ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಮಂಗಳೂರು ದಕ್ಷಿಣದಲ್ಲಿ ವೇದವ್ಯಾಸ ಕಾಮತ್ ಗೆಲ್ಲುವ ಸಾಧ್ಯತೆ?

Mangalore South Assembly Election Result 2023 Live Counting Updates: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ​​​ ಹಾಗೂ ಕಾಂಗ್ರೆಸ್ ಜೆಆರ್​ ಲೋಬೋ​​, ಎಎಪಿ ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಮತ ಎಣಿಕೆಯ ವಿವರ ಇಲ್ಲಿದೆ.

ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಮಂಗಳೂರು ದಕ್ಷಿಣದಲ್ಲಿ ವೇದವ್ಯಾಸ ಕಾಮತ್ ಗೆಲ್ಲುವ ಸಾಧ್ಯತೆ?
ವೇದವ್ಯಾಸ ಕಾಮತ್
Edited By:

Updated on: May 13, 2023 | 3:33 AM

Mangalore South Assembly Election Result 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ (Mangalore South Assembly Constituency) ಕಾಂಗ್ರೆಸ್​​ ಮತ್ತು ಬಿಜೆಪಿಗೆ ಈ ಬಾರಿ ಪೈಪೋಟಿ ನಡೆಯುತ್ತಿದೆ. ಈ ಕ್ಷೇತ್ರದಲ್ಲಿ ಬಿಜೆಪಿ ಪ್ರಭಾವ ಇದೆ, ಡಿ. ವೇದವ್ಯಾಸ ಕಾಮತ್ ಅವರು ಪ್ರಬಲ ಅಭ್ಯರ್ಥಿಯಾಗಿದ್ದಾರೆ, ಕಳೆದ ಚುನಾವಣೆಯಲ್ಲೂ ಭಾರೀ ಬಹುಮತದಲ್ಲಿ ವಿಜಯ ಸಾಧಿಸಿದ್ದಾರೆ. ಈ ಭಾಗದಲ್ಲಿ ಡಿ. ವೇದವ್ಯಾಸ ಕಾಮತ್ ಅವರ ಬಗ್ಗೆ ಒಳ್ಳೆಯ ಅಭಿಪ್ರಾಯವಿದ್ದು, ಉತ್ತಮ ಕೆಲಸ ಮಾಡಿದ್ದಾರೆ ಎಂದು ಹೇಳಲಾಗಿದೆ, ಇದರ ಜತೆಗೆ ಡಿ. ವೇದವ್ಯಾಸ ಕಾಮತ್ ಅವರು ಯಾವುದೇ ತಾರತಾಮ್ಯ ಇಲ್ಲಿದೆ ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಈ ಬಾರಿ ಇವರೇ ಗೆಲುವು ಸಾಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಆದರೆ ಮತದಾರನ ಒಲವು ಯಾರ ಮೇಲಿದೆ ಎಂದು ನೋಡಬೇಕಿದೆ.

ಇನ್ನೂ ಡಿ. ವೇದವ್ಯಾಸ ಕಾಮತ್ ಅವರಿಗೆ ಕಾಂಗ್ರೆಸ್​​ನಿಂದ ಮಾಜಿ ಶಾಸಕ ಜೆಆರ್​ ಲೋಬೋ ಪೈಪೋಟಿ ನೀಡಲಿದ್ದಾರೆ, ಜೆಆರ್​ ಲೋಬೋ ಕಳೆದ ಚುನಾವಣೆಯಲ್ಲಿ ಡಿ. ವೇದವ್ಯಾಸ ಕಾಮತ್ ಮುಂದೆ ಸೋತಿದ್ದರು, ಆದರೆ ಈ ಬಾರಿ ಮತ್ತೆ ಅವರಿಗೆ ಟಿಕೇಟ್​​ ನೀಡಲಾಗಿದೆ. ಜೆಆರ್​ ಲೋಬೋ ಅವರು ಚುನಾವಣೆ ಸಮಯದಲ್ಲಿ ಮಾತ್ರ ಜನರ ಬಳಿ ಬರುತ್ತಾರೆ ಎಂಬ ಮಾತು ಕೂಡ ಇದೆ, ಈ ಕಾರಣಕ್ಕೆ ಭಾಜಪದ ಅಭ್ಯರ್ಥಿಗೆ ಪ್ರಬಲ ಪೈಪೋಟಿ ನೀಡಿಲ್ಲ. ಈ ಬಾರಿ ಯಾರಿಗೆ ಬಹುಮತ ಎಂದು ಕಾದು ನೋಡಬೇಕಿದೆ

ಇನ್ನೂ ಆಪ್​​ನಿಂದ ಸಂತೋಷ್​​ ಕಾಮತ್ ಸ್ಪರ್ಧಿಸುತ್ತಿದ್ದಾರೆ, ಇನ್ನೂ ಸ್ವಲ್ಪ ಮಟ್ಟಿಗೆ ಡಿ. ವೇದವ್ಯಾಸ ಕಾಮತ್​​ಗೆ ಪೈಪೋಟಿ ನೀಡುವುದು ಇವರೇ, ಆದರೂ ಡಿ. ವೇದವ್ಯಾಸ ಕಾಮತ್ ಬಗ್ಗೆ ಮಂಗಳೂರು ದಕ್ಷಿಣ ಕ್ಷೇತ್ರದ ಜನರಿಗೆ ಒಳ್ಳೆಯ ಅಭಿಪ್ರಾಯ ಇದೆ. ಕೆಆರ್​ಎಸ್​​ ಪಕ್ಷದಿಂದ ವಿನ್ನಿ ಪಿಂಟೋ ಸ್ಪರ್ಧಿಸಿದ್ದಾರೆ ​. ಒಟ್ಟಾರೆಯಾಗಿ ಈ ಬಾರಿ ಯಾರಿ ವಿಜಯ ಸಿಗಲಿದೆ ಎಂದು ಕಾದು ನೋಡಬೇಕಿದೆ.

ಹೀಗಾಗಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್​, ಬಿಜೆಪಿ, ಎಎಪಿ ​​ನಡುವೆ ಪೈಪೋಟಿ ಏರ್ಪಟ್ಟಿತ್ತು. ಬಿಜೆಪಿ, ಎಎಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿತ್ತು.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Loading...
Unable to load recommendations.
Follow Us