Karnataka Assembly Elections 2023: 40 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

|

Updated on: Apr 19, 2023 | 11:52 AM

ಮೇ 10ರಂದು ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು ಬಿಜೆಪಿ 40 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ.

Karnataka Assembly Elections 2023: 40 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ
ನರೇಂದ್ರ ಮೋದಿ
Follow us on

ದೆಹಲಿ: ಮೇ 10ರಂದು ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು ಚುನಾವಣೆಗೆ ಎಲ್ಲಾ ರಾಜಕೀಯ ಪಕ್ಷಗಳು ಸಜ್ಜಾಗಿವೆ. ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿ ಸ್ಟಾರ್ ಪ್ರಚಾರಕರಿಂದ ಬೃಹತ್ ಸಾರ್ವಜನಿಕ ರ್ಯಾಲಿಗಳು, ರೋಡ್ ಶೋಗಳು ಮತ್ತು ಸಮಾವೇಶಗಳನ್ನು ನಡೆಸಲು ಸಿದ್ಧತೆ ನಡೆಸಿದೆ. ಈ ಸಂಬಂಧ ಬಿಜೆಪಿಯಿಂದ 40 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆಯಾಗಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಅನೇಕರು ಸ್ಟಾರ್ ಪ್ರಚಾರಕರಾಗಿ ರಾಜ್ಯದಲ್ಲಿ ಪ್ರಚಾರ ನಡೆಸಲಿದ್ದಾರೆ.

ರಾಜನಾಥ್​ ಸಿಂಗ್​, ನಿತಿನ್ ಗಡ್ಕರಿ, ಪ್ರಹ್ಲಾದ್ ಜೋಶಿ, ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್​ಕುಮಾರ್​ ಕಟೀಲು, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಸಿ.ಟಿ.ರವಿ, ಅಣ್ಣಾಮಲೈ, ಸಂಸದ ಜಗ್ಗೇಶ್​​, ಶ್ರುತಿ, ತಾರಾ ಸೇರಿದಂತೆ ಹಲವರನ್ನು ಸ್ಟಾರ್ ಪ್ರಚಾರಕ್ಕೆ ನೇಮಿಸಲಾಗಿದೆ.

ಇದನ್ನೂ ಓದಿ: Karnataka Assembly Polls; ತಾತ ಸಿದ್ದರಾಮಯ್ಯ ಜೊತೆ ಕ್ಷೇತ್ರದಲ್ಲಿ ತಿರುಗಾಡಿ ರಾಜಕಾರಣ ತಿಳಿದುಕೊಳ್ಳುವ ಆಸಕ್ತಿ ಇದೆ: ಧವನ್ ರಾಕೇಶ್

ಏಪ್ರಿಲ್ 25 ರ ನಂತರ ಪ್ರಧಾನಿ ಮೋದಿಯವರು ಕರ್ನಾಟಕದಲ್ಲಿ ಪ್ರಚಾರವನ್ನು ಪ್ರಾರಂಭಿಸಲಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಪಿಎಂ ಮೋದಿಯವರ ನೇತೃತ್ವದಲ್ಲಿ ರೋಡ್ ಶೋಗಳು, ಸಾರ್ವಜನಿಕ ರ್ಯಾಲಿಗಳು ಮತ್ತು ಬಿಜೆಪಿ ಕಾರ್ಯಕರ್ತರ ಸಮಾವೇಶಗಳು ಸೇರಿದಂತೆ ಒಟ್ಟು 15-20 ಕಾರ್ಯಕ್ರಮಗಳನ್ನು ನಡೆಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಚುನಾವಣೆ ಹಿನ್ನೆಲೆ ಕರ್ನಾಟಕಕ್ಕೆ ಮೋದಿಯವರು ಏಳು ಬಾರಿ ಭೇಟಿ ನೀಡಿದ್ದು ಮೋದಿಯವರು ಮಿಸ್ ಮಾಡಲಾದ ಕ್ಷೇತ್ರಗಳಲ್ಲಿ ಈ ಬಾರಿ ಪ್ರಚಾರ ನಡೆಸಲಿದ್ದಾರೆ. ಹಾಗೂ ಟಿಕೆಟ್ ಸಿಗದಿದಕ್ಕೆ ಬಂಡಾಯ ಎದ್ದಿರುವ ಅಕಾಂಕ್ಷಿಗಳ ಕ್ಷೇತ್ರ, ಬಿಜೆಪಿಗೆ ಚುನಾವಣೆ ಎದುರಿಸಲು ಕಷ್ಟ ಆಗುವಂತಹ ಕ್ಷೇತ್ರಗಳಲ್ಲಿ ಮೋದಿಯವರು ಪ್ರಚಾರ ನಡೆಸಿ ಶಕ್ತಿ ತುಂಬಲಿದ್ದಾರೆ.

ಇನ್ನು ಮೇ 4 ರಂದು ಉಡುಪಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶ ನಡೆಸಲು ಬಿಜೆಪಿ ಮುಂದಾಗಿದೆ ಎಂಬ ಮಾಹಿತಿ ಸಿಕ್ಕಿದೆ. ಹೀಗಾಗಿ ಅಂದು ಪ್ರಧಾನಿ ಮೋದಿ ಅವರು ಉಡುಪಿಗೆ ಭೇಟಿ ನೀಡಿ ಭಾಷಣ ಮಾಡುವ ಸಾಧ್ಯತೆಯಿದೆ. ಅದಕ್ಕಾಗಿ ಈಗಾಗಲೇ ಭಾರೀ ಪ್ರಮಾಣದಲ್ಲಿ ಸಿದ್ಧತೆ ಆರಂಭವಾಗಿದೆ. ಹಾಗೂ ಅಮಿತ್ ಶಾ ಅವರು ಏಪ್ರಿಲ್ 21ರಿಂದ23 ರವರೆಗೆ ಅಂದ್ರೆ ಮೂರು ದಿನಗಳ ಕಾಲ ಕರ್ನಾಟಕದಲ್ಲಿ ಪ್ರಚಾರ ನಡೆಸಲಿದ್ದಾರೆ. ಅವರು ರ್ಯಾಲಿಗಳು, ರೋಡ್‌ಶೋಗಳನ್ನು ನಡೆಸಲಿದ್ದಾರೆ. ಧಾರ್ಮಿಕ ಮಠಾಧೀಶರೊಂದಿಗೆ ಸಭೆಗಳನ್ನು ಮತ್ತು ಬಿಜೆಪಿ ನಾಯಕರೊಂದಿಗೆ ಕಾರ್ಯತಂತ್ರದ ಸಭೆಗಳನ್ನು ನಡೆಸಲಿದ್ದಾರೆ.

ಸ್ಟಾರ್‌ ಪ್ರಚಾರಕರ ಪಟ್ಟಿಯಲ್ಲಿ ಯಾರ್ಯಾರ ಹೆಸರಿದೆ?

ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಸಚಿವರಾದ ರಾಜನಾಥ್‌ ಸಿಂಗ್‌‌, ಅಮಿತ್‌ ಶಾ, ನಿತಿನ್‌ ಗಡ್ಕರಿ, ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ಸಂಸದ ಡಿ.ವಿ. ಸದಾನಂದ ಗೌಡ, ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ, ಸಚಿವರಾದ ಗೋವಿಂದ ಕಾರಜೋಳ, ಆರ್‌. ಅಶೋಕ್‌, ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್‌, ಸ್ಮೃತಿ ಇರಾನಿ, ಧರ್ಮೇಂದ್ರ ಪ್ರಧಾನ್‌, ಇತರ ನಾಯಕರಾದ ಮನ್ಸುಖ್‌ ಮಂಡಾವಿಯಾ, ಅಣ್ಣಾಮಲೈ, ಅರುಣ್‌ ಸಿಂಗ್‌, ಡಿ.ಕೆ. ಅರುಣಾ, ಸಿ.ಟಿ ರವಿ, ಯೋಗಿ ಆದಿತ್ಯನಾಥ್‌, ಶಿವರಾಜ್‌ ಸಿಂಗ್‌ ಚೌಹಾನ್‌, ಹೇಮಂತ್‌ ಬಿಸ್ವಾ ಶರ್ಮಾ, ದೇವೇಂದ್ರ ಫಡ್ನವಿಸ್‌, ಪ್ರಭಾಕರ್‌ ಕೋರೆ, ಶೋಭಾ ಕರಂದ್ಲಾಜೆ, ಎ. ನಾರಾಯಣ ಸ್ವಾಮಿ, ಭಗವಂತ್‌ ಖೂಬಾ, ಅರವಿಂದ ಲಿಂಬಾವಳಿ, ಶ್ರೀರಾಮುಲು, ಕೋಟ ಶ್ರೀನಿವಾಸ ಪೂಜಾರಿ, ಬಸನ ಗೌಡ ಪಾಟೀಲ್‌ ಯತ್ನಾಳ್‌, ಉಮೇಶ್‌ ಜಾಧವ್‌, ಚಲವಾದಿ ನಾರಾಯಣ ಸ್ವಾಮಿ, ಎನ್‌. ರವಿಕುಮಾರ್‌, ಜಿ.ವಿ. ರಾಜೇಶ್‌, ಜಗ್ಗೇಶ್‌, ಶ್ರುತಿ, ತಾರಾ ಅನುರಾಧ ಅವರನ್ನು ಸ್ಟಾರ್‌ ಪ್ರಚಾರಕರಾಗಿ ಅವಕಾಶ ನೀಡಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ 

Published On - 11:28 am, Wed, 19 April 23