ಏಪ್ರಿಲ್ 29ರಂದು ಕುಡಚಿಗೆ ಪ್ರಧಾನಿ ಮೋದಿ, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಆಗಮನ: ಪ್ರಹ್ಲಾದ್ ಜೋಶಿ
ಏಪ್ರಿಲ್ 29ರಂದು ಬೆಳಗಾವಿ ಜಿಲ್ಲೆಯ ಕುಡಚಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಗಮಿಸಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಹುಬ್ಬಳ್ಳಿ: ಏಪ್ರಿಲ್ 29ರಂದು ಬೆಳಗಾವಿ (Belagavi) ಜಿಲ್ಲೆಯ ಕುಡಚಿಗೆ (Kudachi) ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಆಗಮಿಸಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಹೇಳಿದ್ದಾರೆ. ರಾಜ್ಯದಲ್ಲಿ ಈ ಬಾರಿ ಬಿಜೆಪಿ (BJP) ಸ್ವಂತ ಬಲದಲ್ಲಿ ಅಧಿಕಾರಕ್ಕೆ ಬರುತ್ತೆ. ಎರಡು ಬಾರಿ ನಾವು ಸ್ವಂತ ಬಲದಿಂದ ಅಧಿಕಾರಕ್ಕೆ ಬರಲಿಲ್ಲ. ಇಂದು (ಏ.24) ಸಂಜೆ ಹುಬ್ಬಳ್ಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಆಗಮಿಸಲಿದ್ದಾರೆ. ಜಿಲ್ಲಾ ಪದಾಧಿಕಾರಿಗಳು, ಮಂಡಲ ಅಧ್ಯಕ್ಷರ ಜೊತೆ ಸಭೆ ಮಾಡುತ್ತಾರೆ. ಗದಗ, ಧಾರವಾಡ ಜಿಲ್ಲೆಯಲ್ಲಿನ ವಿಧಾನಸಭಾ ಕ್ಷೇತ್ರಗಳ ಬಗ್ಗೆ ಸಮಗ್ರ ಚರ್ಚೆ ಮಾಡಿ, ಸೂಕ್ತ ಮಾರ್ಗದರ್ಶನ ಮಾಡಲಿದ್ದಾರೆ. ಕಿತ್ತೂರು ಕರ್ನಾಟಕ ಭಾಗದಲ್ಲಿ ನಮ್ಮ ಸ್ಟ್ರೈಕ್ ರೇಟ್ ಚೆನ್ನಾಗಿದೆ ಎಂದು ಹೇಳಿದರು.
ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಇದಾದ ಮೇಲೆ ಬೆಳಗಾವಿ ಜಿಲ್ಲೆಯಲ್ಲಿ ಇನ್ನೊಂದು ಕಾರ್ಯಕ್ರಮ ಕೊಡಲು ನಾನು ಪ್ರಧಾನಿ ಮೋದಿಯವರಲ್ಲಿ ವಿನಂತಿ ಮಾಡಿದ್ದೇನೆ. ಇನ್ನು ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಬಹಳ ಬಹುಮತದಿಂದ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪಕ್ಷ ಬಿಟ್ಟು ಹೋಗಿರೋದು ಏನೂ ಎಫೆಕ್ಟ್ ಆಗಲ್ಲ. ಹಳೇ ಪ್ಲೇಯರ್ ರಿಟೈರ್ಡ್ ಆಗಿ ಅಂದ್ವಿ, ಆದರೆ ಅವರು ಮತ್ತೊಂದು ಟೀಮ್ನಲ್ಲಿ ಆಡೋಕೆ ಹೋಗಿದ್ದಾರೆ. ಈ ಸಲ ಕಪ್ ನಮ್ದೆ ಎಂದು ಜಗದೀಶ್ ಶೆಟ್ಟರ್ ವಿರುದ್ಧ ವಾಗ್ದಾಳಿ ಮಾಡಿದರು.
ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಜಗದೀಶ್ ಶೆಟ್ಟರ್ ಸೋಲಿಸಲು ಬಿಜೆಪಿ, ಆರ್ಎಸ್ಎಸ್ ಮಾಸ್ಟರ್ ಪ್ಲ್ಯಾನ್; ಹೀಗಿದೆ ರಣತಂತ್ರ
ಬಿ. ಎಲ್ ಸಂತೋಷ್ ಅವರ ಮೇಲೆ ಜಗದೀಶ್ ಶೆಟ್ಟರ್ ಆರೋಪ ಮಾಡಿರುವ ವಿಚಾರವಾಗಿ ಮಾತನಾಡಿದ ಅವರು ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ ಮಟ್ಟದಲ್ಲಿ ಈ ನಿರ್ಧಾರವಾಗಿದೆ. ಅಮಿತ್ ಶಾ ಅವರು ಜಗದೀಶ್ ಶೆಟ್ಟರ್ ಅವರ ಜೊತೆ ಮಾತಾಡಿದ್ದಾರೆ. ಹೊಸ ಜನರೇಷನ್ ಬರಬೇಕು, ನಾವು ನಿಮಗೆ ದೊಡ್ಡ ರೋಲ್ ಕೊಡಲು ತೀರ್ಮಾನ ಮಾಡಿದ್ದೇವೆ ಎಂದು ಅಮಿತ್ ಶಾ ಅವರು ಹೇಳಿದ್ದರು. ಪ್ರಧಾನಿ ಮೋದಿ ಅವರ ಬಗ್ಗೆ ಉಲ್ಟಾ ಹೇಳಿದರೇ ವೋಟ್ ಸಿಗಲ್ಲ ಅನ್ನೋ ಕಾರಣಕ್ಕೆ ಹೀಗೆ ಬಿ.ಎಲ್ ಸಂತೋಷ್ ಅವರ ಬಗ್ಗೆ ಮಾತಾಡುತ್ತಿದ್ದಾರೆ ಎಂದು ತಿಳಿಸಿದರು.
ಲಿಂಗಾಯತ ಸಮುದಾಯ ನಮಗೆ ಅಸ್ತ್ರ ಅಲ್ಲ. ಲಿಂಗಾಯತರಿಗೆ ಅಪಮಾನ ಮಾಡಿದ್ದು ಕಾಂಗ್ರೆಸ್. ಕಾಂಗ್ರೆಸ್ನವರಿಗೆ, ರಾಹುಲ್ ಗಾಂಧಿ ಅವರಿಗೆ ಪ್ರೀತಿ ಇದ್ದರೇ ಲಿಂಗಾಯತ ಶಾಸಕನನ್ನು ಮುಖ್ಯಮಂತ್ರಿ ಮಾಡುತ್ತೇವೆ ಎಂದು ಹೇಳಲಿ ನೋಡೋಣ. ರಾಹುಲ್ ಗಾಂಧಿ ಆಪರೇಶನ್ ಕಮಲ ಮಾಡೋಕೆ ಬಿಡಲ್ಲ ಎಂಬ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು ಹೌದು ರಾಹುಲ್ ಗಾಂಧಿಯವರು ಸರಿಯಾಗಿ ಹೇಳಿದ್ದಾರೆ. ನಾವೇ ಬಹುಮತದಿಂದ ಅಧಿಕಾರಕ್ಕೆ ಬರುತ್ತೇವೆ ಎಂದು ರಾಹುಲ್ ಗಾಂಧಿಯವರ ಕಾಲೆಳೆದರು.
ನಾವು ಮೂರು ಜನ ಲಿಂಗಾಯತರನ್ನು ಮುಖ್ಯಮಂತ್ರಿ ಮಾಡಿದ್ದೇವೆ. ಚುನಾವಣೆಯ ನಂತರ ಲೀಡರ್ ಶಿಪ್ ಡಿಸೈಡ್ ಮಾಡುತ್ತೇವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾರ್ಗದರ್ಶನದಲ್ಲಿ ಚುನಾವಣೆಗೆ ಹೋಗುತ್ತೇವೆ ಎಂದರು.
ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ