಗಳಮುಖಿ ಟಿ ರಾಮಕ್ಕ
Follow us
ಕಿರಣ್ ಹನುಮಂತ್​ ಮಾದಾರ್
|

Updated on: Apr 21, 2023 | 1:57 PM

ಬಳ್ಳಾರಿ: ವಿಧಾನಸಭೆ ಚುನಾವಣೆ(Karnataka Assembly Election)ಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಗುರುವಾರದಂದು ಬಳ್ಳಾರಿ ಜಿಲ್ಲೆಯ ಕಂಪ್ಲಿ ಕ್ಷೇತ್ರದಿಂದ ಮಂಗಳಮುಖಿಯೊಬ್ಬರು ದೇಶಪ್ರೇಮ ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದಾರೆ. ಹೌದು ಮಂಗಳಮುಖಿಯಾಗಿರುವ ಟಿ.ರಾಮಕ್ಕ(T Ramakka) ಎಂಬುವವರೆ ನಾಮಪತ್ರ ಸಲ್ಲಿಸುವ ಮೂಲಕ ರಾಜ್ಯ ರಾಜಕಾರಣದಲ್ಲಿ ಗಮನ ಸೆಳೆದಿದ್ದಾರೆ. ಕಂಪ್ಲಿ ತಾಲೂಕಿನ ಬಾದನಹಟ್ಟಿ ಗ್ರಾಮದವವರಾದ ಟಿ ರಾಮಕ್ಕ ವಿದ್ಯಾಭ್ಯಾಸ ಮಾಡದಿದ್ದರೂ ಎಂಎಲ್​ಎ(MLA) ಆಗುವ ಕನಸು ಕಟ್ಟಿಕೊಂಡು ವಿಧಾನಸಭೆ ಚುನಾವಣೆಗೆ ಇದೀಗ ಸ್ಪರ್ಧೆ ಮಾಡಿದ್ದಾರೆ.

ದೇಶಪ್ರೇಮ ಪಕ್ಷದ ಪದಾಧಿಕಾರಿಗಳು ಹಾಗೂ ಮಂಗಳಮುಖಿಯರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿರುವ ಟಿ ರಾಮಕ್ಕ. ತಮ್ಮ ನಾಮಪತ್ರದ ಜೊತೆಗೆ ಅಪಿಡವಿಟ್ ಸಲ್ಲಿಸಿದ್ದಾರೆ. ಕೇವಲ ಪಾನ್ ಸಂಖ್ಯೆ ಹೊಂದಿರುವ ಮಂಗಳಮುಖಿ ರಾಮಕ್ಕರ ಕೈಯಲ್ಲಿ ನಗದು 30 ಸಾವಿರ ಹಣ, 5 ಲಕ್ಷ ಮೌಲ್ಯದ 10 ತೊಲೆ ಬಂಗಾರ. 1.40 ಲಕ್ಷ ಮೌಲ್ಯದ 2 ಕೆಜಿ ಬೆಳ್ಳಿ ಹೊಂದಿದ್ದು. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ಖಾತೆ ಹೊಂದಿರುವುದಾಗಿ ದಾಖಲೆ ಸಲ್ಲಿಸಿದ್ದಾರೆ.

ಇದನ್ನೂ ಓದಿ:ಈಶ್ವರಪ್ಪಗೆ ಪ್ರಧಾನಿ ದೂರವಾಣಿ ಕರೆ: ರಾಜಕೀಯ ನಡೆಗೆ ಪ್ರಶಂಸೆ ಜತೆಗೆ ಮಹತ್ವದ ಭರವಸೆ ನೀಡಿದ ಮೋದಿ

ಸಮಾಜದಲ್ಲಿ ಮಂಗಳಮುಖಿಯರಿಗೆ ಸೂಕ್ತ ಸಮಾನತೆ ಸಿಗುತ್ತಿಲ್ಲ. ಸಮಾಜ ಮಂಗಳಮುಖಿಯರಿಗೆ ಗೌರವ ನೀಡುತ್ತಿಲ್ಲ. ಇದರಿಂದಾಗಿ ಭಿಕ್ಷೆಬೇಡಿಕೊಂಡು ಜೀವನ ಸಾಗಿಸುವ ದುಸ್ಥಿತಿಯಲ್ಲಿ ನಾವಿದ್ದೇವೆ. ಹೀಗಾಗಿ ಮನನೊಂದು ಶಾಸಕಿಯಾಗುವ ಕನಸಿನಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವೆ. ನಾನು ಶಾಸಕಿಯಾದಲ್ಲಿ ಕ್ಷೇತ್ರದಲ್ಲಿನ ಸರ್ವರಿಗೂ ಸಮಾನತೆಯನ್ನು ನೀಡಿ ಬಡವರು, ನಿರ್ಗತಿಕರು, ಹಿಂದುಳಿದವರ ಏಳಿಗೆಗೆ ಶ್ರಮಿಸುತ್ತೇನೆ. ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಮುಂದಾಗುವ ಜತೆಗೆ ಸಮಾಜಮುಖಿ ಕಾರ್ಯದಲ್ಲಿ ತೊಡಗಿಕೊಳ್ಳುತ್ತೇನೆ ಎಂದು ಟಿ ರಾಮಕ್ಕ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕಂಪ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್​ ಅಭ್ಯರ್ಥಿಯಾಗಿ ಹಾಲಿ ಶಾಸಕ ಜೆ.ಎನ್​.ಗಣೇಶ್​ ಹಾಗೂ ಬಿಜೆಪಿಯಿಂದ ಮಾಜಿ ಶಾಸಕ ಟಿ.ಎಚ್ ಸುರೇಶಬಾಬು. ಜೆಡಿಎಸ್​ನಿಂದ ರಾಜು ನಾಯಕ್ ಸ್ಪರ್ಧೆ ಮಾಡಿದ್ದು. ಈ ಮೂವರು ಘಟಾನುಘಟಿಗಳ ಮಧ್ಯೆ ಮಂಗಳಮುಖಿಯಾಗಿರುವ ಟಿ ರಾಮಕ್ಕ ಚುನಾವಣೆಯಲ್ಲಿ ಯಾವ ರೀತಿಯಾಗಿ ಪ್ರಚಾರ ಮಾಡುತ್ತಾರೆ. ಮತದಾರರ ಬೆಂಬಲ ಪಡೆಯಲು ಎನು ಮಾಡುತ್ತಾರೆ ಎನ್ನುವುದು ಇದೀಗ ಮತದಾರರಲ್ಲಿ ಕುತೊಹಲ ಮೂಡಿಸಿದೆ.

ಇನ್ನಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ