Narendra Modi: ನನ್ನ ಕಚೇರಿಯಲ್ಲಿರುವ ಪ್ರಧಾನಿ ಮೋದಿ ಫೋಟೋವನ್ನು ತೆಗೆಯೋಲ್ಲ, ಅದು ನನ್ನ ಸಂಸ್ಕೃತಿಯಲ್ಲ- ಬಿಜೆಪಿ ಮಾಜಿ ನಾಯಕ ಜಗದೀಶ್ ಶೆಟ್ಟರ್ ಹೀಗೆ ಹೇಳಿದ್ದೇಕೆ?

Jagadish Shettar: ಕಾಂಗ್ರೆಸ್ ಪಕ್ಷಕ್ಕೆ ಹೈಜಂಪ್​​ ಮಾಡಿದ ನಂತರವೂ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋ ತೆಗೆದಿಲ್ಲ, ಹಾಗೆ ಮಾಡುವುದು ನನ್ನ ಸಂಸ್ಕೃತಿ ಅಲ್ಲ, ನನ್ನ ಜಾಯಮಾನಕ್ಕೆ ಬಂದಿಲ್ಲ ಎಂದು ಕಾಂಗ್ರೆಸ್ ಪಕ್ಷದ ಹಾಲಿ ಹಿರಿಯ ನಾಯಕ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

Narendra Modi: ನನ್ನ ಕಚೇರಿಯಲ್ಲಿರುವ ಪ್ರಧಾನಿ ಮೋದಿ ಫೋಟೋವನ್ನು ತೆಗೆಯೋಲ್ಲ, ಅದು ನನ್ನ ಸಂಸ್ಕೃತಿಯಲ್ಲ- ಬಿಜೆಪಿ ಮಾಜಿ ನಾಯಕ ಜಗದೀಶ್ ಶೆಟ್ಟರ್ ಹೀಗೆ ಹೇಳಿದ್ದೇಕೆ?
ನನ್ನ ಕಚೇರಿಯಲ್ಲಿರುವ ಪ್ರಧಾನಿ ಮೋದಿ ಫೋಟೋ ತೆಗೆಯೋಲ್ಲ -ಮಾಜಿ ಬಿಜೆಪಿ ನಾಯಕ ಜಗದೀಶ್ ಶೆಟ್ಟರ್
Follow us
ಸಾಧು ಶ್ರೀನಾಥ್​
|

Updated on:May 03, 2023 | 5:36 PM

ಕಾಂಗ್ರೆಸ್ ಪಕ್ಷಕ್ಕೆ ಹೈಜಂಪ್​​ ಮಾಡಿದ ನಂತರವೂ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಫೋಟೋ ತೆಗೆದಿಲ್ಲ, ಹಾಗೆ ಮಾಡುವುದು ನನ್ನ ಸಂಸ್ಕೃತಿ ಅಲ್ಲ, ನನ್ನ ಜಾಯಮಾನಕ್ಕೆ ಬಂದಿಲ್ಲ ಎಂದು ಕಾಂಗ್ರೆಸ್ ಪಕ್ಷದ ಹಾಲಿ ಹಿರಿಯ ನಾಯಕ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ (Jagadish Shettar) ಹೇಳಿದ್ದಾರೆ. ದಶಕಗಳಿಂದಲೂ ತಾನು ಸೇವೆ ಸಲ್ಲಿಸಿದ ಭಾರತೀಯ ಜನತಾ ಪಕ್ಷವು (ಬಿಜೆಪಿ Karnataka BJP) ಹಾಲಿ ಅಸೆಂಬ್ಲಿ ಚುನಾವಣೆ (Karnataka Assembly Elections 2023) ಹಿನ್ನೆಲೆಯಲ್ಲಿ ತನ್ನ ಸ್ವಕ್ಷೇತ್ರವಾದ ಹುಬ್ಬಳ್ಳಿ ಧಾರವಾಢ ಸೆಂಟ್ರಲ್ ಟಿಕೆಟ್ ನಿರಾಕರಿಸಿದ ನಂತರ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಹಾಲಿ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ತಮ್ಮ ಅದೃಷ್ಟವನ್ನು ಪರೀಕ್ಷಿಸುತ್ತಿದ್ದಾರೆ. ಆದರೆ ಇನ್ನೂ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ಅಮಿತ್ ಶಾ ಅವರುಗಳ ಫೋಟೋಗಳು ಕಚೇರಿಯ ಗೋಡೆಯ ಮೇಲೆ ರಾರಾಜಿಸುತ್ತಿವೆ. ಈ ವಿಚಾರ ಈಗ ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಸ್ವಾಭಾವಿಕವಾಗಿ, ಪಕ್ಷವು ಬದಲಾಗುತ್ತಿದ್ದಂತೆ, ಕಚೇರಿಯಲ್ಲಿ ಹೆಗ್ಗುರುತುಗಳಾಗಿ ರಾರಾಜಿಸುವ ಫೋಟೋಗಳನ್ನು ಕಿತ್ತೊಗೆದು, ತಮ್ಮ ರಾಜಕೀಯ ನಿಲುವಿಗೆ ಒಗ್ಗುವಂತಹ ಹಾಲಿ ಪಕ್ಷದ ಫೋಟೋಗಳನ್ನು ಹಾಕುವುದು ವಾಡಿಕೆಯಾಗಿದೆ. ಈಗಿಂದೀಗಲೇ ನಾನು ನನ್ನ ಹೊಸ ಪಕ್ಷದ ನಾಯಕರ ಭಾವಚಿತ್ರಗಳನ್ನು ನನ್ನ ಕಚೇರಿಯಲ್ಲಿ ನೇತು ಹಾಕಬಹುದು. ಆದರೆ ಅದು ನನಗೆ ಇಷ್ಟವಿಲ್ಲ. ಅದು ನನ್ನ ವ್ಯಕ್ತಿತ್ವವೂ ಅಲ್ಲ ಎಂದು ಕಾಂಗ್ರೆಸ್ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಜಗದೀಶ್ ಶೆಟ್ಟರ್ ಅವರು 1994 ರಿಂದ ಬಿಜೆಪಿ ಸದಸ್ಯರಾಗಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಬಿಜೆಪಿ ಜೊತೆಗಿನ ದೀರ್ಘಕಾಲದ ನಂಟು ಮುರಿದುಕೊಂಡಿರುವ ಶೆಟ್ಟರ್ ಈಗ ಕಾಂಗ್ರೆಸ್ ಧ್ವಜ ಹಿಡಿದು ಆ ಪಕ್ಷದ ಕಾರ್ಯಕರ್ತರೊಂದಿಗೆ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ. ತಮ್ಮ ಹಿಂದಿನದನ್ನು ಬದಿಗಿಟ್ಟು, ಶೆಟ್ಟರ್ ತಮ್ಮ ಗೃಹ ಕಚೇರಿಯಲ್ಲಿ ಸೋಫಾದಲ್ಲಿ ಕುಳಿತು ತನ್ನ ಬೆಂಬಲಿಗರು ಮತ್ತು ಕಾರ್ಯಕರ್ತರನ್ನು ಭೇಟಿಯಾಗುತ್ತಿದ್ದಾರೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಎರಡು ಫೋಟೋ ಫ್ರೇಮ್​​ಗಳು ಅವರು ಕುಳಿತುಕೊಳ್ಳುವ ಹಿಂದಿನ ಗೋಡೆಯ ಮೇಲೆ ಇನ್ನೂ ನೇತಾಡುತ್ತಿವೆ. ಅದೇ ಸೋಫಾದಲ್ಲಿ ಕುಳಿತು ಮಾಧ್ಯಮಗಳಿಗೂ ಸಂದರ್ಶನ ನೀಡುತ್ತಾರೆ. ಜನರನ್ನು ಭೇಟಿ ಮಾಡುತ್ತಿದ್ದಾರೆ.

ಇನ್ನು ಈ ಫೋಟೋಗಳ ಬಗ್ಗೆ ಪ್ರಶ್ನಿಸಿದಾಗ ಮ್ಮದೇ ಆದ ರೀತಿಯಲ್ಲಿ ಉತ್ತರಿಸಿದ್ದಾರೆ ಜಗದೀಶ್ ಶೆಟ್ಟರ್. ಪ್ರಧಾನಿ ನರೇಂದ್ರ ಮೋದಿಯವರಿಗೆ ಗೌರವ ಸೂಚಿಸುವುದರ ಬಗ್ಗೆ ಪ್ರತಿಕ್ರಿಯಿಸಿದ ಅವರು ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಬದಲಾದ ತಕ್ಷಣ ಹಿಂದಿನ ನಾಯಕರ ಚಿತ್ರಗಳನ್ನು ತೆಗೆಯುವುದು ಒಳ್ಳೆಯ ಸಂಪ್ರದಾಯವಲ್ಲ. ನಾನು ಅದನ್ನು ಮಾಡಲು ಸಾಧ್ಯವಿಲ್ಲ. ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ಬಗ್ಗೆ ಅಪಾರ ಗೌರವ ಹೊಂದಿದ್ದೇವೆ ಎಂದು ಈ ಹಿಂದೆಯೂ ಸಾಕಷ್ಟು ಬಾರಿ ಹೇಳಿದ್ದೇನೆ. ಈ ಚುನಾವಣೆ ನನ್ನ ಸ್ವಾಭಿಮಾನದ ಹೋರಾಟವೇ ಹೊರತು ರಾಜಕೀಯ ಆಕಾಂಕ್ಷೆಗಾಗಿ ಅಲ್ಲ ಎಂದು ಸೂಕ್ಷ್ಮವಾಗಿ ಹೇಳಿದರು. ನನ್ನ ಸ್ವಾಭಿಮಾನಕ್ಕೆ ಧಕ್ಕೆಯಾಯಿತು. ಹಾಗಾಗಿ ಬೇಷರತ್ತಾಗಿ ಕಾಂಗ್ರೆಸ್ ಸೇರಿದ್ದೇನೆ ಎಂದು ಹೇಳಿದರು.

Published On - 4:56 pm, Wed, 3 May 23

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ