ತಂದೆ ಸಿದ್ದರಾಮಯ್ಯರನ್ನ ಸಿಎಂ ಮಾಡಲು ಕಸರಸ್ತು ನಡೆಸಿರುವ ಯತೀಂದ್ರ: ಕಾಲಿಗೆ ಚಕ್ರ ಕಟ್ಟಿಕಂಡು ವರುಣಾ ತಿರುಗಾಟ

|

Updated on: Apr 01, 2023 | 1:12 PM

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮತ್ತೆ ಸಿಎಂ ಆಗಬೇಕು ಎಂದು ಪುತ್ರ, ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಒಬ್ಬ ಮಗನಾಗಿ ತಂದೆ ಸಿಎಂ ಆಗಲಿ ಎಂದು ಯಾರಿಗೆ ಆಸೆ ಇರಲ್ಲ ಹೇಳಿ. ಖಂಡಿತ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಬೇಕು ಅನ್ನೋದು ನನ್ನ ಆಸೆ ಎಂದು ಯತೀಂದ್ರ ಸಿದ್ದರಾಮಯ್ಯ ಆಶಯ ವ್ಯಕ್ತಪಡಿಸಿದ್ದಾರೆ.

ತಂದೆ ಸಿದ್ದರಾಮಯ್ಯರನ್ನ ಸಿಎಂ ಮಾಡಲು ಕಸರಸ್ತು ನಡೆಸಿರುವ ಯತೀಂದ್ರ: ಕಾಲಿಗೆ ಚಕ್ರ ಕಟ್ಟಿಕಂಡು ವರುಣಾ ತಿರುಗಾಟ
ವಿಪಕ್ಷ ನಾಯಕ ಸಿದ್ದರಾಮಯ್ಯ, ಶಾಸಕ ಯತೀಂದ್ರ ಸಿದ್ದರಾಮಯ್ಯ
Follow us on

ಮಂಡ್ಯ: ವಿಪಕ್ಷನಾಯಕ ಸಿದ್ದರಾಮಯ್ಯ ಯಾವುದೇ ಕ್ಷೇತ್ರಕ್ಕೆ ಹೋದರೂ ಮುಂದಿನ ಮುಖ್ಯಮಂತ್ರಿ ಎಂದು ಕೂಗು ಕೇಳಿ ಬರುತ್ತಿದೆ. ಈಗ ಸ್ವತಃ ಪುತ್ರ, ಶಾಸಕ ಯತೀಂದ್ರ ಸಿದ್ದರಾಮಯ್ಯ (Yatindra Siddaramaiah) ತಂದೆ ಸಿದ್ದರಾಮಯ್ಯ (Siddaramaiah) ಅವರು ಮತ್ತೆ ಸಿಎಂ ಆಗಬೇಕು ಎಂದಿದ್ದಾರೆ. ಒಬ್ಬ ಮಗನಾಗಿ ತಂದೆ ಸಿಎಂ ಆಗಲಿ ಎಂದು ಯಾರಿಗೆ ಆಸೆ ಇರಲ್ಲ ಹೇಳಿ. ಖಂಡಿತ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಬೇಕು ಅನ್ನೋದು ನನ್ನ ಆಸೆ ಎಂದು ಯತೀಂದ್ರ ಸಿದ್ದರಾಮಯ್ಯ ಆಶಯ ವ್ಯಕ್ತಪಡಿಸಿದ್ದಾರೆ. “ಯತೀಂದ್ರ ಸಿದ್ದರಾಮಯ್ಯ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ಘೋಷಿಸಿದ್ದು, ತಂದೆಯ ಗೆಲವಿಗಾಗಿ ಕಸರತ್ತು ನಡೆಸಿದ್ದಾರೆ. ಸಿದ್ದರಾಮಯ್ಯ ಅವರೇ ಘೋಷಿಸಿಕೊಂಡಂತೆ ಈ ಬಾರಿ ಅವರದ್ದು, ಕೊನೆಯ ಚುನಾವಣೆಯಾಗಿದ್ದು, ಶತಾಯಗತಾಯ ಗೆಲ್ಲಿಸಿ ಸಿಎಂ ಕುರ್ಚಿ ಮೇಲೆ ತಂದೆಯನ್ನು ಕೂಡಿಸಲು ಯತೀಂದ್ರ ಸಿದ್ದರಾಮಯ್ಯ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಕ್ಷೇತ್ರ ತಿರುಗುತ್ತಿದ್ದಾರೆ. ಆದರೂ ಕೂಡ ಸಿದ್ದರಾಮಯ್ಯ ಸಿಎಂ ಆಗುವುದು ಸುಲಭದ ದಾರಿಯಾಗಿಲ್ಲ.

ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಈ ಹಿಂದೆ ಸಿಎಂ ಆಗಿದ್ದಾಗ ತಂದೆಯವರು ಉತ್ತಮ ಆಡಳಿತ ನೀಡಿದ್ದರು. ಮತ್ತೆ ಸಿಎಂ ಆದರೆ ರಾಜ್ಯವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತಾರೆ. ಕಳೆದ ಬಾರಿ ಅವರು ಒಳ್ಳೆ ಆಡಳಿತ ಕೊಟ್ಟಿದ್ದರೂ ಕೂಡ ಜನ ಬಹುಮತ ನೀಡಿರಲಿಲ್ಲ. ಈ ಬಾರಿ ನಮ್ಮ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಕೊಟ್ಟು ತಂದೆಯವರು ಮುಖ್ಯಮಂತ್ರಿಯಾದರೇ, ತಂದೆಯವರು ಆಗ ಕೊಟ್ಟ ಆಡಳಿತಕ್ಕೆ ಮತ್ತೊಮ್ಮೆ ಒಂದು ವ್ಯಾಲಿಡೇಷನ್ ಸಿಕ್ಕಂತಾಗುತ್ತೆ. ತಂದೆಯವರು ಸಿಎಂ ಆದರೆ ಖಂಡಿತ ರಾಜ್ಯವನ್ನ ಅಭಿವೃದ್ಧಿ ಪಥದ ಕಡೆಗೆ ತೆಗೆದುಕೊಂಡು ಹೋಗುತ್ತಾರೆ ಎಂಬ ಆಶಯವಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ:  ಸಿಟಿ ರವಿ ವಿರುದ್ಧ ಲಿಂಗಾಯತ ಅಸ್ತ್ರ ಪ್ರಯೋಗಕ್ಕೆ ಮುಂದಾದ ಕಾಂಗ್ರೆಸ್ ಹೈಕಮಾಂಡ್​​ಗೆ ಸ್ವಪಕ್ಷದಿಂದಲೇ ವಿರೋಧ!

ಈ ಬಾರಿ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ

ಈ ಬಾರಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ. ವರುಣಾ (Varuna) ಸೇರಿದಂತೆ ಯಾವ ಕ್ಷೇತ್ರದಿಂದಲೂ ಸ್ಪರ್ಧೆ ಮಾಡುವುದಿಲ್ಲ ಎಂದು ವರುಣಾ ಕ್ಷೇತ್ರದ ಕಾಂಗ್ರೆಸ್​ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ” ತಂದೆ, ವಿಪಕ್ಷನಾಯಕ ಸಿದ್ದರಾಮಯ್ಯ ಅವರಿಗೆ ಕ್ಷೇತ್ರ ಬಿಟ್ಟುಕೊಟ್ಟ ಮೇಲೆ, ಯತೀಂದ್ರ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಪ್ರಶ್ನೆ ಉದ್ಭವವಾಗಿತ್ತು. ಆದರೆ ಈಗ ಚುನಾವಣಾ ಅಖಾಡದಿಂದಲೇ ಹಿಂದೆ ಸರಿಯುವ ಮೂಲಕ ಅಚ್ಚರಿ ಮೂಡಿಸಿದ್ದಾರೆ”

ವರುಣಾ ಕ್ಷೇತ್ರ ಅಥವಾ ಬೇರೆ ಯಾವ ಕ್ಷೇತ್ರದಿಂದಲೂ ನಾನು ಸ್ಪರ್ಧೆ ಮಾಡಲ್ಲ. ತಂದೆಯವರ ಪರವಾಗಿ ಜನವರಿಯಿಂದಲೇ ನಾನು ಪ್ರಚಾರ ಶುರು ಮಾಡಿದ್ದೇನೆ. ವರುಣಾ ಕ್ಷೇತ್ರ ಯಾವೊಬ್ಬ ವ್ಯಕ್ತಿಗೆ ಸೇರಿದ್ದಲ್ಲ. ತಂದೆಗಾಗಿ ನಾನು ಕ್ಷೇತ್ರ ತ್ಯಾಗ ಮಾಡಿಲ್ಲ. ವರುಣಾ ಕ್ಷೇತ್ರ ಸೇರಿದ್ದು ಆ ಕ್ಷೇತ್ರದ ಮತದಾರರಿಗೆ. ತಂದೆಯವರ ಕೊನೆ ಚುನಾವಣೆ ಹೀಗಾಗಿ ವರುಣಾದಲ್ಲಿ ನಿಲ್ಲಬೇಕೆಂಬುದು ಜನರ ಅಭಿಪ್ರಾಯ ಎಂದರು.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:05 pm, Sat, 1 April 23