AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಲ್ಕು ಜಿಲ್ಲೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮತಬೇಟೆ; ಕೋಲಾರದ ಹಲವು ಮಾರ್ಗಗಳಲ್ಲಿ ಸಂಚಾರ ನಿರ್ಬಂಧ

ಪ್ರಧಾನಿ ಮೋದಿ ಇಂದು ನಾಲ್ಕು ಜಿಲ್ಲೆಗಳಲ್ಲಿ ಮತಬೇಟೆ ನಡೆಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಕೋಲಾರದಲ್ಲಿ ಮೋದಿ ಪ್ರಚಾರ ನಡೆಸಲಿದ್ದಾರೆ.

ನಾಲ್ಕು ಜಿಲ್ಲೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮತಬೇಟೆ; ಕೋಲಾರದ ಹಲವು ಮಾರ್ಗಗಳಲ್ಲಿ ಸಂಚಾರ ನಿರ್ಬಂಧ
ಪ್ರಧಾನಿ ನರೇಂದ್ರ ಮೋದಿ
ಆಯೇಷಾ ಬಾನು
|

Updated on:Apr 30, 2023 | 7:10 AM

Share

ಕೋಲಾರ: ಪ್ರಧಾನಿ ನರೇಂದ್ರ ಮೋದಿ(Narendra Modi) ಅವರ ಮೊದಲ ದಿನದ ಮತಬೇಟೆ ಭರ್ಜರಿಯಾಗಿ ನೆರವೇರಿದೆ. ಇಂದು 4 ಜಿಲ್ಲೆಗಳಲ್ಲಿ ಮೋದಿ ಮತಶಿಕಾರಿ ನಡೆಯಲಿದೆ. ಕಾಂಗ್ರೆಸ್(Congress), ಜೆಡಿಎಸ್​ಗೆ(JDS) ಶಾಕ್ ಮೇಲೆ ಶಾಕ್ ಕೊಡಲು ಮೋದಿ ಸಜ್ಜಾಗಿದ್ದಾರೆ. ಇನ್ನು ಮತ್ತೊಂದೆಡೆ ಇಂದು ಕೋಲಾರದಲ್ಲಿ ಮೋದಿ ಪ್ರಚಾರ ನಡೆಸಲಿದ್ದು ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ. ಕೋಲಾರದ ಹಲವು ಮಾರ್ಗಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

4 ಜಿಲ್ಲೆಗಳಲ್ಲಿ ಪ್ರಧಾನಿ ಮೋದಿ ಮತಬೇಟೆ

ಪ್ರಧಾನಿ ಮೋದಿ ಇಂದು ನಾಲ್ಕು ಜಿಲ್ಲೆಗಳಲ್ಲಿ ಮತಬೇಟೆ ನಡೆಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಕೋಲಾರದಲ್ಲಿ ಮೋದಿ ಪ್ರಚಾರ ನಡೆಸಲಿದ್ದಾರೆ. ಬಳಿಕ ಮಧ್ಯಾಹ್ನ 2ಗಂಟೆ ಜೆಡಿಎಸ್ ಭದ್ರಕೋಟೆ, ಮಾಜಿ ಸಿಎಂ ಕುಮಾರಸ್ವಾಮಿ ಅವರ ಕ್ಷೇತ್ರ ಚನ್ನಪಟ್ಟಣದಲ್ಲಿ ಮೋದಿ ಪ್ರಚಾರ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 3.30ಕ್ಕೆ ಹಾಸನ ಜಿಲ್ಲೆ ಬೇಲೂರಿನಲ್ಲಿ ಮೋದಿ ಮತ್ತೊಂದು ಪ್ರಚಾರ ಸಭೆ ನಡೆಸಲಿದ್ದಾರೆ. ಸಂಜೆ 5.45ಕ್ಕೆ ಮೈಸೂರಿನಲ್ಲಿ ಮೋದಿ ರೋಡ್ ಶೋ ನಡೆಸಲಿದ್ದಾರೆ. ವಿದ್ಯಾಪೀಠ ವೃತ್ತದಿಂದ ಶುರುವಾಗುವ ಮೋದಿ ಅವರ ರೋಡ್ ಶೋ, ಬನ್ನಿಮಂಟಪ ರಸ್ತೆ LIC ವೃತ್ತದವರೆಗೆ ನಡೆಯಲಿದೆ. 45 ನಿಮಿಷ ಈ ರೋಡ್​ಶೋ ನಡೆಯಲಿದೆ.

ಇದನ್ನೂ ಓದಿ: PM Modi Mysuru Visit: ನಾಳೆ ಮೈಸೂರಿನ ಜಂಬೂ ಸವಾರಿ ಮಾರ್ಗದಲ್ಲಿ ಪ್ರಧಾನಿ ಮೋದಿ ರೋಡ್ ಶೋ

ಕೋಲಾರದ ಹಲವು ಮಾರ್ಗಗಳಲ್ಲಿ ವಾಹನ ಸಂಚಾರ ನಿರ್ಬಂಧ

ಇಂದು ಕೋಲಾರದಲ್ಲಿ ಪ್ರಧಾನಿ ಮೋದಿ ಚುನಾವಣಾ ಪ್ರಚಾರ ಹಿನ್ನೆಲೆ ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ. ಕೋಲಾರದ ಹಲವು ಮಾರ್ಗಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗುತ್ತೆ. ಕೋಲಾರ ತಾಲೂಕಿನ ಕೆಂದಟ್ಟಿ ಗ್ರಾಮದ ಹೆದ್ದಾರಿ ಪಕ್ಕದಲ್ಲೇ ಸಮಾವೇಶ ಹಮ್ಮಿಕೊಳ್ಳಲಾಗಿದ್ದು ಸಮಾವೇಶಕ್ಕೆ ಸಾವಿರಾರು ಜನ ಬರುವ ಹಿನ್ನೆಲೆ ಸಂಚಾರ ದಟ್ಟಣೆ ಸಾಧ್ಯತೆ. ಹೀಗಾಗಿ ಬೆಂಗಳೂರಿನಿಂದ ಚೆನ್ನೈಗೆ ಹೋಗುವ ವಾಹನಗಳಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ: PM Narendra Modi: ನಾಳೆಯೂ ಭರ್ಜರಿ ಪ್ರಚಾರ ನಡೆಸಲಿದ್ದಾರೆ ಪ್ರಧಾನಿ ಮೋದಿ: ಇಲ್ಲಿದೆ ಮೋದಿ ಯೋಜನೆಯ ಸಂಪೂರ್ಣ ಮಾಹಿತಿ

ಬೆಂಗಳೂರು ಕಡೆಯಿಂದ ಬರುವ ವಾಹನಗಳು ಬೆಳ್ಳೂರು, ನರಸಾಪುರ, ವೇಮಗಲ್‌, ಕೋಲಾರ ನಗರ, ಟಮಕ ಮಾರ್ಗವಾಗಿ ತೆರಳಲು ಸೂಚಿಸಲಾಗಿದೆ. ಬೆಂಗಳೂರಿಗೆ ಹೋಗುವ ವಾಹನಗಳಿಗೆ ಪರ್ಯಾಯ ರಸ್ತೆ ವ್ಯವಸ್ಥೆ ಮಾಡಲಾಗಿದೆ. ಕೋಲಾರ ಹೊರವಲಯದ ಪವನ್ ಕಾಲೇಜು ಸರ್ವೀಸ್ ರಸ್ತೆ ಮೂಲಕ ಅಮ್ಮೇರಹಳ್ಳಿ, ವಕ್ಕಲೇರಿ ಗ್ರಾಮದ ಮೂಲಕ ದೊಡ್ಡಶಿವಾರದ ಕಡೆಯಿಂದ ನರಸಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೆಳಿಗ್ಗೆ 8 ಗಂಟೆಯಿಂದ – ಸಮಾರಂಭ ಮುಗಿಯವರೆಗೂ ಬದಲಿ ರಸ್ತೆಯಲ್ಲಿ ಸಂಚಾರ ಮಾಡುವಂತೆ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ.

ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:10 am, Sun, 30 April 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ