ಮಂಗಳೂರಿನಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ: ಕಾಂಗ್ರೆಸ್ ಅಭ್ಯರ್ಥಿ ಕಾರಿನ ಮೇಲೆ ಕಲ್ಲುತೂರಾಟ
ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ಉಂಟಾಗಿದ್ದು, ಮೂಡಬಿದಿರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರಿನ ಮೇಲೆ ಕಲ್ಲು ತೂರಾಟ ಮಾಡಿರುವಂತಹ ಘಟನೆ ಮಂಗಳೂರು ಹೊರವಲಯದ ಮುಡುಶೆಡ್ಡೆಯಲ್ಲಿ ನಡೆದಿದೆ.
ಮಂಗಳೂರು: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ (clash) ಉಂಟಾಗಿದ್ದು, ಮೂಡಬಿದಿರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರಿನ ಮೇಲೆ ಕಲ್ಲು ತೂರಾಟ ಮಾಡಿರುವಂತಹ ಘಟನೆ ಮಂಗಳೂರು ಹೊರವಲಯದ ಮುಡುಶೆಡ್ಡೆಯಲ್ಲಿ ನಡೆದಿದೆ. ಚುನಾವಣಾ ಪಕ್ಷದ ಬೂತ್ಗೆ ಅಭ್ಯರ್ಥಿ ಮಿಥುನ್ ರೈ ಬಂದಾ ಕಾಂಗ್ರೆಸ್ ಕಾರ್ಯಕರ್ತರು ಜೈಕಾರ ಕೂಗಿದ್ದಾರೆ. ಈ ವೇಳೆ ಎರಡು ಪಕ್ಷದ ಕಾರ್ಯಕರ್ತರ ಮಧ್ಯೆ ಘರ್ಷಣೆಗೆ ಕಾರಣವಾಗಿದೆ. ಘಟನೆಯಲ್ಲಿ ಇಬ್ಬರಿಗೆ ಗಾಯವಾಗಿದ್ದು, ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ.
ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಜೈನ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದರೆ. ಎರಡು ಪಕ್ಷದ ಕಾರ್ಯಕರ್ತರಿಂದ ಪರ ವಿರೋಧ ಘೋಷಣೆ ಹಿನ್ನೆಲೆ ಮಾರಾಮಾರಿಗೆ ಕಾರಣವಾಗಿದೆ. ಸ್ಥಳದಲ್ಲಿ ಕೆಎಸ್ಆರ್ಪಿ ತುಕಡಿ ನಿಯೋಜನೆ ಮಾಡಲಾಗಿದೆ.
ಕುಲದೀಪ್ ಜೈನ್ ಹೇಳಿದಿಷ್ಟು
ಪೊಲೀಸ್ ಆಯುಕ್ತ ಕುಲದೀಪ್ ಜೈನ್ ಈ ಕುರಿತು ಮಾತನಾಡಿದ್ದು, ಮತದಾನ ಮುಗಿದ ಬಳಿಕ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಘರ್ಷಣೆ ನಡೆದಿದೆ. ಪರಸ್ಪರ ಘೋಷಣೆ ಕೂಗಿದ ವೇಳೆ ಗಲಾಟೆ ಆಗಿದೆ. ಸದ್ಯ ಪರಿಸ್ಥಿತಿ ನಿಯಂತ್ರಿಸಿ ಹೆಚ್ಚುವರಿ ಭದ್ರತೆ ಹಾಕಲಾಗಿದೆ. ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 144 ಸೆಕ್ಷನ್ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮೂಡುಶೆಡ್ಡೆಯಲ್ಲಿ ಚೆಕ್ ಪೋಸ್ಟ್ ಹಾಕಿ ವಾಹನ ತಪಾಸಣೆ ನಡೆಸುತ್ತೇವೆ. ಬರುವ ಮತ್ತು ಹೊರಗಿನ ವಾಹನಗಳ ಮೇಲೆ ನಿಗಾ ಇಡಲಾಗಿತ್ತೆ. ಘಟನೆಯಲ್ಲಿ ಮೂವರು ಕಾಂಗ್ರೆಸ್ ಕಾರ್ಯಕರ್ತರಿಗೆ ಗಾಯಗಳಾಗಿವೆ. ನಮ್ಮ ಪೊಲೀಸ್ ಸಿಬ್ಬಂದಿಗೂ ಗಾಯಗಳಾಗಿವೆ ಎಂದು ಹೇಳಿದರು.
ಮತದಾನದ ಬಳಿಕ ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ನಡಿವೆ ಮಾರಾಮಾರಿ: ಶಾಸಕನ ಸಹೋದರ ಸೇರಿ ನಾಲ್ವರ ಮೇಲೆ ಹಲ್ಲೆ ಆರೋಪ
ರಾಯಚೂರು: ಮತದಾನದ ಬಳಿಕ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡಿವೆ ಮಾರಾಮಾರಿ ಉಂಟಾಗಿದ್ದು, ಕಾಂಗ್ರೆಸ್ ಶಾಸಕನ ಸಹೋದರ ಸೇರಿ ನಾಲ್ವರ ಮೇಲೆ ಹಲ್ಲೆ ಆರೋಪ ಮಾಡಿರುವಂತಹ ಘಟನೆ ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ನಡೆದಿದೆ. ಮಸ್ಕಿ ಕಾಂಗ್ರೆಸ್ ಶಾಸಕ ಬಸನಗೌಡ ತುರ್ವಿಹಾಳ ಸಹೋದರ ಸಿದ್ದನಗೌಡ ಮೇಲೆ ಹಲ್ಲೆ ಆರೋಪ ಮಾಡಲಾಗಿದೆ.
ಇದನ್ನೂ ಓದಿ: ಎಕ್ಸಿಟ್ ಪೋಲ್ಗಳು ಪೂರ್ಣ ಸರಿಯಾಗಿರುವುದಿಲ್ಲ; ಸಿಎಂ ಬಸವರಾಜ ಬೊಮ್ಮಾಯಿ
ಇಂದು ಸಂಜೆ 6.30ರ ಸುಮಾರಿಗೆ ಹಳೆ ಬಸ್ ನಿಲ್ದಾಣದ ಬಳಿಯ ಬೂತ್ಗೆ ಸಿದ್ದನಗೌಡ ಬಂದಿದ್ದು, ಈ ವೇಳೆ ಬಿಜೆಪಿ ಕಾರ್ಯಕರ್ತರು ಸಿದ್ದನಗೌಡ ಸೇರಿ ನಾಲ್ವರ ಮೇಲೆ ಹಲ್ಲೆ ಮಾಡಿರುವುದಾಗಿ ಆರೋಪಿಸಿದ್ದಾರೆ. ರಾಡ್ ನಿಂದ ಸಿದ್ದನಗೌಡ, ಮೌಲಾಸಾಬ್ ಸೇರಿ ನಾಲ್ವರ ಮೇಲೆ ಹಲ್ಲೆ ಮಾಡಿದ್ದಾರೆನ್ನಲಾಗಿದ್ದು, ಘಟನೆಯಲ್ಲಿ ಸಿದ್ದನಗೌಡ ಸೇರಿ ನಾಲ್ವರಿಗೆ ಗಾಯವಾಗಿದೆ. ಗಾಯಾಳುಗಳನ್ನು ಸಿಂಧನೂರು ತಾಲ್ಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಾಸ್ಕಿ ಪೊಲೀಸ್ ಠಾಣಾ ವ್ಯಾಪ್ತಿ ಪ್ರಕರಣ ದಾಖಲಾಗಿದೆ.
ನಕಲಿ ಮತದಾನ ಆರೋಪ: ಓಟ್ ಲೆಸ್ ಮಾಡುವಂತೆ ಗ್ರಾಮಸ್ಥ ಒತ್ತಾಯ
ಕಾರವಾರ: ಮತದಾನ ಮುಗಿದರೂ ಮತಗಟ್ಟೆಯಲ್ಲೇ ಚುನಾವಣಾ ಸಿಬ್ಬಂದಿಯನ್ನು ಗ್ರಾಮಸ್ಥರು ತಡೆಹಿಡಿದಿದ್ದು, ನಕಲಿ ಮತದಾನ ಆರೋಪ ಕೇಳಿಬಂದಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸಂತೆಗುಳಿ ಮತಗಟ್ಟೆ ಸಂಖ್ಯೆ 190 ರಲ್ಲಿ ಘಟನೆ ನಡೆದಿದೆ. ಮುರುಳಿಧರ್ ಹೆಗಡೆ ಎಂಬುವವರ ಸಿರಿಯಲ್ ನಂಬರ್ ಬಳಸಿಕೊಂಡು ಬೇರೊಬ್ಬ ವ್ಯಕ್ತಿ ಮತದಾನ ಮಾಡಿದ್ದ ಆರೋಪ ಮಾಡಲಾಗಿದೆ.
ಇದನ್ನೂ ಓದಿ: Bangalore: ಒಂದೇ ಮತಗಟ್ಟೆಯಲ್ಲಿ ಸರದಿ ಸಾಲಲ್ಲಿದ್ದ 8000 ಜನರು ಮತದಾನ ಮಾಡದೆ ವಾಪಸ್! ಹೌದಾ?
ಮುರುಳಿದರ್ ಎಂಬುವವರು ಮತದಾನಕ್ಕೆ ಬಂದ ವೇಳೆ ಬೇರೊಬ್ಬರು ಮತದಾನ ಮಾಡಿದ ಪ್ರಕರಣ ಬಯಲಿಗೆ ಬಂದಿದ್ದು, ಲೋಪದ ಅರಿವಾಗಿ ಟೆಂಡರ್ ಓಟ್ ಮಾಡಲು ಚುನಾವಣಾಧಿಕಾರಿಗಳು 17 ಸಿ ಅಂಡರ್ನಲ್ಲಿ ಮತದಾನಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಒಂದು ಓಟ್ ಲೆಸ್ ಮಾಡುವಂತೆ ಗ್ರಾಮಸ್ಥರಿಂದ ಚುನಾವಣಾ ಸಿಬ್ಬಂದಿಗಳಿಗೆ ಕೊಠಡಿಯಲ್ಲಿ ದಿಗ್ಭಂಧನ ಮಾಡಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಸ್ಥಿತಿ ನಿಯಂತ್ರಿಸಲು ಹರಸಾಹಸ ಪಟ್ಟರು.
ಕರ್ನಾಟಕ ಚುನಾವಣೆ 2023 ಲೈವ್ ಅಪ್ಡೇಟ್ಸ್ಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕ ಚುನಾವಣೆ ತಾಜಾ & ವಿಶೇಷ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 9:54 pm, Wed, 10 May 23