ಮೇ 13ರಂದು ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ: ಶನಿವಾರ ಬೆಂಗಳೂರು ನಗರದಾದ್ಯಂತ ನಿಷೇಧಾಜ್ಞೆ ಜಾರಿ

ಮತ ಎಣಿಕೆ ವೇಳೆ ಕಿಡಿಗೇಡಿಗಳಿಂದ ಪ್ರತಿಭಟನೆ ಸಾಧ್ಯತೆ ಹಿನ್ನೆಲೆ ಮುಂಜಾಗ್ರತೆ ಕ್ರಮವಾಗಿ ಮೇ 13ರಂದು ಬೆಂಗಳೂರು ನಗರದಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿದ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.

ಮೇ 13ರಂದು ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ: ಶನಿವಾರ ಬೆಂಗಳೂರು ನಗರದಾದ್ಯಂತ ನಿಷೇಧಾಜ್ಞೆ ಜಾರಿ
ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ
Follow us
|

Updated on:May 11, 2023 | 7:06 PM

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Election 2023) ನಿನ್ನೆ ರಾಜ್ಯದ 224 ಕ್ಷೇತ್ರಗಳಲ್ಲಿ ಸುಸೂತ್ರವಾಗಿ ಮತದಾನವಾಗಿದೆ. ಬಹು ನಿರೀಕ್ಷಿತ ಮತ ಎಣಿಕೆ ಮತ್ತು ಫಲಿತಾಂಶ ಶನಿವಾರ ನಡೆಯಲಿದೆ. ಮತ ಎಣಿಕೆ ವೇಳೆ ಕಿಡಿಗೇಡಿಗಳಿಂದ ಪ್ರತಿಭಟನೆ ಸಾಧ್ಯತೆ ಹಿನ್ನೆಲೆ ಮುಂಜಾಗ್ರತೆ ಕ್ರಮವಾಗಿ ಮೇ 13ರಂದು ಬೆಂಗಳೂರು ನಗರದಾದ್ಯಂತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಮೇ 13ರಂದು ಬೆಳಗ್ಗೆ 6 ರಿಂದ ಮಧ್ಯರಾತ್ರಿ 12ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಐವರಿಗಿಂತ ಹೆಚ್ಚು ಜನರು ಗುಂಪು ಸೇರದಂತೆ ಸೂಚನೆ ನೀಡಿದ್ದು, ಮದುವೆ, ಶವಸಂಸ್ಕಾರ ಬಿಟ್ಟು ಉಳಿದೆಲ್ಲದಕ್ಕೂ ಪ್ರತಿಬಂಧಕಾಜ್ಞೆ ಅನ್ವಯವಾಗಲಿದೆ.

ಸ್ಫೋಟಕ ವಸ್ತುಗಳ ಸಾಗಾಟ, ಪಟಾಕಿ ಸಿಡಿಸುವುದು, ಪ್ರತಿಕೃತಿ ಪ್ರದರ್ಶನ, ದಹನ, ಬಹಿರಂಗ ಘೋಷಣೆ ಕೂಗುವುದು, ಸಂಗೀತ ನುಡಿಸುವುದು, ಭಿತ್ತಿಪತ್ರ ಪ್ರದರ್ಶನ ಕೂಡ ನಿಷೇಧಿಸಲಾಗಿದೆ.

ಇದನ್ನೂ ಓದಿ: ಬರೀ 2 ದಿನ ಮದ್ಯದಂಗಡಿ ಬಂದ್​​: ಸರ್ಕಾರಕ್ಕೆ ಲಾಸ್​ ಆಗಿದ್ದೆಷ್ಟು ಗೊತ್ತಾ?

ದಾಖಲೆ ಮತದಾನ

ಈ ಬಾರಿಯ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಶೇ. 73.19ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಆ ಮೂಲಕ ಮತದಾನದಲ್ಲಿ ಕರ್ನಾಟಕ ತನ್ನದೇ ಆದ ಹೊಸ ಐತಿಹಾಸಿಕ ದಾಖಲೆ ಸೃಷ್ಟಿಸಿದೆ. ಈ ಬಾರಿ ಮತದಾನ ಕಳೆದ ಬಾರಿಗಿಂತ 0.73 ಪ್ರತಿಶತದಷ್ಟು ಕಡಿಮೆಯಾಗಿದೆ. ಕಳೆದ 2018ರ ವಿಧಾನಸಭೆ ಚುನಾವಣೆಯಲ್ಲಿ 73.04ರಷ್ಟು ಮತದಾನವಾಗಿತ್ತು.

ಇದನ್ನೂ ಓದಿ: ರಾಜ್ಯದ ಹಲವು ಬೂತ್​ಗಳಲ್ಲಿ ರಾತ್ರಿ 10:15 ಗಂಟೆವರೆಗೂ ಮತದಾನ: ಎಡಿಜಿಪಿ ಅಲೋಕ್​ ಕುಮಾರ್ ಟ್ವೀಟ್​

ಕರ್ನಾಟದ ವಿಧಾನಸಭಾ ಚುನಾವಣೆಯಲ್ಲಿ ದಾಖಲೆ ಮತದಾನವಾಗಿದೆ. 5,30,85,566 ಪೈಕಿ 3,88,51,807 ಮತದಾರರಿಂದ ಹಕ್ಕು ಚಲಾವಣೆ ಮಾಡಲಾಗಿದೆ. ಒಟ್ಟು 1,96,58,398 ಪುರುಷ ಮತದಾರರಿಂದ ಹಕ್ಕು ಚಲಾಯಿಸಿದ್ದಾರೆ. ಒಟ್ಟು 1,91,92,372 ಮಹಿಳಾ ಮತದಾರರಿಂದ ಹಕ್ಕು ಚಲಾವಣೆ ಮಾಡಿದ್ದಾರೆ. ರಾಜ್ಯದಲ್ಲಿ ಒಟ್ಟು 1037 ಇತರೆ ಮತದಾರರಿಂದ ಹಕ್ಕು ಚಲಾಯಿಸಲಾಗಿದೆ.

ಕರ್ನಾಟಕ ಚುನಾವಣೆ 2023 ಲೈವ್​ ಅಪ್ಡೇಟ್ಸ್​ಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕ ಚುನಾವಣೆ ತಾಜಾ & ವಿಶೇಷ ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ

Published On - 7:06 pm, Thu, 11 May 23

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ