ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯ ಮತದಾನ ದಿನ ಸಮೀಪಿಸುತ್ತಿದ್ದಂತೆಯೇ ಪ್ರಚಾರದ ಭರಾಟೆ ಮತ್ತೋರ್ವ ಜೋರಾಗಿದೆ. ಅದರಲ್ಲೂ ಮೋದಿ ಪ್ರಚಾರ ರಾಜ್ಯದ ಮೂಲೆ ಮೂಲೆಗಳಲ್ಲಿ ಓಡಾಡುತ್ತಿದ್ದಾರೆ. ಮೇ 8ರಂದು ಬಹಿರಂಗ ಪ್ರಚಾರಕ್ಕೆ ಕೊನೆ ದಿನವಾಗಿದ್ದರಿಂದ ಮೋದಿ, ಕೊನೆ ಕ್ಷಣದಲ್ಲಿ ಬೆಂಗಳೂರಿನಲ್ಲಿ ಬೃಹತ್ ರೋಡ್ ಶೋ ಮಾಡಲಿದ್ದಾರೆ. 28 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಬೆಂಗಳೂರು ನಗರದಲ್ಲಿ ಎರಡು ಹಂತಗಳಲ್ಲಿ ಸುಮಾರು 30ರಿಂದ 35 ಕಿ.ಮೀ. ರೋಡ್ ಶೋ ನಡೆಸಲಿದ್ದಾರೆ. ಮೇ 06(ಶನಿವಾರ) ಹಾಗೂ ಮೇ 07(ಭಾನುವಾರ) ರೋಡ್ ಶೋ ಇರುವುದರಿಂದ ಹಲವು ರಸ್ತೆಗಳಲ್ಲಿ ಸಂಚಾರ ಬಂದ್ ಆಗಲಿದೆ. ಈ ಬಗ್ಗೆ ನಗರ ಸಂಚಾರಿ ಪೊಲೀಸ್ ಮಾರ್ಗ ಸೂಚಿ ಬಿಡುಗಡೆ ಮಾಡಿದ್ದುಮ ಶನಿವಾರ ಒಟ್ಟು ಮೂವತ್ತನಾಲ್ಕು ರಸ್ತೆಗಳನ್ನು ಬಳಸದಂತೆ ಸೂಚಿಸಿದ್ದಾರೆ. ಯಾವೆಲ್ಲ ರಸ್ತೆಗಳು ಬಳಸಬಾರದು ಎನ್ನುವ ಮಾಹಿತಿ ಈ ಕೆಳಗಿನಂತಿದೆ ನೋಡಿ.
ಇದನ್ನು ಓದಿ: ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ ಮತ್ತೆ ಬದಲಾವಣೆ: ಇಲ್ಲಿದೆ ಹೊಸ ರೂಟ್ ಮ್ಯಾಪ್
ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ಹಿನ್ನಲೆಯಲ್ಲಿ ಒಟ್ಟು 34 ರಸ್ತೆಗಳನ್ನು ಬಳಸದಂತೆ ಬೆಂಗಳೂರು ಟ್ರಾಫಿಕ್ ಪೊಲೀಸರು ಸೂಚಿಸಿದ್ದು, ಶನಿವಾರ ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1 ಗಂಟೆ ರವರೆಗೆ ಬದಲಿ ರಸ್ತೆ ಮಾರ್ಗಗಳನ್ನು ಬಳಸುವಂತೆ ವಾಹನ ಸವಾರರಿಗೆ ಸಲಹೆ ನೀಡಿದೆ.
ಈ ಮೇಲಿನ ರಸ್ತೆಗಳನ್ನು ಬಳಸದೆ ಬೇರೆ ಪರಿಯಾಗ ಮಾರ್ಗ ಗಳನ್ನು ಬಳಸುವಂತೆ ವಾಹನ ಸವಾರರಿಗೆ ಸೂಚನೆ ನೀಡಲಾಗಿದೆ.
ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:23 pm, Fri, 5 May 23