AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಿರುದ್ಧ ದೂರು ದಾಖಲು

ಕಾಂಗ್ರೆಸ್​ ನಾಯಕರು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ದೂರು ನೀಡಿದ ಬೆನ್ನಲ್ಲೇ ಇದೀಗ ಬಿಜೆಪಿ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಿರುದ್ಧ ದೂರು ದಾಖಲಿಸಿದೆ.

ಮೈಸೂರಿನಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಿರುದ್ಧ ದೂರು ದಾಖಲು
ರಮೇಶ್ ಬಿ. ಜವಳಗೇರಾ
|

Updated on: Apr 28, 2023 | 7:28 AM

Share

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ(Karnataka Assembly Polls 2023 )ಪ್ರಚಾರ ಬಿರುಸುಪಡೆದುಕೊಂಡಿದ್ದು, ಮಾತಿನ ಭರಾಟೆಯಲ್ಲಿ ನಾಯಕರು ಏನೇನೋ ಹೇಳಿಕೆಗಳನ್ನು ನೀಡಿ ವಿವಾದಾತ್ಮಕ ಸೃಷ್ಟಿಸಿಕೊಳ್ಳುತ್ತಿದ್ದಾರೆ. ಹಾಗೇ ಆರೋಪ-ಪತ್ಯಾರೋಪ ಮಧ್ಯೆ ದೂರು ಪ್ರತಿದೂರುಗಳು ಸಹ ದಾಖಲಾಗುತ್ತಿವೆ. ಚುನಾವಣಾ ಸಮಾವೇಶದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೋಮು ಗಲಭೆಗೆ ಪ್ರಚೋದನೆ ಆರೋಪಿಸಿ ಕಾಂಗ್ರೆಸ್ ದೂರು ನೀಡಿತ್ತು. ಇದೀಗ ಬಿಜೆಪಿ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ(priyanka gandhi) ವಿರುದ್ಧ ದೂರು ದಾಖಲಿಸಿದೆ. ಲಿಂಗಾಯತರನ್ನು ಬಿಜೆಪಿ ಪಕ್ಷ ಅವಮಾನಿಸಿದೆ ಎಂಬ ಹೇಳಿಕೆ ಆರೋಪಿಸಿ ಮೈಸೂರು ಗ್ರಾಮಾಂತರ ಕಾನೂನು ಘಟಕ ಪ್ರಿಯಾಂಕಾ ಗಾಂಧಿ ವಿರುದ್ಧ ಮೈಸೂರು ಚುನಾವಣಾಧಿಕಾರಿಗೆ ದೂರು ನೀಡಿದೆ.

ಇದನ್ನೂ ಓದಿ: ಅಮಿತ್ ಶಾ, ವಿ ಸೋಮಣ್ಣ ವಿರುದ್ಧ ಕಾಂಗ್ರೆಸ್ ನಿಯೋಗದಿಂದ ದೂರು ದಾಖಲು

ಮೈಸೂರಿನ ಕೆ.ಆರ್.ನಗರ ಕ್ಷೇತ್ರದ ಪ್ರಚಾರದ ವೇಳೆ ಹೇಳಿಕೆ ಪ್ರಿಯಾಂಕಾ ಗಾಂಧಿ ಅವರು ಜಾತಿ, ಧರ್ಮದ ವಿಚಾರ ಬಳಸಿ ಪ್ರಚಾರ ಮಾಡಿದ್ದಾರೆ. ಈ ಮೂಲಕ ಚುನಾವಣಾ ಸಮಯದಲ್ಲಿ ಇದು ನಿಯಮ ಉಲ್ಲಂಘನೆ ಆಗುತ್ತೆ. ಹಾಗೇ ಇಂತಹ ಹೇಳಿಕೆಗಳು ಚುನಾವಣಾ ಸಮಯದಲ್ಲಿ ಪಕ್ಷದ ಮತ್ತು ಅಭ್ಯರ್ಥಿಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಹೀಗಾಗಿ ಪ್ರಿಯಾಂಕಾ ಗಾಂಧಿ ವಿರುದ್ಧ ಕ್ರಮಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಿದೆ.

ಇನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುತ್ತಿದ್ದು, ದ್ವೇಷ ಹರಡಲು ಪ್ರಯತ್ನ ನಡೆಸುತ್ತಿದ್ದಾರೆಂದು ಆರೋಪಿಸಿ ಕಾಂಗ್ರೆಸ್ ನಾಯಕರು ಬೆಂಗಳೂರಿನ ಹೈಗ್ರೌಂಡ್ಸ್​ ಪೊಲೀಸ್​ ಠಾಣೆಯಲ್ಲಿ ಗುರುವಾರ ದೂರು ನೀಡಿದ್ದರು. ಕಾಂಗ್ರೆಸ್ ಮುಖಂಡರಾದ ರಣದೀಪ್ ಸಿಂಗ್ ಸುರ್ಜೆವಾಲಾ, ಡಾ ಪರಮೇಶ್ವರ್ ಮತ್ತು ಡಿಕೆ ಶಿವಕುಮಾರ್ ಅವರು, ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ನಾಯಕ ಅಮಿತ್ ಶಾ ಮತ್ತು ಬಿಜೆಪಿ ರ್ಯಾಲಿ ಆಯೋಜಕರ ವಿರುದ್ಧ ದೂರು ದಾಖಲಿಸಿದ್ದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ