ಮೀಸಲು ಕ್ಷೇತ್ರ ಮೂಡಿಗೆರೆಯಲ್ಲಿ ನಯನಾ ಮೋಟಮ್ಮ, ಭರ್ಜರಿ ಗೆಲುವು ಸಾಧಿಸಿದ್ದಾರೆ. ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಮೂಡಿಗೆರೆ ಕ್ಷೇತ್ರದಲ್ಲಿ ಈ ಬಾರಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ಬಿಜೆಪಿ ಹಾಗೂ ಕಾಂಗ್ರೆಸ್ ಹೊಸ ಮುಖಗಳಿಗೆ ಮಣೆ ಹಾಕಿದ್ದರೆ ಬಿಜೆಪಿ ಹಾಲಿ ಶಾಸಕ ಎಂಪಿ ಕುಮಾರಸ್ವಾಮಿ ಜೆಡಿಎಸ್ನಿಂದ ಸ್ಪರ್ಧಿಸಿದ್ದಾರೆ. ಬಿಜೆಪಿಯು ದೀಪಕ್ ದೊಡ್ಡಯ್ಯ ಅವರಿಗೆ ಟಿಕೆಟ್ ನೀಡಿದೆ. ಈ ಕ್ಷೇತ್ರವನ್ನು ಹಿಂದೆ ಪ್ರತಿನಿಧಿಸಿದ್ದ ಮಾಜಿ ಸಚಿವೆ ಮೋಟಮ್ಮ ಅವರ ಪುತ್ರಿ ನಯನಾ ಮೋಟಮ್ಮ ಅವರಿಗೆ ಕಾಂಗ್ರೆಸ್ ಮಣೆ ಹಾಕಿದೆ.
ಈ ಕ್ಷೇತ್ರದಲ್ಲಿ ಕಾಡು ಪ್ರಾಣಿಗಳು ಹಾಗೂ ಮನುಷ್ಯರ ನಡುವಿನ ಸಂಘರ್ಷವೇ ಪ್ರಮುಖ ವಿಷಯವಾಗಿದ್ದು, ಹಾಲಿ ಶಾಸಕರಾಗಿದ್ದ ಕುಮಾರಸ್ವಾಮಿ ವಿರುದ್ಧ ಸಾಕಷ್ಟು ಆಕ್ರೋಶಗಳು ಕೇಳಿಬಂದಿದ್ದವು. ಇದೇ ಕಾರಣಕ್ಕೆ ಬಿಜೆಪಿಯು ಅವರಿಗೆ ಟಿಕೆಟ್ ನಿರಾಕರಿಸಿತ್ತು. ಕೊನೆಯ ಕ್ಷಣದಲ್ಲಿ ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಬದಲಿಸಿ ಕುಮಾರಸ್ವಾಮಿಗೆ ಟಿಕೆಟ್ ನೀಡಿದ್ದು, ವಿಶೇಷ.
2004, 2008 ಹಾಗೂ 2018ರ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಕುಮಾರಸ್ವಾಮಿ ಗೆಲುವು ಸಾಧಿಸಿದ್ದರು. 2013 ಹಾಗೂ 2019ರಲ್ಲಿ ಸೋಲು ಅನುಭವಿಸಿದ್ದರು. ಜನತಾದಳದಿಂದ ವಿಬಿ ನಿಂಗಯ್ಯ ಅವರು ಈ ಕ್ಷೇತ್ರದಲ್ಲಿ ಮೂರು ಬಾರಿ ಗೆಲುವು ಸಾಧಿಸಿದ್ದರು. ಕೆಎಚ್ ರಂಗನಾಥ್ ಪ್ರತಿನಿಧಿಸಿದ್ದ ಈ ಕ್ಷೇತ್ರದಲ್ಲಿ ಮೋಟಮ್ಮ ಮೂರು ಬಾರಿ ಗೆಲುವು ಸಾಧಿಸಿದ್ದರೆ, ಐದು ಬಾರಿ ಸೋತಿದ್ದಾರೆ.
ಚುನಾವಣೆಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 1:23 pm, Sat, 13 May 23