AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ನಾಳೆ ಮೋದಿ ರೋಡ್ ಶೋ: 34 ರಸ್ತೆಗಳು ಬಂದ್, ಯಾವುವು? ಇಲ್ಲಿದೆ ನೋಡಿ

ಪ್ರಧಾನಿ ನರೇಂದ್ರ ಮೋದಿ ಅವರು ಮೇ 6 ಹಾಗೂ 7 ರಂದು ಬೆಂಗಳೂರಿನಲ್ಲಿ ಬೃಹತ್ ರೋಡ್ ಶೋ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ (ಶನಿವಾರ) ರೋಡ್ ಶೋ ಸಾಗುವ ಒಟ್ಟು 34 ರಸ್ತೆಗಳನ್ನು ಬಳಸದಂತೆ ವಾಹನ ಸವಾರರಿಗೆ ಬೆಂಗಳೂರು ಟ್ರಾಫಿಕ್ ಪೊಲೀಸ್​ ಸೂಚಿಸಿದೆ. ಹಾಗಾದ್ರೆ, ಯಾವೆಲ್ಲ ರಸ್ತೆಗಳು ಬಂದ್ ಆಗಲಿವೆ ಎನ್ನುವುದು ಇಲ್ಲಿದೆ ಮಾಹಿತಿ.

ಬೆಂಗಳೂರಿನಲ್ಲಿ ನಾಳೆ ಮೋದಿ ರೋಡ್ ಶೋ: 34 ರಸ್ತೆಗಳು ಬಂದ್, ಯಾವುವು? ಇಲ್ಲಿದೆ ನೋಡಿ
ಪ್ರಧಾನಿ ನರೇಂದ್ರ ಮೋದಿImage Credit source: PIB Photo
ರಮೇಶ್ ಬಿ. ಜವಳಗೇರಾ
|

Updated on:May 05, 2023 | 3:07 PM

Share

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯ ಮತದಾನ ದಿನ ಸಮೀಪಿಸುತ್ತಿದ್ದಂತೆಯೇ ಪ್ರಚಾರದ ಭರಾಟೆ ಮತ್ತೋರ್ವ ಜೋರಾಗಿದೆ. ಅದರಲ್ಲೂ ಮೋದಿ ಪ್ರಚಾರ ರಾಜ್ಯದ ಮೂಲೆ ಮೂಲೆಗಳಲ್ಲಿ ಓಡಾಡುತ್ತಿದ್ದಾರೆ. ಮೇ 8ರಂದು ಬಹಿರಂಗ ಪ್ರಚಾರಕ್ಕೆ ಕೊನೆ ದಿನವಾಗಿದ್ದರಿಂದ ಮೋದಿ, ಕೊನೆ ಕ್ಷಣದಲ್ಲಿ ಬೆಂಗಳೂರಿನಲ್ಲಿ ಬೃಹತ್ ರೋಡ್ ಶೋ ಮಾಡಲಿದ್ದಾರೆ. 28 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಬೆಂಗಳೂರು ನಗರದಲ್ಲಿ ಎರಡು ಹಂತಗಳಲ್ಲಿ ಸುಮಾರು 30ರಿಂದ 35 ಕಿ.ಮೀ. ರೋಡ್​ ಶೋ ನಡೆಸಲಿದ್ದಾರೆ. ಮೇ 06(ಶನಿವಾರ) ಹಾಗೂ ಮೇ 07(ಭಾನುವಾರ) ರೋಡ್ ಶೋ ಇರುವುದರಿಂದ ಹಲವು ರಸ್ತೆಗಳಲ್ಲಿ ಸಂಚಾರ ಬಂದ್ ಆಗಲಿದೆ. ಈ ಬಗ್ಗೆ ನಗರ ಸಂಚಾರಿ ಪೊಲೀಸ್ ಮಾರ್ಗ ಸೂಚಿ ಬಿಡುಗಡೆ ಮಾಡಿದ್ದುಮ ಶನಿವಾರ ಒಟ್ಟು ಮೂವತ್ತನಾಲ್ಕು ರಸ್ತೆಗಳನ್ನು ಬಳಸದಂತೆ ಸೂಚಿಸಿದ್ದಾರೆ. ಯಾವೆಲ್ಲ ರಸ್ತೆಗಳು ಬಳಸಬಾರದು ಎನ್ನುವ ಮಾಹಿತಿ ಈ ಕೆಳಗಿನಂತಿದೆ ನೋಡಿ.

ಇದನ್ನು ಓದಿ: ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ ಮತ್ತೆ ಬದಲಾವಣೆ: ಇಲ್ಲಿದೆ ಹೊಸ ರೂಟ್ ಮ್ಯಾಪ್​

ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ಹಿನ್ನಲೆಯಲ್ಲಿ ಒಟ್ಟು 34 ರಸ್ತೆಗಳನ್ನು ಬಳಸದಂತೆ ಬೆಂಗಳೂರು ಟ್ರಾಫಿಕ್ ಪೊಲೀಸರು ಸೂಚಿಸಿದ್ದು, ಶನಿವಾರ ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1 ಗಂಟೆ ರವರೆಗೆ ಬದಲಿ ರಸ್ತೆ ಮಾರ್ಗಗಳನ್ನು ಬಳಸುವಂತೆ ವಾಹನ ಸವಾರರಿಗೆ ಸಲಹೆ ನೀಡಿದೆ.

ಶನಿವಾರ ಯಾವೆಲ್ಲ ರಸ್ತೆಗಳು ಬಂದ್?

  •  ರಾಜ ಭವನ ರಸ್ತೆ.  ರಮಣ ಮಹರ್ಷಿ ರಸ್ತೆ,  ಮೇಖ್ರಿ ವೃತ್ತ, ಆರ್ ಬಿ ಐ ಲೇಔಟ್ ಜೆಪಿ ನಗರ,  ಶಿರ್ಸಿ ಸರ್ಕಲ್, ಜೆಜೆ ನಗರ, ಬಿನ್ನಿ ಮಿಲ್ ರಸ್ತೆ,  ಶಾಲಿನಿ ಮೈದಾನ, ಸೌತ್ ಎಂಡ್ ಸರ್ಕಲ್, ಆಮುರ್ಗಂ ಸರ್ಕಲ್, ಬುಲ್  ಟೆಂಪಲ್ ರೋಡ್,  ರಾಮಕೃಷ್ಣಾಶ್ರಮ,  ಉಮಾ ಟಾಕೀಸ್,  ಟಿಆರ್ ಮಿಲ್,  ಚಾಮಾರಾಜಪೇಟೆ ಮುಖ್ಯ ರಸ್ತೆ. ಬಾಳೆಕಾಯಿ ಮಂಡಿ, ಕೆ ಪಿ ಅಗ್ರಹಾರ.
  • ಮಾಗಡಿ ರೋಡ್,  ಚೇಳೂರುಪಾಳ್ಯ ರೋಡ್,  ಎಂಸಿ ಸರ್ಕಲ್,  ವೆಸ್ಟ್ ಆಫ್ ಕಾರ್ಡ್ ರೋಡ್,  ಎಂ ಸಿ ಲೇಔಟ್ , ನಾಗರ ಭಾವಿ ಮುಖ್ಯ ರಸ್ತೆ,  ಬಿಜಿಎಸ್ ಮೈದಾನ, ಹಾವನೂರು ಸರ್ಕಲ್,  ಎಂಟನೇ ಮುಖ್ಯರಸ್ತೆ ಬಸವೇಶ್ವರ ನಗರ, ಬಸವೇಶ್ವರ ನಗರ ಹದಿನೈದನೇ ಮುಖ್ಯ ರಸ್ತೆ, ಶಂಕರ್ ಮಠ, ಮೋದಿ ಅಸ್ಪತ್ರೆ ರೋಡ್, ನವರಂಗ್ ರಸ್ತೆ, ಎಂ ಕೆಕೆ ರಸ್ತೆ, ಮಲ್ಲೇಶ್ವರಂ ಸರ್ಕಲ್,  ಸಂಪಿಗೆ ರಸ್ತೆ, ಸ್ಯಾಂಕಿ ರಸ್ತೆ.

ಈ ಮೇಲಿನ ರಸ್ತೆಗಳನ್ನು ಬಳಸದೆ ಬೇರೆ ಪರಿಯಾಗ ಮಾರ್ಗ ಗಳನ್ನು ಬಳಸುವಂತೆ  ವಾಹನ ಸವಾರರಿಗೆ ಸೂಚನೆ ನೀಡಲಾಗಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:23 pm, Fri, 5 May 23

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ