ಗುಜರಾತ್ ಮಾದರಿ ಎಫೆಕ್ಟ್: ಪ್ರಹ್ಲಾದ್ ಜೋಶಿ ಮನೆಗೆ ಟಿಕೆಟ್ ಆಕಾಂಕ್ಷಿಗಳ ದಂಡು, ಭರ್ಜರಿ ಲಾಬಿ

ಗುಜರಾತ್ ಮಾದರಿಯಲ್ಲಿ ಕರ್ನಾಟಕದಲ್ಲೂ ಬಿಜೆಪಿ ಗೆದ್ದಿರುವ ಕ್ಷೇತ್ರಗಳಲ್ಲಿ ಹೊಸಮುಖಗಳಿಗೆ ಮಣೆ ಹಾಕಲು ಪ್ಲ್ಯಾನ್ ರೂಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಯಲ್ಲಿ ಟಿಕೆಟ್​ ಫೈಟ್ ಶುರುವಾಗಿದ್ದು, ಆಕಾಂಕ್ಷಿಗಳು ಪ್ರಹ್ಲಾದ್ ಜೋಶಿ ಭೇಟಿ ಮಾಡಿ ಲಾಬಿ ನಡೆಸಿದ್ದಾರೆ.

ಗುಜರಾತ್ ಮಾದರಿ ಎಫೆಕ್ಟ್: ಪ್ರಹ್ಲಾದ್ ಜೋಶಿ ಮನೆಗೆ ಟಿಕೆಟ್ ಆಕಾಂಕ್ಷಿಗಳ ದಂಡು, ಭರ್ಜರಿ ಲಾಬಿ
pralhad joshi
Follow us
| Updated By: ರಮೇಶ್ ಬಿ. ಜವಳಗೇರಾ

Updated on:Dec 11, 2022 | 2:39 PM

ಹುಬ್ಬಳ್ಳಿ: ಗುಜರಾತ್​ನಲ್ಲಿ ಕಳೆದ ಬಾರಿ ಗೆದ್ದ ಕ್ಷೇತ್ರಗಳಲ್ಲಿ ಈ ಬಾರಿ ಹೊಸ ಮುಖಗಳಿಗೆ ಮಣೆ ಹಾಕಲಾಗಿತ್ತು. ಹೀಗಾಗಿ ಇದೇ ತಂತ್ರವನ್ನೂ ಕರ್ನಾಟಕದಲ್ಲಿ ಅನುಸರಿಸಲು ಬಿಜೆಪಿ ಮುಂದಾಗಿದೆಯಂತೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಗೆದ್ದಿರೋ ಕ್ಷೇತ್ರಗಳಲ್ಲಿ ಹೊಸಮುಖಗಳಿಗೆ ಮಣೆ ಹಾಕಲು ಪ್ಲ್ಯಾನ್ ರೂಪಿಸಲಾಗಿದ್ದು, ಹಲವರಿಗೆ ಟಿಕೆಟ್​ ಕೈತಪ್ಪು ಭೀತಿ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟಿಕೆಟ್ ಆಕಾಂಕ್ಷಿಗಳ ದಂಡು ಆಗಮಿಸಿದ್ದು, ಟಿಕೆಟ್​ಗಾಗಿ ಲಾಬಿ ನಡೆಸಿದ್ದಾರೆ.

ಇದನ್ನೂ ಒದಿ: Karnataka Politics: ದಲಿತ ಬಲ ಪಂಗಡದ ಯುವ ನಾಯಕರ ಹುಡುಕಾಟದಲ್ಲಿ ರಾಜ್ಯ ಬಿಜೆಪಿ

2023ರ ವಿಧಾನಸಭೆ ಚುನಾವಣೆಗೆ ‌(Karnataka Assembly Elections 2023) ಇನ್ನೂ ನಾಲ್ಕೈದು ತಿಂಗಳು ಬಾಕಿ ಇದ್ದು, ಆಗಲೇ ಬಿಜೆಪಿಯಲ್ಲಿ ಟಿಕೆಟ್​ ಫೈಟ್ ಶುರುವಾಗಿದೆ. ಇದಕ್ಕೆ ಪೂರಕವೆಂಬಂತೆ ಹುಬ್ಬಳ್ಳಿಯ ಮಯೂರ ಎಸ್ಟೇಟ್‌ನಲ್ಲಿರುವ ಪ್ರಹ್ಲಾದ್ ಜೋಶಿ ನಿವಾಸಕ್ಕೆ ಟಿಕೆಟ್ ಆಕಾಂಕ್ಷಿಗಳ ದಂಡು ಆಗಮಿಸಿದೆ. ಅದರಲ್ಲೂ ಹೆಚ್ಚಾಗಿ ಉತ್ತರ ಕರ್ನಾಟಕದ ಹಲವು ಕ್ಷೇತ್ರಗಳಿಂದ ಮುಖಂಡರು ಬಂದಿದ್ದು, ಮುಂದಿನ ವಿಧಾನಸಭೆ ಚುನಾವಣೆ ಟಿಕೆಟ್‌ಗಾಗಿ ಮನವಿ ಮಾಡಿದ್ದಾರೆ.

ಹೈಕಮಾಂಡ್​ ಜೊತೆ ಪ್ರಹ್ಲಾದ್ ಜೋಶಿ ಉತ್ತಮ ಸಂಪರ್ಕ ಹೊಂದಿದ್ದಾರೆ. ಇದರಿಂದ ಇವರ ಮುಖಾಂತರ ಹೋದರೆ ಟಿಕೆಟ್​ ಸಿಗುವ ನಿರೀಕ್ಷೆಯಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಯಾದಗಿರಿ, ಗುರುಮಿಠಕಲ್, ಗಂಗಾವತಿ, ರೋಣ ಸೇರಿದಂತೆ ಅನೇಕ ಕ್ಷೇತ್ರಗಳಿಂದ ಆಗಮಿಸಿರುವ ಮುಖಂಡರುಗಳು ಟಿಕೆಟ್​ಗಾಗಿ ಲಾಬಿ ನಡೆಸಿದ್ದಾರೆ. ಅಲ್ಲದೇ ಕಾರ್ಯಕರ್ತರೊಂದಿಗೆ ಆಗಮಿಸಿ ಜೋಶಿ ಎದುರು ಶಕ್ತಿ ಪ್ರದರ್ಶನ ಮಾಡಿದ್ದಾರೆ.

ಇದನ್ನೂ ಓದಿ: ಮುಂದಿನ ಚುನಾವಣೆಗೆ ಕಾರ್ಯತಂತ್ರ: ದಿಲ್ಲಿಗೆ ಬರುವಂತೆ ಕರ್ನಾಟಕ ಕಾಂಗ್ರೆಸ್ ನಾಯರಿಗೆ ಹೈಕಮಾಂಡ್ ದಿಢೀರ್ ಬುಲಾವ್

ಗುಜರಾತ್ ಮಾದರಿಯಲ್ಲಿ ಟಿಕೆಟ್​​

ಗುಜರಾತ್ ಮಾದರಿಯಲ್ಲಿ ಕರ್ನಾಟಕದಲ್ಲೂ ಸಹ ಟಿಕೆಟ್​​ ಹಂಚಿಕೆ ಮಾಡುವ ಬಗ್ಗೆ ಚಿಂತನೆಗಳು ನಡೆದಿವೆ. ಬಿಜೆಪಿ ಗೆದ್ದಿರುವ ಕ್ಷೇತ್ರಗಳಲ್ಲಿ ಹೊಸಮುಖಗಳಿಗೆ ಮಣೆ ಹಾಕಲು ಪ್ಲ್ಯಾನ್ ರೂಪಿಸಲಾಗಿದ್ದು, ಬಿಜೆಪಿ ಭದ್ರ ಕೋಟೆಯಂತಿರುವ ಕ್ಷೇತ್ರಗಳಲ್ಲಿ ಈ ಪ್ಲ್ಯಾನ್ ಮಾಡಿದ್ದಾರಂತೆ. ಹಾಗೇನೆ ವಿರೋಧಿ ಅಲೆ ಇರುವ ಕಡೆ ಮಾಹಿತಿ ಪಡೆದು ಟಿಕೆಟ್ ಹಂಚಿಕೆ ಮಾಡಲಾಗುತ್ತಂತೆ. ಒಂದು ವೇಳೆ ಶಾಸಕರ ಕಾರ್ಯವೈಖರಿ ಬಗ್ಗೆ ಅಸಮಾಧಾನ ಇದ್ರೆ ಅಂಥವರಿಗೆ ಕಷ್ಟವಾಗಲಿದ್ದು, ಕಾರ್ಯಕರ್ತರ ಮಧ್ಯೆ ಹೊಂದಾಣಿಕೆ ಇಲ್ಲದೇ ಇದ್ರೆ ಟಿಕೆಟ್ ಮಿಸ್ ಆಗುತ್ತೆ ಎನ್ನಲಾಗಿದೆ. ಈ ಹಿನ್ಜೆಲೆಯಲ್ಲಿ ಟಿಕೆಟ್ ಖಾತ್ರಿಪಡಿಸಿಕೊಳ್ಳಲು ಉತ್ತರ ಕರ್ನಾಟಕ ಹಲವು ನಾಯಕರು ಜೋಶಿ ದುಂಬಾಲು ಬಿದ್ದಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 2:34 pm, Sun, 11 December 22

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು