Manvi Election Results: ಮಾನ್ವಿ ವಿಧಾನಸಭಾ ಕ್ಷೇತ್ರ ಎಲೆಕ್ಷನ್ 2023 ರಿಸಲ್ಟ್: ಕಾಂಗ್ರೆಸ್ ಪಕ್ಷದ ಹಂಪಯ್ಯ ನಾಯಕ್ ಜಯಭೇರಿ!

Manvi Assembly Election Result 2023 Live Counting Updates: ಮಾನ್ವಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಹಂಪಯ್ಯ ನಾಯಕ್ ಗೆಲುವು ಸಾಧಿಸಿದ್ದಾರೆ,

Manvi Election Results: ಮಾನ್ವಿ ವಿಧಾನಸಭಾ ಕ್ಷೇತ್ರ ಎಲೆಕ್ಷನ್ 2023 ರಿಸಲ್ಟ್: ಕಾಂಗ್ರೆಸ್ ಪಕ್ಷದ ಹಂಪಯ್ಯ ನಾಯಕ್ ಜಯಭೇರಿ!
ಕರ್ನಾಟಕ ಚುನಾವಣೆ ಫಲಿತಾಂಶ, ಮಾನ್ವಿ ಕ್ಷೇತ್ರ
Follow us
ಅರುಣ್​ ಕುಮಾರ್​ ಬೆಳ್ಳಿ
|

Updated on:May 13, 2023 | 4:03 PM

ರಾಯಚೂರಿನ ಮಾನ್ವಿ (ಎಸ್ ಟಿ ಮೀಸಲು) ವಿಧಾನಸಭಾ ಕ್ಷೇತ್ರದಲ್ಲಿ ನಾಯಕ ಜನಾಂಗದ (Nayak community) ನಾಯಕರದ್ದೇ ಪಾರುಪತ್ಯೆಯಾಗಿತ್ತು. ಆಪ್ ಸೇರಿದಂತೆ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಅಭ್ಯರ್ಥಿಗಳೆಲ್ಲ ಅದೇ ಸಮುದಾಯದವರಾಗಿದ್ದರು. ಕಾಂಗ್ರೆಸ್ ಪಕ್ಷದ ಹಂಪಯ್ಯ ನಾಯಕ್ ((J Hampayya Nayak) ) ಅವರ ಗೆಲುವು ಸಾಧಿಸಿದ್ದಾರೆ. ಹಾಲಿ ಶಾಸಕರಾಗಿದ್ದ ಜೆಡಿಎಸ್ ರಾಜಾ ವೆಂಕಟಪ್ಪ ನಾಯಕ್ (Raja Venkatappa Nayak) ದುರ್ಬಲ ಎದುರಾಳಿಗಳಿಂದಾಗಿ 2018ರಲ್ಲಿ ಗೆಲುವು ಸಾಧಿಸಿದ್ದರು. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಡಾ ತನುಶ್ರೀ ಅವರು ವೆಂಕಟಪ್ಪ ನಾಯಕ್ ಗೆ ಭಾರೀ ಪೈಪೋಟಿ ಒಡ್ಡಿದ್ದರು. ತನುಶ್ರೀ, ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳಿಗಿಂತ ಹೆಚ್ಚು ಮತ ಗಳಿಸಿ ಎರಡನೇ ಸ್ಥಾನದಲ್ಲಿದ್ದರು. ತನುಶ್ರೀ ಅವರು ಈ ಬಾರಿ ಸ್ಪರ್ಧಿಸಿರಲಿಲ್ಲ. ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಜೆ ಹಂಪಯ್ಯ ನಾಯಕ್  ಅವರಿಗೆ ಟಿಕೆಟ್ ನೀಡಿತ್ತು. ಬಿಜೆಪಿ ಪರವಾಗಿ ಮಾಜಿ ಸಂಸದ ಬಿವಿ ನಾಯಕ್ (BV Nayak) ಕಣಕ್ಕಿಳಿದಿದ್ದರು.

ಮಾಜಿ ಸಂಸದ ದಿವಂಗತ ವೆಂಕಟೇಶ್ ನಾಯಕ್ ಮಗನಾಗಿರುವ ಬಿವಿ ನಾಯಕ್ ಹಾಗೆ ನೋಡಿದರೆ ದೇವದುರ್ಗ ತಾಲ್ಲೂಕಿನವರು. ಮಾನ್ವಿಯಲ್ಲಿ ಜನಪ್ರಿಯನಲ್ಲದಿದ್ದರೂ ಬಿಜೆಪಿ ಟಿಕೆಟ್ ನೀಡಿತ್ತು. ಅರವಿಂದ್ ಕೇಜ್ರಿವಾಲ್ ಅವರ ಆಪ್ ಪಕ್ಷದ ಅಭ್ಯರ್ಥಿ ರಾಜಾ ಶ್ಯಾಂಸುಂದರ್ ನಾಯಕ್  ಕ್ಷೇತ್ರದಲ್ಲಿ ಬಿರುಸಿನಿಂದ ಓಡಾಡಿ ಪ್ರಚಾರ ನಡೆಸಿದ್ದರು.

ಈ ಬಾರಿಯ ಚುನಾವಣೆ ಜೆಡಿಎಸ್ ಮತ್ತು ಬಿಜೆಪಿ ನಡುವೆ ನೇರ ಸ್ಪರ್ಧೆ ಎಂದು ಬಿಂಬಿಸಲಾಗಿತ್ತು. ರಾಜಾ ವೆಂಕಟಪ್ಪ ಕ್ಷೇತ್ರದಲ್ಲಿ ಜನಾನುರಾಗಿಯಾಗಿದ್ದರು. ಸಮ್ಮಿಶ್ರ ಸರ್ಕಾರ ಪತನಗೊಂಡಾಗ ಅವರಿಗೆ ಜನರ ಅನುಕಂಪವೂ ಸಿಕ್ಕಿತ್ತು. ನಾಯಕ್ ಸಮುದಾಯದ ವೋಟುಗಳು ಹಂಚಿಹೋಗಿದ್ದರಿಂದ ಮುಸ್ಲಿಂ ಮತ್ತು ದಲಿತ ಸಮುದಾಯದ ವೋಟುಗಳು ನಿರ್ಣಾಯಕವಾದವು.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 12:38 am, Sat, 13 May 23

ರೈಲಿನಡಿ ಸಿಲುಕುತ್ತಿದ್ದ ವೃದ್ಧರನ್ನು ರಕ್ಷಿಸಿದ ಬಂಗಾಳದ ಕಾನ್‌ಸ್ಟೆಬಲ್
ರೈಲಿನಡಿ ಸಿಲುಕುತ್ತಿದ್ದ ವೃದ್ಧರನ್ನು ರಕ್ಷಿಸಿದ ಬಂಗಾಳದ ಕಾನ್‌ಸ್ಟೆಬಲ್
ಬಾಡಿಗೆ ಮನೆಯಲ್ಲಿದ್ದೇನೆ, ಸಂಭಾವನೆಯಿಂದ ಸಾಲ ತೀರಿಸ್ತೀನಿ: ತ್ರಿವಿಕ್ರಮ್
ಬಾಡಿಗೆ ಮನೆಯಲ್ಲಿದ್ದೇನೆ, ಸಂಭಾವನೆಯಿಂದ ಸಾಲ ತೀರಿಸ್ತೀನಿ: ತ್ರಿವಿಕ್ರಮ್
ಜನಪ್ರತಿನಿಧಿಗಳು ಅಧಿಕಾರಿಗಳ ಮೇಲೆ ರೇಗುವುದು ಯಾಕೆ?
ಜನಪ್ರತಿನಿಧಿಗಳು ಅಧಿಕಾರಿಗಳ ಮೇಲೆ ರೇಗುವುದು ಯಾಕೆ?
ಬಿಜೆಪಿ ರಾಜ್ಯ, ರಾಷ್ಟ್ರಮಟ್ಟದಲ್ಲಿ ಬಹುದೊಡ್ಡ ಪಕ್ಷವಾಗಿ ಬೆಳೆದಿದೆ: ಸಂಸದ
ಬಿಜೆಪಿ ರಾಜ್ಯ, ರಾಷ್ಟ್ರಮಟ್ಟದಲ್ಲಿ ಬಹುದೊಡ್ಡ ಪಕ್ಷವಾಗಿ ಬೆಳೆದಿದೆ: ಸಂಸದ
ಹನುಮಂತುಗೆ ಹೊಡೆದರೂ ಭವ್ಯಾನ ಹೊರಗೆ ಹಾಕಲಿಲ್ಲ ಯಾಕೆ? ಮಂಜು ಹೇಳಿದ್ದೇನು?
ಹನುಮಂತುಗೆ ಹೊಡೆದರೂ ಭವ್ಯಾನ ಹೊರಗೆ ಹಾಕಲಿಲ್ಲ ಯಾಕೆ? ಮಂಜು ಹೇಳಿದ್ದೇನು?
ಜಲಮಂಡಳಿ ನಿರ್ವಹಣೆಗೆ ಹಣ ಹೊಂದಿಸಲಾಗುತ್ತಿಲ್ಲ, ದರಯೇರಿಕೆ ಅನಿವಾರ್ಯ: ಸಚಿವ
ಜಲಮಂಡಳಿ ನಿರ್ವಹಣೆಗೆ ಹಣ ಹೊಂದಿಸಲಾಗುತ್ತಿಲ್ಲ, ದರಯೇರಿಕೆ ಅನಿವಾರ್ಯ: ಸಚಿವ
ವಲಸಿಗರ ವಿಚಾರದಲ್ಲಿ ಭಾರತ ಸೂಕ್ತ ಕ್ರಮ ಕೈಗೊಳ್ಳಲಿದೆ; ಟ್ರಂಪ್ ಹೇಳಿಕೆ
ವಲಸಿಗರ ವಿಚಾರದಲ್ಲಿ ಭಾರತ ಸೂಕ್ತ ಕ್ರಮ ಕೈಗೊಳ್ಳಲಿದೆ; ಟ್ರಂಪ್ ಹೇಳಿಕೆ
ಇಕ್ಬಾಲ್ ಹುಸ್ಸೇನ್ ಹೇಳಿಕೆಗೆ ಕೌಂಟರ್ ನೀಡಿದ ಸಚಿವ ರಾಜಣ್ಣ
ಇಕ್ಬಾಲ್ ಹುಸ್ಸೇನ್ ಹೇಳಿಕೆಗೆ ಕೌಂಟರ್ ನೀಡಿದ ಸಚಿವ ರಾಜಣ್ಣ
ಕಾಂಗ್ರೆಸ್ ಪಕ್ಷ ಒಂದು ಸಿಟಿ ಬಸ್​ನಂತೆ, ಯಾರು ಬೇಕಾದರೂ ಹತ್ತಬಹುದು: ಲಾಡ್
ಕಾಂಗ್ರೆಸ್ ಪಕ್ಷ ಒಂದು ಸಿಟಿ ಬಸ್​ನಂತೆ, ಯಾರು ಬೇಕಾದರೂ ಹತ್ತಬಹುದು: ಲಾಡ್
150 ರೂ.ಗೆ ಕೆಲಸ ಮಾಡಿದ್ದ ಉಗ್ರಂ ಮಂಜು; ಬಿಗ್ ಬಾಸ್​ನಿಂದ ದೊಡ್ಡ ಸಂಭಾವನೆ
150 ರೂ.ಗೆ ಕೆಲಸ ಮಾಡಿದ್ದ ಉಗ್ರಂ ಮಂಜು; ಬಿಗ್ ಬಾಸ್​ನಿಂದ ದೊಡ್ಡ ಸಂಭಾವನೆ