AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀವು ಕರ್ನಾಟಕ ರಾಜಕಾರಣದಲ್ಲಿ ಸೀತಾಮಾತೆ ಪಾತ್ರ ಮಾಡಿ, ಶೂರ್ಪನಖಿ ಪಾತ್ರ ಮಾಡಬೇಡಿ: ಶೋಭಾ ಕರಂದ್ಲಾಜೆಗೆ ರಮೇಶ್ ಬಾಬು ತಿರುಗೇಟು

ಕಳೆದ ಬಾರಿ ಮೋದಿ ರೋಡ್ ಶೋ ಆದಾಗ ಆ್ಯಂಬುಲೆನ್ಸ್ ಸಮಸ್ಯೆ ಆಗಿದ್ದು, ಮಾಧ್ಯಮಗಳಲ್ಲಿ ವರದಿಯಾಗಿದೆ. ಜನರಿಗೆ ಸಮಸ್ಯೆ ಆಗಬಾರದು ಎಂದು ನಿನ್ನೆ(ಮೇ.4) ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ ಎಂದು ಶೋಭಾ ಕರಂದ್ಲಾಜೆ ಹೇಳಿಕೆಗೆ ಕೆಪಿಸಿಸಿ ಮಾಧ್ಯಮ ವಕ್ತಾರ(KPCC SpokesPerson) ರಮೇಶ್​ ಬಾಬು ಪ್ರತ್ಯುತ್ತರ ನೀಡಿದರು.

ನೀವು ಕರ್ನಾಟಕ ರಾಜಕಾರಣದಲ್ಲಿ ಸೀತಾಮಾತೆ ಪಾತ್ರ ಮಾಡಿ, ಶೂರ್ಪನಖಿ ಪಾತ್ರ ಮಾಡಬೇಡಿ: ಶೋಭಾ ಕರಂದ್ಲಾಜೆಗೆ ರಮೇಶ್ ಬಾಬು ತಿರುಗೇಟು
ಕೆಪಿಸಿಸಿ ಮಾಧ್ಯಮ ವಕ್ತಾರ ರಮೇಶ್​ ಬಾಬು
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on:May 05, 2023 | 12:51 PM

Share

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ(Karnataka Assembly Election 2023)ಹಿನ್ನಲೆ ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ(Narendra Modi)ಯವರ ರೋಡ್ ಶೋ ಮೇ.6 ಮತ್ತು 7 ರಂದು ನಡೆಯಲಿದ್ದು, ಈ ಕುರಿತು ಕಾಂಗ್ರೆಸ್​ ದಾರಿಯಲ್ಲಿ ಆ್ಯಂಬುಲೆನ್ಸ್ ತಂದು ಸೀನ್​ ಕ್ರಿಯೇಟ್ ಮಾಡಲು ಹೊರಟಿದೆ ಎಂಬ ಶೋಭಾ ಕರಂದ್ಲಾಜೆ(Shobha Karandlaj) ಹೇಳಿಕೆ ವಿಚಾರವಾಗಿ ‘ಕಳೆದ ಬಾರಿ ಮೋದಿ ರೋಡ್ ಶೋ ಆದಾಗ ಆ್ಯಂಬುಲೆನ್ಸ್ ಸಮಸ್ಯೆ ಆಗಿದ್ದು, ಮಾಧ್ಯಮಗಳಲ್ಲಿ ವರದಿಯಾಗಿದೆ. ಜನರಿಗೆ ಸಮಸ್ಯೆ ಆಗಬಾರದು ಎಂದು ನಿನ್ನೆ(ಮೇ.4) ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ ಎಂದು ಕೆಪಿಸಿಸಿ ಮಾಧ್ಯಮ ವಕ್ತಾರ(KPCC SpokesPerson) ರಮೇಶ್​ ಬಾಬು ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು ‘ಶೋಭಾ ಕರಂದ್ಲಾಜೆ ಅವರು ತುಂಬ ಚೆನ್ನಾಗಿ ಮಾನುಪುಲೇಟ್ ಮಾಡ್ತಾರೆ. ಅದಕ್ಕೆ ಅವರನ್ನು ಚುನಾವಣಾ ಉಸ್ತುವಾರಿ ಮಾಡಿದ್ದಾರೆ‌. ಶೋಭಾ ಕರಂದ್ಲಾಜೆ ಅವರೇ ‘ನೀವು ಕರ್ನಾಟಕ ರಾಜಕಾರಣದಲ್ಲಿ ಸೀತಾಮಾತೆ ಪಾತ್ರ ಮಾಡಿ, ಶೂರ್ಪನಖಿ ಪಾತ್ರ ಮಾಡಬೇಡಿ. ರಾಜ್ಯದ ಜನರಿಗೆ ಏನು ಅನುಕೂಲ ಆಗುತ್ತೋ ಅದನ್ನು ನೀವು ಮಾಡಿ. ರೋಡ್ ಶೋ ನಿಂದ ನಿಮಗೆ ಸಮಸ್ಯೆಯಾಗದೆ ಇರಬಹುದು, ಆದರೆ, ಬೀದಿ ವ್ಯಾಪರಸ್ಥರಿಗೆ ಸಮಸ್ಯೆ ಆಗಲಿದೆ. ಅಂಗಡಿಗಳನ್ನು‌ ಮುಚ್ಚುತ್ತಾರೆ, ಇದರಿಂದ ಜನರಿಗೆ ಸಮಸ್ಯೆ ಆಗಲಿದೆ‌. ಅವರೊಬ್ಬ ಕ್ಯಾಬಿನೆಟ್ ಸಚಿವರಾಗಿ ಪ್ರಧಾನಮಂತ್ರಿಗಳಿಗೆ ಸಲಹೆ ಕೊಡಲಿ ಪಿಎಂ ಅವರಿಗೆ ಇರುವ ಪ್ರೋಟೋಕಾಲ್ ಬೇರೆ, ರಾಹುಲ್ ಗಾಂಧಿ ಅವರಿಗೆ ಆ ರೀತಿ ಇಲ್ಲ ಎನ್ನುವ ಮೂಲಕ ಕಿಡಿಕಾರಿದ್ದಾರೆ.

ಇದನ್ನೂ ಓದಿ:ಚುನಾವಣೆ ಹೊಸ್ತಿಲಲ್ಲೇ ಬೆಂಗಳೂರಿನಲ್ಲಿ ವೋಟರ್​ ಐಡಿ ಸಂಗ್ರಹಿಸುತ್ತಿದ್ದ ನಾಲ್ವರು ಪೊಲೀಸ್ ವಶಕ್ಕೆ

ಮೋದಿ ರೋಡ್ ​ಶೋ ವೇಳೆ ಆಂಬುಲೆನ್ಸ್​​ಗಳನ್ನ ತರೋದಕ್ಕೆ ಕಾಂಗ್ರೆಸ್ ಸಂಚು; ಶೋಭಾ ಕರಂದ್ಲಾಜೆ ಆರೋಪ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಇನ್ನೇನು ಐದು ದಿನಗಳು ಮಾತ್ರ ಬಾಕಿ ಉಳಿದಿದ್ದು, ಉಭಯ ಪಕ್ಷಗಳು ಅಬ್ಬರದ ಪ್ರಚಾರ ಕೈಗೊಂಡಿದೆ. ಅದರಂತೆ ಪ್ರಧಾನಿ ಮೋದಿ ಮೇ.6 ಮತ್ತು 7ರಂದು ಬೆಂಗಳೂರಿನಲ್ಲಿ ರೋಡ್​ಶೋ ನಡೆಸಲಿರುವ ಕುರಿತು ಇಂದು(ಮೇ.5) ಬೆಳಿಗ್ಗೆ ‘ ಮೋದಿ ರೋಡ್​ ಶೋ ವೇಳೆ ಕಾಂಗ್ರೆಸ್ ಷಡ್ಯಂತ್ರ ಮಾಡಿದ್ದು, ಈ ವೇಳೆ ಆಂಬುಲೆನ್ಸ್​ಗಳನ್ನ ತರೋದಕ್ಕೆ ಕಾಂಗ್ರೆಸ್ ಸಂಚು ಮಾಡಿದೆ ಎಂದು ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದರು.

ಇನ್ನಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:51 pm, Fri, 5 May 23

Follow Us
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ