Nanjangud: ವಿಷಕಂಠನ ಸನ್ನಿಧಿಯಲ್ಲಿ ಪ್ರಧಾನಿ ಮೋದಿ; ಮೈಸೂರು ಚಾಮರಾಜನಗರ ಮಾರ್ಗದಲ್ಲಿ ಸಂಚಾರ ಬದಲಾವಣೆ

ವಿಧಾನಸಭೆಯ ಮತದಾನದ ದಿನ ಹತ್ತಿರವಾಗುತ್ತಿದ್ದಂತೆ ಪ್ರಚಾರ ಜೋರಾಗಿದೆ. ಅದರಲ್ಲೂ ಹಳೇ ಮೈಸೂರು ಭಾಗದಲ್ಲಿ ಬಿಜೆಪಿ‌ ಕೇಂದ್ರ ನಾಯಕರ ಪ್ರಚಾರದ ಅಬ್ಬರ ಜೋರಾಗಿದೆ. ಭರ್ಜರಿ ರೋಡ್ ಶೋ ನಂತರ ಇದೀಗ ಮತ್ತೆ ಮೋದಿ ಮೈಸೂರಿಗೆ ಎಂಟ್ರಿ‌ ಕೊಡ್ತಾ ಇದ್ದು, ಮಿಷನ್ ದಕ್ಷಿಣ ಭಾರತದ ಟಾಸ್ಕ್ ನೀಡಿದ್ದು ಮಾತ್ರವಲ್ಲ, ಅದನ್ನು ಸಾಕರಗೊಳಿಸಲು ಮೋದಿ ಖುದ್ದು ಅಖಾಡಕ್ಕೆ ಎಂಟ್ರಿ‌ ಕೊಡುತ್ತಿದ್ದಾರೆ.

Nanjangud: ವಿಷಕಂಠನ ಸನ್ನಿಧಿಯಲ್ಲಿ ಪ್ರಧಾನಿ ಮೋದಿ; ಮೈಸೂರು ಚಾಮರಾಜನಗರ ಮಾರ್ಗದಲ್ಲಿ ಸಂಚಾರ ಬದಲಾವಣೆ
ಪ್ರಧಾನಿ ಮೋದಿ
Follow us
ಕಿರಣ್ ಹನುಮಂತ್​ ಮಾದಾರ್
|

Updated on:May 07, 2023 | 7:52 AM

ಮೈಸೂರು: ಈ ಬಾರಿಯ ವಿಧಾನಸಭೆ ಚುನಾವಣೆ(Karnataka Assembly Election)ಯಲ್ಲಿ ಹಳೇ ಮೈಸೂರು ಭಾಗ ಅತ್ಯಂತ ಮಹತ್ವದ ಸ್ಥಾನ ಪಡೆದುಕೊಂಡಿದೆ. ಅದರಲ್ಲೂ ಪ್ರಧಾನಿ ನರೇಂದ್ರ ಮೋದಿ(Narendra Modi)ಯಂತು‌ ಮೈಸೂರು ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah)ಸ್ಪರ್ಧಿಸುತ್ತಿರುವ ವರುಣ ಭಾಗವನ್ನ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದಾರೆ. ಈಗಾಗಲೇ ಮೈಸೂರು ನಗರದಲ್ಲಿ ಭರ್ಜರಿ ರೋಡ್ ಶೋ ನಡೆಸಿ ಮಿಂಚು ಹರಿಸಿದ್ದ ಪ್ರಧಾನಿ ನರೇಂದ್ರ ಮೋದಿ ಇಂದು(ಮೇ.7) ಮತ್ತೆ ಮೈಸೂರಿನತ್ತ ಮುಖ ಮಾಡಿದ್ದಾರೆ. ಹೌದು ಈ ಬಾರಿ ಪ್ರಧಾನಿ ನರೇಂದ್ರ ಮೋದಿ ಮೈಸೂರು ಜಿಲ್ಲೆಯ ಹಾಗೂ ಚಾಮರಾಜನಗರ ಜಿಲ್ಲೆಯ ಮತ ಪ್ರಚಾರಕ್ಕಾಗಿ ಆಗಮಿಸುತ್ತಿದ್ದಾರೆ. ಇಂದು ಬೃಹತ್ ಚುನಾವಣಾ ಪ್ರಚಾರದ ಸಭೆಯನ್ನ ದಕ್ಷಿಣ ಕಾಶಿ ಅಂತಲೇ ಹೆಸರುವಾಸಿಯಾಗಿರುವ ವಿಷಕಂಠನ ನೆಲೆಬೀಡು ನಂಜನಗೂಡಿನಲ್ಲಿ ಆಯೋಜನೆ ಮಾಡಲಾಗಿದೆ. ಇದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಇಂದು ನಮೋಃ ಕೇವಲ ಚುನಾವಣಾ ಪ್ರಚಾರಕ್ಕೆ ಆಗಮಿಸುತ್ತಿಲ್ಲ. ಬದಲಿಗೆ ನಂಜನಗೂಡು ನಂಜುಂಡನ ದರ್ಶನ ಪಡೆದು ಪೂಜೆ ಸಲ್ಲಿಸಲು ಆಗಮಿಸುತ್ತಿದ್ದಾರೆ. ಇತ್ತೀಚೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ವಿಷದ ಹಾವಿಗೆ ಹೋಲಿಸಿದ್ರು. ಇನ್ನು ನಂಜನಗೂಡಿನ ನಂಜುಂಡ ಅಂದ್ರೆ, ಆತ ವಿಷಕಂಠ ನಂಜನ್ನು ನುಂಗಿ ಇಡೀ ಜಗತ್ತನ್ನ ರಕ್ಷಿಸಿದವ ನಂಜುಂಡೇಶ್ವರ. ಹೀಗಾಗಿ ಮೋದಿ ಈ ಸ್ಥಳಕ್ಕೆ ಭೇಟಿ ನೀಡುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಇದನ್ನೂ ಓದಿ:ಬೆಂಗಳೂರಿನಲ್ಲಿಂದು ಪ್ರಧಾನಿ ನರೇಂದ್ರ ಮೋದಿ 2ನೇ ದಿನದ ರೋಡ್​ ಶೋ; ಈ ರಸ್ತೆಗಳಲ್ಲಿ ಸಂಚಾರ ಬಂದ್

ಲೋಕಸಭಾ ಚುನಾವಣೆಯಲ್ಲಿ ಕಾಶಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದ ಮೋದಿ

ಇನ್ನು ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಶಿಗೆ ತೆರಳಿ ವಿಶೇಷ ಪೂಜೆಯನ್ನ ಸಲ್ಲಿಸಿ ಪ್ರಚಾರ ನಡೆಸಿದ್ದರು. ಕಾಶಿ ಪೂಜೆ ನಂತರ ಲೋಕಸಭೆಯಲ್ಲಿ ಬಿಜೆಪಿಗೆ ಭರ್ಜರಿ ಜಯ ಸಿಕ್ಕಿತ್ತು. ಇದೀಗ ದಕ್ಷಿಣ ಭಾರತದ ಕರ್ನಾಟಕದಲ್ಲಿ ಚುನಾವಣೆ ನಡೆಯುತ್ತಿದೆ. ಹೀಗಾಗಿಯೇ ದಕ್ಷಿಣ ಕಾಶಿ ಅಂತಲೇ ಪ್ರಖ್ಯಾತಿ ಹೊಂದಿರುವ ನಂಜನಗೂಡು ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಅತಿ ಹೆಚ್ಚು ಸ್ಥಾನ ಗೆಲ್ಲುವ ರಣತಂತ್ರ ಸಹ ಅಡಗಿರಬಹುದು ಅನ್ನೋದು ಆಧ್ಯಾತ್ಮ ಚಿಂತಕರ ಲೆಕ್ಕಾಚಾರ. ಇನ್ನು ಹಳೆ ಮೈಸೂರು ಭಾಗದಲ್ಲಿ ಅತಿ ಹೆಚ್ಚು ಸ್ಥಾನಗಳನ್ನ ಗೆಲ್ಲುವ ರಾಜಕೀಯ ಲೆಕ್ಕಾಚಾರವು ಮೋದಿಯ ಈ ಕಾರ್ಯಕ್ರಮದಲ್ಲಿ ಅಡಗಿದೆ. ಯಾಕೆಂದರೆ ಇದುವರೆಗೂ ಬಿಜೆಪಿ ರಾಜ್ಯದಲ್ಲಿ ಉತ್ತಮ ಸಾಧನೆ ಮಾಡಿ ಹೆಚ್ಚು ಸ್ಥಾನಗಳನ್ನು ಗೆದ್ದಿದ್ದರೂ, ಹಳೆ ಮೈಸೂರು ಭಾಗದಲ್ಲಿ ಹಿನ್ನಡೆಯಾಗಿತ್ತು. ಹೀಗಾಗಿ ಪೂರ್ಣ ಬಹುಮತ ಪಡೆಯುವಲ್ಲಿ ಬಿಜೆಪಿ ವಿಫಲವಾಗಿತ್ತು. ಈ ಬಾರಿ ಹಳೆ ಮೈಸೂರು ಭಾಗದಲ್ಲಿ ಹೆಚ್ಚು ಸ್ಥಾನಗಳನ್ನು ಗಳಿಸಿದ್ರೆ, ಬಹುಮತ ಪಡೆಯಲು ಸಹಕಾರಿಯಾಗುತ್ತೆ ಅನ್ನೋದು ಮೋದಿ ಲೆಕ್ಕಾಚಾರ.

ಕಾರ್ಯಕ್ರಮದ ವಿವರ

ಇ‌ನ್ನು ಭಾನುವಾರ ಸಂಜೆ 4.30ಕ್ಕೆ ಕಾರ್ಯಕ್ರಮ ಆರಂಭವಾಗಲಿದೆ. ನಂಜನಗೂಡು ತಾಲೂಕಿನ‌ ಎಲಚಗೆರೆ ಬೋರೆ ಬಳಿ ಇದಕ್ಕಾಗಿ ಭವ್ಯ ವೇದಿಕೆ ನಿರ್ಮಾಣ ಮಾಡಲಾಗಿದೆ. ಬರೋಬ್ಬರಿ ಒಂದು ಲಕ್ಷ ಮಂದಿ ಕೂರಲು ಶಾಮಿಯಾನ ವ್ಯವಸ್ಥೆ ಮಾಡಲಾಗಿದ್ದು, ಮೈಸೂರು ಗ್ರಾಮಾಂತರದ ನಾಲ್ಕು ಹಾಗೂ ಚಾಮರಾಜನಗರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರದ ಜನರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ವೇದಿಕೆ ಮೇಲೆ ಮೋದಿ ಜೊತೆಗೆ ಮೈಸೂರು, ಚಾಮರಾಜನಗರ, ಮಡಿಕೇರಿ ಜಿಲ್ಲೆಯ 17 ಅಭ್ಯರ್ಥಿಗಳು ಭಾಗಿಯಾಗಲಿದ್ದಾರೆ. ಇಬ್ಬರು ಸಂಸದರು ಸೇರಿದಂತೆ ಸ್ಥಳೀಯ ಮುಖಂಡರು ಸೇರಿ 33 ಜನ ವೇದಿಕೆ ಮೇಲೆ ಇರಲಿದ್ದಾರೆ.

ಇದನ್ನೂ ಓದಿ:ಮೋದಿ, ಅಮಿತ್ ಶಾ ಸೇರಿದಂತೆ ಬಿಜೆಪಿ ನಾಯಕರ ಇಂದಿನ ಚುನಾವಣಾ ಪ್ರಚಾರ; ಯಾರ್ಯಾರು ಎಲ್ಲೆಲ್ಲಿ? ಇಲ್ಲಿದೆ ಮಾಹಿತಿ

ಕಾರ್ಯಕ್ರಮದಲ್ಲಿ ನರೇಂದ್ರ ಮೋದಿ ಹಾಗೂ ವಿ.ಸೋಮಣ್ಣ ಭಾಷಣ ಮಾಡಲಿದ್ದಾರೆ. ಭಾನುವಾರ ಸಂಜೆ‌ 4.25 ನಿಮಿಷಕ್ಕೆ ಮೋದಿ ಶಿವಮೊಗ್ಗದಿಂದ ಹೆಲಿಕಾಪ್ಟರ್ ಮೂಲಕ ನಂಜನಗೂಡಿಗೆ ಆಗಮಿಸಲಿದ್ದಾರೆ. ವೇದಿಕೆ ಬಳಿಯೇ ಮೂರು ಹೆಲಿಪ್ಯಾಡ್ ನಿರ್ಮಾಣ ಮಾಡಲಾಗಿದ್ದು, ಸಂಜೆ 4.30ಕ್ಕೆ ಮೋದಿ ವೇದಿಕೆಗೆ ಆಗಮಿಸಲಿದ್ದಾರೆ. 4.30 ರಿಂದ‌ 5.25ರ ವರೆಗೆ ವೇದಿಕೆ ಕಾರ್ಯಕ್ರಮ ನಡೆಯಲಿದೆ. 3 ಸಾವಿರಕ್ಕೂ ಹೆಚ್ಚು ಫಿಟ್ ಇಂಡಿಯಾ ಕಾನ್ಸೆಪ್ಟ್ ಯುವಕರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಕಾರ್ಯಕ್ರಮಕ್ಕೆ ಬರುವವರಿಗೆ 14 ಕಡೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಕಾನ್ಸೆಪ್ಟ್ ಬೇಸ್ ಚಿತ್ರಗಳ ಪ್ರದರ್ಶನ ಹಾಗೂ ಕರ್ನಾಟಕಕ್ಕೆ ಮೋದಿ ಸರ್ಕಾರದ ಕೊಡುಗೆಗಳ ಬಗ್ಗೆ ಹೋಲ್ಡಿಂಗ್ಸ್‌ನ ಮೂಲಕ ಮಾಹಿತಿ ನೀಡಲು ವ್ಯವಸ್ಥೆ ಮಾಡಲಾಗಿದೆ. ಎರಡು ಸಾವಿರ ಯುವಕರಿಗೆ ಟ್ಯಾಟೋ ಎರಡು ಸಾವಿರ ಮಹಿಳೆಯರಿಗೆ ಮೆಹಂದಿ ಹಾಕಿ ಮೋದಿಗೆ ಸ್ವಾಗತ ನೀಡಲು ಸಿದ್ದತೆ ಮಾಡಿಕೊಳ್ಳಲಾಗಿದೆ.

ಪ್ರಧಾನಿ ಮೋದಿ ಸಂಚರಿಸುವ ಮಾರ್ಗದಲ್ಲಿ ವಾಹನ ಸಂಚಾರ ನಿರ್ಬಂಧ

ಇನ್ನು ಪ್ರಧಾನಿ ಮೋದಿ ಸಂಚರಿಸುವ ಮಾರ್ಗದಲ್ಲಿ ವಾಹನ ಸಂಚಾರ ನಿರ್ಬಂಧ ಹೇರಲಾಗಿದ್ದು, ಮೈಸೂರು-ಚಾಮರಾಜನಗರ ಮಾರ್ಗದಲ್ಲಿ ವಾಹನ ಸಂಚಾರ ಬದಲಾವಣೆಯಾಗಲಿದೆ. ಬೆಳಗ್ಗೆ 10 ಗಂಟೆಯಿಂದ ರಾತ್ರಿ 10ರವರೆಗೆ ಸಂಚಾರದಲ್ಲಿ ಬದಲಾವಣೆ. ಮೈಸೂರಿನಿಂದ ಚಾಮರಾಜನಗರದ ಕಡೆ ಸಂಚರಿಸುವ ವಾಹನಗಳು ಟಿ.ನರಸೀಪುರ, ಸಂತೇಮರಹಳ್ಳಿ ಮೂಲಕ ಸಂಚರಿಸಲು ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ:ಕಾಂಗ್ರೆಸ್ ಸಿದ್ದರಾಮಯ್ಯ ಅವರನ್ನ ಸಿಎಂ ಮಾಡಲ್ಲ – ಮೋದಿ ನಾಯಕತ್ವಕ್ಕೆ ಹಿಂದುಳಿದ ವರ್ಗದವರು ಪ್ರಾಧಾನ್ಯತೆ ನೀಡುತ್ತಿದ್ದಾರೆ – ಪ್ರಲ್ಹಾದ್ ಜೋಶಿ

ಶ್ರೀಕಂಠೇಶ್ವರನ ದರ್ಶನಕ್ಕೆ ಮೋದಿ

ಕಾರ್ಯಕ್ರಮ ಮುಗಿದ ನಂತರ ಶ್ರೀಕಂಠೇಶ್ವರನ ದರ್ಶನಕ್ಕೆ ಮೋದಿ ತೆರಳಲಿದ್ದಾರೆ. 5.45 ರಿಂದ 6.15 ರವರೆಗೆ ನಂಜುಂಡೇಶ್ವರನ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮೈಸೂರಿ ಊಟಿ ರಸ್ತೆ ಮತ್ತು ಚಾಮರಾಜನಗರ ರಸ್ತೆ ಸಂಚಾರದಲ್ಲಿ ಮಾರ್ಪಾಡು ಮಾಡಲಾಗಿದೆ. ಬೈಪಾಸ್ ರಸ್ತೆಯಲ್ಲಿ ಸಂಚಾರ ಮಾಡಲು ಸೂಚಿಸಲಾಗಿದೆ. ಪೂಜೆ ನಂತರ ಮೋದಿ ಕಾರಿನ ಮೂಲಕ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ತೆರಳಿ ಅಲ್ಲಿಂದ ದೆಹಲಿಗೆ ಪಯಣ ಮಾಡಲಿದ್ದಾರೆ.

ಇನ್ನಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:42 am, Sun, 7 May 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್