ನಾಳೆ ಕಂಠೀರವ ಸ್ಟೇಡಿಯಂನಲ್ಲಿ ಸಿಎಂ ಪದಗ್ರಹಣ: 8 ರಾಜ್ಯಗಳಿಂದ ಬರುವ ಮುಖ್ಯಮಂತ್ರಿಗಳಿಗೆ Z+ ಭದ್ರತೆ
ಮೇ 20ರಂದು ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನೂತನ ಸಿಎಂ ಪ್ರತಿಜ್ಞಾವಿಧಿ ಸಮಾರಂಭ ನಡೆಯಲಿದ್ದು, ಕೇಂದ್ರದ ಘಟಾನುಘಟಿ ನಾಯಕರು ಭಾಗಿಯಾಗಲಿದ್ದಾರೆ ಈ ಹಿನ್ನೆಲೆ Z+ ಮತ್ತು Z ಕ್ಯಾಟಗರಿ ಭದ್ರತೆ ನೀಡಲಾಗುತ್ತಿದೆ.
ಬೆಂಗಳೂರು: ಸಿದ್ದರಾಮಯ್ಯ (Siddaramaiah) ಅವರನ್ನು ಸಿಎಂ ಆಗಿ, ಡಿ.ಕೆ.ಶಿವಕುಮಾರ್ (DK Shivakumar) ಅವರನ್ನು ಉಪಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಹೈಕಮಾಂಡ್ ಘೋಷಣೆ ಮಾಡಲಾಗಿದೆ. ನಾಳೆ (ಮೇ 20) ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ (Kanteerava Stadium) ಪ್ರತಿಜ್ಞಾವಿಧಿ ಸಮಾರಂಭ ನಡೆಯಲಿದೆ. ಕಾರ್ಯಕ್ರಮದಲ್ಲಿ ಕೇಂದ್ರದ ಘಟಾನುಘಟಿ ನಾಯಕರು ಭಾಗಿಯಾಗಲಿದ್ದು, ಬರುವ ವಿವಿಐಪಿಗಳಿಗೆ Z+, CRPF ASL ಪ್ರೊಟೆಕ್ಟ್ರಿಂದ ಭದ್ರತೆ ಒದಗಿಸಲಾಗಿದೆ. ವಿವಿಧ 8 ರಾಜ್ಯದ ಮುಖ್ಯಮಂತ್ರಿಗಳಿಗೆ Z+ ಮತ್ತು Z ಕ್ಯಾಟಗರಿ ಭದ್ರತೆ ನೀಡಲಾಗುತ್ತಿದೆ. ಕಂಠೀರವ ಕ್ರೀಡಾಂಗಣ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೂಡ ಒದಗಿಸಲಾಗಿದೆ.
ಹೆಚ್ಚುವರಿ ಪೋಲಿಸರ ನಿಯೋಜನೆ
ಇಬ್ಬರು ಜಂಟಿ ಪೊಲೀಸ್ ಆಯುಕ್ತರು ಸೇರಿ ಹೆಚ್ಚುವರಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಭದ್ರತೆ ಒದಲಾಗಿಸಲಾಗಿದ್ದು, ಎಂಟು ಮಂದಿ ಡಿಸಿಪಿ, 10 ಮಂದಿ ಎಸಿಪಿ, 28 ಇನ್ಸ್ಪೆಕ್ಟರ್ಗಳು, 1,500ಕ್ಕೂ ಹೆಚ್ಚು ಪೊಲೀಸರು ಮತ್ತು ಸಂಚಾರ ನಿರ್ವಹಣೆಗಾಗಿ 500 ಸಂಚಾರಿ ಪೊಲೀಸರ ನಿಯೋಜನೆ ಮಾಡಲಾಗಿದೆ.
ಇದನ್ನೂ ಓದಿ: ನಾಳೆಯೇ 28 ಶಾಸಕರು ಸಚಿವರಾಗಿ ಪದಗ್ರಹಣ ಸಾಧ್ಯತೆ: ಇಲ್ಲಿದೆ ಸಂಭಾವ್ಯ ಸಚಿವರ ಪಟ್ಟಿ
ವಿವಿಐಪಿ ಎಂಟ್ರಿಗೆ ಪ್ರತ್ಯೇಕವಾಗಿ ವ್ಯವಸ್ಥೆ ಮಾಡಲಿರುವ ಪೊಲೀಸರು, 2 ಗೇಟ್ಗಳಲ್ಲಿ ವಿವಿಐಪಿ ವಾಹನಗಳ ಪ್ರವೇಶಕ್ಕೆ ಮಾತ್ರ ಅವಕಾಶವಿದೆ. ಕಂಠೀರವ ಕ್ರೀಡಾಂಗಣದಲ್ಲಿ ಭರ್ಜರಿ ತಯಾರಿ ನಡೆದಿದ್ದು, ಸುಮಾರು 2 ಲಕ್ಷಕ್ಕೂ ಅಧಿಕ ಜನ ಸೇರುವ ನಿರೀಕ್ಷೆ ಇದೆ. ಹೀಗಾಗಿ ಒಂದು ಲಕ್ಷಕ್ಕೂ ಹೆಚ್ಚು ಆಸನದ ವ್ಯವಸ್ಥೆ ಮಾಡಲಾಗಿದೆ.
ಪ್ರಮಾಣ ವಚನಕ್ಕೆ ಗಣ್ಯರ ದಂಡು
ಸಿದ್ಧತೆ ಪರಿಶೀಲನೆ ಮಾಡಿದ ಹಿರಿಯ ಅಧಿಕಾರಿಗಳು
ನಾಳೆ ಪದಗ್ರಹಣ ಕಾರ್ಯಕ್ರಮದ ಸಿದ್ಧತೆಯನ್ನು ಹಿರಿಯ ಅಧಿಕಾರಿಗಳು ಪರಿಶೀಲನೆ ಮಾಡಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ನಗರ ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಮತ್ತು ಸಂಚಾರಿ ವಿಶೇಷ ಆಯುಕ್ತ ಸಲೀಂ ಕಂಠೀರವ ಕ್ರೀಡಾಂಗಣಕ್ಕೆ ಭೇಟಿ ನೀಡಿದ್ದಾರೆ.
ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ