Melukote Election Results: ಮೇಲುಕೋಟೆ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ದರ್ಶನ್ ಪುಟ್ಟಣ್ಣಯ್ಯ vs ಜೆಡಿಎಸ್​​

Melkote Assembly Election Result 2023 Live Counting Updates: ಮೇಲುಕೋಟೆ ವಿಧಾನಸಭಾ ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಅವರು ಸ್ಪರ್ಧಿಸಿದ್ದರೆ, ಬಿಜೆಪಿಯಿಂದ ಡಾ. ಇಂದ್ರೇಶ್ ಸ್ಪರ್ಧಿಸಿದ್ದಾರೆ. ಜೆಡಿಎಸ್‌ನಿಂದ ಹಾಲಿ ಶಾಸಕ ಸಿ.ಎಸ್. ಪುಟ್ಟರಾಜು ಕಣದಲ್ಲಿದ್ದಾರೆ. ಮತ ಎಣಿಕೆಯ ವಿವರ ಇಲ್ಲಿದೆ.

Melukote Election Results: ಮೇಲುಕೋಟೆ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ದರ್ಶನ್ ಪುಟ್ಟಣ್ಣಯ್ಯ vs ಜೆಡಿಎಸ್​​
ದರ್ಶನ ಪುಟ್ಟಣ್ಣಯ್ಯ, ಜೆಡಿಎಸ್​​
Follow us
ವಿವೇಕ ಬಿರಾದಾರ
| Updated By: Rakesh Nayak Manchi

Updated on: May 13, 2023 | 4:02 AM

Melukote Assembly Election Results 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ಮೇಲುಕೋಟೆ ವಿಧಾನಸಭಾ ಕ್ಷೇತ್ರ (Melkote Assembly constituency) ಐತಿಹಾಸಿಕ ಕ್ಷೇತ್ರವಾಗಿರುವ ಮೇಲುಕೋಟೆಯಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷ ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸದಿದ್ದರೂ, ಚಳವಳಿಗೆ ಹೆಸರಾದ ಕೆ.ಎಸ್. ಪುಟ್ಟಣ್ಣಯ್ಯ ಅವರ ಪುತ್ರ ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಅವರನ್ನು ಬೆಂಬಲಿಸಿದ್ದರೆ, ಬಿಜೆಪಿಯಿಂದ ಡಾ. ಇಂದ್ರೇಶ್ ಸ್ಪರ್ಧಿಸಿದ್ದಾರೆ. ಜೆಡಿಎಸ್‌ನಿಂದ ಹಾಲಿ ಶಾಸಕ ಸಿ.ಎಸ್. ಪುಟ್ಟರಾಜು ಮತ್ತೊಮ್ಮೆ ಅದೃಷ್ಠ ಪರೀಕ್ಷೆಗೆ ಸಿದ್ಧರಾಗಿದ್ದಾರೆ.

ಪಾಂಡವರ ನಾಡು, ಚೆಲುವನ ಬೀಡು ಎಂದು ಹೆಸರಾಗಿರುವ ಮೇಲುಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಇಲ್ಲಿ ಒಂದೂ ಉಪಚುನಾವಣೆ ನಡೆಯದಿರುವುದು ವಿಶೇಷ. 2008ರಲ್ಲಿ ಕ್ಷೇತ್ರ ಮರುವಿಂಗಡಣೆ ಆಗುವುದಕ್ಕಿಂತ ಮುಂಚೆ ಈ ಕ್ಷೇತ್ರ ಪಾಂಡವಪುರ ಕ್ಷೇತ್ರ ಎಂದು ಕರೆಯಲ್ಪಡುತ್ತಿತ್ತು. ಮೊದಲು ಕಾಂಗ್ರೆಸ್‌ ಹಿಡಿತದಲ್ಲಿ ಕ್ಷೇತ್ರ ಅನಂತರ ಜೆಡಿಎಸ್‌ ಪ್ರಾಬಲ್ಯ ಸಾಧಿಸುತ್ತಿದೆ. ಪ್ರಸ್ತುತ ಜೆಡಿಎಸ್‌ ಹಾಗೂ ರೈತಸಂಘದ್ದೆ ಪಾರುಪತ್ಯವಾಗಿದೆ. ಕಾಂಗ್ರೆಸ್‌ ಮತ್ತೆ ನೆಲೆ ಕಂಡುಕೊಳ್ಳಲು ಹೆಣಗಾಡುತ್ತಿದ್ದರೆ, ಬಿಜೆಪಿ ಖಾತೆ ತೆರೆಯಲು ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. 2018ರ ವಿಧಾನಸಭೆ ಚುನಾವಣೆಯಲ್ಲಿ ದರ್ಶನ್ ವಿರುದ್ಧ ಕಾಂಗ್ರೆಸ್ ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸಿರಲಿಲ್ಲ. ದರ್ಶನ್ ಆಗ ಸ್ವರಾಜ್ ಇಂಡಿಯಾ ಟಿಕೆಟ್‌ನಲ್ಲಿ ಸ್ಪರ್ಧಿಸಿ ಜೆಡಿಎಸ್‌ನ ಸಿಎಸ್ ಪುಟ್ಟರಾಜು ವಿರುದ್ಧ 23,000 ಮತಗಳ ಅಲ್ಪ ಅಂತರದಿಂದ ಸೋತಿದ್ದರು.

ಮೇಲುಕೋಟೆ ಕ್ಷೇತ್ರದ ಒಟ್ಟು ಮತದಾರರ ಸಂಖ್ಯೆ ಅಂದಾಜು 2 ಲಕ್ಷದ 10 ಸಾವಿರದಷ್ಟಿದೆ. ಆದರೆ, ಅವರಲ್ಲಿ 90 ಸಾವಿರದಷ್ಟು ಮತದಾರರು ಒಕ್ಕಲಿಗ ಸಮುದಾಯಕ್ಕೆ ಸೇರಿದವರು. 30 ಸಾವಿರದಷ್ಟು ಪರಿಶಿಷ್ಟರ ಮತಗಳಿವೆ. ಲಿಂಗಾಯತರು, 21 ಸಾವಿರ, ಕುರುಬರು 13 ಸಾವಿರ, ಮುಸ್ಲಿಮರು 8 ಸಾವಿರ, ಗಾಣಿಗರು 7 ಸಾವಿರ, ಬೆಸ್ತರು 6 ಸಾವಿರ ಹಾಗೂ ಇತರ ಸಮುದಾಯಗಳಿಗೆ ಸೇರಿದವರು 35 ಸಾವಿರದಷ್ಟಿದ್ದಾರೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?