Ramanagara: ಏಪ್ರಿಲ್ 30ರಂದು ಚನ್ನಪಟ್ಟಣಕ್ಕೆ ಪ್ರಧಾನಿ ಮೋದಿ, ಸಂಚಾರ ಮಾರ್ಗದಲ್ಲಿ ಬದಲಾವಣೆ

ರಾಮನಗರದ ಚನ್ನಪಟ್ಟಣಕ್ಕೆ ಏಪ್ರಿಲ್ 30ರಂದು ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿರುವ ಹಿನ್ನೆಲೆ ಮೈಸೂರು-ಬೆಂಗಳೂರು ಹೆದ್ದಾರಿ ಹಾಗೂ ಚನ್ನಪಟ್ಟಣ-ಮದ್ದೂರು ನಡುವೆ ಹೈವೆಯಲ್ಲಿ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

Ramanagara: ಏಪ್ರಿಲ್ 30ರಂದು ಚನ್ನಪಟ್ಟಣಕ್ಕೆ ಪ್ರಧಾನಿ ಮೋದಿ, ಸಂಚಾರ ಮಾರ್ಗದಲ್ಲಿ ಬದಲಾವಣೆ
ಚನ್ನಪಟ್ಟಣಕ್ಕೆ ಪ್ರಧಾನಿ ಮೋದಿ ಆಗಮಿಸುತ್ತಿರುವ ಹಿನ್ನೆಲೆ ಏಪ್ರಿಲ್ 30ರಂದು ಸಂಚಾರ ಮಾರ್ಗದಲ್ಲಿ ಬದಲಾವಣೆ
Follow us
|

Updated on:Apr 27, 2023 | 6:22 PM

ರಾಮನಗರ: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elections 2023) ಹಿನ್ನೆಲೆ ಮತಬೇಟೆಯಾಡಲು ರಾಮನಗರ ಜಿಲ್ಲೆಯ ಚನ್ನಪಟ್ಟಣಕ್ಕೆ ಏಪ್ರಿಲ್ 30ರಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಮಿಸುತ್ತಿರುವ ಹಿನ್ನೆಲೆ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ. ಮೈಸೂರು-ಬೆಂಗಳೂರು ಹೆದ್ದಾರಿ (Bengaluru-Mysuru Expressway) ಮತ್ತು ಚನ್ನಪಟ್ಟಣ-ಮದ್ದೂರು ಸಂಪರ್ಕಿಸುವ ಹೈವೆಯಲ್ಲಿ (Channapatna-Maddur Highway) ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಅಲ್ಲದೆ, ವಾಹನ ಸವಾರರ ಅನುಕೂಲಕ್ಕಾಗಿ ಪರ್ಯಾಯ ಮಾರ್ಗಸೂಚಿಯನ್ನು ಪೊಲೀಸ್ ಇಲಾಖೆ ತಿಳಿಸಿದೆ.

ಮೋದಿ ಚನ್ನಪಟ್ಟಣ ಪ್ರವಾಸ ಹಿನ್ನೆಲೆ ಏಪ್ರಿಲ್ 30ರ ಬೆಳಗ್ಗೆ 11ರಿಂದ ಸಂಜೆ 4 ಗಂಟೆವರೆಗೆ ಮಾರ್ಗ ಬದಲಾವಣೆ ಮಾಡಿ ರಾಮನಗರ ಹಾಗೂ ಮಂಡ್ಯ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಚನ್ನಪಟ್ಟಣ ತಾಲ್ಲೂಕಿನ ಶೆಟ್ಟಿಹಳ್ಳಿ ಗ್ರಾಮದ ಬಳಿ ಮೋದಿ ಕಾರ್ಯಕ್ರಮ ಆಯೋಜನೆಗೊಂಡಿದ್ದು, ಮೈಸೂರು-ಬೆಂಗಳೂರು ಹೆದ್ದಾರಿ ಮತ್ತು ಚನ್ನಪಟ್ಟಣ-ಮದ್ದೂರು ನಡುವೆ ಹೈವೆಯಲ್ಲಿ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಅಂದು ವಾಹನ ದಟ್ಟಣೆ ಹೆಚ್ಚಳ ಹಿನ್ನಲೆ ಟ್ರಾಫಿಕ್ ಜಾಮ್ ಉಂಟಾಗುವ ಸಾಧ್ಯತೆ.

ಪರ್ಯಾಯ ಮಾರ್ಗಸೂಚಿ

  • ಬೆಂಗಳೂರಿನಿಂದ ಮೈಸೂರಿಗೆ ಹೊರಡುವ ವಾಹನಗಳು ಬಿಡದಿ- ಹಾರೋಹಳ್ಳಿ- ಕನಕಪುರ-ಮಳವಳ್ಳಿ ಮಾರ್ಗವಾಗಿ ಮೈಸೂರು ಪ್ರಯಾಣ ಮಾಡಬಹುದು
  • ಮೈಸೂರಿನಿಂದ ಬೆಂಗಳೂರಿಗೆ ಹೋಗುವ ವಾಹನಗಳು ಮದ್ದೂರು- ಕುಣಿಗಲ್-ನೆಲಮಂಗಲ ಮಾರ್ಗವಾಗಿ ಬೆಂಗಳೂರಿಗೆ ತಲುಪಬಹುದು
  • ಮೈಸೂರಿನಿಂದ ಬೆಂಗಳೂರಿಗೆ ಮತ್ತೊಂದು ಮಾರ್ಗವಿದ್ದು, ಮಳವಳ್ಳಿ, ಕನಕಪುರ, ಹಾರೋಹಳ್ಳಿ ಮಾರ್ಗವಾಗಿ ಬೆಂಗಳೂರು ತಲುಪಬಹುದು

ಇದನ್ನೂ ಓದಿ: ಮೋದಿ ವಿರುದ್ಧದ ಹೇಳಿಕೆ ವಿವಾದ ಪಡೆಯುತ್ತಿದ್ದಂತೆ ಯುಟರ್ನ್ ಹೊಡೆದ ಮಲ್ಲಿಕಾರ್ಜುನ ಖರ್ಗೆ

ಚನ್ನಪಟ್ಟಣ ತಾಲ್ಲೂಕಿನ ಶೆಟ್ಟಿಹಳ್ಳಿ ಗ್ರಾಮದ ಬಳಿ ಸುಮಾರು ಮೂವತ್ತು ಎಕರೆ ಪ್ರದೇಶದಲ್ಲಿ ಸಮಾವೇಶ ನಡೆಯಲಿದೆ. ಎರಡರಿಂದ ಮೂರು ಲಕ್ಷಕ್ಕೂ ಹೆಚ್ಚು ಜನ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ವೇದಿಕೆ ನಿರ್ಮಾಣ ಕಾರ್ಯ ಈಗಾಗಲೇ ಭರದಿಂದ ಸಾಗುತ್ತಿದೆ. ಕಳೆದ ಕೆಲವು ತಿಂಗಳುಗಳಲ್ಲಿ ಪ್ರಧಾನಿ ಮೋದಿ ಅವರು ರಾಜ್ಯಕ್ಕೆ 8 ಬಾರಿ ಆಗಮಿಸಿದ್ದಾರೆ. ವಿವಿಧ ಅಭಿಬವೃದ್ಧಿ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಪಕ್ಷದ ಪ್ರಚಾರ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ.

ಇದೀಗ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಅವರನ್ನು ಸಾಧ್ಯವಾದಷ್ಟು ಬಾರಿ ರಾಜ್ಯಕ್ಕೆ ಕರೆಸಿಕೊಂಡು ಪ್ರಚಾರ ನಡೆಸುವ ಉದ್ದೇಶ ಬಿಜೆಪಿಯದ್ದಾಗಿದೆ. ಮೋದಿ ಅವರ ಜನಪ್ರಿಯತೆಯನ್ನು ಬಳಸಿಕೊಂಡು ರಾಜ್ಯದಲ್ಲಿ ಮರಳಿ ಅಧಿಕಾರ ಹಿಡಿಯಬೇಕೆಂದು ಬಿಜೆಪಿ ಶತಾಯಗತಾಯ ಯತ್ನಿಸುತ್ತಿದೆ. ಇದಕ್ಕಾಗಿ ಹಳೇ ಮೈಸೂರು ಭಾಗದಲ್ಲಿ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿವುಸುವ ಗುರಿಹಾಕಿಕೊಂಡಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:22 pm, Thu, 27 April 23

ತಾಜಾ ಸುದ್ದಿ
ವ್ಯವಸಾಯ ಮಾಡಲು ಲಕ್ಷಾಂತರ ಎಕರೆ ಜಮೀನು ವಶಪಡಿಸಿಕೊಂಡ ಪಾಕಿಸ್ತಾನ ಸೇನ
ವ್ಯವಸಾಯ ಮಾಡಲು ಲಕ್ಷಾಂತರ ಎಕರೆ ಜಮೀನು ವಶಪಡಿಸಿಕೊಂಡ ಪಾಕಿಸ್ತಾನ ಸೇನ
ನಾಳೆ ಓಲಾ-ಊಬರ್ ಕ್ಯಾಬ್​ಗಳು ರಸ್ತೆಗಿಳಿಯಲ್ಲ; ಕ್ಯಾಬ್ ಚಾಲಕರ ಸಂಘದ ಅಧ್ಯಕ್ಷ
ನಾಳೆ ಓಲಾ-ಊಬರ್ ಕ್ಯಾಬ್​ಗಳು ರಸ್ತೆಗಿಳಿಯಲ್ಲ; ಕ್ಯಾಬ್ ಚಾಲಕರ ಸಂಘದ ಅಧ್ಯಕ್ಷ
ಬ್ರಿಟಿಷರು ಭಾರತ ಬಿಟ್ಟು ಹೋಗಿದ್ದು ನೇತಾಜಿ ಭಯದಿಂದ: ಬಸನಗೌಡ ಯತ್ನಾಳ್
ಬ್ರಿಟಿಷರು ಭಾರತ ಬಿಟ್ಟು ಹೋಗಿದ್ದು ನೇತಾಜಿ ಭಯದಿಂದ: ಬಸನಗೌಡ ಯತ್ನಾಳ್
ಚಿರಂಜೀವಿ ಕೊನೆಯ ಸಿನಿಮಾ ‘ರಾಜಮಾರ್ತಂಡ’ಕ್ಕೆ ಭರ್ಜರಿ ಪ್ರಚಾರ
ಚಿರಂಜೀವಿ ಕೊನೆಯ ಸಿನಿಮಾ ‘ರಾಜಮಾರ್ತಂಡ’ಕ್ಕೆ ಭರ್ಜರಿ ಪ್ರಚಾರ
ದರ್ಶನ್ ತಮಗೆ ಮಾಡಿರುವ ಸಹಾಯದ ಬಗ್ಗೆ ಯಶಸ್ ಸೂರ್ಯ ಭಾವುಕ ಮಾತು
ದರ್ಶನ್ ತಮಗೆ ಮಾಡಿರುವ ಸಹಾಯದ ಬಗ್ಗೆ ಯಶಸ್ ಸೂರ್ಯ ಭಾವುಕ ಮಾತು
Video: ನೋಡ ನೋಡುತ್ತಿದ್ದಂತೆ ಚಲಿಸಿದ ಕಾರು: ಯುವಕನಿಂದ ಮಗು ಬಚಾವ್
Video: ನೋಡ ನೋಡುತ್ತಿದ್ದಂತೆ ಚಲಿಸಿದ ಕಾರು: ಯುವಕನಿಂದ ಮಗು ಬಚಾವ್
ಕಾಂಗ್ರೆಸ್ ನಾಯಕರನ್ನು ಭೇಟಿಯಾದರೆ  ಪಕ್ಷ ಸೇರಿದಂತಲ್ಲ: ಎಂಪಿ ರೇಣುಕಾಚಾರ್ಯ
ಕಾಂಗ್ರೆಸ್ ನಾಯಕರನ್ನು ಭೇಟಿಯಾದರೆ  ಪಕ್ಷ ಸೇರಿದಂತಲ್ಲ: ಎಂಪಿ ರೇಣುಕಾಚಾರ್ಯ
‘​ರಾಜ್​ಕುಮಾರ್ ಚಿತ್ರಕ್ಕೆ ಥಿಯೇಟರ್​ ಸಿಗಲು ವಾಟಾಳ್​ ಕಾರಣ’; ಚಿನ್ನೇಗೌಡ
‘​ರಾಜ್​ಕುಮಾರ್ ಚಿತ್ರಕ್ಕೆ ಥಿಯೇಟರ್​ ಸಿಗಲು ವಾಟಾಳ್​ ಕಾರಣ’; ಚಿನ್ನೇಗೌಡ
ಜಿಟಿಡಿ ಪ್ರಕಾರ ಬಿಜೆಪಿ-ಜೆಡಿಎಸ್ ಮೈತ್ರಿ ಅಸೆಂಬ್ಲಿ ಚುನಾವಣೆಗೂ ಅನ್ವಯ!
ಜಿಟಿಡಿ ಪ್ರಕಾರ ಬಿಜೆಪಿ-ಜೆಡಿಎಸ್ ಮೈತ್ರಿ ಅಸೆಂಬ್ಲಿ ಚುನಾವಣೆಗೂ ಅನ್ವಯ!
ಯಡಿಯೂರಪ್ಪ ಕೇಂದ್ರ ಸರ್ಕಾರಕ್ಕೆ ಯಾಕೆ ಮನವರಿಕೆ ಮಾಡುತ್ತಿಲ್ಲ?ಮಧು ಬಂಗಾರಪ್ಪ
ಯಡಿಯೂರಪ್ಪ ಕೇಂದ್ರ ಸರ್ಕಾರಕ್ಕೆ ಯಾಕೆ ಮನವರಿಕೆ ಮಾಡುತ್ತಿಲ್ಲ?ಮಧು ಬಂಗಾರಪ್ಪ