ನರೇಂದ್ರ ಮೋದಿ ವಿಷ ಸರ್ಪವಲ್ಲ, ದೇಶ ಕಾಯುವ ಕಾಳಿಂಗ ಸರ್ಪ: ಡಾ. ಕೆ ಸುಧಾಕರ್

ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಆರೋಗ್ಯ ಖಾತೆ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಕ್ಷೇತ್ರದಾದ್ಯಂತ ಭರ್ಜರಿ ಪ್ರಚಾರ ಹಮ್ಮಿಕೊಂಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಹಿಂದುಳಿದ ಸಮುದಾಯದ ದೊಡ್ಡ ನಾಯಕರಾಗಿದ್ದು, ವಿಶ್ವಗುರು ಎನಿಸಿಕೊಂಡಿದ್ದಾರೆ. ಅಂತಹವರನ್ನ ಕಾಂಗ್ರೆಸ್‌ನ ಉನ್ನತ ನಾಯಕರು ವಿಷ ಸರ್ಪ ಎಂದು ಟೀಕೆ ಮಾಡಿದ್ದಾರೆ. ಆದರೆ, ಮೋದಿ ದೇಶದ ಖಜಾನೆಯನ್ನು ಕಾಯುವ ಕಾಳಿಂಗ ಸರ್ಪವಾಗಿದ್ದಾರೆ ಎಂದರು.

ನರೇಂದ್ರ ಮೋದಿ ವಿಷ ಸರ್ಪವಲ್ಲ, ದೇಶ ಕಾಯುವ ಕಾಳಿಂಗ ಸರ್ಪ:  ಡಾ. ಕೆ ಸುಧಾಕರ್
ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್
Follow us
ಕಿರಣ್ ಹನುಮಂತ್​ ಮಾದಾರ್
|

Updated on:May 02, 2023 | 7:35 AM

ಚಿಕ್ಕಬಳ್ಳಾಪುರ: ರಾಜ್ಯ ವಿಧಾನಸಭೆ ಚುನಾವಣೆ(Karnataka Assembly Election) ಇನ್ನೇನು ಕೆಲವೆ ದಿನಗಳು ಬಾಕಿಯಿದ್ದು, ಉಭಯ ಪಕ್ಷಗಳು ಅಧಿಕಾರದ ಚುಕ್ಕಾಣಿ ಹಿಡಿಯಲು ಅಬ್ಬರದ ಪ್ರಚಾರ ನಡೆಸುತ್ತಿದೆ. ಅದರಂತೆ ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಆರೋಗ್ಯ ಖಾತೆ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್(Dr Sudhakar) ಕ್ಷೇತ್ರದಾದ್ಯಂತ ಭರ್ಜರಿ ಪ್ರಚಾರ ಹಮ್ಮಿಕೊಂಡಿದ್ದರು. ಈ ಮಾತನಾಡಿದ ಅವರು ‘ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಹಿಂದುಳಿದ ಸಮುದಾಯದ ದೊಡ್ಡ ನಾಯಕರಾಗಿದ್ದು, ವಿಶ್ವಗುರು ಎನಿಸಿಕೊಂಡಿದ್ದಾರೆ. ಅಂತಹವರನ್ನ ಕಾಂಗ್ರೆಸ್‌ನ ಉನ್ನತ ನಾಯಕರು ವಿಷ ಸರ್ಪ ಎಂದು ಟೀಕೆ ಮಾಡಿದ್ದಾರೆ. ಆದರೆ, ಮೋದಿ ದೇಶದ ಖಜಾನೆಯನ್ನು ಕಾಯುವ ಕಾಳಿಂಗ ಸರ್ಪವಾಗಿದ್ದು, ಕಾಂಗ್ರೆಸ್‌ನ ವಿಷವನ್ನು ಗಂಟಲಲ್ಲಿ ಇಟ್ಟುಕೊಂಡು ನಂಜುಂಡೇಶ್ವರನಾಗಿದ್ದಾರೆ ಎಂದರು.

ನಿನ್ನೆ(ಮೇ.1) ಕ್ಷೇತ್ರದ ಹಾಗೂ ನೂತನ ಮಂಚೇನಹಳ್ಳಿ ತಾಲ್ಲೂಕಿನ ಜರಬಂಡಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಾಲರೆಡ್ಡಿಹಳ್ಳಿ, ಮಿಣಕಿನಗುರ್ಕಿ ಗ್ರಾಮಪಂಚಾಯತಿ ವ್ಯಾಪ್ತಿಯ ಮಹೇಶ್ವರಮ್ಮ ದೇವಸ್ಥಾನದ ಬಳಿ ಅಬ್ಬರದ ಪ್ರಚಾರ ನಡೆಸಿದರು. ತಮ್ಮ ಕ್ಷೇತ್ರ ವ್ಯಾಪ್ತಿಯ ಮಂಚೇನಹಳ್ಳಿಯನ್ನು ನೂತನ ತಾಲ್ಲೂಕಾಗಿ ಘೋಷಣೆ ಮಾಡಿದ್ದು, ತಾಲ್ಲೂಕಿಗೆ ಬೇಕಾದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿದ್ದೇನೆ. ಇನ್ನು ನೂತನ ತಾಲ್ಲೂಕಿನಲ್ಲಿ ರಸ್ತೆ, ನೀರು, ಚರಂಡಿ, ಆಸ್ಪತ್ರೆ ಸೇರಿದಂತೆ ಅವಶ್ಯಕವಿರುವ ಸೌಲಭ್ಯಗಳನ್ನು ಕಲ್ಪಿಸಿದ್ದೇನೆ ಎಂದರು.

ಇದನ್ನೂ ಓದಿ:ಚುನಾವಣೆ ಕಣದಲ್ಲಿ ಗೋಬಿ ವ್ಯಾಪಾರಿ ಭರ್ಜರಿ ಪ್ರಚಾರ: ಈ ಯುವಕನ ಉದ್ದೇಶವೇನು ಗೊತ್ತಾ?

ಮೋದಿಯವರು ರಾಜ್ಯಕ್ಕೆ ಬರುವುದರಿಂದ ಕಾಂಗ್ರೆಸ್​ಗೆ ಸೋಲುವ ಭೀತಿ

ಹೌದು ಚುನಾವಣೆ ಹತ್ತಿರ ಬರುತ್ತಿದ್ದಂತೆ ಪ್ರಧಾನಿ ಮೋದಿಯವರು ರಾಜ್ಯಾದ್ಯಂತ ರೋಡ್​ ಶೋ ಮೂಲಕ ಅಬ್ಬರದ ಪ್ರಚಾರ ಕೈಗೊಂಡಿದ್ದಾರೆ. ಇದೀಗ ಮೋದಿಯವರು ರಾಜ್ಯಕ್ಕೆ ಬರುವುದರಿಂದ ಕಾಂಗ್ರೆಸ್ ಸೋಲುವ ಭೀತಿ ಎದುರಿಸುತ್ತಿದೆ. ಇದರಿಂದ ಹತಾಶರಾಗಿ ಮೋದಿ ವಿರುದ್ಧ ಕಾಂಗ್ರೆಸ್ಸಿಗರು ಟೀಕೆ ಮಾಡುತ್ತಿದ್ದಾರೆಂದು ಡಾ.ಕೆ.ಸುಧಾಕರ್ ವಾಗ್ದಾಳಿ ನಡೆಸಿದರು.

ಇನ್ನು ಚುನಾವಣೆಯಲ್ಲಿ ಹೇಗಾದರೂ ಗೆಲ್ಲಬೇಕೆಂದು ಡಾ.ಕೆ ಸುಧಾಕರ್ ಹರಸಾಹಸ ಪಡುತ್ತಿದ್ದಾರೆ. ಅದರಂತೆ ಮತದಾರರನ್ನ ಸೆಳೆಯಲು ನಟ, ನಟಿಯರನ್ನ ಕ್ಷೇತ್ರಕ್ಕೆ ಕರೆ ತರುತ್ತಿದ್ದಾರೆ. ಇನ್ನು ಭಾನುವಾರದಂದು(ಏ.30) ನಟಿ ಹರ್ಷಿಕಾ ಪೂಣಚ್ಚ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್​ ಪರ ಅಬ್ಬರದ ಪ್ರಚಾರ ನಡೆಸಿದರು. ಇದೇ ವೇಳೆ ಪ್ರಚಾರ ನಡೆಸುವ ಸಮಯದಲ್ಲಿ ತಾಲೂಕಿನ ನಂದಿ ಗ್ರಾಮದಲ್ಲಿ ನಟಿ ಹರ್ಷಿಕಾ ಪೂಣಚ್ಚ ಮೆಣಸಿನಕಾಯಿ ಬಜ್ಜಿ ಹಾಕಿ ಯುವಕರಿಗೆ ಹಂಚಿದರು. ಈ ಸಂದರ್ಭದಲ್ಲಿ ಹರ್ಷಿಕಾ ಕೊಡುತ್ತಿರುವ ಮೇಣಸಿನಕಾಯಿ ಬಜ್ಜಿಗೆ ಯುವಕರು ಮುಗಿಬಿದ್ದಿದ್ದರು.

ಇನ್ನಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:07 am, Tue, 2 May 23

ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ