ಭಯೋತ್ಪಾದನೆಯಿಂದ ಬಿಜೆಪಿಯಲ್ಲಿ ಯಾರೂ ಪ್ರಾಣ ಕಳೆದುಕೊಂಡಿಲ್ಲ: ಸಿದ್ದರಾಮಯ್ಯ
ಭಯೋತ್ಪಾದನೆಯಿಂದ ಬಿಜೆಪಿಯಲ್ಲಿ ಯಾರೂ ಪ್ರಾಣ ಕಳೆದುಕೊಂಡಿಲ್ಲ. ಆದರೆ ಭಯೋತ್ಪಾದನೆಗೆ ಬಲಿಯಾದವರು ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು (Narendra Modi) ದೇಶದ ಭಯೋತ್ಪಾದನೆ ಬಗ್ಗೆ ಮಾತನಾಡ್ತಾರೆ. ಆದರೆ ಭಯೋತ್ಪಾದನೆಯಿಂದ ಬಿಜೆಪಿಯಲ್ಲಿ (BJP) ಯಾರೂ ಪ್ರಾಣ ಕಳೆದುಕೊಂಡಿಲ್ಲ. ಆದರೆ ಭಯೋತ್ಪಾದನೆಗೆ ಬಲಿಯಾದವರು ಇಂದಿರಾಗಾಂಧಿ (Indira Gandhi) ಮತ್ತು ರಾಜೀವ್ ಗಾಂಧಿ (Rajiv Gandhi) ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಭಯೋತ್ಪಾದನೆ ನಿರ್ಮೂಲನೆ ಮಾಡಬೇಕೆಂಬುದು ಕಾಂಗ್ರೆಸ್ನ ಆಸೆ. ಮೊದಲಿನಿಂದಲೂ ಭಯೋತ್ಪಾದನೆ ವಿರುದ್ಧ ಕಾಂಗ್ರೆಸ್ ಹೋರಾಡುತ್ತಿದೆ ಎಂದರು.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ ಜವಾಹರಲಾಲ್ ನೆಹರೂ ಪ್ರಜಾಪ್ರಭುತ್ವಕ್ಕೆ ಬುನಾದಿ ಹಾಕಿದವರು. ಪ್ರಜಾಪ್ರಭುತ್ವದ ಯಶಸ್ವಿಗೆ ಜವಾಹರ್ಲಾಲ್ ನೆಹರು ಕಾರಣ. ದೇಶದ ಪ್ರಜಾಪ್ರಭುತ್ವ ಗಟ್ಟಿಯಾಗಲು ಕಾಂಗ್ರೆಸ್ ಪಕ್ಷ ಕಾರಣ. ನೆಹರು ವಿಪಕ್ಷ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದಿದ್ದರು. ಈಗಿನ ಪ್ರಧಾನಿಗೆ ನೆಹರು ಹೋಲಿಕೆ ಮಾಡಲು ಸಾಧ್ಯವೇ ಇಲ್ಲ. ವಿರೋಧ ಪಕ್ಷ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ನೆಹರು ಹೇಳುತ್ತಿದ್ದರು ಎಂದು ತಿಳಿಸಿದರು.
ಇದನ್ನೂ ಓದಿ: ಬಿಜೆಪಿ ಸರ್ಕಾರದ ಅವಧಿಯಲ್ಲಿನ ಎಲ್ಲ ಹಗರಣಗಳನ್ನು ತನಿಖೆ ಮಾಡಿಸುತ್ತೇವೆ: ಎಂಬಿ ಪಾಟೀಲ್
ದೇಶದ ಐಕ್ಯತೆ ಎತ್ತಿಹಿಡಿಯೋದರಲ್ಲಿ ಕಾಂಗ್ರೆಸ್ ಮುಂಚೂಣಿಯಲ್ಲಿದೆ. ಜನಕೇಂದ್ರದ ವಿಕೇಂದ್ರೀಕೃತ ಮಾಡಿದವರೇ ರಾಜೀವ್ ಗಾಂಧಿ. ಶೇ 33 ರಷ್ಟು ಮೀಸಲಾತಿ ಮಹಿಳೆಯರಿಗೆ ಇದೆ. ಶೇ 50 ರಷ್ಟು ಮಾಡ್ಬೇಕು ಅಂತ ಪಾರ್ಲಿಮೆಂಟ್ ನಲ್ಲಿದೆ. ಸ್ವಾತಂತ್ರ್ಯವನ್ನು ಎಲ್ಲರೂ ಅನುಭವಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಜನರ ಭರವಸೆ ಹುಸಿಯಾಗಿದೆ ಎಂಬ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಟೀಕೆ ವಿಚಾರವಾಗಿ ಮಾತನಾಡಿದ ಅವರು ಮುಂದಿನ ಸಂಪುಟದ ವೇಳೆ ಎಲ್ಲ ಗ್ಯಾರಂಟಿಗಳು ಜನರಿಗೆ ತಲುಪಲಿದೆ. ಮಿಸ್ಟರ್ ಬೊಮ್ಮಾಯಿ ಎಲ್ಲ ಗ್ಯಾರಂಟಿಗಳನ್ನು ಜನರಿಗೆ ತಲುಪಲಿವೆ. ಈ ಹಿಂದೆ ನುಡಿದಂತೆ ನಡೆದಿದ್ದೇವೆ, ಮುಂದೆಯೂ ನಡೆದುಕೊಳ್ಳುತ್ತೇವೆ. ಅದೇ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಕ್ಕೂ ಇರುವ ವ್ಯತ್ಯಾಸ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಏನೂ ಅಭಿವೃದ್ಧಿ ಮಾಡಿಲ್ಲ ಎಂದು ಆರೋಪ ಮಾಡಿದರು.
ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 1:26 pm, Sun, 21 May 23