AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ: ಕಾಂಗ್ರೆಸ್​ನ ​ಹಿಂಸಾ ಸ್ಕೀಮ್ ಸಹಿಸಲ್ಲ ಎಂದ ನಳಿನ್ ಕುಮಾರ್ ಕಟೀಲ್

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಬಂದ ನಂತರ ವಿವಿಧ ಕಡೆಗಳಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದು, ಇದನ್ನು ಬಿಜೆಪಿ ರಾಜ್ಯಾಧ್ಯಕ್ಷರು ಖಂಡಿಸಿದ್ದಾರೆ.

ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ: ಕಾಂಗ್ರೆಸ್​ನ ​ಹಿಂಸಾ ಸ್ಕೀಮ್ ಸಹಿಸಲ್ಲ ಎಂದ ನಳಿನ್ ಕುಮಾರ್ ಕಟೀಲ್
ನಳಿನ್ ಕುಮಾರ್ ಕಟೀಲ್
Rakesh Nayak Manchi
|

Updated on: May 15, 2023 | 3:30 PM

Share

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ (Karnataka Assembly Election Results 2023) ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಬಂದ ನಂತರ ವಿವಿಧ ಕಡೆಗಳಲ್ಲಿ ಬಿಜೆಪಿ (BJP) ಮುಖಂಡರು ಹಾಗೂ ಕಾರ್ಯಕರ್ತರ ಮೇಲೆ ಕಾಂಗ್ರೆಸ್ (Congress) ಕಾರ್ಯಕರ್ತರು ಹಲ್ಲೆ ನಡೆಸಿದ್ದು, ಇದನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಖಂಡಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿದ ಅವರು, ಕಾಂಗ್ರೆಸ್​​ನ ಹಿಂಸಾ ಸ್ಕೀಮ್​ ನಾವು ಯಾವತ್ತೂ ಸಹಿಸುವುದಿಲ್ಲ ಎಂದಿದ್ದಾರೆ.

ಕಾಂಗ್ರೆಸ್​ನ ಹಿಂಸಾ ಗ್ಯಾರಂಟಿ ಸ್ಕೀಮ್ ಸಹಿಸುವುದಿಲ್ಲ. ಹೊಸಕೋಟೆ ಸೇರಿದಂತೆ ರಾಜ್ಯದ ವಿವಿಧೆಡೆಗಳಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ ಹೆಚ್ಚಾಗುತ್ತಿದೆ. ಹೊಸಕೋಟೆಯಲ್ಲಿ ಒಬ್ಬ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದು, ಇತರ ಇಬ್ಬರ ಮೇಲೆ ತೀವ್ರವಾಗಿ ಹಲ್ಲೆ ಮಾಡಲಾಗಿದೆ. ಕಾಂಗ್ರೆಸ್ ನಾಯಕರು ಇಂತಹ ಹಿಂಸಾಚಾರದ ಪ್ರವೃತ್ತಿಗೆ ಆಸ್ಪದ ಕೊಡಬಾರದು ಎಂದು ಹೇಳಿದ್ದಾರೆ.

ರಾಜ್ಯದ ವಿವಿಧ ಕಡೆಗಳಲ್ಲಿ ದೇಶದ್ರೋಹಿ ಚಟುವಟಿಕೆಗಳು ಹೆಚ್ಚಾಗಿವೆ. ಪಾಕಿಸ್ತಾನದ ಧ್ವಜ ಹಾರಿಸುವುದು ದೇಶದ್ರೋಹದ ಚಟುವಟಿಕೆಯಾಗಿದ್ದು ಇದನ್ನು ನಿಯಂತ್ರಿಸಬೇಕು. ಇಂತಹ ಹಿಂಸಾಚಾರದ ದೇಶದ್ರೋಹಿ ಚಟುವಟಿಕೆಗಳನ್ನು ಸಹಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ಮುಖಂಡರು ತಮ್ಮೊಳಗಿನ ಭಿನ್ನಮತ ಬದಿಗಿಟ್ಟು ತಾವು ಈಗಾಗಲೇ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳನ್ನು ಈಡೇರಿಸಲು ಮುಂದಾಗಬೇಕು. ಹಿಂಸೆಯನ್ನು ಪ್ರಚೋದಿಸುವವರು ಮತ್ತು ದೇಶದ್ರೋಹಿ ಚಟುವಟಿಕೆಗಳಿಗೆ ಬೆಂಬಲ ನೀಡುವವರನ್ನು ಬಂಧಿಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಬೇಕು ಎಂದು ಹೇಳಿದರು.

ಇದನ್ನೂ ಓದಿ: ಭಟ್ಕಳದಲ್ಲಿ ಕಾಂಗ್ರೆಸ್ ಗೆದ್ದ ಬೆನ್ನಲ್ಲೇ ಬಿಜೆಪಿ ಮುಖಂಡನ ಮನೆಗೆ ನುಗ್ಗಿ ಹಲ್ಲೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು

ಮೇ 13ರಂದು ಫಲಿತಾಂಶ ಹೊರಬರುತ್ತಿದ್ದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಡಿ ಶೆಟ್ಟಿಹಳ್ಳಿಯಲ್ಲಿ ರಾತ್ರಿ ಇದೇ ವಿಚಾರವಾಗಿ ಕೃಷ್ಣಪ್ಪ ಹಾಗೂ ಗಣೇಶಪ್ಪ ಅನ್ನೋ ಸಹೋದರರ ನಡುವೆ ಗಲಾಟೆಯಾಗಿತ್ತು. ನೀನು ಪಕ್ಷದಲ್ಲಿ ಇದ್ದುಕೊಂಡೇ ಬಿಜೆಪಿಗೆ ಮೋಸ ಮಾಡಿದ್ದೀ ಅಂತಾ ಎಂಟಿಬಿ ಬೆಂಬಲಿಗ ಕೃಷ್ಣಪ್ಪ ತನ್ನ ಸಹೋದರನನ್ನ ಪ್ರಶ್ನಿಸಿದ್ದ. ಇಬ್ಬರ ನಡುವಿನ ಜಗಳ ವಿಕೋಪಕ್ಕೆ ಹೋಗಿದ್ದು. ಈ ವೇಳೆ ಗಣೇಶಪ್ಪನ ಮಗ ಆದಿತ್ಯಾ ಮತ್ತು ಕೆಲವರು ಕೃಷ್ಣಪ್ಪನ ಮೇಲೆ ದೊಣ್ಣೆಗಳಿಂದ ಹಲ್ಲೆ ನಡೆಸಿದ್ದರು. ಗಂಭೀರವಾಗಿ ಗಾಯಗೊಂಡ ಕೃಷ್ಣಪ್ಪನನ್ನ ಆಸ್ಪತ್ರೆಗೆ ಸೇರಿಸಲಾಗಿತ್ತಾದರೂ ಬದುಕುಳಿಯಲಿಲ್ಲ.

ಕಾಂಗ್ರೆಸ್ ಫಲಿತಾಂಶ ಹೊರಬಿದ್ದ ನಂತರ ಭಟ್ಕಳದಲ್ಲಿ ಕೇಸರಿ ಧ್ವಜದ ಪಕ್ಕ ಇಸ್ಲಾಂ ಬಾವುಟ ಹಾರಿಸಲಾಯಿತು. ಇದೇ ತಾಲೂಕಿನಲ್ಲಿ ಬಿಜೆಪಿ ಮುಖಂಡರೊಬ್ಬರ ಮನೆಗೆ ನುಗ್ಗಿದ ಕಾಂಗ್ರೆಸ್ ಕಾರ್ಯಕರ್ತರು ಸಂಬಂಧಿಕರ ಮೇಲೆ ಹಲ್ಲೆ ನಡೆಸಿದ್ದರು. ಇನ್ನೊಂದೆಡೆ ಬೆಳಗಾವಿಯಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಲಾಯಿತು. ಕಾಂಗ್ರೆಸ್ ಪಕ್ಷದ ಮುಸ್ಲಿಂ ಬೆಂಬಲಿಗರು ಘೋಷಣೆ ಕೂಗಿದ್ದಾರೆಂದು ಎಂದು ದೂರು ನೀಡಲಾಗಿದ್ದು, ಪ್ರಕರಣ ದಾಖಲಾಗಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ