ವರುಣಾ ರಣತಂತ್ರ: ಬಿಎಸ್​ ಯಡಿಯೂರಪ್ಪ ಆಪ್ತ ಕಾಪು ಸಿದ್ದಲಿಂಗಸ್ವಾಮಿಯನ್ನ ಭೇಟಿಯಾದ ವಿ ಸೋಮಣ್ಣ

ಇಂದು (ಏ.14) ವಿ ಸೋಮಣ್ಣ ವರುಣಾ ಕ್ಷೇತ್ರಕ್ಕೆ ಭೇಟಿ ನೀಡಿದ್ದು, ಗೆಲ್ಲಲು ಹಲವು ತಂತ್ರಗಳನ್ನು ಹೆಣೆಯುತ್ತಿದ್ದಾರೆ. ಈ ವೇಳೆ ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂಪರಪ್ಪ ಅವರ ಆಪ್ತ ಕಾ.ಪು ಸಿದ್ದಲಿಂಗಸ್ವಾಮಿಯವರನ್ನು ಭೇಟಿಯಾಗಿ ಅರ್ಧಗಂಟೆಗು ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ.

ವರುಣಾ ರಣತಂತ್ರ: ಬಿಎಸ್​ ಯಡಿಯೂರಪ್ಪ ಆಪ್ತ ಕಾಪು ಸಿದ್ದಲಿಂಗಸ್ವಾಮಿಯನ್ನ ಭೇಟಿಯಾದ ವಿ ಸೋಮಣ್ಣ
ಕಾಪು ಸಿದ್ದಲಿಂಗಸ್ವಾಮಿ (ಎಡಚಿತ್ರ) ವಿ ಸೋಮಣ್ಣ (ಬಲಚಿತ್ರ)
Follow us
ವಿವೇಕ ಬಿರಾದಾರ
|

Updated on:Apr 14, 2023 | 3:11 PM

ಮೈಸೂರು: ರಾಜ್ಯ ಬಿಜೆಪಿ (BJP) ಪಡಸಾಲೆಯಲ್ಲಿ ಮಹತ್ತರವಾದ ಬೆಳವಣಿಗೆಯಾಗುತ್ತಿದೆ. ಈ ಬಾರಿ ಹೈಕಮಾಂಡ್​ ಸಾಕಷ್ಟು ಬದಲಾವಣೆಗಳನ್ನು ಮಾಡಿದ್ದು, ರಾಜ್ಯದ ಚುಕ್ಕಾಣಿಯನ್ನು ಹಿಡಿಯಲು ಹಲವು ಹೊಸ ಪ್ರಯೋಗಗಳನ್ನು ಮಾಡಿದೆ. ಸಚಿವ ವಿ.ಸೋಮಣ್ಣ (V Somanna) ಅವರಿಗೆ ತವರು ಕ್ಷೇತ್ರ ಗೋವಿಂದರಾಜ ನಗರ (Govindraj Nagar) ಕ್ಷೇತ್ರದ ಟಿಕೆಟ್​ ಕೈ ತಪ್ಪಿದೆ. ಆದರೆ ಹೈ ವೋಲ್ಟೇಜ್​ ಕ್ಷೇತ್ರ ವರುಣಾ (Varuna) ಮತ್ತು ಚಾಮರಾಜನಗರ (Chamrajnagar) ಕ್ಷೇತ್ರದ ಟಿಕೆಟ್​ ಲಭಿಸಿದೆ. ಈ ಹಿನ್ನೆಲೆ ಇಂದು (ಏ.14) ವಿ ಸೋಮಣ್ಣ ವರುಣಾ ಅವರು ಕ್ಷೇತ್ರಕ್ಕೆ ಭೇಟಿ ನೀಡಿದ್ದು, ಗೆಲ್ಲಲು ಹಲವು ತಂತ್ರಗಳನ್ನು ಹೆಣೆಯುತ್ತಿದ್ದಾರೆ. ಈ ವೇಳೆ ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂಪರಪ್ಪ (BS Yediyurappa) ಅವರ ಆಪ್ತ ಕಾ.ಪು ಸಿದ್ದಲಿಂಗಸ್ವಾಮಿಯವರನ್ನು (KaPu Siddalingaswamy) ಭೇಟಿಯಾಗಿ ಅರ್ಧಗಂಟೆಗು ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ.

ಭೇಟಿ ಬಳಿಕ ಮಾಧ್ಯಮ ಪ್ರತಿನಿಧಿಗಳನ್ನು ಮಾತನಾಡಿದ ವಿ ಸೋಮಣ್ಣ ಅವರು ಕಾಪು ಸಿದ್ದಲಿಂಗಸ್ವಾಮಿ ನನ್ನ ಸಹೋದರ ಇದ್ದ ಹಾಗೆ. ಯಾವುದೊ ಜನ್ಮದಲ್ಲಿ ಅಣ್ಣನ್ನಾಗಿಯೋ, ತಮ್ಮನಾಗಿಯೂ ಹುಟ್ಟಿದ್ದೆವು ಅನಿಸುತ್ತೆ. ಸಿದ್ದಲಿಂಗಸ್ವಾಮಿಯವರಿಗೆ ಕೆಲವು ಜವಾಬ್ದಾರಿ ನೀಡಿದ್ದೇನೆ. ಇಂದಿನಿಂದ ವರುಣದಲ್ಲಿ ಪ್ರಚಾರ ಆರಂಭಿಸಿದ್ದೇವೆ. ಒಂದು ವಾರದ ಬಳಿಕ ಕ್ಷೇತ್ರದ ವಾತಾವರಣ ತಿಳಿಯುತ್ತದೆ. ವರುಣಾವನ್ನು ಮತ್ತೊಂದು ಗೋವಿಂದರಾಜ ನಗರ ಮಾಡುವ ಗುರಿ ಹೊಂದಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: ಇಂದು ಎಂಎಲ್​ಸಿ ಸ್ಥಾನಕ್ಕೆ ಲಕ್ಷ್ಮಣ ಸವದಿ ರಾಜಿನಾಮೆ, ಕಾಂಗ್ರೆಸ್​ ಸೇರ್ಪಡೆ? ಬೆಳಗಾವಿ ರಾಜಕಾರಣದಲ್ಲಿ ಹೊಸ ಅಲೆ

ನಿನ್ನ ನಂಬಿದ್ದೇನೆ, ದಯಮಾಡಿ ಕೈಬಿಡಬೇಡ. ಎಂದು ಕಾ.ಪು ಸಿದ್ದಲಿಂಗಸ್ವಾಮಿಯವರಿಗೆ ಕೈ ಮುಗಿದು ಮನವಿ ಮಾಡಿದ್ದಾರೆ. ಈ ವೇಳೆ ಅಭಿಮಾನಿಗಳು ಮುಂದಿನ ಮುಖ್ಯಮಂತ್ರಿ ವಿ. ಸೋಮಣ್ಣ ಎಂದು ಘೋಷಣೆ‌ ಕೂಗಿದ್ದಾರೆ. ದಂಡಿಕೆರೆಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಬಳಿಕ ಪ್ರಚಾರ ಕಾರ್ಯ ಆಂಭಿಸಿದ್ದು, ವರುಣಾ ಕ್ಷೇತ್ರದ ಹೊಸಕೋಟೆ, ಹದಿನಾರು, ಹದಿನಾರು ಮೊಳೆ, ಸುತ್ತೂರು, ಬಿಳಿಗಲಿ ಗ್ರಾಮಗಳಲ್ಲಿ ಪ್ರಚಾರ ಮಾಡಲಿದ್ದಾರೆ. ವಿ. ಸೋಮಣ್ಣ ಏಪ್ರಿಲ್ 17ರಂದು ನಾಮಪತ್ರ ಸಲ್ಲಿಸಲಿದ್ದಾರೆ.

ಯಾರು ಈ ಕಾ.ಪು ಸಿದ್ದಲಿಂಗಸ್ವಾಮಿ

ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಆಪ್ತ ಬಿಜೆಪಿ ಮುಖಂಡ ಕಾ.ಪು ಸಿದ್ದಲಿಂಗಸ್ವಾಮಿ ಮೈಸೂರು ಪ್ರಾಂತ್ಯದ ವೀರಶೈವ-ಲಿಂಗಾಯತ ಸಮುದಾಯದ ಪ್ರಬಲ ನಾಯಕರಾಗಿದ್ದಾರೆ. 2013 ರಲ್ಲಿ ಬಿಎಸ್​ ಯಡಿಯೂರಪ್ಪ ಅವರೊಂದಿಗೆ ಬಿಜೆಪಿಯಿಂದ ಹೊರನಡೆದು ಕೆಜೆಪಿ ಸೇರಿ, ವರುಣಾ ವಿಧಾನಸಭಾ ಕ್ಷೇತ್ರದಿಂದ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಿ ಪರಾಭವ ಹೊಂದಿದರು. ಯಡಿಯೂರಪ್ಪ ಅವರ ಹಿಂದೆ ಕೆಜೆಪಿ ಸೇರಿದ್ದ ಸಿದ್ದಲಿಂಗ ಸ್ವಾಮಿ, ಮತ್ತೆ ಯಡಿಯೂರಪ್ಪ ಅವರ ಜೊತೆಗೆನೇ ಮಾತೃಪಕ್ಷಕ್ಕೆ ಮರಳಿದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:34 am, Fri, 14 April 23

ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ