AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಭೇಟಿ: ಮಂಗಳೂರು-ಉಡುಪಿ ಹೆದ್ದಾರಿಯಲ್ಲಿ ವಾಹನ ಸಂಚಾರ ಬದಲಾವಣೆ, ಇಲ್ಲಿದೆ ಪರ್ಯಾಯ ಮಾರ್ಗ

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನಲೆ ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ. ಇಂದು(ಮೇ.3) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ನಡೆಸಲಿದ್ದು, ಮಂಗಳೂರು-ಉಡುಪಿ ಹೆದ್ದಾರಿಯಲ್ಲಿ ವಾಹನ ಸಂಚಾರ ಬದಲಾವಣೆ ಹೀಗಿದೆ.

ಪ್ರಧಾನಿ ಮೋದಿ ಭೇಟಿ: ಮಂಗಳೂರು-ಉಡುಪಿ ಹೆದ್ದಾರಿಯಲ್ಲಿ ವಾಹನ ಸಂಚಾರ ಬದಲಾವಣೆ, ಇಲ್ಲಿದೆ ಪರ್ಯಾಯ ಮಾರ್ಗ
ಪ್ರಧಾನಿ ಮೋದಿ ಪ್ರಚಾರ ಹಿನ್ನಲೆ ಮಾರ್ಗ ಬದಲಾವಣೆ
ಕಿರಣ್ ಹನುಮಂತ್​ ಮಾದಾರ್
|

Updated on: May 03, 2023 | 8:19 AM

Share

ದಕ್ಷಿಣ ಕನ್ನಡ: ಕರ್ನಾಟಕ ವಿಧಾನಸಭೆ ಚುನಾವಣೆ(Karnataka Assembly Election) ಹಿನ್ನಲೆ ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ. ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ(BJP) ಗೆಲುವು ಸಾಧಿಸಲು ಶಥಾಯ ಗತಾಯ ಪ್ರಯತ್ನ ಮಾಡುತ್ತಿದ್ದು, ಅದರಂತೆ ಇಂದು(ಮೇ.3)ಬೆಳಗ್ಗೆ 11 ಗಂಟೆಗೆ ಜಿಲ್ಲೆಯ ಮೂಡಬಿದಿರೆ ಕ್ಷೇತ್ರದ ಮುಲ್ಕಿಯಲ್ಲಿ ಮೋದಿ ಮತಬೇಟೆ ನಡೆಸಲಿದ್ದಾರೆ. ಈ ಹಿನ್ನಲೆ ಮಂಗಳೂರು-ಉಡುಪಿ ಹೆದ್ದಾರಿಯಲ್ಲಿ ವಾಹನ ಸಂಚಾರ ಬದಲಾವಣೆ ಮಾಡಲಾಗಿದ್ದು, ಹೀಗಿದೆ.

ಮಂಗಳೂರು-ಉಡುಪಿ ಹೆದ್ದಾರಿಯಲ್ಲಿ ವಾಹನ ಸಂಚಾರ ಬದಲಾವಣೆ

ಹೌದು ಪ್ರಧಾನಿ ಮೋದಿ ಪ್ರಚಾರ ಹಿನ್ನಲೆ ಮಂಗಳೂರು-ಉಡುಪಿ ಹೆದ್ದಾರಿಯಲ್ಲಿ ವಾಹನ ಸಂಚಾರ ಬದಲಾವಣೆ ಮಾಡಲಾಗಿದ್ದು, ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುವ ವಾಹನಗಳು, ಮುಲ್ಕಿ ವಿಜಯ ಸನ್ನಿಧಿಯ ಬಳಿ ಎಡಕ್ಕೆ ಚಲಸಿ ಕಿನ್ನಿಗೋಳಿ, ಕಟೀಲು, ಬಜಪೆ, ಕಾವೂರು ಮೂಲಕ ಮಂಗಳೂರು ಕಡೆ ಸಂಚರಿಸಲು ವ್ಯವಸ್ಥೆ ಮಾಡಲಾಗಿದೆ. ಇನ್ನು ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುವ ಎಲ್ಲಾ ರೀತಿಯ ವಾಹನಗಳು ಕೆ.ಪಿ.ಟಿ ಜಂಕ್ಷನ್​ನಲ್ಲಿ ಬಲಕ್ಕೆ ಚಲಿಸಿ ಕಾವೂರು, ಬಜಪೆ, ಕಟೀಲು, ಕಿನ್ನಿಗೋಳಿ, ಮುಲ್ಕಿ ಕಡೆಗೆ ಅಥವಾ ಕೂಳೂರು ಜಂಕ್ಷನ್‌ನಿಂದ ಬಲಕ್ಕೆ ಚಲಸಿ ಕಾವೂರು, ಬಜಪೆ, ಕಟೀಲು, ಕಿನ್ನಿಗೋಳಿ ಮಾರ್ಗವಾಗಿ ಮುಲ್ಕಿ ಕಡೆಗೆ ಸಂಚರಿಸಬಹುದು. ಜೊತೆಗೆ ಮಂಗಳೂರು, ಸುರತ್ಕಲ್ ಕಡೆಯಿಂದ ಉಡುಪಿ ಕಡೆಗೆ ಹೋಗುವ ವಾಹನಗಳು, ಹಳೆಯಂಗಡಿ ಜಂಕ್ಷನ್ ಬಳಿ ಬಲಕ್ಕೆ ತಿರುಗಿ ಪಕ್ಷಿಕೆರೆ, ಎಸ್-ಕೋಡಿ ಮಾರ್ಗವಾಗಿ ಮುಲ್ಕಿ ಕಡೆಗೆ ಸಂಚರಿಸಲು ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ:Karnataka Assembly Elction: ಮೇ.05ರಿಂದ ಪ್ರಧಾನಿ ಮೋದಿ ಮೂರು ದಿನ ರಾಜ್ಯ ಪ್ರವಾಸ; ಇಲ್ಲಿದೆ ವೇಳಾಪಟ್ಟಿ

ಕರಾವಳಿ ಚುನಾವಣಾ ಅಖಾಡದಲ್ಲಿ ಇಂದು ಮೋದಿ ಪ್ರಚಾರ

ಮಂಗಳೂರಿನ ಮುಲ್ಕಿಯಿಂದ ಇಂದಿನ ಮೋದಿ ಪ್ರಚಾರ ಆರಂಭವಾಗಲಿದ್ದು, ಉಡುಪಿ ಮತ್ತು ದಕ್ಷಿಣ ಕನ್ನಡದ 13 ಕ್ಷೇತ್ರಗಳ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ. ಬೆಳಗ್ಗೆ 10.30ಕ್ಕೆ ಮಂಗಳೂರಿನ ಮುಲ್ಕಿಯಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಮೋದಿ ಕೇಸರಿ ಕಲರವ ಎಬ್ಬಿಸಲಿದ್ದಾರೆ. ಎರಡು ಜಿಲ್ಲೆಗಳಿಂದ ಎರಡೂವರೆ ಲಕ್ಷ ಜನರು ಆಗಮಿಸುವ ನಿರೀಕ್ಷೆಯಿದ್ದು, ಬಿಜೆಪಿ ಪ್ರಧಾನಿ ಸಮಾವೇಶಕ್ಕೆ ಪ್ರತಿ ಬೂತ್ ಮಟ್ಟದಲ್ಲಿ ಸಭೆ ನಡೆಸಿದೆ. ಇನ್ನು ಪ್ರಚಾರದ ವೇಳೆ ಪ್ರವೀಣ್ ನೆಟ್ಟಾರ್ ಹತ್ಯೆ ವಿಷಯ, ಬಜರಂಗ ದಳ ,ಪಿಎಫ್ ಐ ಬ್ಯಾನ್ ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ಪ್ರಸ್ತಾಪಿಸುವ ಸಾಧ್ಯತೆಯಿದೆ.

ಇನ್ನಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು