AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿಯಲ್ಲಿ ಬಿಜೆಪಿ ಕಾರ್ಯಕರ್ತನ ಹತ್ಯೆ ಖಂಡಿಸಿ ಪ್ರತಿಭಟನೆ

ಯಾದಗಿರಿಯಲ್ಲಿ ಬಿಜೆಪಿ ಕಾರ್ಯಕರ್ತನ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಕೂಡಲೇ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸುತ್ತಿದ್ದಾರೆ.

ಯಾದಗಿರಿಯಲ್ಲಿ ಬಿಜೆಪಿ ಕಾರ್ಯಕರ್ತನ ಹತ್ಯೆ ಖಂಡಿಸಿ ಪ್ರತಿಭಟನೆ
ಬಿಜೆಪಿ ಕಾರ್ಯಕರ್ತರ ಹತ್ಯೆ ಖಂಡಿಸಿ ಹಿಂದೂ ಪರ ಸಂಘಟನೆಗಳು ಹಾಗೂ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
Rakesh Nayak Manchi
|

Updated on:May 16, 2023 | 6:19 PM

Share

ಯಾದಗಿರಿ: ಬಿಜೆಪಿ ಕಾರ್ಯಕರ್ತನ ಹತ್ಯೆ (BJP Worker’s Murder) ಖಂಡಿಸಿ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ (BJP Protest) ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಧರಣಿ ನಡೆಸುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತ ಶ್ರೀನಿವಾಸ್ ಎಂಬವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು. ಈ ಸಂಬಂಧ ಮೊಹಮ್ಮದ್ ಅನಾಸ್, ಅಬ್ದುಲ್ ಸತ್ತಾರ್, ಮೊಹಮ್ಮದ್ ಸೇರಿ ಐವರ ವಿರುದ್ಧ ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಹೊಸಕೋಟೆಯಲ್ಲಿ ಬಿಜೆಪಿ ಕಾರ್ಯಕರ್ತ ಕೃಷ್ಣಪ್ಪ ಎಂಬವರನ್ನು ಹತ್ಯೆ ಮಾಡಲಾಗಿದೆ. ಇದನ್ನೂ ಬಿಜೆಪಿ ಖಂಡಿಸಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರ ಹತ್ಯೆ ಬಗ್ಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ​​ಕಾಂಗ್ರೆಸ್​​ನವರು ಗೂಂಡಾ ಸಾಮ್ರಾಜ್ಯ ಮಾಡುತ್ತಿದ್ದಾರೆ. ಭಾರತೀಯ ಜನತಾ ಪಾರ್ಟಿ ಯಾವುದೇ ಕಾರಣಕ್ಕೂ ಸಹಿಸಲ್ಲ. ಕಾಂಗ್ರೆಸ್ ನಾಯಕರು ಅಧಿಕಾರಕ್ಕಾಗಿ ಕಿತ್ತಾಟ ಮಾಡುತ್ತಿದ್ದಾರೆ. ಕಾಂಗ್ರೆಸ್​ನವರ ಕಿತ್ತಾಟ ಸಮಾಧಾನ ಮಾಡೋದೆ ದೊಡ್ಡ ಕೆಲಸ. ರಾಜ್ಯದಲ್ಲಿ ಅರಾಜಕತೆ ಈಗಾಗಲೇ ಪ್ರಾರಂಭವಾಗಿದೆ. ಕಾಂಗ್ರೆಸ್​ಗೆ ಜನರ ಹಿತ ಬೇಕಾಗಿಲ್ಲ, ಅಧಿಕಾರ ಮಾತ್ರ ಬೇಕು ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಭಟ್ಕಳದಲ್ಲಿ ಕಾಂಗ್ರೆಸ್ ಗೆದ್ದ ಬೆನ್ನಲ್ಲೇ ಬಿಜೆಪಿ ಮುಖಂಡನ ಮನೆಗೆ ನುಗ್ಗಿ ಹಲ್ಲೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು

ಅಂಬೇಡ್ಕರ್ ಅವರಂತಹ ಶ್ರೇಷ್ಠ ವ್ಯಕ್ತಿಯ ವಿಗ್ರಹಕ್ಕೆ ಬೆಂಕಿ ಹಚ್ಚಿದ್ದಾರೆ. ಕಾಂಗ್ರೆಸ್​ನ ಮಾನಸಿಕತೆ ಇದರಲ್ಲಿ ಸ್ಪಷ್ಟವಾಗಿ ತಿಳಿಯುತ್ತದೆ ಎಂದು ಹೇಳಿದ ಕಟೀಲ್, ದಲಿತ ವಿರೋಧಿ ಕಾಂಗ್ರೆಸ್ ದಲಿತರನ್ನ ದಮನ ಮಾಡುತ್ತಿದೆ. ಕಾಂಗ್ರೆಸ್ ಅಂಬೇಡ್ಕರ್ ವಿರೋಧಿಯಾಗಿದೆ. ಕೂಡಲೇ ಕಾಂಗ್ರೆಸ್ ದೇಶದ ಕ್ಷಮೆ ಕೇಳಬೇಕು. ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಸ್ಥಳಕ್ಕೆ ಬಂದು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಪಕ್ಷಕ್ಕೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಸಿಗುತ್ತಿದ್ದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಹಲ್ಲೆ, ಕೊಲೆ ನಡೆಯಲು ಆರಂಭವಾಗಿದೆ. ಬಿಜೆಪಿ ಮುಖಂಡನ ಮನೆಗೆ ನುಗ್ಗಿದ ಸುಮಾರು 15 ಮಂದಿ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ ಭಟ್ಕಳದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಭಟ್ಕಳದಲ್ಲಿ ಮಾಂಕಾಳು ವೈದ್ಯ ಅವರು ಬಿಜೆಪಿಯ ಸುನೀಲ್ ನಾಯ್ಕ್ ವಿರುದ್ಧ ಗೆದ್ದಿದ್ದರು. ಈ ವಿಚಾರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪದೇ ಪದೇ ರಾಮಚಂದ್ರ ಅವರ ಮನೆಯಲ್ಲಿದ್ದ ಸಂಬಂಧಿಕ ಯುವಕರಿಗೆ ಕರೆ ಮಾಡಿ ಕಿರಿಕಿರಿ ಮಾಡುತ್ತಿದ್ದರು. ಈ ವೇಳೆ ಯುವಕರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಫೋನ್‌ನಲ್ಲಿ ಬೈದಾಡಿಕೊಂಡಿದ್ದರು. ಬಳಿಕ ಕೈ ಕಾರ್ಯಕರ್ತರು ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:49 pm, Tue, 16 May 23