ಬಸನಗೌಡ ಪಾಟೀಲ್ ಯತ್ನಾಳ್​ಗೆ ಮತ್ತೊಂದು ನೋಟಿಸ್​: ಸೂಕ್ತ ಕ್ರಮದ ಎಚ್ಚರಿಕೆ

ರಾಜ್ಯ ರಾಜಕಾರಣದಲ್ಲಿ ಆರೋಪ-ಪ್ರತ್ಯಾರೋಪ ಮಾಡುವ ಭರದಲ್ಲಿ ನಾಯಕರು ನಾಲಿಗೆ ಹರಿಬಿಡುತ್ತಿದ್ದಾರೆ. ಇದೀಗ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಅವರಿಗೆ ಚುನಾವಣಾಧಿಕಾರಿಯಿಂದ ಮತ್ತೊಂದು ನೋಟಿಸ್ ಜಾರಿಯಾಗಿದೆ.

ಬಸನಗೌಡ ಪಾಟೀಲ್ ಯತ್ನಾಳ್​ಗೆ ಮತ್ತೊಂದು ನೋಟಿಸ್​: ಸೂಕ್ತ ಕ್ರಮದ ಎಚ್ಚರಿಕೆ
ಬಸನಗೌಡ ಪಾಟೀಲ್ ಯತ್ನಾಳ್
Follow us
ರಮೇಶ್ ಬಿ. ಜವಳಗೇರಾ
|

Updated on: May 07, 2023 | 4:56 PM

ರಾಯಚೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Elections 2023 ಇದೇ ಮೇ 10ರಂದು ಮತದಾನ ನಡೆಯಲಿದ್ದು, ಇದರಿಂದ ರಾಜಕೀಯ ಪಕ್ಷಗಳಿಂದ ಪ್ರಚಾರ ಭರಾಟೆ ಜೋರಾಗಿದೆ. ಇದರ ಮಧ್ಯೆ ರಾಜಕೀಯ ನಾಯಕರ ಪರಸ್ಪರ ಆರೋಪ-ಪ್ರತ್ಯಾರೋಪಗಳು ತಾರಕಕ್ಕೇರಿದ್ದು, ವೈಯಕ್ತಿ ಟೀಕೆಗಳಿಂದ ಆರ್ ಪಿ ಆಕ್ಟ್ ಉಲ್ಲಂಘನೆ ಮಾಡಿದ್ದಾರೆ. ಅದರಂತೆ ವಿಜಯಪುರ ಬಿಜೆಪಿ ಅಭ್ಯರ್ಥಿ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಅವರಿಗೆ ಮತ್ತೊಂದು ನೋಟಿಸ್ ಜಾರಿ ಮಾಡಲಾಗಿದೆ. ಇದೇ ಮೇ 5 ರಂದು ಮಸ್ಕಿಯಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಅಬ್ಬರದ ಭಾಷಣದೊಂದಿಗೆ ಆರ್ ಪಿ ಆಕ್ಟ್ ಉಲ್ಲಂಘನೆ ಉಲ್ಲಂಘನೆ ಮಾಡಿದ್ದು, ಇದೀಗ ಕಾರಣ ಕೇಳಿ ಮಸ್ಕಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ನೋಟಿಸ್ ಜಾರಿ ಮಾಡಿದ್ದಾರೆ.

ಇದನ್ನೂ ಓದಿ: ಅವಹೇಳನಕಾರಿ ಹೇಳಿಕೆ; ಬಸನಗೌಡ ಪಾಟೀಲ್‌ ಯತ್ನಾಳ್, ಪ್ರಿಯಾಂಕ್ ಖರ್ಗೆಗೆ ಚುನಾವಣಾ ಆಯೋಗ ನೋಟಿಸ್

ಮೋದಿಗೆ ವಿಷದಹಾವು ಎಂದ ಮಲ್ಲಿಕಾರ್ಜುನ ಖರ್ಗೆ ತಾವೇನು ಹೆಬ್ಬಾವಾ ಎಂದು ಪ್ರಶ್ನಿಸಿದ್ದರು. ಅಲ್ಲದೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒಬ್ಬ ಅರೇಹುಚ್ಚಾ ಎಂದು ವಾಗ್ದಾಳಿ ನಡೆಸಿದ್ದರು. ಈ ಮೂಲಕ ಆರ್ ಪಿ ಆಕ್ಟ್ ಉಲ್ಲಂಘನೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಮಸ್ಕಿ ಚುನಾವನಾಧಿಕಾರಿ 24 ಗಂಟೆಗಳಲ್ಲಿ ಸೂಕ್ತ ಸಮಜಾಯಿಷಿ ನೀಡಬೇಕು ಎಂದು ಬಸನಗೌಡ ಪಾಟೀಲ್ ಯತ್ನಾಳ್​ಗೆ ನೋಟಿಸ್ ನೀಡಿದ್ದಾರೆ. ಅಲ್ಲದೇ ತಪ್ಪಿದಲ್ಲಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ನೋಟೀಸ್ ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ ಈ ಹಿಂದೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ವಿಷಕನ್ಯೆ ಎಂದು ಹೇಳಿಕೆ ನೀಡಿದ್ದು, ಆ ಹೇಳಿಕೆಗೂ ಸಹ ಚುನಾವಣಾಧಿಕಾರಿ ಕಾರಣ ಕೇಳಿ ನೋಟಿಸ್ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಮಸ್ಕಿಯಲ್ಲಿ ಭಾಷಣ ಮಾಡಿದ್ದ ಉಮಶ್ರೀ ವಿರುದ್ಧ ಎಫ್​ಐಆರ್

ಏ.28ರಂದು‌ ಮಸ್ಕಿ ಪಟ್ಟಣದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಅಧ್ಯಕ್ಷತೆಯಲ್ಲಿ ನಡೆದಿದ್ದ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಉಮಾಶ್ರೀ, ಬಿಜೆಪಿಯವರು ವಿಷಜಂತುಗಳು ಎಂದು ಹೇಳಿದ್ದರು. ಇದೀಗ ಉಮಾಶ್ರೀ(Umashree) ವಿರುದ್ಧ ರಾಯಚೂರು ಜಿಲ್ಲೆ ಮಸ್ಕಿ ಪೊಲೀಸ್ ಠಾಣೆಯಲ್ಲಿ ಎಫ್​​ಐಆರ್(FIR) ದಾಖಲಾಗಿದೆ. ಉಮಾಶ್ರೀಯವರು ಬಿಜೆಪಿ ಮುಖಂಡರು ವಿಷ ಜಂತುಗಳೆಂದು ಕಿಡಿಕಾರಿದ್ದರು. ಬಿಜೆಪಿ ಮುಖಂಡರು ಧರ್ಮವನ್ನು ಒಡೆದು, ಕೋಮುವಾದ ಸೃಷ್ಟಿಸಿ ಬೆಂಕಿ ಹಚ್ಚುವಂಥವರು ಎಂದು‌ ಆರೋಪ ಮಾಡಿದ್ದರು. ಇದೇ ವಿಚಾರಗಳ ಆಧಾರದಲ್ಲಿ ಮಾಜಿ ಸಚಿವೆ ಉಮಾಶ್ರೀ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ