Karnataka Politics: ಯಡಿಯೂರಪ್ಪ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಪ್ರತ್ಯೇಕ ಮಾತುಕತೆ; ಕರ್ನಾಟಕದ ಬಿಜೆಪಿ ಪ್ಲಾನ್ ಬಗ್ಗೆ ಗರಿಗೆದರಿದ ನಿರೀಕ್ಷೆ

ದೆಹಲಿಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಇತರೆಲ್ಲ ರಾಜ್ಯಗಳ ಬಗ್ಗೆ ಸುದೀರ್ಘ ಚರ್ಚೆಗಳು ನಡೆದವಾದರೂ, ಕರ್ನಾಟಕದ ಬಗ್ಗೆ ಹಿರಿಯ ನಾಯಕರು ಹೆಚ್ಚು ಆಸ್ಥೆ ವಹಿಸಿದ್ದು ವಿಶೇಷ ಎನಿಸಿತು.

Karnataka Politics: ಯಡಿಯೂರಪ್ಪ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಪ್ರತ್ಯೇಕ ಮಾತುಕತೆ; ಕರ್ನಾಟಕದ ಬಿಜೆಪಿ ಪ್ಲಾನ್ ಬಗ್ಗೆ ಗರಿಗೆದರಿದ ನಿರೀಕ್ಷೆ
ಬಿ.ಎಸ್.ಯಡಿಯೂರಪ್ಪ ಮತ್ತು ಪ್ರಧಾನಿ ನರೇಂದ್ರ ಮೋದಿ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jan 17, 2023 | 11:18 AM

ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ (BJP National Executive) ಕರ್ನಾಟಕದ ಹಿರಿಯ ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ (BS Yediyurappa) ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಸೋಮವಾರ (ಜ 16) ಸುಮಾರು 15 ನಿಮಿಷ ಪ್ರತ್ಯೇಕ ಮಾತುಕತೆ ನಡೆಸಿದರು. ಈ ಬೆಳವಣಿಗೆಯು ಹಲವು ಹೊಸ ನಿರೀಕ್ಷೆಗಳಿಗೆ ಕಾರಣವಾಗಿದ್ದು, ಕರ್ನಾಟಕದಲ್ಲಿ ಬಿಜೆಪಿ ತಂತ್ರಗಾರಿಕೆಯ ಬಗ್ಗೆ ಚರ್ಚೆಗಳು ಆರಂಭವಾಗಿವೆ. ದೇಶದ ಹಲವು ರಾಜ್ಯಗಳು 2023ರಲ್ಲಿ ಚುನಾವಣೆ ಎದುರಿಸಲಿವೆ. ಈ ಪೈಕಿ ಬಿಜೆಪಿ ಪಾಲಿಗೆ ಕರ್ನಾಟಕದ ತೂಕ ಸ್ವಲ್ಪ ಹೆಚ್ಚು. ಇದೀಗ ದೆಹಲಿಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಇತರೆಲ್ಲ ರಾಜ್ಯಗಳ ಬಗ್ಗೆ ಸುದೀರ್ಘ ಚರ್ಚೆಗಳು ನಡೆದವಾದರೂ, ಕರ್ನಾಟಕದ ಬಗ್ಗೆ (Karnataka Assembly Elections 2023) ಹಿರಿಯ ನಾಯಕರು ಹೆಚ್ಚು ಆಸ್ಥೆ ವಹಿಸಿದ್ದು ವಿಶೇಷ ಎನಿಸಿತು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿಯ ಹಲವು ರಾಷ್ಟ್ರೀಯ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

ದಕ್ಷಿಣ ಭಾರತದಲ್ಲಿ ಬಿಜೆಪಿ ಅಧಿಕಾರದಲ್ಲಿರುವ ಏಕೈಕ ರಾಜ್ಯ ಕರ್ನಾಟಕ. ರಾಜ್ಯದ ಮುಖ್ಯಮಂತ್ರಿ ಸ್ಥಾನದಲ್ಲಿದ್ದ ಯಡಿಯೂರಪ್ಪ ಅವರನ್ನು ಪಕ್ಷದ ಹೈಕಮಾಂಡ್ ಏಕಾಏಕಿ ಕೆಳಗಿಳಿಸಿತು. ಕರ್ನಾಟಕದ ರಾಜಕಾರಣದಲ್ಲಿ ನಿರ್ಣಾಯಕ ಪಾತ್ರ ನಿರ್ವಹಿಸುವ ಲಿಂಗಾಯತ ಸಮುದಾಯಕ್ಕೆ ಸೇರಿದ ಯಡಿಯೂರಪ್ಪ ಅವರಿಗೆ ಜಾತಿಯ ಮಿತಿಯಲ್ಲದ ಬೆಂಬಲ ಇದೆ. ಕರ್ನಾಟಕದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಅವರಿಗೆ ಅಭಿಮಾನಿಗಳಿದ್ದಾರೆ. ಆದರೆ ಸ್ಥಾನಚ್ಯುತಿಯ ನಂತರ ಯಡಿಯೂರಪ್ಪ ಸಾರ್ವಜನಿಕ ವೇದಿಕೆಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರಲಿಲ್ಲ. ಇದೀಗ ಚುನಾವಣೆ ಹತ್ತಿರಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರಿಗೆ ಬಿಜೆಪಿ ಮತ್ತೆ ಮುಖ್ಯ ಪಾತ್ರ ನೀಡಿತ್ತು. ಪಕ್ಷದ ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳುವ ಸಂಸದೀಯ ಮಂಡಳಿಗೆ ಯಡಿಯೂರಪ್ಪ ಅವರನ್ನು ನೇಮಿಸಲಾಯಿತು.

ಯಡಿಯೂರಪ್ಪ ಅವರನ್ನು ಪ್ರಧಾನಿ ನರೇಂದ್ರ ಮೋದಿ ಪ್ರತ್ಯೇಕವಾಗಿ ಭೇಟಿ ಮಾಡಿರುವುದು ಹಲವು ಲೆಕ್ಕಾಚಾರಗಳನ್ನು ಹುಟ್ಟುಹಾಕಿದೆ. ಇದು ಕರ್ನಾಟಕದಲ್ಲಿ ನಾಲ್ಕು ಬಾರಿ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಅವರು ಭವಿಷ್ಯದ ಬಗ್ಗೆಯೂ ಆಶಾವಾದ ಮೂಡಿಸಿದೆ. ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭೇಟಿಯಾಗಿದ್ದರು.

ಯಡಿಯೂರಪ್ಪ ಉತ್ತರಾಧಿಕಾರಿಯಾಗಿ ಅಧಿಕಾರಕ್ಕೆ ಬಂದ ಬಸವರಾಜ ಬೊಮ್ಮಾಯಿ ಹಲವು ಬಾರಿ ಸಲ್ಲದ ಕಾರಣಗಳಿಂದಾಗಿಯೇ ಸುದ್ದಿಯಲ್ಲಿದ್ದರು. ವಿರೋಧ ಪಕ್ಷಗಳು ಬೊಮ್ಮಾಯಿ ವಿರುದ್ಧ 40 ಪರ್ಸೆಂಟ್ ಭ್ರಷ್ಟಾಚಾರದ ಗಂಭೀರ ಆರೋಪ ಮಾಡಿ, PayCM ಅಭಿಯಾನ ಆರಂಭಿಸಿದ ನಂತರ ಅವರ ಜನಪ್ರಿಯತೆಯೂ ಕುಸಿಯತೊಡಗಿತು. ಆದರೆ ಪಕ್ಷದ ಹೈಕಮಾಂಡ್ ಮುಖ್ಯಮಂತ್ರಿಯ ಬದಲಾವಣೆ ಇಲ್ಲ. ಬೊಮ್ಮಾಯಿ ನಾಯಕತ್ವದಲ್ಲಿಯೇ ಮುಂದಿನ ಚುನಾವಣೆ ಎದುರಿಸಲಾಗುವುದು ಎಂಬ ತನ್ನ ನಿಲುವಿಗೆ ಗಟ್ಟಿಯಾಗಿ ಅಂಟಿಕೊಂಡಿದೆ.

ಬಿಜೆಪಿಯ ಚುನಾವಣೆ ಕಾರ್ಯತಂತ್ರಗಳನ್ನು ರೂಪಿಸುವ ಅಮಿತ್ ಶಾ, ಕರ್ನಾಟಕದಲ್ಲಿ ಪಕ್ಷವು ಕನಿಷ್ಠ 136 ಸ್ಥಾನಗಳನ್ನು ಗೆಲ್ಲಬೇಕು ಎಂದು ಸೂಚಿಸಿದ್ದಾರೆ. ಇದಕ್ಕಾಗಿ ಪಕ್ಷದ ಕರ್ನಾಟಕ ಘಟಕಕ್ಕೆ ‘ಮಿಷನ್ 136’ರ ಗುರಿ ನೀಡಿದ್ದಾರೆ. ರಾಜ್ಯದ 224 ಸ್ಥಾನಗಳ ಪೈಕಿ ಕನಿಷ್ಠ 136 ಸ್ಥಾನಗಳನ್ನು ಗೆಲ್ಲಬೇಕು ಎನ್ನುವುದು ಈ ಗುರಿಯ ಅರ್ಥವಾಗಿದೆ. ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್​ ಪಕ್ಷವು ಪ್ರಬಲವಾಗಿದ್ದು, ತಳಮಟ್ಟದಲ್ಲಿ ಉತ್ತಮ ಕಾರ್ಯಕರ್ತರ ಪಡೆ ಹೊಂದಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಯ ಪ್ರಯತ್ನಗಳಿಗೆ ಕಾಂಗ್ರೆಸ್ ಪಕ್ಷವೇ ಮುಖ್ಯ ತೊಡರುಗಾಲು ಆಗುವುದರಲ್ಲಿ ಸಂದೇಹವಿಲ್ಲ ಎಂದು ವಿಶ್ಲೇಷಿಸಲಾಗಿದೆ.

ಕಳೆದ ಚುನಾವಣೆಯಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳುವ ಮೂಲಕ ಸೆಡ್ಡು ಹೊಡೆದವು. ಮೈತ್ರಿ ಸರ್ಕಾರದಲ್ಲಿ ಎಚ್​.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾದರು. ಆದರೆ ನಂತರದ ದಿನಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್​ನ ಹಲವು ಶಾಸಕರು ಬಿಜೆಪಿಗೆ ಸೇರ್ಪಡೆಯಾಗುವುದರೊಂದಿಗೆ ಮೈತ್ರಿ ಸರ್ಕಾರ ಕುಸಿದು, ಬಿಜೆಪಿ ಅಧಿಕಾರಕ್ಕೆ ಬಂದಿತು.

ಇದನ್ನೂ ಓದಿ: ನಡೆದಾಡುವ ಸರ್ಕಾರ ತಂದಿರುವ ಕೀರ್ತಿ ಯಡಿಯೂರಪ್ಪಗೆ ಸಲ್ಲುತ್ತದೆ: ಬಿ.ವೈ.ವಿಜಯೇಂದ್ರ

ರಾಜಕೀಯಕ್ಕೆ ಸಂಬಂಧಿಸಿದ ಮತ್ತಷ್ಟು ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:16 am, Tue, 17 January 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ