AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಪ್ರಿಲ್​ 8, 9ರಂದು ಪ್ರಧಾನಿ ಮೋದಿ ಮೈಸೂರು ಪ್ರವಾಸದ ತಾತ್ಕಾಲಿಕ ವೇಳಾಪಟ್ಟಿ ಹೀಗಿದೆ

ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ರಾಜ್ಯಕ್ಕೆ ಆಗಮಿಸುತ್ತಿದ್ದು, ಏಪ್ರಿಲ್​ 8 ಮತ್ತು 9ರಂದು ಮೈಸೂರು ಪ್ರವಾಸ ಮಾಡಲಿದ್ದಾರೆ. ಈ ಹಿನ್ನೆಲೆ ಮೈಸೂರು ಪ್ರವಾಸದ ತಾತ್ಕಾಲಿಕ ಪಟ್ಟಿ ಬಿಡುಗಡೆ ಮಾಡಲಾಗಿದೆ.

ಏಪ್ರಿಲ್​ 8, 9ರಂದು ಪ್ರಧಾನಿ ಮೋದಿ ಮೈಸೂರು ಪ್ರವಾಸದ ತಾತ್ಕಾಲಿಕ ವೇಳಾಪಟ್ಟಿ ಹೀಗಿದೆ
ಪ್ರಾತಿನಿಧಿಕ ಚಿತ್ರ Image Credit source: usnews.com
ಗಂಗಾಧರ​ ಬ. ಸಾಬೋಜಿ
|

Updated on:Apr 05, 2023 | 12:05 PM

Share

ಮೈಸೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತೊಮ್ಮೆ ರಾಜ್ಯಕ್ಕೆ ಆಗಮಿಸುತ್ತಿದ್ದು, ಏಪ್ರಿಲ್​ 8 ಮತ್ತು 9ರಂದು ಮೈಸೂರು ಪ್ರವಾಸ ಮಾಡಲಿದ್ದಾರೆ. ಹುಲಿ ಸಂರಕ್ಷಣಾ ಯೋಜನೆ 50ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಮೈಸೂರು ಆಗಮಿಸುತ್ತಿದ್ದಾರೆ. ಹಾಗಾಗಿ ಪ್ರಧಾನಿ ಮೋದಿ ಮೈಸೂರು ಪ್ರವಾಸದ ತಾತ್ಕಾಲಿಕ ಪಟ್ಟಿ ಬಿಡುಗಡೆ ಮಾಡಲಾಗಿದೆ. ಏಪ್ರಿಲ್​ 8ರ ರಾತ್ರಿ 8ಗಂಟೆಗೆ ಮೈಸೂರಿಗೆ ಬಂದಿಳಿಯಲಿರುವ ಪ್ರಧಾನಿ ಮೋದಿ, ರ‍್ಯಾಡಿಸನ್​ ಬ್ಲೂ ಹೋಟೆಲ್​​ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಏ.9ರ ಬೆಳಗ್ಗೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ತೆರಳಲಿದ್ದು, ಬಳಿಕ ಚಾಮರಾಜನಗರ ಜಿಲ್ಲೆ ಬಂಡೀಪುರಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಏ.9ರ ಬೆಳಗ್ಗೆ 7.30ಕ್ಕೆ ಬಂಡೀಪುರ ಉದ್ಯಾನವನಕ್ಕೆ ಭೇಟಿ ನೀಡಲಿದ್ದು, ಬಳಿಕ ಸಫಾರಿ ಮಾಡಲಿದ್ದಾರೆ. ನೀಲಗಿರಿಸ್​​ ಅರಣ್ಯ ಪ್ರದೇಶಕ್ಕೂ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ನಂತರ ಮೈಸೂರಿಗೆ ವಾಪಸ್​ ಆಗಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಏ.9ರ ಬೆಳಗ್ಗೆ 11 ಗಂಟೆಗೆ ಕೆಎಸ್​ಒಯು ಘಟಿಕೋತ್ಸವ ಭವನಕ್ಕೆ ಭೇಟಿ ನೀಡಲಿದ್ದು, ಹುಲಿ ಸಂರಕ್ಷಣಾ ಯೋಜನೆ 50ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಏ.9ರ ಮಧ್ಯಾಹ್ನ 12.30ಕ್ಕೆ ದೆಹಲಿಗೆ ವಾಪಸಾಗಲಿದ್ದಾರೆ.

ಇದನ್ನೂ ಓದಿ: ಕುಂಬಳಕಾಯಿ ಕಳ್ಳ ಅಂದರೆ ಹೆಗಲು ಯಾಕೆ ಮುಟ್ಟಿ ನೋಡಿಕೊಳ್ಳಬೇಕು: ಕಾಂಗ್ರೆಸ್​ಗೆ ತಿರುಗೇಟು ಕೊಟ್ಟ ಸಿಎಂ ಬೊಮ್ಮಾಯಿ

ಬಂಡೀಪುರದಲ್ಲಿ ಸಫಾರಿ ಮಾಡಲಿರುವ ಪ್ರಧಾನಿ ಮೋದಿ

ಮೈಸೂರಿನಲ್ಲಿ ಕಾರ್ಯಕ್ರಮ ಮುಕ್ತಾಯಗೊಳಿಸಿ ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಸಫಾರಿ ನಡೆಸಲಿದ್ದಾರೆ. ಈ ನಿಟ್ಟಿನಲ್ಲಿ ಬಂಡೀಪುರದ ಸಫಾರಿ ರಸ್ತೆಗಳನ್ನು ಇಲಾಖೆ ಸರಿಪಡಿಸುತ್ತಿದ್ದು, ಮೇಲುಕಾಮನಹಳ್ಳಿ ಬಳಿ ಹೆಲಿಪ್ಯಾಡ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಹಿರಿಯ ಅಧಿಕಾರಿಗಳು ಈಗಾಗಲೇ ಬಂಡೀಪುರಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಸಫಾರಿ ನಂತರ ಮೋದಿ ಅವರು ತಮಿಳುನಾಡಿನ ಮದುಮಲೈ ಅರಣ್ಯಕ್ಕೆ ಭೇಟಿ ನೀಡಲಿದ್ದಾರೆ.

ಇತ್ತೀಚೆಗಷ್ಟೇ (ಮಾರ್ಚ್ 16) ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡಿ ಬೆಂಗಳೂರು-ಮೈಸೂರು ಎಕ್ಸಪ್ರೆಸ್​ವೇ ಸೇರಿದಂತೆ ಒಟ್ಟು 16,000 ಕೋಟಿ ರೂ. ಮೌಲ್ಯದ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ್ದರು. ಇದೀಗ ಚುನಾವಣೆ ದಿನಾಂಕ ಹಾಗೂ ನೀತಿ ಸಂಹಿತಿ ಜಾರಿಯಾದ ನಂತರ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಲಿರುವ ಮೋದಿ ಚುನಾವಣೆ ದೃಷ್ಟಿಯಲ್ಲಿ ಜನರನ್ನು ಯಾವ ರೀತಿ ಮೋಡಿ ಮಾಡಲಿದ್ದಾರೆ ಕಾದು ನೋಡಬೇಕಿದೆ.

ಇದನ್ನೂ ಓದಿ: ವಾಟ್ಸಪ್​ ಗ್ರೂಪ್​ನಲ್ಲಿ ರಾಜಕೀಯ ಮಾಡಿದವರಿಗೆ ಚುನಾವಣಾ ಆಯೋಗ ಶಾಕ್, ಅಡ್ಮಿನ್‌ಗಳೇ ಎಚ್ಚರ

ಎಸ್‌ಪಿಜಿಯಿಂದ ಸ್ಥಳ ಪರಿಶೀಲನೆ ತಪಾಸಣೆ

ಪ್ರಧಾನಿ ಮೋದಿ ಆಗಮನ ಹಿನ್ನೆಲೆ ಮೈಸೂರು ನಗರದಲ್ಲಿ ಎಸ್​ಪಿಜಿ ತಂಡದಿಂದ ಭದ್ರತೆ ಪರಿಶೀಲನೆ ಮಾಡಲಾಗಿದೆ. ಮಂಡಕಳ್ಳಿ ಏರ್​ಪೋರ್ಟ್​​, ಮೋದಿ ತೆರಳುವ ಮಾರ್ಗ, ಮೈಸೂರಿನ ಕೆಎಸ್‌ಒಯುನ ಘಟಿಕೋತ್ಸವ ಭವನದಲ್ಲೂ ತಪಾಸಣೆ ಮಾಡಲಾಗಿದೆ. ರಾಜ್ಯದಲ್ಲಿ ಚುನಾವಣೆ ಹಿನ್ನೆಲೆ ಪ್ರಧಾನಿ ಮೋದಿಗೆ ಹೆಚ್ಚುವರಿ ಭದ್ರತೆ ಒದಗಿಸಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:05 pm, Wed, 5 April 23

ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು