AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯಿಂದ ನನಗೆ ಆಫರ್​ ಬಂದಿತ್ತು ಎನ್ನುವ ರಮ್ಯಾ ಹೇಳಿಕೆಗೆ ಸಚಿವ ಆರ್​ ಅಶೋಕ್​ ಹೇಳಿದ್ದಿಷ್ಟು

ಬಿಜೆಪಿ ನನಗೆ ಆಹ್ವಾನ ಕೊಟ್ಟಿತ್ತು. ಅಲ್ಲದೇ ಪಕ್ಷಕ್ಕೆ ಬಂದರೆ ಮಂತ್ರಿ ಸ್ಥಾನದ ಆಫರ್​ ನೀಡಿತ್ತು ಎನ್ನುವ ರಮ್ಯಾ ಹೇಳಿಕೆಗೆ ಕಂದಾಯ ಸಚಿವ ಆರ್​. ಅಶೋಕ್​ ಪ್ರತಿಕ್ರಿಯಿಸಿ ಇದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ.

ಬಿಜೆಪಿಯಿಂದ ನನಗೆ ಆಫರ್​ ಬಂದಿತ್ತು ಎನ್ನುವ ರಮ್ಯಾ ಹೇಳಿಕೆಗೆ ಸಚಿವ ಆರ್​ ಅಶೋಕ್​ ಹೇಳಿದ್ದಿಷ್ಟು
ರಮ್ಯಾ, ಆರ್. ಅಶೋಕ್
ರಮೇಶ್ ಬಿ. ಜವಳಗೇರಾ
|

Updated on: Apr 23, 2023 | 10:54 AM

Share

ಬೆಂಗಳೂರು (ಏ.23): ಒಂದಷ್ಟು ಕಾಲದಿಂದ ಸಿನಿಮಾ ಹಾಗೂ ರಾಜಕೀಯದಿಂದಲೈ ಸೈಲೆಂಟಾಗಿದ್ದ ಸ್ಯಾಂಡಲ್‌ವುಡ್‌ನ ಮೋಹಕ ತಾರೆ ನಟಿ ರಮ್ಯಾ(v) ಅವರು ಮತ್ತೆ ರಾಜಕೀಯದತ್ತ ತಮ್ಮ ದೃಷ್ಟಿ ಹರಿಸಿದ್ದಾರೆ. ಸದ್ಯಕ್ಕೆ ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elections 2023) ಸಾಮಾಜಿಕ ಜಾಲತಾಣಗಳ ಮೂಲಕವೇ ಕೆಲ ರಾಜಕೀಯ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಅದರಂತೆ ರಮ್ಯಾ ಅವರನ್ನು ಬಿಜೆಪಿಗೆ ಬರುವಂತೆ ಉನ್ನತ ನಾಯಕರು ಆಹ್ವಾನಿಸಿದ್ದರು ಸ್ವತಃ ರಮ್ಯಾ ಅವರೇ ಈ ವಿಚಾರವನ್ನು ಬಹಿರಂಗಪಡಿಸಿದ್ದು, ಬಿಜೆಪಿಗೆ ಬನ್ನಿ ನಾಳೆಯೇ ನಿಮ್ಮನ್ನು ಮಂತ್ರಿ ಮಾಡುತ್ತೇವೆ ಎಂದು ಬಿಜೆಪಿಯ ಉನ್ನತ ನಾಯಕರೊಬ್ಬರು ಆಫರ್‌ ಮಾಡಿದ್ದರು ಎಂದು ಹೇಳಿಕೊಂಡಿದ್ದರು. ಇನ್ನು ಇದಕ್ಕೆ ಸಚಿವ ಆರ್. ಅಶೋಕ್ ಪ್ರತಿಕ್ರಿಯಿಸಿದ್ದು, ನಟಿ ರಮ್ಯಾರನ್ನು ಬಿಜೆಪಿಗೆ ಆಹ್ವಾನಿಸುವಷ್ಟು ನಮ್ಮ ಪಾರ್ಟಿ ಬರಗಟ್ಟಿಲ್ಲ‌. ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಡಿಸಿಎಂ ಲಕ್ಷ್ಮಣ ಸವದಿಗೆ ಟಿಕೆಟ್ ಕೊಟ್ಟಿಲ್ಲ. ಇನ್ನು ರಮ್ಯಾಗೆ ಯಾಕೆ ಕರೆದು ಸಚಿವ ಸ್ಥಾನ ಕೊಡೋಣ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಸಿನಿಮಾ ನಟರ ಚುನಾವಣಾ ಪ್ರಚಾರದಿಂದ ಉಪಯೋಗವೇನಿಲ್ಲ: ರಮ್ಯಾ

ಇಂಗ್ಲಿಷ್‌ ಸುದ್ದಿವಾಹಿನಿಯ ಕಾರ್ಯಕ್ರಮವೊಂದರಲ್ಲಿ ಶನಿವಾರ ಮಾತನಾಡಿದ್ದ ರಮ್ಯಾ, ನಾನು ಕೆಲವು ಬಾರಿ ಕಾಂಗ್ರೆಸ್‌ ವಿರುದ್ಧ ಮಾತನಾಡಿದ್ದಾಗ ಬಿಜೆಪಿಯಿಂದ ಆಫರ್‌ ಬಂದಿತ್ತು. ಆದರೆ, ನಾನು ಯಾವುದೇ ಭಿನ್ನಮತ ಹೊಂದಿಲ್ಲದ ಕಾರಣ ಬಿಜೆಪಿಗೆ ಹೋಗಲಿಲ್ಲ. ಹಾಗಂತ ನನಗೆ ಬಿಜೆಪಿ ಮೇಲೆ ದ್ವೇಷ ಇಲ್ಲ. ಆದರೆ, ಅವರ ಕೆಲವೊಂದು ಸಿದ್ಧಾಂತಗಳಿಗೆ ನನ್ನ ವಿರೋಧವಿದೆ ಎಂದು ಹೇಳಿಕೊಂಡಿದ್ದರು.

ಅದಲ್ಲದೇ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರನ್ನು ಆಕಸ್ಮಿಕವಾಗಿ ಸಲೂನ್‌ ಒಂದರಲ್ಲಿ ಭೇಟಿಯಾಗಿದ್ದೆ. ಆಗ ಅವರು ರಮ್ಯಾ ಅವರೇ ಹೇಗಿದ್ದೀರಾ? ಬಹಳ ವರ್ಷ ಆಯ್ತು ನೋಡಿ. ನೀವು ಏಕೆ ರಾಜಕೀಯವನ್ನು ಬಿಟ್ರಿ? ಮತ್ತೆ ರಾಜಕೀಯಕ್ಕೆ ಬನ್ನಿ, ನಿಮಗೆ ಸಾಮರ್ಥ್ಯವಿದೆ. ರಾಜಕೀಯ ಕ್ಷೇತ್ರವನ್ನು ಬಿಡಬೇಡಿ ಎಂದು ಸಲಹೆ ನೀಡಿದ್ದರು ಎಂದು ರಮ್ಯಾ ಹೇಳಿದ್ದರು.

ಕಾಂಗ್ರೆಸ್‌ ಈ ಬಾರಿ 6 ಕ್ಷೇತ್ರಗಳ ಟಿಕೆಟ್‌ ಅನ್ನು ನನಗೆ ಆಫರ್‌ ನೀಡಿತ್ತು ಎಂಬ ವಿಚಾರವನ್ನು ರಮ್ಯಾ ಅವರು ಬಹಿರಂಗಪಡಿಸಿದ್ದು, ಈ 6 ಕ್ಷೇತ್ರಗಳಲ್ಲಿ ಯಾವುದೇ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಬಹುದು ಎಂದು ಹೇಳಿದ್ದರು. ಆದರೆ, ನಾನು ಇನ್ನೂ ತಯಾರಾಗಿಲ್ಲ. ಚುನಾವಣೆಗೆ ನಿಲ್ಲಲು ಗ್ರೌಂಡ್‌ನಲ್ಲಿ ಕೆಲಸ ಮಾಡಬೇಕು. ಅದಕ್ಕೆ ಸಂಪೂರ್ಣ ಸಮಯವನ್ನು ವಿನಿಯೋಗಿಸಬೇಕು. ಅದು ಈಗ ನನಗೆ ಸಾಧ್ಯವಿಲ್ಲ. ನಾನು ಸ್ಪರ್ಧಿಸದೇ ಪಕ್ಷಕ್ಕೆ ಬೆಂಬಲ ನೀಡುತ್ತೇನೆ. ಪಕ್ಷಕ್ಕಾಗಿ ದುಡಿಯುತ್ತೇನೆ ಎಂದು ಹೇಳಿದ್ದೇನೆ ಎಂದು ರಮ್ಯಾ ತಿಳಿಸಿದ್ದರು.

2013ರ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಸೋಲು ಕಂಡ ಬಳಿಕ ನಟಿ ರಮ್ಯಾ ರಾಜ್ಯ ರಾಜಕಾರಣದಿಂದ ಅಂತರ ಕಾಯ್ದುಕೊಂಡಿದ್ದಾರೆ. ರಾಷ್ಟ್ರೀಯ ಕಾಂಗ್ರೆಸ್‌ನ ಸೋಶಿಯಲ್ ಮೀಡಿಯಾ ತಂಡದ ಸಾರಥ್ಯ ವಹಿಸಿದ್ದರು ರಾಹುಲ್ ಗಾಂಧಿ ಅವರ ಸಾಮಾಜಿಕ ಖಾತೆಗಳನ್ನು ಹ್ಯಾಂಡಲ್ ಮಾಡುತ್ತಿದ್ದರು. ಆದರೆ ನಿಧಾನವಾಗಿ ಅಲ್ಲಿಂದಲೂ ದೂರವಾಗಿದ್ದರು. ಆದರೆ ಇತ್ತೀಚೆಗೆ ರಮ್ಯಾ ಅವರು ಕರ್ನಾಟಕ ವಿಧಾನಸಭೆ ಚುನಾವಣೆ ಸಾಮಾಜಿಕ ಜಾಲತಾಣಗಳ ಮೂಲಕವೇ ಕೆಲ ರಾಜಕೀಯ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ.  ಇನ್ನು ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್​ ಸ್ಟಾರ್ ಪ್ರಚಾರರಕ್ಕೆ ರಮ್ಯಾ ಅವರ ಹೆಸರು ಇದೆ. ಅವರು ಎಲ್ಲೆಲ್ಲಿ ಪ್ರಚಾರ ಮಾಡಲಿದ್ದಾರೆ ಎನ್ನುವ ಬಗ್ಗೆ ಇದುವರೆಗೂ ಯಾವುದೇ ಅಧಿಕೃತ ಹೇಳಿಕೆ ಕೊಟ್ಟಿಲ್ಲ.

ಕರ್ನಾಟಕ ವಿಧಾನಸಭೆ ಚುನಾವಣೆಯ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು