Mayakonda Election Results: ಮಾಯಕೊಂಡ ವಿಧಾನಸಭಾ ಕ್ಷೇತ್ರ ಚನಾವಣೆ 2023 ಫಲಿತಾಂಶ; ಕೇಸರಿ ಕೋಟೆಯಲ್ಲಿ ಕಾಂಗ್ರೆಸ್ ಪೈಪೋಟಿ
Mayakonda Assembly Election Result 2023 Live Counting Updates: ಮಾಯಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪ್ರಾಬಲ್ಯ ಹೆಚ್ಚಿದೆ. ಈ ಬಾರಿಯೂ ಬಿಜೆಪಿ ಗೆಲ್ಲುವ ಸಾಧ್ಯತೆ ಹೆಚ್ಚಿದೆ.
Mayakonda Assembly Election Results 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ಕೇಸರಿ ಕೋಟೆ ಮಾಯಕೊಂಡ ಕ್ಷೇತ್ರದಲ್ಲಿ ಬಿಜೆಪಿಯಿಂದ ಬಸವರಾಜ ನಾಯ್ಕ್, ಕಾಂಗ್ರೆಸ್ನಿಂದ ಕೆಎಸ್ ಬಸವರಾಜು ಹಾಗೂ ಜೆಡಿಎಸ್ನಿಂದ ಆನಂದಪ್ಪ ಅವರು ಕಣದಲ್ಲಿದ್ದಾರೆ.
1994ರಿಂದ 2008ರ ವರೆಗೆ ಬಿಜೆಪಿ ಅಭ್ಯರ್ಥಿಗಳೇ ಶಾಸಕರಾಗಿ ಆಯ್ಕೆಯಾಗಿದ್ದು, 2013ರಲ್ಲಿ ಕಾಂಗ್ರೆಸ್ ಕೈಗೆ ಕ್ಷೇತ್ರ ಸೇರಿತ್ತು. 2018ರ ಚುನಾವಣೆಯಲ್ಲಿ ಬಿಜೆಪಿ ಮತ್ತೆ ತನ್ನ ತೆಕ್ಕೆಗೆ ಹಾಕಿಕೊಂಡಿತು. ಪ್ರಸಕ್ತ ಚುನಾವಣೆಯಲ್ಲೂ ಬಿಜೆಪಿ ಗೆಲುವು ಸಾಧಿಸುವ ಸಾಧ್ಯತೆ ಹೆಚ್ಚಿದ್ದು, ಕಾಂಗ್ರೆಸ್ 2ನೇ ಸ್ಥಾನ ಹಾಗೂ ಜೆಡಿಎಸ್ ಮೂರನೇ ಸ್ಥಾನದಲ್ಲಿರುವ ಸಾಧ್ಯತೆ ಇದೆ.
ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾಗಿರುವ ಮಾಯಕೊಂಡ ವೀರಶೈವ ಲಿಂಗಾಯತ ಮತಗಳು ನಿರ್ಣಾಯಕವಾಗಿವೆ. 2018ರಲ್ಲಿ ಶಾಕಸರಾಗಿ ಆಯ್ಕೆಯಾಗಿದ್ದ ಬಿಜೆಪಿಯ ಲಿಂಗಣ್ಣ ಅವರ ಬದಲಿಗೆ 2008ರಲ್ಲಿ ಗೆದ್ದಿದ್ದ ಬಸವರಾಜ ನಾಯ್ಕ್ ಅವರನ್ನು 2023 ರ ಚುನಾವಣೆಗೆ ಮತ್ತೆ ಕಣಕ್ಕಿಳಿಸಲಾಗಿದೆ. 2018ರಲ್ಲಿ 6 ಸಾವಿರಕ್ಕೂ ಅಧಿಕ ಮತಗಳ ಅಂತದಿಂದ ಸೋತಿದ್ದ ಬಸವರಾಜು ಅವರನ್ನು ಕಾಂಗ್ರೆಸ್ ಮತ್ತೊಮ್ಮೆ ಕಣಕ್ಕಿಳಿಸಿದೆ.