ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​ಗೆ ಶುಭಕೋರಿದ ಪ್ರಧಾನಿ ಮೋದಿ

ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ಹಾಗೂ ಉಪಮುಖ್ಯಮಂತ್ರಿ ಪದಗ್ರಹಣ ಮಾಡಿದ ಡಿಕೆ ಶಿವಕುಮಾರ್ ಅವರಿಗೆ ಪ್ರಧಾನಿ ಮೋದಿ ಶುಭಕೋರಿದ್ದಾರೆ.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​ಗೆ ಶುಭಕೋರಿದ ಪ್ರಧಾನಿ ಮೋದಿ
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​ಗೆ ಶುಭಕೋರಿದ ಪ್ರಧಾನಿ ಮೋದಿ
Follow us
Rakesh Nayak Manchi
|

Updated on: May 20, 2023 | 3:39 PM

ಬೆಂಗಳೂರು: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ಸಿದ್ದರಾಮಯ್ಯ (Siddaramaiah) ಹಾಗೂ ಉಪಮುಖ್ಯಮಂತ್ರಿ ಪದಗ್ರಹಣ ಮಾಡಿದ ಡಿಕೆ ಶಿವಕುಮಾರ್ (DK Shivakumar) ಅವರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಶುಭಕೋರಿದ್ದಾರೆ. ಇವರಲ್ಲದೆ, ಕರ್ನಾಟಕ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ (Basavaraj Bommai) ಮತ್ತು ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಅವರು ಕೂಡ ಟ್ವೀಟ್ ಮೂಲಕ ಶುಭ ಕೋರಿದ್ದಾರೆ.

ಟ್ವೀಟ್ ಮೂಲಕ ಶುಭಕೋರಿದ ಪ್ರಧಾನಿ ನರೇಂದ್ರ ಮೋದಿ, “ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿಕೆ ಶಿವಕುಮಾರ್​ ಅವರಿಗೆ ಅಭಿನಂದನೆಗಳು. ಫಲಪ್ರದ ಅಧಿಕಾರಾವಧಿಗಾಗಿ ನನ್ನ ಶುಭ ಹಾರೈಕೆಗಳು” ಎಂದು ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್​ ಅವರಿಗೆ ಶುಭಕೋರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಅವರು, “ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಸಿದ್ದರಾಮಯ್ಯ ಅವರು ಹಾಗೂ ಅವರ ಸಚಿವ ಸಂಪುಟ ಸದಸ್ಯರಿಗೆ ಹೃತ್ಪೂರ್ವಕ ಅಭಿನಂದನೆಗಳು” ಎಂದರು.

ಇದನ್ನೂ ಓದಿ: ಭರ್ಜರಿ ಬಹುಮತದೊಂದಿಗೆ ಸರ್ಕಾರ ರಚಿಸಿದ ಜೋಡೆತ್ತು: ಸಿದ್ದರಾಮಯ್ಯ 2.O

ಮತ್ತೋರ್ವ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಕೂಡ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರಿಗೆ ಟ್ವೀಟ್ ಮೂಲಕ ಶುಭಕೋರಿದ್ದಾರೆ. “ರಾಜ್ಯದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್ ಸರಕಾರಕ್ಕೆ ಶುಭವಾಗಲಿ. ನೂತನ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು, ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್​ಅವರು ಹಾಗೂ ಅವರ ಸಂಪುಟ ಸಹೋದ್ಯೋಗಿಗಳಿಗೆ ಹಾರ್ದಿಕ ಶುಭಾಶಯಗಳು” ಎಂದರು.

“ರಾಜ್ಯದ ಜನತೆಗೆ ಅರ್ಪಣಾ ಮನೋಭಾವದಿಂದ ಅವರೆಲ್ಲರೂ ಸೇವೆ ಮಾಡಲಿ. ಕನ್ನಡನಾಡಿನ ಜನಹಿತಕ್ಕಾಗಿ ಕಾಂಗ್ರೆಸ್ ಸರ್ಕಾರ ಕೈಗೊಳ್ಳುವ ಪ್ರತಿಯೊಂದು ಕ್ರಮಕ್ಕೂ ನಮ್ಮ ಜೆಡಿಎಸ್ ಪಕ್ಷ ಪರಿಪೂರ್ಣ ಬೆಂಬಲ ನೀಡಲಿದೆ” ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ