ಮಂಗಳೂರು; ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಗಲಾಟೆ; ಐದು ಎಫ್​ಐಆರ್ ದಾಖಲು, ಆರೋಪಿಗಳು ನಾಪತ್ತೆ

|

Updated on: May 11, 2023 | 6:17 PM

ಮೂಡಬಿದಿರೆ ವಿಧಾನಸಭಾ ಕ್ಷೇತ್ರದ ಮೂಡುಶೆಡ್ಡೆ ಮತಗಟ್ಟೆಯಲ್ಲಿ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು ಐದು ಪೊಲೀಸ್ ದೂರು ದಾಖಲಾಗಿದೆ. ಕಾವೂರು ಪೊಲೀಸ್ ಠಾಣೆಯಲ್ಲಿ ಐದು ಎಫ್‌ಐಆರ್ ದಾಖಲಾಗಿದ್ದು, 29ಕ್ಕೂ ಹೆಚ್ಚು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ಮಂಗಳೂರು; ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಗಲಾಟೆ; ಐದು ಎಫ್​ಐಆರ್ ದಾಖಲು, ಆರೋಪಿಗಳು ನಾಪತ್ತೆ
ಮೂಡುಶೆಡ್ಡೆ ಮತಗಟ್ಟೆಯಲ್ಲಿ ಮಾರಾಮಾರಿ
Follow us on

ಮಂಗಳೂರು: ಮೂಡಬಿದಿರೆ ವಿಧಾನಸಭಾ ಕ್ಷೇತ್ರದ ಮೂಡುಶೆಡ್ಡೆ ಮತಗಟ್ಟೆಯಲ್ಲಿ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು ಐದು ಪೊಲೀಸ್ ದೂರು ದಾಖಲಾಗಿದೆ. ಕಾವೂರು ಪೊಲೀಸ್ ಠಾಣೆಯಲ್ಲಿ ಐದು ಎಫ್‌ಐಆರ್ ದಾಖಲಾಗಿದ್ದು, 29ಕ್ಕೂ ಹೆಚ್ಚು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಗಲಾಟೆಗೆ ಸಂಬಂಧಿಸಿ ಕಾಂಗ್ರೆಸ್ ಪಕ್ಷದ ಕಡೆಯಿಂದ ಒಂದು, ಬಿಜೆಪಿಯಿಂದ ಒಂದು ಹಾಗೂ ಮೂರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಚುನಾವಣೆಯ ದಿನವಾದ ಬುಧವಾರ ಸಂಜೆ ಮೂಡುಶೆಡ್ಡೆಯಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಇಬ್ಬರು ಕಾಂಗ್ರೆಸ್ ಕಾರ್ಯಕರ್ತರು, ಒಬ್ಬರು ಪೊಲೀಸರಿಗೆ ಗಾಯವಾಗಿತ್ತು. ಮೂಡಬಿದಿರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಮಿಥುನ್​ ರೈ ಕಾರಿನ ಮೇಲೆ ಕಲ್ಲು ತೂರಾಟ ನಡೆದಿತ್ತು. ಇದರ ಬೆನ್ನಲ್ಲೇ ಕಾವೂರು ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಸೆಕ್ಷನ್​ 144 ಜಾರಿ ಮಾಡಲಾಗಿತ್ತು.

ಇದನ್ನೂ ಓದಿ: ಮಂಗಳೂರಿನಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ: ಕಾಂಗ್ರೆಸ್​ ಅಭ್ಯರ್ಥಿ ಕಾರಿನ ಮೇಲೆ ಕಲ್ಲುತೂರಾಟ

ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್​ ಆಯುಕ್ತ ಕುಲದೀಪ್​ ಜೈನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಎರಡೂ ಪಕ್ಷದ ಕಾರ್ಯಕರ್ತರಿಂದ ಪರ ವಿರೋಧ ಘೋಷಣೆ ಮಾರಾಮಾರಿಗೆ ಕಾರಣವಾಗಿದೆ ಎನ್ನಲಾಗಿದೆ. ಸ್ಥಳದಲ್ಲಿ ಕೆಎಸ್ಆರ್​​ಪಿ ತುಕಡಿ ನಿಯೋಜನೆ ಮಾಡಲಾಗಿದೆ.

ಕರ್ನಾಟಕ ಚುನಾವಣೆ ತಾಜಾ & ವಿಶೇಷ ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ

Published On - 6:16 pm, Thu, 11 May 23