Nagamangala Election Results: ನಾಗಮಂಗಲ ವಿಧಾನಸಭಾ ಕ್ಷೇತ್ರ ಎಲೆಕ್ಷನ್ 2023 ರಿಸಲ್ಟ್: ಕ್ಷೇತ್ರದಲ್ಲಿ ತ್ರೀಕೋನ ಪೈಪೋಟಿ
Nagamangala Assembly Election Result 2023 Live Counting Updates: ನಾಗಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಎಐಸಿಸಿ ಸದಸ್ಯ ಎನ್.ಚಲುವರಾಯಸ್ವಾಮಿ ಅವರು ಸ್ಪರ್ಧಿಸಿದ್ದರೆ, ಬಿಜೆಪಿಯಿಂದ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡರ ಪತ್ನಿ ಸುಧಾ ಶಿವರಾಮೇಗೌಡ ಅಖಾಡದಲ್ಲಿದ್ದಾರೆ. ಇನ್ನು ಜೆಡಿಎಸ್‌ನಿಂದ ಹಾಲಿ ಶಾಸಕ ಕೆ. ಸುರೇಶ್‌ಗೌಡ ಕಣದಲ್ಲಿದ್ದಾರೆ. ಮತ ಎಣಿಕೆಯ ವಿವರ ಇಲ್ಲಿದೆ.

Nagamangala Assembly Election Results 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ನಾಗಮಂಗಲ ವಿಧಾನಸಭಾ ಕ್ಷೇತ್ರದಲ್ಲಿ (Nagamangala Assembly constituency) ಕಾಂಗ್ರೆಸ್‌ನಿಂದ ಎಐಸಿಸಿ ಸದಸ್ಯ ಎನ್.ಚಲುವರಾಯಸ್ವಾಮಿ ಅವರು ಸ್ಪರ್ಧಿಸಿದ್ದರೆ, ಬಿಜೆಪಿಯಿಂದ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡರ ಪತ್ನಿ ಸುಧಾ ಶಿವರಾಮೇಗೌಡ ಅಖಾಡದಲ್ಲಿದ್ದಾರೆ. ಇನ್ನು ಜೆಡಿಎಸ್‌ನಿಂದ ಹಾಲಿ ಶಾಸಕ ಕೆ. ಸುರೇಶ್‌ಗೌಡ ಕಣದಲ್ಲಿದ್ದಾರೆ.
ಭೈರವನ ನಾಡಾಗಿರುವ ನಾಗಮಂಗಲ ವಿಧಾನಸಭಾ ಕ್ಷೇತ್ರದ ರಾಜಕೀಯವೇ ವಿಭಿನ್ನವಾಗಿದೆ. ಈ ಕ್ಷೇತ್ರ ಪ್ರತಿಷ್ಠೆ ರಾಜಕಾರಣಕ್ಕೆ ಹೆಸರಾಗಿದೆ. ಇಡೀ ಜಿಲ್ಲೆಯಲ್ಲಿ ಒಕ್ಕಲಿಗರ ಪ್ರಾಬಲ್ಯ ಹೆಚ್ಚಿರುವ ಕ್ಷೇತ್ರವಾಗಿದೆ. ಅಲ್ಲದೆ ಇಲ್ಲಿ ಪಕ್ಷೇತರರೇ ಹೆಚ್ಚು ಗೆಲುವು ಸಾಧಿಸಿದ್ದಾರೆ. ಮೂರು ಉಪಚುನಾವಣೆಗಳು ನಡೆದಿವೆ. ಕೆ.ಸುರೇಶ್‌ಗೌಡ ಎರಡನೇ ಬಾರಿಗೆ 2018ರ ಚುನಾವಣೆಯಲ್ಲಿ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಂಡು ಶಾಸಕರಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿ ಅಭ್ಯರ್ಥಿಗಳು ಸ್ಪರ್ಧಿಸಿದರೂ ಗೆಲ್ಲಲು ಸಾಧ್ಯವಾಗಿಲ್ಲ. ಈ ಬಾರಿಯೂ ಕಾಂಗ್ರೆಸ್ ಹಾಗೂ ಜೆಡಿಎಸ್‌ನದ್ದೇ ಆರ್ಭಟವಾಗಿದೆ.